ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ. ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ ಲೈಫ್‌ಗಾರ್ಡ್ ಸಿಬ್ಬಂದಿಗೆ ಮಾಹಿತಿ ನೀಡದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಸಣ್ಣ ಕಾಫಿ ಶಾಪ್ ಹೊಂದಿರುವ ವ್ಯಕ್ತಿ ತನ್ನ ಬ್ಯಾಂಕ್ ಖಾತೆ ನೋಡಿ ತಲೆ ತಿರುಗಿ ಬಿದ್ದಿದ್ದಾರೆ. ಅಂದರೆ ದಿನಕ್ಕೆ ನೂರು ಅಥವಾ ಸಾವಿರ ರೂ.ಗಳ ಆದಾಯ ಮಾಡುತ್ತಿದ್ದ ಇವರ ಖಾತೆಗೆ 999 ಕೋಟಿ ಹಣ ಜಮೆ ಆಗಿದೆ. ಹೌದು, ಇವರ ಫೋನ್‌ಗೆ ಠಣ್ ಎಂದು ಒಂದು ಮೆಸೆಜ್ ಬಂದಿದೆ. ಮೆಸೆಜ್ ತೆರೆದು ನೋಡಿದ್ರೆ 999 ಕೋಟಿ ರೂ.ಗಳ ಹಣ ಜಮೆ ಆಗಿರುವುದು ತಿಳಿದುಬಂದಿದೆ. ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದೆ ಮತ್ತೆ ಅಲ್ಲಿ ಇದ್ದ ಸಂಖ್ಯೆಯನ್ನು ಲೆಕ್ಕ ಹಾಕಲು ಮುಂದಾಗಿದ್ದಾರಂತೆ. ಪದೇ ಪದೇ ಲೆಕ್ಕ ಹಾಕಿದರೂ ಅದು 999 ಕೋಟಿ ರೂ. ಗಳನ್ನು ತೋರಿಸಿದೆ. ಅರೇ… ಇದೇನಪ್ಪ ನನ್ನ ಖಾತೆಗೆ ಇಷ್ಟು ಹಣ ಹಾಕಿದವರು ಯಾರು? ಯಾಕೆ ಹಾಕಿದ್ದಾರೆ ಎಂದು ಯೋಚಿಸುತ್ತಿರವಾಗಲೇ ಅವರಿಗೆ ಶಾಕ್ ಎದುರಾಗಿದೆ. ಅದುವೇ ಅವರ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ಇದನ್ನು ನೋಡಿ ಸಂತಸದಿಂದ ಇದ್ದ ಇವರು ಕ್ಷಣ ಮಾತ್ರದಲ್ಲಿ ಸಂಕಷ್ಟಕ್ಕೆ ಈಡಾಗುವಂತೆ…
ನೆಲ್ಯಾಡಿ: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್‌ನ ಡ್ರೈವರ್ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬೆಂಗಳೂರು ಮೂಲದವನೆಂದು ತಿಳಿದುಬಂದಿದೆ. ಈ ಖಾಸಗಿ ಸ್ವೀಪರ್ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಗೋಕರ್ಣದಿಂದ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ),ಮಂಗಳೂರು ಇದರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು 2024ರ ಅಕ್ಟೋಬರ್ 10ರಂದು “ಕ್ರೆಶೆಂಡೋ” ಎಂಬ ಶೀರ್ಷಿಕೆಯ ಅಡಿಯಲ್ಲಿ ಸೆಮಿನಾರ್ ಹಾಲ್, ಸೆಂಟಿನರಿ ಬ್ಲಾಕ್‌ನಲ್ಲಿ 2022-2024 ಶೈಕ್ಷಣಿಕ ವರ್ಷದ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭವನ್ನು ಹಮ್ಮಿಕೊಂಡಿತ್ತು. ಕಾಲೇಜಿನ ಪ್ರಾಂಶುಪಾಲೆ ಡಾ. ಸಿಸ್ಟರ್ ಎಂ. ವೆನಿಸ್ಸಾ ಎ.ಸಿ. ಅವರು ಬೀಳ್ಕೊಡುಗೆ ಭಾಷಣದಲ್ಲಿ -“ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಣವು ಶಕ್ತಿಯುತ ಶಸ್ತ್ರಾಸ್ತ್ರವಿದ್ದಂತೆ. ಜೀವನಕ್ಕೆ ಸಂಬಂಧಿಸಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ನೀವು ಪಡೆದ ಶಿಕ್ಷಣ ಸಹಾಯ ಮಾಡುತ್ತದೆ” ಎಂದು ಕರೆಯಿತ್ತರು. ಮಾತ್ರವಲ್ಲದೆ ಸ್ವತಂತ್ರವಾಗಿ, ಗೌರವದಿಂದ ಮತ್ತು