ಬೆಂಗಳೂರು: ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ತಡೆ) ಸುಗ್ರೀವಾಜ್ಞೆ 2025 ರ ಪರಿಷ್ಕೃತ ಕರಡನ್ನು ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿದ್ದು, ಕಾನೂನು ಉಲ್ಲಂಘನೆಗಾಗಿ ದೀರ್ಘಾವಧಿ ಶಿಕ್ಷೆಯನ್ನು ಒಳಗೊಂಡಿದೆ. ಗರಿಷ್ಠ ಶಿಕ್ಷೆಯ ಪ್ರಮಾಣವನ್ನು ಮೂರು ವರ್ಷದಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಶಿಕ್ಷೆಯ ಅವಧಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ಟಿಎನ್‌ಐಇಗೆ ತಿಳಿಸಿವೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲವಾಗಿರುವ ಗುಂಪುಗಳು ಮತ್ತು ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಪರಿಹಾರ ನೀಡಲು ಸಿದ್ದರಾಮಯ್ಯ ಸಂಪುಟ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ. ಕಠಿಣ ಕಾನೂನಿನ ಪ್ರಮುಖ ಅಂಶಗಳು ಇಂತಿವೆ: ಸುಗ್ರೀವಾಜ್ಞೆಯ ಸೆಕ್ಷನ್ 8 ಅನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಆರು ತಿಂಗಳಿಗಿಂತ…
Author: main-admin
ಉಳ್ಳಾಲ: ಪೊಲೀಸ್ ಜೀಪ್‌ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .ಠಾಣೆಯ ಪಿಎಸ್‌ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ ಇನ್ನೊಂದು ಡಿಜಿಟಲ್ ವಾಕಿಟಾಕಿ ಒಯ್ದಿದ್ದರು. ಇಲಾಖೆಯ ಜೀಪನ್ನು ಪಿಎಸ್‌ಐ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಲ್ಲಾಪು ಬಳಿ, ಜನರು ಗುಂಪು ಸೇರಿ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿರುವುದನ್ನು ಗಮನಿಸಿದ್ದಾರೆ ಪಿಎಸ್‌ಐ ಜೀಪ್ ನಿಲ್ಲಿಸಿ, ವಾಕಿಟಾಕಿಯನ್ನು ಸೀಟ್‌ನಲ್ಲಿಟ್ಟು ಜನರನ್ನು ಚದುರಿಸಿ ಬಂದು ನೋಡಿದಾಗ ವಾಕಿಟಾಕಿ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪುತ್ತೂರು : ಪುತ್ತೂರಿನ ಜಿಡೆಕಲ್ಲಿನಲ್ಲಿ ವ್ಯಸನಿಯೊಬ್ಬ 200ಕ್ಕೂ ಹೆಚ್ಚು ಮನೆಗಳಿಗೆ ಹೋಗುವ ಕುಡಿಯುವ ನೀರಿನ ಪೈಪ್ ಕಟ್ ಮಾಡಿರುವ ಘಟನೆ ನಡೆದಿದೆ. ಫೆ.2 ರಂದು ಪುತ್ತೂರು ನಗರಸಭಾ ವ್ಯಾಪ್ತಿಯ ಜಿಡೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು, ಯೋಗಿಶ ಪೂಜಾರಿ ಎಂಬಾತ ನೀರಿನ ಪೈಪ್ ತುಂಡರಿಸಿ ಹುಚ್ಚಾಟ ಮೆರೆದ ಯುವಕ. ಜಿಡೆಕಲ್ಲು ಶಾಲಾ ಸಮೀಪವಿರುವ ನೀರಿನ ಟ್ಯಾಂಕ್ ನಿಂದ ಸಂಪರ್ಕವಿರುವ ಎಲ್ಲಾ ಪೈಪ್ ಗಳನ್ನು ತುಂಡರಿಸಿದ್ದಾನೆ. ಈತ ಕಳೆದ 3-4 ದಿನಗಳಿಂದ ರಸ್ತೆಯಲ್ಲಿ ಸಿಕ್ಕಿದವರಿಗೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ ಎಂದು ಊರಿನವರು ಆಪಾದಿಸಿದ್ದಾರೆ. ಪೈಪ್ ಲೈನ್ ತುಂಡರಿಸುತಿದ್ದಾಗ ಊರಿನವರ ಕೈಗೆ ಸಿಕ್ಕಿ ಬಿದ್ದಿದ್ದ, ನಂತರ ತಪ್ಪಿಸಿಕೊಂಡು ಬೆಂಗಳೂರಿಗೆ ಹೋಗಿ ಇಂದು ರೈಲಿನಲ್ಲಿ ವಾಪಾಸ್ ಬಂದಾಗ ಊರಿನವರ ಕೈಗೆ ಸಿಕ್ಕಿಬಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ವಿಟ್ಲ: ಬೀಡಿ ಮಾಲಕನ ಮನೆಯಲ್ಲಿ ನಡೆದ ನಕಲಿ ಇಡಿ ದಾಳಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮುಂಬೈಯಿಂದ ಪೊಲೀಸರು ಕರೆತಂದಿದ್ದಾರೆ. ಆದರೆ ಪೋಲೀಸ್ ವಶಕ್ಕೆ ಪಡೆದ ತಕ್ಷಣವೇ ಆರೋಪಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆರೋಪಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧಿತ ಆರೋಪಿ ಅಪಸ್ಮಾರ ಮತ್ತು ತಲೆನೋವು ಸಮಸ್ಯೆಯಿಂದ ಬಳಲುತ್ತಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿಗೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದಾರೆ. ಜನವರಿ 3 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಎಂಬಾತನಿಗೆ ಮನೆಗೆ ನಕಲಿ ಇಡಿ ಅಧಿಕಾರಿಗಳ ಹೆಸರಲ್ಲಿ ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದ ಕೊಟ್ಟಾಯಂ ನಿವಾಸಿ ಅನಿಲ್ ಫೆರ್ನಾಂಡೀಸ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಮತ್ತೊಬ್ಬ ಆರೋಪಿ ಪೊಲೀಸ್…
ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ಮುಂದೆ ಫುಟ್‌ಪಾತ್‌ನಲ್ಲಿ ರೈಡಿಂಗ್ ಮಾಡಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಫುಟ್‌ಪಾತ್ ಮೇಲೆ ಬೈಕ್, ಕಾರು ಓಡಿಸುವ ಸವಾರರಿಗೆ ಸಂಚಾರ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ. ಇದರ ಜೊತೆಗೆ ಕೇಸ್ ದಾಖಲಿಸಿ ಸೂಕ್ತ ದಂಡ ವಿಧಿಸಲಿದ್ದಾರೆ. ಫುಟ್‌ಪಾತ್ ರೈಡಿಂಗ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರ ನಿರ್ಧಾರಿಸಿದ್ದಾರೆ. ಪಾದಚಾರಿಗಳ ಬಳಕೆಗೆ ಫುಟ್‌ಪಾತ್ ಇರೋದು. ಅಲ್ಲಿ ವಾಹನ ಚಲಾಯಿಸುವಂತಿಲ್ಲ ಎಂದು ಸೂಚಿಸಿದ್ದಾರೆ. ಪಾದಚಾರಿಗಳು ಹೊರತುಪಡಿಸಿ ಬೇರೆ ಯಾರೇ ಬಳಸಿದರೂ ಕ್ರಮ ಆಗಲಿದೆ. ಪಾದಚಾರಿಗಳ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕಠಿಣ ನಿಯಮ ರೂಪಿಸಿದ್ದಾರೆ. ಇತ್ತೀಚೆಗೆ ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ನಿಯಮ ಉಲ್ಲಂಘಿಸಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳಿಗೆ ಓಡಾಟಕ್ಕೆ ಕಿರಿಕಿರಿಯಾಗುತ್ತಿದೆ. ಫುಟ್‌ಪಾತ್‌ನಲ್ಲಿ ಬೈಕ್ ಅಷ್ಟೇ ಅಲ್ಲ,…
ಬಂಟ್ವಾಳ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ಬ್ಯಾಗ್‌ನಿಂದ ನಗ-ನಗದು ಕಳವು ಮಾಡಿದ ಘಟನೆ ನಡೆದಿದೆ. ರಾಜಗೋಪಾಲ್ ಕಾರಂತ ಯಲಹಂಕ ಉಪನಗರ, ಬೆಂಗಳೂರು ಎಂಬವರ ದೂರಿನಂತೆ ಹೆಂಡತಿಯ ಮನೆಯು ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಆಗಿರುತ್ತದೆ. ಹೆಂಡತಿಯ ಊರಿನಲ್ಲಿ ಖಾಸಗಿ ಕಾರ್ಯಕ್ರಮ ಇದ್ದುದರಿಂದ ಮನೆಯಿಂದ ಚಿನ್ನವನ್ನು ಬಾಕ್ಸ್‌ನಲ್ಲಿ ಇಟ್ಟುಕೊಂಡು ಅದರ ಜೊತೆಯಲ್ಲಿ 3000 ರೂ ಹಣವನ್ನು ತಮ್ಮ ಲಗೇಜು ಬ್ಯಾಗ್ ನಲ್ಲಿರಿಸಿ ತನ್ನ ಹೆಂಡತಿ ಮತ್ತು ಅಳಿಯನೊಂದಿಗೆ ಫೆ.1 ರಂದು ರಾತ್ರಿ ಬೆಂಗಳೂರು ಮೆಜಸ್ಟಿಕ್ ನಿಂದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಹೊರಟಿರುತ್ತಾರೆ. ಬರುವ ದಾರಿಯಲ್ಲಿ, ಕುಣಿಗಲ್ ಬಳಿ ಬಸ್ ನಿಲ್ಲಿಸಿದಾಗ ರಾಜಗೋಪಾಲ್ ಅವರ ಹೆಂಡತಿ ಮತ್ತು ಅಳಿಯ ಚಿನ್ನಾಭರಣ ಹಾಗೂ ನಗದು ಹಣವಿದ್ದ ಬ್ಯಾಗ್‌ಗಳನ್ನು ಬಸ್ಸಿನಲ್ಲಿಯೇ ಇಟ್ಟು ಶೌಚಾಲಯಕ್ಕೆ ಹೋಗಿರುತ್ತಾರೆ. ಫೆ.2 ರಂದು ಮುಂಜಾನೆ ಬಸ್ ವಗ್ಗ ಕಾರಿಂಜಾ ಕ್ರಾಸ್ ತಲುಪಿದಾಗ ಬಸ್ಸಿನಿಂದ ಕೆಳಗೆ ಇಳಿದು, ಅಲ್ಲಿಯೇ ಬಸ್ ನಿಲ್ದಾಣದ ಪಕ್ಕದಲ್ಲಿ ಬ್ಯಾಗನ್ನು ತೆರೆದು ನೋಡಿದಾಗ ಒಟ್ಟು 144 ಗ್ರಾಂ ಚಿನ್ನ ಅಂದಾಜು…
