Author: main-admin

ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್‌ವರ್ಕ್ ಅನ್ನು ಕೆಲ ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಿ (SIM Swap), ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆ ಹಾಗೂ ಸಾಲದ ರೂಪದಲ್ಲಿ ಒಟ್ಟು ₹ 23,98,138 ಹಣವನ್ನು ಆನ್‌ಲೈನ್ ಮೂಲಕ ಲೂಟಿ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರಿಗೆ ಜುಲೈ 8 ರಂದು ಮೊಬೈಲ್ ಸಂಖ್ಯೆ 9631685269 ದಿಂದ ಕರೆ ಬಂದಿತ್ತು. ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು ‘ಏರ್‌ಟೆಲ್ ಕಸ್ಟಮರ್ ಕೇರ್’ (Airtel Customer Care) ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದನು. “ನಿಮ್ಮ ಸಿಮ್ ಕಾರ್ಡ್ ಸದ್ಯ 4G ಸೇವೆಯಲ್ಲಿದ್ದು, ಅದನ್ನು ಉಚಿತವಾಗಿ 5G ಗೆ ಅಪ್‌ಗ್ರೇಡ್ ಮಾಡಿಕೊಡಲಾಗುವುದು” ಎಂದು ನಂಬಿಸಿದ್ದಲ್ಲದೆ, ದೂರುದಾರರ ವೈಯಕ್ತಿಕ ವಿವರಗಳನ್ನು ಸರಿಯಾಗಿ ಹೇಳಿ ಅವರ ವಿಶ್ವಾಸ ಗಳಿಸಿದ್ದನು. ಇದನ್ನು…

Read More

ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಶಿಹಾಬ್ ಎಂಬವರ ಪುತ್ರಿ ಫಾತಿಮತ್ ಸಅದಿಯಾ(4) ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡ ಬಾಲಕಿ. ಮಾಹಿತಿಯ ಪ್ರಕಾರ ಫಾತಿಮತ್ ಸಅದಿಯಾ ಎಂದಿನಂತೆ ಮಂಗಳವಾರವೂ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸಂದರ್ಭ ಅಂಗನವಾಡಿ ಶಿಕ್ಷಕಿ ಬಿ.ಎಲ್.ಓ. ಕರ್ತವ್ಯದ ನಿಮಿತ್ತ ಹೊರಗಡೆ ತೆರಳಿದ್ದರಿಂದ ಕೇಂದ್ರದಲ್ಲಿ ಸಹಾಯಕಿ ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಬಾಲಕಿಯನ್ನು ತಕ್ಷಣ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ವೈದ್ಯರ ಸಲಹೆಯಂತೆ…

Read More

ಮಂಗಳೂರು: ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ (MBBS) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಸುರತ್ಕಲ್‌ನ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಘಟನೆಯ ವಿವರ: ಮಹಾಲಕ್ಷ್ಮೀ ಮುಕ್ಕದ ಖಾಸಗಿ ಅಪಾರ್ಟ್‌ಮೆಂಟ್ ಒಂದರಲ್ಲಿ ತನ್ನ ಸ್ನೇಹಿತೆಯ ಜೊತೆ ವಾಸವಾಗಿದ್ದಳು. ಇಂದು ಮುಂಜಾನೆ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಕೆಳಗೆ ಜಿಗಿದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣ?: ಮೃತ ವಿದ್ಯಾರ್ಥಿನಿ ಮಹಾಲಕ್ಷ್ಮೀ ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಖಿನ್ನತೆಗೆ (Depression) ಒಳಗಾಗಿದ್ದಳು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ವಿದ್ಯಾಭ್ಯಾಸದ ಒತ್ತಡ ಅಥವಾ ವೈಯಕ್ತಿಕ ಕಾರಣಗಳಿಂದ ಖಿನ್ನತೆಗೆ ಒಳಗಾಗಿದ್ದಳೇ ಎಂಬ ನಿಖರ ಕಾರಣ ಇನ್ನು ತಿಳಿಯಬೇಕಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ…

