Author: main-admin

ಬೆಂಗಳೂರು : ರಾಜ್ಯ ಸರ್ಕಾರ ಹಲವು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದ್ದು ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್ ಕೆ ಆರ್ ಅವರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ಉಪ ವಿಭಾಗದ ಉಪ…

Read More

ಉಪ್ಪಿನಂಗಡಿ: ಕೆಎಸ್ಆರ್‌ಟಿಸಿ ಬಸ್ಸೊಂದು ಓವರ್‍ ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸವಾರನ ಮೇಲೆ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೆಕ್ಕಿಲಾಡಿಯ ಅಂಬೆಲದ ಬಳಿ ಇಂದು ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ವಿನೋದರ (57) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಓವರ್‍ ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ತಾಗಿದ್ದು, ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಹಿನ್ನಲೆಯಲ್ಲಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ನಿಂದ ಮುಕ್ತಿ ಸಿಕ್ಕಂತೆ ಆಗಿದೆ. ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ? . ಎಚ್‌ಎಸ್‌ಆರ್‌ಪಿ ಮೇಲೆ…

Read More

ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನವಾಫ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ನವಾಫ್ ಇಸ್ಮಾಯಿಲ್ ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಕಾರಿನ ಹಿಂಬದಿ ನಿಂತಿದ್ದ ನವಾಫ್ ಮೇಲೆ ಕಾರು ಹರಿದಿದೆ. ಈ ವೇಳೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ ಬಾಲಕ ಕಾರಿನ ಹಿಂಬದಿ ನಿಂತ ಕಾರಣ ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು: ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು ಮಂಜೇಶ್ವರ, ಕುಂಜತ್ತೂರು, ಉದ್ಯಾವರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆಯ ಕೊರಂಗಾಡ್, ಪಯ್ಯನೂರು, ಪೆರಿಂಗಾಂವ್‌ ನಿವಾಸಿ ರಿಯಾಜ್ ಎ.ಕೆ(31), ಕಾಸರಗೋಡು ವರ್ಕಾಡಿಯ ಪಾವೂರು ನಿವಾಸಿ ಮೊಹಮ್ಮದ್ ನೌಷಾದ್(22), ಕಾಸರಗೋಡು ಮಂಜೇಶ್ವರ, ಕುಂಜತ್ತೂರು ನಿವಾಸಿ ಯಾಸೀನ್ ಇಮ್ರಾಜ್(35) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಮಂಗಳೂರಿನಲ್ಲಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 3,50,000 ರೂ. ಮೌಲ್ಯದ 70 ಗ್ರಾಂ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, 5 ಮೊಬೈಲ್ ಫೋನ್‌ಗಳು, 1,460 ರೂ. ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಈ…

Read More

ಮಂಗಳೂರು: ಕೊರಿಯರ್ ಮಾಡಿದ ಪಾರ್ಸೆಲ್ ನಲ್ಲಿ ಡ್ರಗ್ಸ್ ಇತ್ತೆಂದು ಆರೋಪಿಸಿ ವ್ಯಕ್ತಿಯನ್ನು ಬೆದರಿಸಿ 39.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.23ರಂದು ತನಗೆ ಫೋನ್ ಕರೆ ಮಾಡಿದ ಮಹಿಳೆ ತನ್ನನ್ನು ಮುಂಬೈನ ಡಿಎಚ್‌ಎಲ್ ಕೊರಿಯರ್ ಕಚೇರಿಯ ಶ್ರೇಯಾ ಶರ್ಮಾ ಎಂಬುದಾಗಿ ಪರಿಚಯಿಸಿಕೊಂಡು “ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ ಪಾರ್ಸೆಲ್ ಬಂದಿದೆ ಅದು ಚೀನಾಕ್ಕೆ ರವಾನೆಯಾಗದೆ ನಮ್ಮ ಕಚೇರಿಯಲ್ಲಿಯೇ ಉಳಿದಿದೆ. ಅದರಲ್ಲಿ 5 ಪಾಸ್‌ಪೋರ್ಟ್, 1 ಲ್ಯಾಪ್ / ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ಸ್ ಬ್ಯಾಂಕ್ ದಾಖಲೆಗಳು, ಮೂರೂವರೆ ಕೆಜಿ ಬಟ್ಟೆ ಇದೆ’ ಎಂದಿದ್ದಳು. ತಾನು ಯಾವ ಪಾರ್ಸೆಲ್ ಕೂಡಾ ಕಳುಹಿಸಿಲ್ಲ ಎಂದಿದ್ದರೂ ಆಕೆ ‘ನಿಷೇಧಿತ ಡ್ರಗ್ಸ್ ಇರುವುದರಿಂದ ನಿಮ್ಮನ್ನು ಸಂಜೆ 6 ಗಂಟೆಯ ಒಳಗೆ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡುತ್ತಾರೆ. ಸೆ.24ರ ಬೆಳಗ್ಗೆ 9ಕ್ಕೆ ವಿಚಾರಣೆಗೆ ಒಳಪಡಿಸಲಾಗುವುದು’ ಎಂದಳು. ಸೆ.24ರಂದು ಬೆಳಗ್ಗೆ 9 ಗಂಟೆಗೆ ಕರೆ ಮಾಡಿದ ಆಕೆ ವೀಡಿಯೋ ಕಾಲ್‌ನಲ್ಲಿ ವಿಚಾರಣೆಗೆ…