ಜವಾಬ್ದಾರಿಗಳಿಂದ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿ ಬದುಕಿನ ಅಧ್ಯಾಯದ ಮುಕ್ತಾಯವು ಹೊಸ ಬದುಕಿನ ಆರಂಭದ ಉಲ್ಲಾಸ ಮತ್ತು ತೃಪ್ತಿಗೆ ಕಾರಣವಾಗುತ್ತದೆ ಎಂದರು. ಅವರ ಭವಿಷ್ಯದ ಜೀವನದ ಹೊಸ ಅಧ್ಯಾಯಕ್ಕೆ ಶುಭಾಶಯಗಳನ್ನು ಹೇಳಿದರು. ವಿದ್ಯಾರ್ಥಿಗಳಿಗೆ ತಮ್ಮನ್ನು ಸುತ್ತುವರಿದ ಜಗತ್ತನ್ನು ರೂಪಿಸುವ, ಪ್ರೇರೇಪಿಸುವ ಮತ್ತು ಬದಲಾಯಿಸುವ ಶಕ್ತಿಯನ್ನು ಹೊಂದಲು ಪ್ರೇರೇಪಿಸಿದರು. ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಾಧ್ಯಾಪಕ…
ಬೆಂಗಳೂರು : ಅಪಘಾತಕ್ಕೆ ಕಾರಣವಾಗುವ ವಾಹನವು ಅಪಘಾತದ ಸಮಯದಲ್ಲಿ ಮಾನ್ಯವಾದ ಪರವಾನಗಿ ಮತ್ತು ಫಿಟ್‌ನೆಸ್ ಪ್ರಮಾಣಪತ್ರವನ್ನು ಹೊಂದಿರದಿದ್ದರೂ, ವಿಮಾ ಕಂಪನಿಯು ಹಕ್ಕುದಾರರಿಗೆ ಪಾವತಿಸಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಲು ಮತ್ತು ಅದನ್ನು ವಾಹನದಿಂದ ವಸೂಲು ಮಾಡಲು ಹೊಣೆಗಾರನಾಗಿರುತ್ತಾನೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಸಂತ್ರಸ್ತರಿಗೆ ಪರಿಹಾರ ಪಾವತಿಸಲು ತನಗೆ ಸೂಚಿಸಿದ ಅಧೀನ ನ್ಯಾಯಾಲಯ ಆದೇಶ ರದ್ದು ಕೋರಿ ಶ್ರೀರಾಮ ಜನರಲ್ ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇಗೌಡ ಅವರ ನ್ಯಾಯಪೀಠ ಈ ಆದೇಶ ನೀಡಿದೆ ಅಪಘಾತ ಉಂಟು ಮಾಡಿರುವ ಸರಕು ಸಾಗಣೆ ವಾಹನಕ್ಕೆ ರಹದಾರಿ ಪರವಾನಿಗೆ ಮತ್ತು ಸದೃಢ ಪ್ರಮಾಣ ಪತ್ರವೇ ಚಾಲ್ತಿಯಲ್ಲಿ ಇರಲಿಲ್ಲ. ಈ ಪ್ರಮಾಣ ಪತ್ರ ನವೀಕರಣ ಮಾಡದಿರುವುದು ವಾಹನ ಮಾಲೀಕನ ತಪ್ಪು. ಇದರಿಂದ ಅವರೇ ಘಟನೆಯ ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕಿದ್ದು, ಸರಕು ಸಾಗಣೆ ವಾಹನಕ್ಕೆ ವಿಮಾ ಪಾಲಿಸಿ ವಿತರಿಸಿದ್ದ ಶ್ರೀರಾಮ ಜನರಲ್ ವಿಮಾ ಕಂಪನಿಯು ಕೋರಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಸದೃಢ…
ಉಡುಪಿ : ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 9ರಂದು ಉದಯ್ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದರು. ಅನುಮಾನ ವ್ಯಕ್ತವಾಯಿತು ಅದರಂತೆ ಅಕ್ಟೋಬರ್ 9ರಂದು ಭಾರತ ಸರಕಾರ ಎಂದು ಬರೆದ ವಾಹನದಲ್ಲಿ ಆಗಮಿಸಿದ ಡಾ| ಉದಯ್ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಬೆಳಗ್ಗೆ ವಿಶೇಷ ದರ್ಶನ ಮಾಡಿಸಿದ್ದೇವೆ. ಆದರೆ ಅವರ ಚಲನವಲನದಿಂದ ಅನುಮಾನ ವ್ಯಕ್ತವಾಗಿ ಅವರನ್ನು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್‌ಸೈಟ್ ಅನ್ನು ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕವಾದ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ…