Read More

ಮಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹುಪ್ರಕರಣಗಳ ಆರೋಪಿಯನ್ನು ಮಂಗಳೂರು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಉಮ್ಮರ್ ಫಾರುಖ್ (ತಂದೆ: ದಿ. ಮೊಹಮ್ಮದ್ ಶರೀಫ್), ಶ್ರೀನಿವಾಸ್ ಕೇಬಲ್ ಆಪರೇಟರ್ ಸಮೀಪ, ಚಕ್ರವರ್ತಿ ಮೈದಾನ, ಕೃಷ್ಣಾಪುರ, ಸುರತ್ಕಲ್, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 41/2019ರಲ್ಲಿ ಶಸ್ತ್ರಾಸ್ತ್ರ ಕಾಯ್ದೆ (Arms Act) ಕಲಂ 4, 25(1)(B)(b) ಹಾಗೂ ಭಾರತೀಯ ದಂಡ ಸಂಹಿತೆಯ 143, 147, 148, 115 ಮತ್ತು 120(ಬಿ) ಕಲಂಗಳಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯ ಸುಳಿವು ಪತ್ತೆಹಚ್ಚಿದ ಕಂಕನಾಡಿ ನಗರ ಠಾಣೆಯ ಎಎಸ್‌ಐ ಜಗದೀಶ್, ಹೆಡ್ ಕಾನ್ಸ್‌ಟೇಬಲ್ ಬಾಲರಾಜ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರವಿಕುಮಾರ್ ಅವರ…

Read More

ಮಂಗಳೂರು: ನಗರದ ವಿವಿಧ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದ ಬೆನ್ನಲ್ಲೇ, ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇವರನ್ನು ಕರೆತಂದಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ದಲ್ಲಾಳಿಗಳ ವಿರುದ್ಧ ಮಾನವ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದಾರೆ. ಅಂತರರಾಜ್ಯ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ಇಲ್ಲಿನ ಸ್ಥಳೀಯ ಕೆಲಸಗಳಿಗೆ ಅಕ್ರಮವಾಗಿ ಸೇರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಯ್ದಿನ್ ಇಸ್ಲಾಂ, ರಸುಲ್ ಇಸ್ಲಾಂ ಮತ್ತು ದಿಲ್ವರ್ ಹುಸೇನ್ ಪ್ರಕರಣದ ಆರೋಪಿಗಳಾಗಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, “ಆರೋಪಿಗಳ ಪೈಕಿ ಮೊಯ್ದಿನ್ ಇಸ್ಲಾಂ ಮತ್ತು ದಿಲ್ವರ್ ಹುಸೇನ್ ಎಂಬಿಬ್ಬರನ್ನು ಮಂಗಳೂರು ನಗರ ವ್ಯಾಪ್ತಿಯಲ್ಲೇ ಬಂಧಿಸಲಾಗಿದೆ,” ಎಂದು ತಿಳಿಸಿದ್ದಾರೆ. ಪ್ರಕರಣದ ಮೂರನೇ ಆರೋಪಿಗಾಗಿ ತನಿಖೆ ತೀವ್ರಗೊಳಿಸಿದ್ದ ಪೊಲೀಸರು ಹೊರರಾಜ್ಯಕ್ಕೂ ಜಾಲ ಬೀಸಿದ್ದರು. ಪೊಲೀಸರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ನಡೆಸಿದ ಜಂಟಿ…

Read More

ಉಡುಪಿ ಜಿಲ್ಲೆಯ ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಯುವಕನೊಬ್ಬ ವಿಚಿತ್ರ ವರ್ತನೆಯ ಮೂಲಕ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಬೆಲ್ಲದ ಗಣಪತಿ ದೇವಸ್ಥಾನ ಸಮೀಪ ನಿವಾಸಿಯಾಗಿರುವ ರಂಜಿತ್ ಸೋಮಯಾಜಿ (25) ಎಂಬಾತ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಇದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಗೊಂದಲಕ್ಕೊಳಗಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಉದ್ದನೆಯ ತಲೆಕೂದಲು ಹಾಗೂ ಗಡ್ಡ ಹೊಂದಿದ್ದ ಯುವಕನ ವರ್ತನೆ ಕಂಡು ಸ್ಥಳೀಯರು ತಕ್ಷಣ ಕೋಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ ವೇಳೆ, ಆರೋಪಿಯು ಕತ್ತಿ ಬೀಸಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಂಜಿತ್ ಸೋಮಯಾಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಆತನ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತವಾದರೂ, ಮಾನಸಿಕ ಚಿಕಿತ್ಸೆಗೆ ಒಳಗಾಗಿರುವ ಕುರಿತು ಯಾವುದೇ…

