Author: main-admin

ಮಂಗಳೂರು: ಉದ್ಯಮಿಯೊಬ್ಬರಿಗೆ ಭೂಗತ ಪಾತಕಿಯಿಂದ ಇಂಟರ್ ನೆಟ್ ಕರೆ ಮಾಡಿ ಹಣದ ಬೇಡಿಕೆಯನ್ನು ಮಾಡಲಾಗಿದ್ದು,ಈ ಬಗ್ಗೆ ಬಜಪೆ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ರೋನಾಲ್ಡ್ ಫೆರ್ನಾಂಡಿಸ್ ಅವರಿಗೆ ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಇಂಟರ್ ನೆಟ್ ಮೂಲಕ ಕರೆಮಾಡಿ 3 ಕೋಟಿಯ ಹಣದ ಬೇಡಿಕೆಯನ್ನು ನೀಡಿದ್ದು ಮಾತ್ರವಲ್ಲದೆ ಮನೆಯಲ್ಲಿರುವ ಎಲ್ಲರನ್ನು ಕೊಲೆ ಮಾಡುದಾಗಿ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ,ಶೈಕ್ಷಣಿಕ,ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅವರು ಕೆಂಪುಕಲ್ಲಿನ ಕೋರೆ ಸಹಿತ ಇನ್ನಿತರ ಉದ್ಯಮವನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ಕೂಡ ದಾಖಲಾಗಿದ್ದು,ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಹೈಕೋರ್ಟ್ ಗೆ ಇಂದು ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ. ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಇದುವರೆಗೆ ನಡೆಸಿದ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಲ್ಲಾ ತನಿಖೆ ಮುಗಿಸಿದ್ದು, ಇದೀಗ ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಿದ್ದಾರೆ.

Read More

ಉಡುಪಿ: ಮೂರು ದಿನಗಳ ಹಿಂದೆ ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಯು ಚಾಕೊಲೇಟ್ ಆಸೆ ತೋರಿಸಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಅಪರಿಚಿತನಾಗಿದ್ದರಿಂದ, ಆತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು. ಸಾರ್ವಜನಿಕರ ಸಹಾಯ ಮತ್ತು ಪೊಲೀಸ್‌ ಅಧಿಕಾರಿ ಸಿಬ್ಬಂದಿಗಳ ಸತತ ಪ್ರಯತ್ನದಿಂದ ಬಾಗಲಕೋಟೆ ಜಿಲ್ಲೆಯ ಆರೋಪಿ ಮುತ್ತು (35) ಎಂಬಾತನನ್ನು ಶ್ರೀಕೃಷ್ಣಮಠದ ಪರಿಸರದ ವಾದಿರಾಜ 3ನೇ ಕ್ರಾಸ್‌ ಬಳಿ ಪತ್ತೆ ಮಾಡಲಾಗಿದೆ. ಆರೋಪಿಯು ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಸರ್ಕಾರಿ ಕೆಲಸದಲ್ಲಿದ್ದ ವ್ಯಕ್ತಿ ಕೆಲಸಕ್ಕೆ ಹೋಗದೇ ವಿದೇಶದಿಂದ ಯುವತಿಯರನ್ನು ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ನೌಕರ ರತನ್ ಬಂಧಿತ ಆರೋಪಿ. ಈತ ಕೆ.ಎಸ್.ಆರ್.ಟಿ.ಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದ. ಆದರೆ ಕೆಲಸಕ್ಕೆ ಹೋಗದೇ ವೇಶ್ಯಾವಾಟಿಕೆ ದಂಧೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ. ಥೈಲ್ಯಾಂಡ್ ನಿಂದ ಯುವತಿಯರನ್ನು ಕರೆಸಿ ಮೈಸೂರಿನ ಬೊಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್ ನಲ್ಲಿ ಈ ದಂಧೆ ನಡೆಸುತ್ತಿದ್ದ. ವಿಷಯ ತಿಳಿದ ಮೈಸೂರಿನ ಸರಸ್ವತಿ ಪುರಂ ಠಾಣೆ ಪೊಲೀಸರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಆರೋಪಿ ರತನ್ ಸೇರಿ ಒಟ್ಟು 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಥೈಲ್ಯಾಂಡ್ ಮೂಲದ ಯುವತಿ ವಿಚಾರಣೆ ವೇಳೆ ತಾನು ಒಂದು ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ. ಬಿಸಿನೆಸ್ ಗಾಗಿ ಥೈಲ್ಯಾಂಡ್ ನಿಂದ ಬಂದಿದ್ದಾಗಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಉಡುಪಿ: ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿಯ 80 ಬಡಗಬೆಟ್ಟು ನಿವಾಸಿ ಮುತ್ತಯ್ಯ ಎಂಬವರ ಪುತ್ರ ಬಾಲಾಜಿ ಎಂ.ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಪೊಲೀಸರಿಗೆ ಬೇಕಾಗಿದ್ದು, ಆತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಜನವರಿ 24 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರಿನ ಹರಳೂರು ಬಸ್ ನಿಲ್ದಾಣದ ಬಳಿ ಆರೋಪಿ ಪತ್ತೆಯಾಗಿದ್ದರು. ಈ ಮಹತ್ವದ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ದೇವರಾಜ್ ಟಿ ವಿ ನೇತೃತ್ವದ ಪಿಎಸ್‌ಐಗಳಾದ ಅನಿಲ್ ಕುಮಾರ್, ಅಕ್ಷಯ ಕುಮಾರಿ, ಹೆಡ್ ಕಾನ್‌ಸ್ಟೆಬಲ್ ಥಾಮ್ಸನ್ ಮತ್ತು ಪೊಲೀಸ್ ಪೇದೆ ರವಿರಾಜ್ ಅವರ ನೇತೃತ್ವದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More

