Author: main-admin

ಮಂಗಳೂರು: ನಗರದ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆತ್ನಿಸಿದ ಆರೋಪದಲ್ಲಿ ಬರ್ಕೆ ಠಾಣಾ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ. ಎನ್ಎಸ್‌ಯುಐ ಕಾರ್ಯಕರ್ತ ತನುಷ್ ಶೆಟ್ಟಿ ಹಾಗೂ ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತ ಆರೋಪಿಗಳು. ಬಂಧಿತ ತನುಷ್ ಶೆಟ್ಟಿ ಈ ಬಾರಿ ಎಂಪಿ ಚುನಾವಣೆ ವೇಳೆ ನೋಟಾ ಕ್ಯಾಂಪೇನ್ ನಡೆಸಿದ್ದನು. ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣ ಕಡೆಯಿಂದ ಯುವಕರಿದ್ದ ಕಾರನ್ನು ಓವರ್ ಟೇಕ್ ತಮ್ಮ ಆಡಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿಯವರು ತಮ್ಮ ಕೊಡಿಯಾಲಬೈಲ್‌ನ ಮನೆಗೆ ತಲುಪಿದಾಗ, ಅಲ್ಲಿ ಅವರನ್ನು ಅವಾಚ್ಯವಾಗಿ ನಿಂದಿಸಿ ಮನೆಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಗೆ ಹಲ್ಲೆಮಾಡಲು ಯತ್ನಿಸಿದ್ದಾರೆ. ತಕ್ಷಣ ಜಿತೇಂದ್ರ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.…

Read More

ಮಂಗಳೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಹಸನಬ್ಬ ಎಂಬಾತನಿಗೆ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಭಾಗ್ಯಮ್ಮ ದಂಡ ಪಾವತಿಸುವಂತೆ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಫರಂಗಿಪೇಟೆ ಶಾಖೆಯಿಂದ ಹಸನಬ್ಬ 2012ರಲ್ಲಿ ಅಡವು ಸಾಲ ಪಡೆದುಕೊಂಡಿದ್ದರು. ಆರೋಪಿ ಸರಿಯಾದ ಸಮಯಕ್ಕೆ ಮರುಪಾವತಿಸದೆ ಸಾಲವನ್ನು ಸುಸ್ತಿ ಮಾಡಿದ್ದರು. ಹಾಗಾಗಿ ಆರೋಪಿ ವಿರುದ್ಧ ಸಹಕಾರಿ ಕಾಯ್ದೆಯನ್ವಯ ಕಾನೂನು ಪ್ರಕ್ರಿಯೆ ಆರಂಭಿಸಿತ್ತು. 2019ರಲ್ಲಿ ಆಸ್ತಿಯನ್ನು ಹರಾಜಿಗಿಡುವ ಸಂದರ್ಭ ಆರೋಪಿಯು ಶಾಖೆಗೆ ಆಗಮಿಸಿ ಸಾಲದ ಭಾಗಶಃ ಬಾಕಿಗೆ ಚೆಕ್ ನೀಡಿದ್ದರು. ಇದು ಅಮಾನ್ಯಗೊಂಡ ಕಾರಣ ಎಸ್‌ಸಿಡಿಸಿಸಿ ಬ್ಯಾಂಕ್ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ಹಸನಬ್ಬ ಬ್ಯಾಂಕಿಗೆ 2.50 ಲಕ್ಷ ರೂ. ಪರಿಹಾರ ನೀಡಬೇಕು, 10,000 ರೂ. ದಂಡ ಪಾವತಿಸಬೇಕು. ತಪ್ಪಿದ್ದಲ್ಲಿ 1 ವರ್ಷದ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಪರ ವಕೀಲ ಸುಕೇಶ್ ಕುಮಾರ್…

Read More

ಮಣಿಪಾಲ: ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಕೆಲವು ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Read More

ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ ಕೆನರಾ ಬ್ಯಾಂಕಿನ ಎ.ಟಿ.ಎಂ ನಲ್ಲಿ ಹಣ ತೆಗೆಯಲೆಂದು ಹೋಗಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಎ.ಟಿ.ಎಂ ಒಳಗೆ ಬಂದು ಅಬೂಬಕ್ಕರ್ ಅವರಿಗೆ ಸಹಾಯ ಮಾಡಲು ಮುಂದಾಗುತ್ತಾರೆ. ಅಬೂಬಕ್ಕರ್ ಅವರು ಸಹಾಯ ಅಗತ್ಯವಿಲ್ಲ ಎಂದು ಹೇಳಿದರೂ ಅಪರಿಚಿತರು ಅಲ್ಲಿ ಅವರೊಂದಿಗೆ ಇದ್ದರು ಎನ್ನಲಾಗಿದೆ. ಇದಾದ ಎರಡು ದಿನಗಳ ಬಳಿಕ ಅಬೂಬಕ್ಕರ್ ಮತ್ತೆ ಎ.ಟಿ.ಎಂ ಗೆ ಹೋದಾಗ ಎಟಿಎಂ ಕಾರ್ಡ್ ವರ್ಕ್ ಆಗುತ್ತಿರಲಿಲ್ಲ. ಬ್ಯಾಂಕಿನಲ್ಲಿ ವಿಚಾರಿಸಿದಾಗ ಖಾತೆಯಲ್ಲಿದ್ದ 49,200 ರೂ. ಎ.ಟಿ.ಎಂ ಕಾರ್ಡ್ ಬಳಸಿ ತೆಗೆದಿರುವುದು ಕಂಡು ಬಂದಿದೆ. ಅಪರಿಚಿತ ವ್ಯಕ್ತಿಗಳು ಎಟಿಎಂ ಕೇಂದ್ರದಲ್ಲಿ ಅಬೂಬಕ್ಕರ್ ಅವರಿಂದ ಎಟಿಎಂ ಕಾರ್ಡ್ ಅಪಹರಿಸಿ ಯಾವುದೋ ಹಳೆಯ ಕಾರ್ಡನ್ನು ಅವರಿಗೆ ನೀಡಿದ್ದರು. ಬಳಿಕ ಕಾರ್ಡನ್ನು ಉಪಯೋಗಿಸಿ ಹಣ ಕಬಳಿಸಿದ್ದರು. ಇದೀಗ ಬೆಳ್ತಂಗಡಿ…

Read More

ಮುಂಬೈ : ಇಂದು ಮುಂಜಾನೆ ನಿಧನರಾದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ದಿವಂಗತ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ಗೆ ಕೊಂಡೊಯ್ಯಲಾಗುವುದು, ಅಲ್ಲಿ ಸಾರ್ವಜನಿಕರು ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಶ್ರದ್ಧಾಂಜಲಿ ಸಲ್ಲಿಸಬಹುದು. ಸಾರ್ವಜನಿಕ ದರ್ಶನದ ನಂತರ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು. ಇಂದು ಮುಂಜಾನೆ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಅಂಬಾನಿ ಅವರು ಆಳವಾದ ದುಃಖವನ್ನು ವ್ಯಕ್ತಪಡಿಸಿದ್ದಾರೆ, ಟಾಟಾ ಅವರ ವೈಯಕ್ತಿಕ ನಷ್ಟವನ್ನು ಕರೆದರು ಮತ್ತು ಅವರ ಹಲವಾರು ಸಂವಹನಗಳನ್ನು ಸ್ಫೂರ್ತಿಯ ಮೂಲವಾಗಿ ನೆನಪಿಸಿಕೊಂಡರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಆಸ್ಪತ್ರೆಗೆ ಆಗಮಿಸಿ, ನಿಧನರಾದ ಕೈಗಾರಿಕೋದ್ಯಮಿಗೆ…

Read More

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್‌ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Read More

ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 9.5 ಲಕ್ಷ ಮೌಲ್ಯದ 155 ಗ್ರಾಂ ಚಿನ್ನದ ಆಭರಣ ಹಾಗೂ 1.27 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಇಲಿಯಾಜ್ ನಗರದ ನಿವಾಸಿ ಮುಜೀಬುಲ್ಲಾ ಶೇಖ್ ಜೊತೆ ಸೇರಿ ತಸ್ಮೀಯ ಖಾನಂ ತನ್ನದೇ ಮನೆಯಲ್ಲಿ ಕಳ್ಳತನ ಮಾಡಿದ್ದಳು. ಬಳಿಕ ಮನೆಯಲ್ಲಿ ತಾನು ಒಬ್ಬಳೇ ಇದ್ದಾಗ ಯಾರೋ ಬಂದು ಮುಖಕ್ಕೆ ಬೂದಿ ಹಾಗೂ ಕೆಮಿಕಲ್ ಹಾಕಿ ಪ್ರಜ್ಞೆ ತಪ್ಪಿಸಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಚನ್ನಗಿರಿ ಇನ್ಸ್‌ಪೆಕ್ಟರ್ ಬಾಲಚಂದ್ರ ನಾಯ್ಕ ತಂಡ ಫೋನ್ ಕಾಲ್ ಮಾಹಿತಿ ಮೇಲೆ ಮುಜೀಬುಲ್ಲಾ ಶೇಖ್‌ನನ್ನು ವಶಕ್ಕೆ ಪಡೆದಿದ್ದರು. ನಂತರ ತಸ್ಮೀಯ ಖಾನಂ ತಾನು ಮಾಡಿದ…