Read More

ಬೆಳ್ತಂಗಡಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಮೃತಪಟ್ಟವರು. ಜು. 10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು. ಇಂದು ಮತ್ತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ ನದಿಯಲ್ಲಿ ಬೋಟ್ ಸಹಾಯದಲ್ಲಿ ಹುಡುಕಾಡಿದ್ದು, ಮೃತದೇಹ ನದಿನೀರಿನ ಪೊದೆಯ ಅಡಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.ಕಿಶೋರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಕಾಲುಜಾರಿ ನದಿ ನೀರಿಗೆ ಬಿದ್ದಿದ್ದಾರೋ ಎಂಬುದು ಖಚಿತ ಮಾಹಿತಿ ಲಭ್ಯವಾಗಿಲ್ಲ.

Read More

ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಿರಂತರವಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯನ್ನು ಅಗತ್ಯ ಕಾನೂನು ಕ್ರಮಗಳಿಗಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ವಾರಂಟ್ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಮತ್ತು ಕಾಯ್ದೆಯ ಸೆಕ್ಷನ್‌ಗಳು: 1). ಉಳ್ಳಾಲ ಠಾಣೆ ಅಪರಾಧ ಸಂಖ್ಯೆ 118/2017 ಸೆಕ್ಷನ್ 341, 504, 506, 323, 324, 307 R/w 34 ಐಪಿಸಿ2) ಉಳ್ಳಾಲ ಠಾಣೆ ಅಪರಾಧ ಸಂಖ್ಯೆ 422/2017 ಸೆಕ್ಷನ್ 341, 323,…

Read More

ಮಂಗಳೂರು: ಉರ್ವಾ ಠಾಣೆ ವ್ಯಾಪ್ತಿಯ ಕೋಡಿಕಲ್ ಮತ್ತು ಕುಂಟಿಕಾನದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಒಟ್ಟು 11 ಮಂದಿ ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಅಪ್ರಾಪ್ತರು ಅನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿಗಳಾದ ಕೌಸರ್ ಅಲಿ (21), ನೂರ್ ಅಮೀನ್ (34), ನಹೀದುಲ್ ಇಸ್ಲಾಂ (22), ಹುಮಾಯೂನ್ ಕಬೀರ್ (22), ರಮ್ಯಾನ್ ಅಲಿ(23), ಅಬ್ದುಲ್ ರಹಮಾನ್ (19), ನೂಯಾನ್ (24) ಮತ್ತು ಇತರ ನಾಲ್ಕು ಮಂದಿ ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇವೆರಲ್ಲ ರಾಜಶಾಹಿ ಜಿಲ್ಲೆಯ ಒಂದೇ ಭಾಗದ ನಿವಾಸಿಗಳೆಂದು ಪೊಲೀಸರು ದೃಢಪಡಿಸಿದ್ದಾರೆ. ವಿದೇಶಿಗರ ಪ್ರಾದೇಶಿಕ ನೋಂದಣಿ ವಿಭಾಗಕ್ಕೆ ಮಾಹಿತಿ ನೀಡಲಾಗಿದ್ದು ಅವರನ್ನು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಸ್‌ಐಆರ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಕಟ್ಟಡ ಇನ್ನಿತರ ಕೆಲಸಗಳಿಗಾಗಿ ಬಂದು ಉಳಿಯುತ್ತಿರುವ ಕಾರ್ಮಿಕರ ಬಗ್ಗೆ ನಿಗಾ ಇಟ್ಟಿರುವ ಜನರು ಶಂಕೆಯ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ. ಪಶ್ಚಿಮ…

Read More

ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಆಧಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಈ ಹಿಂದೆ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಮಾನ್ಯ ಮಾಡಲು ಒಪ್ಪಿಲ್ಲ. ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ ಕೂಡ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ, ಹೈಕೋರ್ಟ್ ಬಳಿಕ ಇದೀಗ ಸುಪ್ರೀಂ ಕೋರ್ಟ್‌ನಲ್ಲಿಯೂ ಮಧ್ಯಂತರ ಪರಿಹಾರ…

Read More