Read More

ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ನಮ್ಮದು ಜಾತ್ಯತೀತ ರಾಷ್ಟ್ರ. ಇಲ್ಲಿ ನ್ಯಾಯಾಲಯ ಹೊರಡಿಸುವ ಆದೇಶ ಎಲ್ಲಾ ನಾಗರಿಕರಿಗೂ, ಸಂಸ್ಥೆಗಳಿಗೂ ಅನ್ವಯವಾಗುತ್ತವೆ ಹೊರತು ನಿರ್ದಿಷ್ಟ ಸಮುದಾಯಕ್ಕೆ ಅಲ್ಲ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಗಮನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆಯೆತ್ತುವಂತಿಲ್ಲ ಮತ್ತು ಅವುಗಳನ್ನು ರಕ್ಷಿಸಲೂಬಾರದು ಎಂದು ಹೇಳಿದೆ. ಸಾರ್ವಜನಿಕ ಸುರಕ್ಷತೆಯು ಅತ್ಯುನ್ನತವಾಗಿದೆ. ರಸ್ತೆ, ಜಲಮೂಲಗಳು ಅಥವಾ ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ರಚನೆಯನ್ನು…

Read More

ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ವಾನ ತಂಡದದಲ್ಲಿದ್ದ ಜೂಲಿ ನಿವೃತ್ತಿ ಹೊಂದಿದೆ. ಸಿಐಎಸ್ಎಫ್‌ನ ಏರ್ಪೋರ್ಟ್ ಸೆಕ್ಯುರಿಟಿ ಗ್ರೂಪ್‌ನ ಕೆ9 ಸ್ಕ್ವಾಡ್‌ನ ಸದಸ್ಯೆ ಲ್ಯಾಬ್ರಡಾರ್ ಶ್ವಾನ ಜೂಲಿಗೆ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಜೂಲಿ ಬದಲಿಗೆ 11ತಿಂಗಳ ಲ್ಯಾಬ್ರಡಾರ್ ತಳಿಯ ಶ್ವಾನ ರಿಯೊವನ್ನು ಕೆ9ತಂಡಕ್ಕೆ ಸ್ವಾಗತಿಸಲಾಯಿತು. ಹಿರಿಯ ಕಮಾಂಡೆಂಟ್ ಮತ್ತು ಮುಖ್ಯ ಏರೋಡ್ರೋಮ್ ಭದ್ರತಾ ಅಧಿಕಾರಿ ವೀರೇಂದ್ರ ಮೋಹನ್ ಜೋಶಿ ಮತ್ತು ಸಿಐಎಸ್ಎಫ್‌ನ ಅಧಿಕಾರಿಗಳು ಜೂಲಿಯ ಅಚಲ ಸಮರ್ಪಣೆ ಮತ್ತು ನಿಷ್ಠೆಯನ್ನು ಕೊಂಡಾಡಿದರು. 8 ವರ್ಷಗಳ ಹಿಂದೆ ಕೆ9 ಸ್ಕ್ವಾಡ್‌ಗೆ ಸೇರ್ಪಡೆಗೊಂಡ ದಿನದಿಂದ, ಜೂಲಿ ವಿಮಾನ ನಿಲ್ದಾಣದಲ್ಲಿ ಹಲವಾರು ಭದ್ರತಾ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪತ್ತೆ ಮತ್ತು ಗಸ್ತು ಕರ್ತವ್ಯಗಳಲ್ಲಿ ಅಸಾಧಾರಣ ಕೌಶಲ್ಯ ಪ್ರದರ್ಶಿಸಿದೆ. ಬೀಳ್ಕೊಡುಗೆ ಸಂದರ್ಭ ವಿಶೇಷ ಹೂವಿನಿಂದ ಅಲಂಕೃತಗೊಂಡ ಟ್ರಾಲಿಯಲ್ಲಿ ಜೂಲಿಯನ್ನು ಕರೆದೊಯ್ಯಲಾಯಿತು. ಈ ಶ್ವಾನವನ್ನು ದತ್ತು ಪಡೆದ ಹ್ಯಾಂಡ್ಲರ್ ಕುಮಾರ ಅವರ…