Read More

ಮಂಗಳೂರು: ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಎಂಬವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅಥಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ ತೌಸೀರ್ (31) ಬಂಧಿತ ಆರೋಪಿಗಳು. ಅಕ್ಟೋಬರ್ 5ರಂದು ಅಡ್ಯಾರ್ ಬ್ರಿಡ್ಜ್ ಬಳಿ ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ಸಂದರ್ಭ ಪ್ರತಿಭಟನೆಯಲ್ಲಿ ಭಾಗಿಯಾಗಿ ನಿರ್ದೇಶನ ಮಾಡಿದ್ದ ಆಲ್ವಿನ್ ಡಿಸೋಜಾ ಮೇಲೆ ಹಲ್ಲೆಗೆ ಮುಹಮ್ಮದ್ ಅಥಾವುಲ್ಲಾ ಪ್ರಚೋದನೆ ನೀಡಿದ್ದ ಎಮದು ಹೇಳಲಾಗಿದ್ದು, ತೌಸೀರ್ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಪುತ್ತೂರು: ಮಾದಕ ವಸ್ತು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ್ದು ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ನದಲ್ಲಿ ನಡೆದಿದೆ. ಬಂಧಿತನನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮ ದೂಮಡ್ಕ ನಿವಾಸಿ ಮೆಹಬೂಬ್ (44) ಎಂದು ಗುರುತಿಸಲಾಗಿದೆ. ಅ. 8 ರಂದು ಮದ್ಯಾಹ್ನದ ವೇಳೆ ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್‌ನ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣೆ ಉಪ ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ತೆರಳಿದರು. ಈ ವೇಳೆ ವ್ಯಕ್ತಿ ಓಡಿ ಹೋಗಲು ಪ್ರಯತ್ನಿಸಿದ್ದು ಆತನನ್ನು ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆದು ವಿಚಾರಿಸಿದಾಗ ಆತನ ಹೆಸರು ವಿಳಾಸ ಮೆಹಬೂಬ್ (44) ವರ್ಷ, ದೂಮಡ್ಕ ಅಂಚೆ ಇರ್ದೆ ಗ್ರಾಮ ಪುತ್ತೂರು ತಾಲೂಕು ಎಂಬುದಾಗಿ ತಿಳಿಸಿದ. ಆತ ಯಾವುದೋ ಸೇವಿಸಿದವನಂತೆ ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯವರ…

Read More

ಮಂಗಳೂರು:ಆಟೊ ರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವು ದರಿಂದ ಮನ ನೊಂದು ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗಡಿಭಾಗದ ಕಾಸರಗೋಡು ನಗರದಲ್ಲಿ ನಡೆದಿದೆ ಮೃತರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ (55) ಎಂದು ಗುರುತಿಸಲಾಗಿದೆ. ಇವರು ಮೂರು ವರ್ಷಗಳಿಂದ ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಸಮೀಪ ಬಾಡಿಗೆ ಕ್ವಾಟ್ರಸ್‌ನಲ್ಲಿ ವಾಸ್ತವ್ಯ ಹೂಡಿ ನಗರದಲ್ಲಿ ಆಟೊ ರಿಕ್ಷಾ ಬಾಡಿಗೆ ನಡೆಸುತ್ತಿದ್ದರು. ಡಿವೈಎಸ್ಪಿ ಕಚೇರಿಗೆ ತೆರಳಿ ಮನವಿ ಮಾಡಿದ್ದು, ಭರವಸೆ ನೀಡಿದ್ದರೂ ನಗರ ಠಾಣಾ ಪೊಲೀಸರು ಹಲವು ಕಾರಣ ನೀಡಿ ಆಟೊ ರಿಕ್ಷಾ ಬಿಟ್ಟು ಕೊಡಲು ಮುಂದಾಗಲಿಲ್ಲ ಎಂದು ಆರೋಪ ಕೇಳಿ ಬಂದಿತ್ತು. ಈ ನಡುವೆ ಸತ್ತಾರ್ ಸೋಮವಾರ ಸಂಜೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ಬಳಿಕ ನಗರದಲ್ಲಿ ಆಟೊ ಚಾಲಕರು ಸಂಚಾರ ಸ್ಥಗಿ ತಗೊಳಿಸಿ ಮುಷ್ಕರ ನಡೆಸಿ, ನಗರ ಠಾಣೆಗೆ ಮುತ್ತಿಗೆ ಹಾಕಿದರು. ನಾಲ್ಕು ದಿನಗಳ ಹಿಂದೆ ಸಂಜೆ ನಗರದ ಗೀತಾ ಜಂಕ್ಷನ್ ಬಳಿ ಅಬ್ದುಲ್ ಸತ್ತಾರ್‌ರ ಆಟೊ…

Read More