ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಇಂದು(ಅ.14) ನಡೆದಿದೆ. ಜಾಮೀನು ಮಂಜೂರಾಗದ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ನಿರಾಸೆ ಆಗಿದೆ. A13 ದೀಪಕ್ ಗೆ ಮಾತ್ರ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೂ ಜಾಮೀನು ನಿರಾಕರಿಸಲಾಗಿದೆ. ದರ್ಶನ್ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ಸುದೀರ್ಘ ವಾದ – ಪ್ರತಿವಾದ ನಡೆದಿದ್ದು, ನ್ಯಾಯಾಧೀಶರು ಸೋಮವಾರಕ್ಕೆ ಅಂತಿಮ ಆದೇಶ ಕಾಯ್ದಿರಿಸಿದ್ದರು. ಆದರೆ, ಜಾಮೀನು ಮಂಜೂರಾಗಿಲ್ಲ. ಅಭಿಮಾನಿಗಳು ದೌಡು : ಇನ್ನು ನಟ ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ಅಭಿಮಾನಿಗಳ ದಂಡು ಹರಿದು ಬಂದಿದೆ. ಡಿ ಬಾಸ್ ಫೋಟೋ ಹಿಡಿದು, ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬ್ಯಾರಿಕೇ ಡ್ ಅಳವಡಿಸಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
Author: main-admin
ಬಂಟ್ವಾಳ : ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ (ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಡಕಬೈಲಿನ ಆಂಗ್ಲ ಮಾಧ್ಯಮ ಶಾಲೆಯೊಂದರ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಉಂಟಾಗಿದೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಹಾಗೂ ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ…
ಸುಳ್ಯ: ಮಹಿಳೆಯೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಅವರು ಮನೆಯಲ್ಲಿ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ವಿಚಾರ ಬೆಳಕಿಗೆ ಬಂದಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು…, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ…. ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ… ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ…
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಭಾನುವಾರ ರಾತ್ರಿ ನಡೆದ ಮಂಗಳೂರು ದಸರಾ ಶೋಭಾಯಾತ್ರೆ ಸೋಮವಾರ ಬೆಳಗ್ಗೆ ಸಂಪನ್ನಗೊಂಡಿತು. ಭಾನುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಸೋಮವಾರ ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಕುದ್ರೋಳಿಗೆ ಆಗಮಿಸಿತ್ತು. ಬೆಳಗ್ಗೆ 7 ಗಂಟೆ ಸುಮಾರಿಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು. ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ ಬಾಗ್, ಬಲ್ಲಾಳ್‌ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಅಳಕೆಯ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ…
ಉಡುಪಿ: ಸಮಸ್ತ ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ. ಹಿಂದೂ ಜಾಗರಣ ವೇದಿಕೆಯ ಮುಖಂಡನಾದ ಉಮೇಶ ನಾಯ್ಕ್, ದಕ್ಷಿಣ ಕನ್ನಡ ಮರಾಠೆ ಸಂರಕ್ಷಣಾ ಸಮಿತಿಯ ವಾಟ್ಸಪ್ ಗುಂಪಿನಲ್ಲಿ ಹಾಕಿದ ವಾಯ್ಸ್ ಮಸೇಜ್‌ನಲ್ಲಿ, ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ನ.10ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಕರಾವಳಿ ಮರಾಠಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೊ ಮುದ್ರಿಸಿರುವುದು…