Read More

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Karnataka Chief Minister Siddaramaiah ) ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲು ಫೆಡರಲ್ ಏಜೆನ್ಸಿ ಜಾರಿ ಪ್ರಕರಣ ಮಾಹಿತಿ ವರದಿ (Enforcement Case Information Report- ECIR) ಸಲ್ಲಿಸಿದೆ ಎಂದು ವರದಿ ತಿಳಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysuru Urban Development Authority- MUDA ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್.27ರಂದು ಎಫ್ ಐಆರ್ ದಾಖಲಿಸಿದ್ದರು. ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ಎ2, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಎ3 ಮತ್ತು ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮುಡಾ ಭೂ ಹಗರಣಕ್ಕೆ…

Read More

ಮಂಗಳೂರು: ಸೈಬರ್ ವಂಚನೆಗಳಿಗೆ ಕಡಿವಾಣ ಹಾಕುವ ಸಲುವಾಗಿ ಸ್ಥಾಪಿಸಲಾಗಿರುವ ದ.ಕ.ಜಿಲ್ಲೆಯ ಎಲ್ಲಾ ಸೆನ್ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲು ಸರಕಾರ ಮುಂದಾಗಿವೆ. ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ಮತ್ತು ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯ ಸೆನ್ ಪೊಲೀಸ್ ಠಾಣೆಗಳನ್ನು ಬಲಪಡಿಸುವ ಸಲುವಾಗಿ ಮೇಲ್ದರ್ಜೆಗೇರಿಸಲಾಗಿದೆ. ಅದರಂತೆ ಪ್ರತಿಯೊಂದು ಸೆನ್ ಪೊಲೀಸ್ ಠಾಣೆಗಳಿಗೂ ಡಿವೈಎಸ್ಪಿ/ಎಸಿಪಿ ದರ್ಜೆಯ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೈಬರ್ ಪ್ರಕರಣಗಳು ಹೆಚ್ಚುತ್ತಿವೆ. ಒಂದಲ್ಲೊಂದು ಕಾರಣಕ್ಕೆ ಜನರು ಸೈಬರ್ ವಂಚಕರಿಂದ ಮೋಸ ಹೋಗುತ್ತಿದ್ದಾರೆ. ಹಾಗಾಗಿ ಸೆನ್ ಠಾಣೆಗಳ ಮೇಲಿನ ಒತ್ತಡವೂ ಅಧಿಕವಾಗಿವೆ ಎನ್ನಲಾಗಿವೆ. ಈ ಹಿಂದೆ ಇದ್ದ ಸೈಬ‌ರ್ ಠಾಣೆಗಳನ್ನು ಸೆನ್ ಠಾಣೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಈ ಸೆನ್ (ಸೈಬರ್, ಎಕನಾಮಿಕ್, ನಾರ್ಕೊಟಿಕ್) ಠಾಣೆಗಳು ಸೈಬ‌ರ್ ಪ್ರಕರಣಗಳ ಜೊತೆಗೆ ಇತರ ಆರ್ಥಿಕ ವಂಚನೆ, ಮಾದಕ ದ್ರವ್ಯಕ್ಕೆ ಸಂಬಂಧಿಸಿದಂತೆ ಪ್ರಕರಣಗಳನ್ನು ಕೂಡಾ ನಿಭಾಯಿಸುತ್ತವೆ. ಆದರೆ ಸೈಬರ್ ಪ್ರಕರಣಗಳ ಸಂಖ್ಯೆ ಅಧಿಕಗೊಳ್ಳುತ್ತಲೇ ಅದನ್ನು ಭೇದಿಸುವುದು ಕೂಡಾ ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಹಾಗಾಗಿ ಸೈಬ‌ರ್ ಠಾಣೆಗಳನ್ನು…

Read More