ಕಾಪು (ಉಚ್ಚಿಲ): ದಸರಾ ಗೌಜಿನ ನಡುವೆ ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳವು ಮಾಡಲಾಗಿದೆ. ಉಡುಪಿಯ ಉಚ್ಚಿಲ ದೇವಸ್ಥಾನದ ಹೊರಬಾಗದಲ್ಲಿ ನಿಲ್ಲಿಸಿದ್ದ ಕಾರಿನ ಎಡಬದಿಯ ಗಾಜು ಒಡೆದು ಲ್ಯಾಪ್ಟಾಪ್ ಅನ್ನು ಕಳವು ಮಾಡಲಾಗಿದೆ. ಉಡುಪಿ ನಿವಾಸಿ ವಸಂತ್ ಅವರು ಕುಟುಂಬ ಸಮೇತ ನವರಾತ್ರಿಯ ಪ್ರಯುಕ್ತ ಉಚ್ಚಿಲ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸು ಕಾರಿನ ಬಳಿ ಬಂದಾಗ ವಿಷಯ ಬೆಳಕಿಗೆ ಬಂದಿದೆ. ದೇವಸ್ಥಾನದ ಬಳಿ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಖದೀಮರು ಸುಮಾರು 45,000 ಬೆಲೆಬಾಳುವ ಲ್ಯಾಪ್ಟಾಪ್ ಅನ್ನು ಕದ್ದಿದ್ದಾರೆ.ಪೊಲೀಸರಿಗೆ ವಿಷಯ ತಿಳಿಸಿದಾಗ ಲ್ಯಾಪ್ಟಾಪ್ ನ ಸೀರಿಯಲ್ ನಂಬರ್ ಇದ್ದರೆ ಮಾತ್ರ ಕೇಸ್ ಮಾಡಲು ಸಾಧ್ಯ ಎಂದು ತಿಳಿಸಿದ್ದಾರೆ.
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಮೃತ ದುರ್ದೈವಿ.ಸುಧೀಶ್ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.ಸುಧೀಶ್ ಅವರು ಪೈಂಟಿಂಗ್ ವೃತ್ತಿ ನಡೆಸುತ್ತಿದ್ದರು. ಸುಧೀಶ್ ಅವರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ್ದಾರೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಪರಸ್ಪರ ಬಡಿದಾಡಿ ಕೊಂಡಿದ್ದಾರೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಖಾಸಗಿ ಬಸ್ ಸಿಬ್ಬಂದಿಗಳ ಅಟ್ಟಹಾಸ ಮಿತಿಮೀರಿದ್ದು ಸಭ್ಯ ಪ್ರಯಾಣಿಕರು ಓಡಾಡಲು ಹಿಂಜರಿಯುತ್ತಿದ್ದಾರೆ. ಪೊಲೀಸರು, ಆರ್ ಟಿ ಒ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಖಾಸಗಿ ಬಸ್ ಸಿಬ್ಬಂದಿಗಳು ಅನಾಗರಿಕರಾಗಿದ್ದಾರೆಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಬಸ್ ವ್ಯವಸ್ಥೆ ಎಂಬುದು ಸೇವೆಯೆಂಬುದು ಇಂದಿನ ಸಿಬ್ಬಂದಿಗಳಿಗೆ ತಿಳಿದಿಲ್ಲವಾಗಿದೆ. ತಮ್ಮದೇ ಸಾಮ್ರಾಜ್ಯ, ತಾವು ಮಾಡಿದ್ದೇ ಆಟ, ನಾವು ನಡೆದಿದ್ದೇ ದಾರಿ ಎಂಬುದನ್ನು ತಿಳಿದಿರುವ ಇಂತಹ ಸಿಬ್ಬಂದಿಗಳ ಸಮಾಜ ಕಂಟಕ ವರ್ತನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಗಳು ಕೇವಲ ಬಸ್ಸನ್ನು ವಶಕ್ಕೆ ಪಡೆದು ಪಿಟ್ಟಿ ಕೇಸು ಜಡಿದು ಜುಜುಬಿ ದಂಡ ವಸೂಲಿ ಮಾಡುವ ಬದಲು ಖಾಸಗಿ ಬಸ್…
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ. ಕಿರಣ್ ಡಿಸೋಜ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ. ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, 10 ಗ್ರಾಂ ತೂಕದ 30,000 ರೂ. ಮೌಲ್ಯದ ಎಂಡಿಎಂಎ, ಸ್ಕೂಟರ್ ಮತ್ತು ಮೊಬೈಲ್ ಫೋನ್‌ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 65,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.