ಮಂಗಳೂರು: ಮೂಗನಂತೆ ನಟಿಸಿ ನೀರು ಕೊಟ್ಟ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ವರ್ಷಗಳ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2016ರ ನವೆಂಬರ್ 10-11ರ ರಾತ್ರಿ ವೃದ್ಧ ದಂಪತಿ ವರ್ಕಿ ಕೆ.ವಿ (85) ಮತ್ತು ಎಲಿಕುಟ್ಟಿ(80) ಎಂಬವರನ್ನು ರಾಜು ಕಲ್ಲವಡ್ಡರ್ ಕೊಲೆಗೈದು ಅವರ ಮನೆಯಲ್ಲಿದ್ದ ನಗ ನಗದು ಸೇರಿದಂತೆ 4.50 ಲಕ್ಷ ಮೌಲ್ಯದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ದರ್ ಶಿಕ್ಷೆಗೊಳಗಾದ ಅಪರಾಧಿ. ಈತ ಬೆಳ್ತಂಗಡಿಯ ನೆರಿಯಾ ಗ್ರಾಮದ ಬಾಂಜಾರು ಮಲೆ ಎಂಬಲ್ಲಿ ಡ್ಯಾಂ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡುತ್ತಿದ್ದ. 2016ರ ನವೆಂಬರ್ 10ರಂದು ರಾತ್ರಿ 11ರಿಂದ ಬೆಳಗಿನ ಜಾವ 3ರ ಮಧ್ಯೆ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್ ಎಂಬಲ್ಲಿ ವಾಸವಿದ್ದ ವೃದ್ಧ ದಂಪತಿ ವರ್ಕಿ ಕೆ.ವಿ.(85) ಮತ್ತು ಎಲಿಕುಟ್ಟಿ (80) ಎಂಬವರ ಮನೆಗೆ ಬಂದಿದ್ದ. ಬಳಿಕ…

Read More

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. 2005ರಲ್ಲಿ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಇವರು, 2009ರಿಂದ ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ಶಾಖೆ, ಚುನಾವಣೆ ಕೋಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು 2019ರಲ್ಲಿ ಮುಖ್ಯಮಂತ್ರಿ ಪದಕವನ್ನು ಪಡೆದಿದ್ದರು. ಏಳು ವರ್ಷಗಳ ಹಿಂದೆ ಇವರು ಹೆಡ್‌ಕಾನ್ಸ್‌ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಪೊಲೀಸ್ ಕರ್ತವ್ಯ ಕೂಟದಲ್ಲಿ ಎರಡು ಬಾರಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ಪ್ರತಿನಿಧಿಸಿದ್ದರು.