ಮಂಗಳೂರು : ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್‌ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ (ಅ.12ರಂದು) ಬೆಂಗಳೂರಿನಲ್ಲಿ ನಿಧನ ಹೊಂದಿದರು.ಮೂಲತಃ ಸೋಮವಾರ ಪೇಟೆಯವರಾಗಿರುವ ರತ್ನ ಕುಮಾರ್ ಅಡಪ ಅವರು 35 ವರ್ಷ ಕಾಲ ಸೇನೆಯಲ್ಲಿ ಸೇವೆಯಲ್ಲಿದ್ದು 2021ರಲ್ಲಿ ನಿವೃತ್ತರಾಗಿದ್ದರು. ಶನಿವಾರದಂದು ಬೆಂಗಳೂರಿನಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಪತ್ನಿ ಶಾಂತಲಾ ಅಡಪ, ಮತ್ತು ಪುತ್ರ ಮೋಹಿತ್ ಶರಣ್ ಅಡಪ ಅವರನ್ನು ಅಗಲಿದ್ದಾರೆ. ಅ.13ರಂದು ಪದವು ಮೇಗಿನ ಮನೆಯ ಬಳಿ ಇರುವ ಅವರ ಸ್ವಗೃಹ “ಅರ್ಪಣಾ’ದಲ್ಲಿ ಮೃತರ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು. ನಂತರ ಶಕ್ತಿನಗರದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರವನ್ನು ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಂಗಳೂರು :ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಗೆ ತೆರಳುವ ವೇಳೆ ಬಾಂಗ್ಲಾ ಪ್ರಜೆ ಮಹಮ್ಮದ್ ಮಾಣಿಕ್ ಎಂಬಾತ ಬಂಧಿತನಾಗಿದ್ದು, ಆತನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆತನ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಕಸ್ಟಡಿಗೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ಮಹಮ್ಮದ್ ಮಾಣಿಕ್ ಭಾರತೀಯ ಪಾಸ್ ಪೊರ್ಟ್ ಹಾಗೂ ಇತರೆ ದಾಖಲಾತಿಗಳನ್ನು ಹಾಜರುಪಡಿಸಿದ್ದಾನೆ. ಈ ವೇಳೆ ಆತ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆ ಮಾಣಿಕ್‌ಚೌಕ್‌ನ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬಾಂಗ್ಲದೇಶದ ರಾಷ್ಟ್ರೀಯ ಗುರುತು ಚೀಟಿ ಸಂಖ್ಯೆ 601 ಆಗಿದ್ದು ಈತನು 2017 ರಲ್ಲಿ ಇಂಡೋ -ಬಾಂಗ್ಲ ಅಂತರಾಷ್ಟ್ರೀಯ ಗಡೀರೇಖೆ ಪಶ್ಚಿಮ ಬಂಗಾಳದ ಮುರ್ಷಿದಬಾದ್ ಜಿಲ್ಲೆಯ ಲಾಲ್‌ಗೊಲ್ ಮುಖೇನ ಭಾರತಕ್ಕೆ ಬಂದಿದ್ದ ಎಂದು ಹೇಳಲಾಗಿದೆ. ಶೆಲ್ಲಾ-ಹೌರ-ಚೆನ್ನೈ ಮುಖಾಂತರ ಮಂಗಳೂರು ಮೂಡಬಿದರೆ ಮೂಲಕ ಉಡುಪಿಗೆ ಬಂದಿದ್ದ ಎಂದು ತಿಳಿದು ಬಂದಿದೆ.…
ಮಂಗಳೂರು: ನಗರದ ಕಂಕನಾಡಿ ಸಿಗ್ನಲ್ ವೃತ್ತದ ಬಳಿ ಅಕ್ಟೋಬರ್ 10ರಂದು ನಡೆದ ಖಾಸಗಿ ಬಸ್‌ಗಳೆರಡರ ಚಾಲಕರು ಹಾಗೂ ನಿರ್ವಾಹಕರ ನಡುವೆ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಸೆಲಿನಾ ಬಸ್ ನಿರ್ವಾಹಕ ಭುವನೇಶ್ವರ ಬಿ.ವಿ. ನೀಡಿರುವ ದೂರಿನಂತೆ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಿಂದ ವಿಟ್ಲಕ್ಕೆ ಹೋಗುತ್ತಿರುವಾಗ ಬೆಳಗ್ಗೆ 8.15ಕ್ಕೆ ಕಂಕನಾಡಿ ಸಿಗ್ನಲ್‌ನಲ್ಲಿ ಧರಿತ್ರಿ ಬಸ್ ಅನ್ನು ತಮ್ಮ ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಿದ ಅದರ ಚಾಲಕ ಸುರೇಶ್ ಹಾಗೂ ನಿರ್ವಾಹಕ ರಾಕೇಶ್ ಎಂಬವರು ತಮ್ಮ ಬಸ್ಸಿನ ಒಳಗಡೆ ಬಂದು ಅವಾಚ್ಯವಾಗಿ ಬೈಯ್ದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಅದೇ ರೀತಿ ಈ ಹೊಡೆದಾಟಕ್ಕೆ ಸಂಬಂಧಪಟ್ಟಂತೆ ಧರಿತ್ರಿ ಬಸ್ಸಿನ ಚಾಲಕ ಧರ್ಮಸ್ಥಳದ ಸುರೇಶ್ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿರುವ ದೂರಿನಲ್ಲಿ ಸೆಲಿನಾ ಬಸ್ಸು ಕಂಡಕ್ಟರ್ ಭುವನೇಶ್ವರ್ ಜ್ಯೋತಿ ಸರ್ಕಲ್ ಬಳಿ ತಮಗೆ ಅವಾಚ್ಯ…