ಉಡುಪಿ: ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ನಗರದ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದ ಕಿರಣ್ (24) ಬಂಧಿತ ಆರೋಪಿ. ಆತನಿಂದ ₹7 ಲಕ್ಷ ವಶಪಡಿಸಿಕೊಳ್ಳಲಾಗಿದೆ.ಉಡುಪಿ ಕನ್ನಾರ್ ಸಂತೋಷ ಕುಮಾರ್ ಎಂಬುವರಿಗೆ ಅಪರಿಚಿತರು ಕರೆಮಾಡಿ, ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುತ್ತಿದ್ದು, ನಿಮ್ಮ ಮೊಬೈಲ್ ಸಂಖ್ಯೆಯಿಂದ ಕಾನೂನುಬಾಹಿರ ಜಾಹೀರಾತು ಹಾಗೂ ಸಂದೇಶ ಹೋಗಿದೆ ಎಂದು ತಿಳಿಸಿದ್ದರು. ನಿಮ್ಮ ಮೇಲೆ ಒಟ್ಟು 17 ಎಫ್‌ಐಆರ್ ಆಗಿದ್ದು, ಎರಡು ಗಂಟೆಯೊಳಗೆ ನಿಮ್ಮ ಹೆಸರಿನಲ್ಲಿರುವ ಸಂಖ್ಯೆಗಳನ್ನು ಸ್ಥಗಿತಗೊಳಿಸುತ್ತೇವೆ. ನಿಮ್ಮ ಮೇಲೆ ಅರೆಸ್ಟ್ ವಾರಂಟ್ ಆಗಿದೆ ಎಂದೂ ಹೆದರಿಸಿದ್ದರು.ಸಂತೋಷ ಕುಮಾರ್ ಅವರಿಗೆ ವಿಡಿಯೊ ಕರೆ ಮಾಡಿದ್ದು, ಕರೆ ಮಾಡಿದ ವ್ಯಕ್ತಿಯು ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿದ್ದು, ಅಂಧೇರಿ ಈಸ್ಟ್ ಮುಂಬೈನ ಸೈಬರ್ ವಿಭಾಗದ ಇನ್‌ಸ್ಪೆಕ್ಟರ್ ಎಂದು ಹೇಳಿದ್ದ. ಅಲ್ಲದೆ, ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯಲ್ಲಿ ಹಣ ಅಕ್ರಮ ವರ್ಗಾವಣೆಯಾಗಿದೆ ಎಂದೂ ತಿಳಿಸಿದ್ದ. ಆದಾಯದ ಮೂಲ ಪರಿಶೀಲಿಸುವುದಾಗಿ ತಿಳಿಸಿ ಸಂತೋಷ್…
ಉಡುಪಿ: ಭಾನುವಾರ ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರ ತಂಡವು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಫೆಬ್ರವರಿ 3ರಂದು ವೀಡಿಯೋ ಕಾನ್ಸರೆನ್ಸ್ ಮೂಲಕ ಹಾಜರುಪಡಿಸುವಂತೆ ನ್ಯಾಯಾಧೀಶರು ತಿಳಿಸಿದರು. ಲಕ್ಷ್ಮೀ , ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗುಟ್ಟೆಯ ನಿವಾಸಿ ಪಂಜು ಪೂಜಾರಿ – ದಾರಕ್ಕ ದಂಪತಿಯ 5ನೇ ಪುತ್ರಿಯಾಗಿದ್ದಾರೆ. ಸಹೋದರರಾದ ರಾಮ್, ರಾಜು, ವಿಠಲ, ಬಸವ ಕೃಷಿಕರಾಗಿದ್ದಾರೆ. ತಂಗಿ ರಾಜೀವಿಯ ವಿವಾಹವಾಗಿದೆ. ತಂದೆ ಹಾಗೂ ತಾಯಿ ಮೃತಪಟ್ಟಿದ್ದಾರೆ. ಈಕೆಯ ವಿರುದ್ಧ ಅಮಾಸೆಬೈಲು ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಈಕೆ ಆಂಧ್ರಪ್ರದೇಶದಲ್ಲಿ ಗಂಡ ಮತ್ತು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದು ನಕ್ಸಲ್ ಚಟುವಟಿಕೆಯಿಂದ ವಿಮುಖರಾಗಿದ್ದರು.