Read More

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್‌ನಲ್ಲಿ 2016ರ ಜನವರಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ಕೊಲೆ ಮತ್ತು ಸುಲಿಗೆ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ.ಅವರು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ದಕ್ಷಿಣಕನ್ನಡ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಈ ಒಂದು ಆದೇಶ ನೀಡಿದೆ. 2016ರ ನವೆಂಬರ್ 10ರಂದು ವೃದ್ಧ ದಂಪತಿಯ ಹತ್ಯೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕುಂಜೆ ಗ್ರಾಮದಲ್ಲಿ ಭೀಕರ ಕೊಲೆ ನಡೆದಿತ್ತು. ಇದೀಗ ಕೊಲೆ ಆರೋಪಿ ಗದಗ ಜಿಲ್ಲೆಯ ಬಿ.ಸಿ ಕೇರಿ ಓಣಿಯ ನಿವಾಸಿ ರಾಜು ಕಲ್ಲವಡ್ಡರ್‌ ಯಾನೆ ರಾಜೇಶ್‌ (37) ಶಿಕ್ಷೆಗೊಳಗಾದವನು. ವರ್ಕಿ ಕೆ ಎಂ (85) ಎಲಿಕುಟ್ಟಿ (80) ಎಂಬ ದಂಪತಿಗಳನ್ನು ಹತ್ಯೆಗೆದ್ದಿದ್ದ ರಾಜು. ದಂಪತಿಯ ಕೊಲೆಮಾಡಿ 200 ನೂರು ಗ್ರಾಮ ಚಿನ್ನ 4.5 ಲಕ್ಷ ನಗದು ಹಣ ದರೋಡೆ ಮಾಡಲಾಗಿತ್ತು.

Read More

ಮಂಗಳೂರು : ಪೊಕ್ಸೊ , ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ಮೇಲೆ ನೀಡಿರುವ ಸುಳ್ಳು ಕೇಸ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬಕ್ಕೆ ನೀಡಿರುವ 2.50ಲಕ್ಷ ಪರಿಹಾರದ ಹಣವನ್ನು ವಾಪಸ್ ಪಡೆದುಕೊಳ್ಳುವಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ ಪೊಕ್ಸೊ ವಿಶೇಷ ನ್ಯಾಯಾಲಯ ದ.ಕ.ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದೆ. ಬಂಟ್ವಾಳ ತಾಲೂಕಿನ ಕಾವಳಪಡವಲೂರು ನಿವಾಸಿ ತೇಜಸ್ ಎಂಬ ಯುವಕ 2024 ಮಾರ್ಚ್ 21ರಂದು ಸಂಜೆ 6.45ಕ್ಕೆ ಸಂತ್ರಸ್ತೆಯ ಮನೆಗೆ ಬಂದು ಲೈಂಗಿಕ ದೌರ್ಜನ್ಯ ನೀಡಿದ್ದಾನೆ.‌ ಈ ವೇಳೆ ಆಕೆ ತನ್ನ ಮಾವನನನ್ನು ಕರೆದಿದ್ದಾಳೆ. ಅಲ್ಲಿಗೆ ಬಂದ ಮಾವನಿಗೂ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದನು. ಈ ವೇಳೆ ಅಲ್ಲಿಗೆ ಬಂದ ಸಂತ್ರಸ್ತೆಯ ಅಜ್ಜಿಗೂ ಜಾತಿನಿಂದನೆ ಮಾಡಿದ್ದಲ್ಲದೆ ತಳ್ಳಿ ಕೊಲೆಬೆದರಿಕೆಯೊಡ್ಡಿದ್ದ ಎಂದು ದೂರು ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಸಮಗ್ರ…

Read More

ಮಂಗಳೂರು: ಮದುವೆ ನಿಶ್ಚಿಯವಾಗಿ ಇನ್ನೇನು ಮದುವೆಗೆ ಕೆಲ ದಿನ ಇರುವಾಗಲೇ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ಮೀಂಜ ಸಮೀಪದ ಬೆಜ್ಜದಲ್ಲಿ ನಡೆದಿದೆ. ಅಜಿತ್ ಕುಮಾರ್ (28) ಆತ್ಮಹತ್ಯೆಗೆ ಶರಣಾದ ಯುವಕ.ಅಜಿತ್ ಕುಮಾರ್ ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ನ ಉಪ್ಪಳ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಇವರಿಗೆ ಹೊಸಂಗಡಿ ಸಮೀಪದ ಯುವತಿ ಜೊತೆ ಫೆಬ್ರವರಿ ಎರಡರಂದು ವಿವಾಹ ನಿಗದಿಯಾಗಿತ್ತು. ಅದಕ್ಕಾಗಿ ಮನೆಯವರು ವಿವಾಹಕ್ಕೆ ತಯಾರಿಗಾಗಿ ಸಾಮಾಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದರು. ಮನೆಯಲ್ಲಿ ಚಿಕ್ಕಪ್ಪ ಮಾತ್ರ ಇದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೃತ್ಯ ಎಸಗಲಾಗಿದೆ. ಸಂಜೆ ಅಜಿತ್ ಮನೆ ಮುಂಭಾಗದ ಮಾವಿನ ಮರದಲ್ಲಿ ಕೇಬಲ್ ವಯರ್ ನಲ್ಲಿ ನೇಣು ಬಿಗಿದಿರುವುದನ್ನು ಮನೆಯವರು ಗಮನಿಸಿದ್ದು, ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದರು. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More