ಸುರತ್ಕಲ್: ಸುರತ್ಕಲ್ ಸಮೀಪದ ಎನ್.ಐ.ಟಿ.ಕೆ ಕಾಲೇಜು ಬಳಿ ಮಾದಕ ವಸ್ತು ಸೇದುತ್ತಿದ್ದ ಆರೋಪದಲ್ಲಿ ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರ ಮೂಲದ ಪುರುಷೋತ್ತಮ್ ಕುಮಾರ್ (21), ಆದಿತ್ಯ ರಾಜ್ ಕಶ್ಯಫ್ (22), ಸೌರವ್ ಕುಮಾರ್ (24) ಎಂದು ತಿಳಿದು ಬಂದಿದೆ. ಬಂಧಿತರು ಅ.1ರಂದು ರಾತ್ರಿ ಎನ್.ಐ.ಟಿ.ಕೆ ಕಾಲೇಜು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ನಲ್ಲಿ ದೂಮಪಾನ ಮಾಡುತ್ತಿದ್ದರು. ಅನುಮಾನಗೊಂಡ ಬೀಟ್ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಅವರನ್ನು ಎಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರು ಅಮಲು ಪದಾರ್ಥ ಸೇವಿಸಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎನ್ನಲಾಗಿದೆ.
Author: main-admin
ಮಂಗಳೂರು:ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.35 ಕೋಟಿ ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ವಿಮಾ ಕಂಪೆನಿಗೆ ಆದೇಶಿಸಿದ್ದಾರೆ. ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ನಗರದ ಕೊಟ್ಟಾರ ಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಹೇಶ್ ಭಟ್ ಮೃತಪಟ್ಟಿದ್ದರು. ಅದರಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ಕಾಯ್ದೆಯಡಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಮಾ ಸಂಸ್ಥೆಯಾದ ಯುನಿವರ್ಸಲ್ ಸೊಂಪೋ ಜನರಲ್ ಇನ್ಸೂರೆನ್ಸ್ ಕಂಪೆನಿಯು 1.6 ಕೋಟಿ ರೂ. ಪರಿಹಾರವನ್ನು ಶೇ.6ರಷ್ಟು ಬಡ್ಡಿ ಸಹಿತ 1.35 ಕೋ.ರೂ.ಗಳ ಪರಿಹಾರವನ್ನು ಅರ್ಜಿದಾರರಿಗೆ ನೀಡಲು ಆದೇಶ ನೀಡಿದೆ. ಪರಿಹಾರ ಧನ ಪಡೆಯಲು ಮೃತರ ಪತ್ನಿ, ಅವರ ಪುತ್ರ ಹಾಗೂ ಮೃತರ ಹೆತ್ತವರು ಅರ್ಹರಾಗಿ ದ್ದಾರೆಂದು…
ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳಾಗಿದ್ದು ಈ ಘಟನೆಗೆ ಸಂಬಂಧಿಸಿ ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ…
ಮಂಗಳೂರು:ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ.ಅರ್ಜಿ ಸ್ವೀಕರಿಸಿದ ನಂತರ ಅರ್ಜಿದಾರರು ಅಗ್ನಿಶಾಮಕ ಇಲಾಖೆ, ಸ್ಥಳೀಯ ಸಂಸ್ಥೆ ಹಾಗೂ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ನೇರವಾಗಿ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಅರ್ಜಿ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.ಸಲ್ಲಿಸಿದ ಅರ್ಜಿಯನ್ನು ನಿಯಮಾನುಸಾರವಾಗಿ ಪರಿಶೀಲಿಸಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ನಿಗದಿತ ಶುಲ್ಕ (ರೂ.500/-) ಬ್ಯಾಂಕ್ ಗೆ ಪಾವತಿಸಿ ಪರವಾನಿಗೆಯನ್ನು ಪಡೆಯಬೇಕು. ತಾತ್ಕಾಲಿಕ ಮಳಿಗೆಗಳನ್ನು ತೆರೆಯುವ ಸಂದರ್ಭದಲ್ಲಿ ಮೂಲ ಪರವಾನಿಗೆಯನ್ನು ಕಡ್ಡಾಯವಾಗಿ ಮಳಿಗೆಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಿಗೆದಾರರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.ದೀಪಾವಳಿಯ…
ಬೆಂಗಳೂರು : ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್ಎಲ್ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು. ಕೆಎನ್ ಜಗದೀಶ್ ಕುಮಾರ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಾವು ಎಲ್ಲ ಕಡೆಗಳಲ್ಲಿ ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿರೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು, ಮೇ 7ರಂದು ಜಗದೀಶ್ ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಇದಕ್ಕೆ ಅವರು ಮಾಡಿದ ವಂಚನೆಯೇ ಕಾರಣ. ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್ಎಲ್ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ…
