Author: main-admin

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತನ್ನ ತಮ್ಮನಿಗೆ ಹುಷಾರಿಲ್ಲ, ರೂಮಿಗೆ ಹೋಗುತ್ತೇನೆಂದು ಬ್ಯಾಂಕಿನಲ್ಲಿ ಹೇಳಿ ಹೋದವ ಬಳಿಕ ನಾಪತ್ತೆಯಾಗಿದ್ದ. ತನ್ನ ರೂಂನಲ್ಲಿ ಜೊತೆಯಾಗಿ ವಾಸ್ತವ್ಯ ಹೊಂದಿದ್ದ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದ್ದು, ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆ ಯಾಗಿರುವುದಾಗಿ ದೂರಲಾಗಿತ್ತು. ಈ ಸಂಬಂಧ ಸುಬ್ರಹ್ಮಣ್ಯಂನ ಸಹೋದರ ಪುಲುಗುಜ್ಜು ನಾಗಫಣೀಂದ್ರ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಈ ಮಧ್ಯೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ವ್ಯವಸ್ಥಾಪಕ ಸಿ.ವಿ.ಎಸ್. ಚಂದ್ರಶೇಖರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು,…

Read More

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ. ವಿಜಯನಗರ ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಕಳೆದ ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಕಳೆದ ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ.ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪವನ್ ನೆಜ್ಜೂರ್ ಅವರನ್ನು ವರ್ಗಾಯಿಸಲಾಗಿತ್ತು

Read More

ಪುತ್ತೂರಿನ ಯುವತಿಗೆ ವಂಚಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲಾಗುವುದು. ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥಕವಾಗಿ ಮಗುವಿಗೆ ನಾಮಕರಣ ಶಾಸ್ತç ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು. ಮಂಗಳೂರಿನಲ್ಲಿ ಅವರು ಯುವತಿ, ಮಗು ಹಾಗೂ ಪೋಷಕರ ಜೊತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನ ಅವರ ಜತೆಗಿದೆ ಎಂದರು. ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ…

Read More

ಮಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ನಗರದ ಹಲವು ಕಡೆ ಪೊಲೀಸರು ನಡೆಸಿದ ತಪಾಸಣೆ ವೇಳೆ 52 ವ್ಯಕ್ತಿಗಳು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇದರ ಜತೆ ಮೂವರು ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರನ್ನು ಮಾದಕ ಮುಕ್ತ ನಗರ ಮಾಡುವ ಪ್ರಯತ್ನದ ಭಾಗವಾಗಿ, ಗುರುವಾರ ರಾತ್ರಿ ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 1,000ಕ್ಕೂ ಹೆಚ್ಚು ಅನುಮಾನಸ್ಪಾದ ವ್ಯಕ್ತಿಗಳನ್ನು ತಪಾಸಣೆಗೊಳಪಡಿಸಲಾಗಿದ್ದು, ಇದರಲ್ಲಿ 52 ಮಂದಿ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, “ಈ ಕಾರ್ಯಾಚರಣೆಯ ಮೂಲಕ ಡ್ರಗ್ಸ್ ಸೇವಿಸುವವರು ಮತ್ತು ಮಾರಾಟ ಮಾಡುವವರ ಜಾಲದ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಮುಂಬರುವ ದಿನಗಳಲ್ಲಿ ಈ ಜಾಲವನ್ನು ಸಂಪೂರ್ಣವಾಗಿ ನಾಶಗೊಳಿಸಲು ಸಹಕಾರಿಯಾಗಲಿದೆ. ‘ಮಾದಕ ಮುಕ್ತ ಮಂಗಳೂರು’ ಅಭಿಯಾನಕ್ಕೆ ಇದು ದೊಡ್ಡ ಯಶಸ್ಸು” ಎಂದು ತಿಳಿಸಿದ್ದಾರೆ.

Read More

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ. ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಉಡುಪಿ : ಕಾಪು ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕನನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ

Read More

ಬಂಟ್ವಾಳ : ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅದಾಗಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿರುವ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ ಕಾರ್ತಿಕ್ ರಾವ್ (31), ಪತ್ನಿ ಕೆ.ಎಸ್.ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಡಿ. 17 ರ ಮಧ್ಯರಾತ್ರಿ ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತರು ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ.ನಾರಾಯಣ (84) ಎಂಬುವವರ ಮನೆಗೆ ಹಿಂಬಾಗಿಲಿನ ಮೂಲಕ ಪ್ರವೇಶ ಮಾಡಿದ್ದರು. ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಲು ಯತ್ನ ಮಾಡಿ ದಂಪತಿಯನ್ನು ಬೆದರಿಸಿದ್ದರು . ಈ ಸಂದರ್ಭದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು,ಜೋರಾಗಿ ಕಿರುಚಿಕೊಂಡಾಗ ಆರೋಪಿಗಳು ಪರಾರಿಯಾಗಿದ್ದರು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ಮಾಡಿದ ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More

ಬೆಂಗಳೂರು: ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಾಜ್ಯದ 48 ಮಂದಿ ಐಪಿಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು(ಎಸ್ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಲಾಗಿದೆ. ಈ ಪ್ರಮುಖ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಮಂಡ್ಯ ಶಿವಮೊಗ್ಗ ಕೊಡಗು, ರಾಯಚೂರು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ. ದಕ್ಷಿಣ ವಲಯ (ಮೈಸೂರು ) ಐಜಿಪಿಯಾಗಿ ಡಾ.ಎಂ.ಬಿ.ಬೋರಲಿಂಗಯ್ಯ ಬೆಂಗಳೂರು ಅಪರಾಧ ವಿಭಾಗದ ಐಜಿಪಿ ಮತ್ತು ಅಪರ ಆಯುಕ್ತರಾಗಿ ಅಜಯ್ ಹಿಲೋರಿ, ಸಿಐಡಿಯ(ಆರ್ಥಿಕ ಅಪರಾಧಗಳು) ಡಿಐಜಿಯಾಗಿ ಡಾ.ಭೀಮಾಶಂಕರ್ ಗುಳೇದ್, ಕರ್ನಾಟಕ ಲೋಕಾಯುಕ್ತದ ಡಿಐಜಿಯಾಗಿ ಡಿ.ಆ‌ರ್.ಸಿರಿಗೌರಿ ಅವರಿಗೆ ಮುಂಭಡ್ತಿ ನೀಡಲಾಗಿದೆ. ಬಿಎಂಟಿಸಿ(ಭದ್ರತೆ ಮತ್ತು ಜಾಗೃತ) ನಿರ್ದೇಶಕ ಮಂಗಳೂರು ಮೂಲದ…

Read More

ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಗುರುವಾರ (ಜ.1) ಮುಂಜಾನೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿ ತಂದೆಯವರ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ. ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ…

Read More