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಣಿಪಾಲದ ವಿನೋದಾ ಅವರು ನ.2ರಂದು ಪಿಎಂಎಲ್ ಎಂಬ ಸ್ಟಾಕ್ ಮಾರ್ಕೆಟ್‌ಗೆ ಸಂಬಂಧಿಸಿದ ಸಂಸ್ಥೆ ಬಗ್ಗೆ ಆನ್‌ಲೈನ್‌ನಲ್ಲಿ ತಿಳಿದುಕೊಂಡು ನ.27ರಂದು ಪಿಎಂಎಲ್ ಮ್ಯಾಕ್ಸ್ ಮತ್ತು ಪಿಎಂಎಲ್ ಪ್ರೊ ಮೊಬೈಲ್ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿದ್ದರು. ಆರಂಭದಲ್ಲಿ ಹೂಡಿಕೆ ಮಾಡಿದ ಹಣವನ್ನು ಐಪಿಒ ಪ್ರಕಾರ ಹಿಂದಿರುಗಿಸಿದ್ದು, ಬಳಿಕ ಹೂಡಿದ ಹಣವನ್ನು ಹಿಂಪಡೆಯಲು ಸಾಧ್ಯವಾಗಿಲ್ಲ. ಈ ಬಗ್ಗೆ ಕಂಪೆನಿಯವರಲ್ಲಿ ವಿಚಾರಿಸಿದಾಗ ನೀವು ಇನ್ನೂ ಹಣ ಹೂಡಿಕೆ ಮಾಡಿದರೆ ಮಾತ್ರ ಹಿಂಪಡೆಯಲು ಸಾಧ್ಯ ಎಂದು ತಿಳಿಸಿದ್ದರು. ಅದನ್ನು ನಂಬಿ ವಿನೋದಾ ಡಿ.24ರ ವರೆಗೆ 20,17,754 ರೂ.ಗಳನ್ನು ಕಂಪೆನಿಯ ಬೇರೆ ಬೇರೆ ಬ್ಯಾಂಕ್‌ಗಳ ಖಾತೆಗಳಿಗೆ ಜಮೆ ಮಾಡಿದ್ದರು. ಆದರೂ ಕಂಪೆನಿಯವರು ಹಣವನ್ನು ಮರಳಿಸದೆ ಮೋಸ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಹೋಮ್‌ಗಾರ್ಡ್ ಆಗಿದ್ದು, ಪೊಲೀಸ್ ಅಧಿಕಾರಿಯಂತೆ ಯುವತಿಯರ ರೂಮ್‍ಗೆ ರಾತ್ರಿ ವೇಳೆ ನುಗ್ಗುತ್ತಿದ್ದ. ಅಲ್ಲದೇ ಯುವತಿಯರ ಬಳಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ಕೊಡುತ್ತಿದ್ದ. ಕೇರಳದಿಂದ ಬೆಂಗಳೂರಿಗೆ ಬಂದು ಕಾಲೇಜೊಂದರಲ್ಲಿ 2ನೇ ವರ್ಷದ ಬಿಎಸ್‍ಸಿ ಓದುತ್ತಿದ್ದ ವಿದ್ಯಾರ್ಥಿನಿ ಮೂವರು ಸ್ನೇಹಿತೆಯರ ಜೊತೆ ರೂಮ್ ಮಾಡಿಕೊಂಡಿದ್ದಳು. ಜ.25ರಂದು ಊಟ ಮಾಡಿ ಮಲಗಿದ್ದಾಗ ಆರೋಪಿ ಬಾಗಿಲು ತಟ್ಟಿದ್ದ. ಬಾಗಿಲು ತೆಗೆದಾಗ ನಾನು ಪೊಲೀಸ್ ಅಂತ ಹೇಳಿ ಒಳಗಡೆ ಹೋಗಿದ್ದ. ಆತ ಒಳಗೆ ಬರುತ್ತಿದ್ದಂತೆ ಯುವತಿ ಆಕೆಯ ಸ್ನೇಹಿತನಿಗೆ ಕರೆ ಮಾಡಿ ಪೊಲೀಸರು ಬಂದಿದ್ದಾರೆ ಎಂದು ತಿಳಿಸಿದ್ದಳು. ಆರೋಪಿ ಡೋರ್ ಲಾಕ್ ಮಾಡಿ, ಎಲ್ಲರ ಮೊಬೈಲ್‍ನ್ನು ಹೆದರಿಸಿ ಕಸಿದುಕೊಂಡಿದ್ದ. ಬಳಿಕ ಯುವತಿ ಕೈಯಲ್ಲಿದ್ದ ಹಾವಿನ ಟ್ಯಾಟೋ ನೋಡಿ ಅಶ್ಲಿಲವಾಗಿ ಮಾತನಾಡಿದ್ದ. ಅಲ್ಲದೇ ಯುವತಿ ಕರೆ ಮಾಡಿದ್ದಕ್ಕೆ ಬಂದಿದ್ದ ಆಕೆಯ ಸ್ನೇಹಿತರ ಮೊಬೈಲ್ ವಶಕ್ಕೆ…