ಸುರತ್ಕಲ್: ಖಾಸಗಿ ಸೊಸೈಟಿಯೊಂದರ ಸುರತ್ಕಲ್ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್‌ಮಾಲ್ ನಡೆಸಿ ಅಂದಾಜು 3 ಕೋಟಿಯಷ್ಟು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸೊಸೈಟಿಯ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ನಕಲಿ ವ್ಯವಹಾರಗಳ ಕುರಿತು ಗಮನಕ್ಕೆ ಬಂದ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹಿತ ಸಿಬಂದಿಗಳನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು ಹಣವನ್ನು ಮರಳಿ ಸೊಸೈಟಿಗೆ ಹಸ್ತಾಂತರಿಸದ ಕಾರಣ ಇದೀಗ ಪೊಲೀಸ್ ದೂರು ನೀಡಲಾಗಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್, ಗುಮಾಸ್ತೆ ದೀಕ್ಷಾ ಶೆಟ್ಟಿ, ಶಾಖಾ ವ್ಯವಸ್ಥಾಪಕ ರಕ್ಷಿತ್ ಎಂ. ಶೆಟ್ಟಿ ಹಾಗೂ ಕೊಡಿಯಾಲಬೈಲ್ ಶಾಖಾ ಗುಮಾಸ್ತೆ ಪ್ರಿಯಾ ವಿರುದ್ಧ ದೂರು ದಾಖಲಾಗಿದೆ. ದೀಕ್ಷಾ ಶೆಟ್ಟಿ ಚಿನ್ನಾಭರಣ ಮೇಲಿನ ಸಾಲ ನೀಡುವಿಕೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸ್ವಂತಕ್ಕೆ ಬಳಸಿಕೊಂಡಿರುವುದು ಆಡಿಟ್ ವರದಿಯಲ್ಲಿ ಮೋಸವಾಗಿರುವುದರ ಬಗ್ಗೆ ಉಲ್ಲೇಖಿಸಲಾಗಿದೆ. 2019ರಿಂದ 2023ರ ಮದ್ಯೆ ಒಟ್ಟು 63 ಚಿನ್ನಾಭರಣಗಳ ಸಾಲವನ್ನು ತಾವೇ ಪಡೆದು…
ಮಡಿಕೇರಿ: ಕೊಡಗು ಜಿಲ್ಲೆಯ ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಕೊಡಗು ಪೊಲೀಸರು ಭೇದಿಸಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ 3 ಕೋ.ರೂ.ಬೆಲೆ ಬಾಳುವ 3.31 ಕೆ.ಜಿ ಹೈಡ್ರೋ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಹೈಡ್ರೋ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಅಂತಾರಾಷ್ಟ್ರೀಯ ವ್ಯವಸ್ಥಿತ ಜಾಲವೊಂದನ್ನು ಕೊಡಗು ಪೊಲೀಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿರುವ ಕೇರಳ ಮೂಲದ ಮುಹಮ್ಮದ್ ಅನೂಫ್ ಎಂಬಾತ ಕೇರಳದ ಕಾಸರಗೋಡಿನ ಮೆಹರೂಫ್, ರವೂಫ್ ಹಾಗೂ ಕೊಡಗಿನ ಬಂಧಿತ…
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುಣಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ ಹರಿಪ್ರಸಾದ್ ರೈ, ಬಿ.ಭುಜಂಗ ಶೆಟ್ಟಿ ಮತ್ತು ಬಂಟ್ವಾಳದ ಚಂದ್ರಪ್ರಕಾಶ ಶೆಟ್ಟಿ ತುಂಬೆ ಅವರು ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ರಾಜು ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬಲಗೊಳ್ಳುತ್ತಿದ್ದು ಬೇಡಿಕೆ ಮತ್ತೊಂದು ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಹೈಕೋಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆಯಾದರೆ ದ.ಕ. ಜಿಲ್ಲೆ ಮಾತ್ರವಲ್ಲದೆ ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರಕನ್ನಡ ದವರಿಗೂ ಅನುಕೂಲವಾಗಲಿದೆ. ಅಕ್ಕಪಕ್ಕದ ಜಿಲ್ಲೆಯವರು ಮಂಗಳೂರಿಗೆ ಬರುವುದಕ್ಕೆ ಪೂರಕವಾಗಿ ಎಲ್ಲ ಅಗತ್ಯ ಸೌಕರ್ಯಗಳು ಇಲ್ಲಿವೆ ಎನ್ನುತ್ತಾರೆ ಮಂಗಳೂರಿನ ನ್ಯಾಯವಾದಿಗಳು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆ ಬಹುಕಾಲದ್ದು. 2008ರಲ್ಲಿಯೂ ಹೋರಾಟ ನಡೆದಿತ್ತು. ಅನಂತರವೂ ಹಲವಾರು ಬಾರಿ ಪ್ರಯತ್ನಗಳನ್ನು ನಡೆಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳ ಒಟ್ಟು ಪ್ರಕರಣಗಳು ಹೈಕೋರ್ಟ್‌ನ ಒಟ್ಟು ಪ್ರಕರಣಗಳ ಶೇ. 30ರಷ್ಟಿವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಥಳಾವಕಾಶದ ಕೊರತೆಯೂ ಇಲ್ಲ. ಈಗ ಕೊಡಿಯಾಲಬೈಲ್ ನಲ್ಲಿರುವ ಜಿಲ್ಲಾ ಕಾರಾಗೃಹ ಮುಡಿಪುವಿಗೆ ಸ್ಥಳಾಂತರವಾಗಲಿದೆ. ಹಾಗಾಗಿ ಕೊಡಿಯಾಲಬೈಲಿನ 6 ಎಕರೆ ಸ್ಥಳದಲ್ಲಿ ಪೀಠ ಸ್ಥಾಪನೆ ಮಾಡಬಹುದು ಎನ್ನುತ್ತಾರೆ ಮಂಗಳೂರು ವಕೀಲರ ಸಂಘದ ಹಾಲಿ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಮತ್ತು ಮಾಜಿ ಅಧ್ಯಕ್ಷ ಪೃಥ್ವಿರಾಜ್ ರೈ ರವರು.










