ಮಂಗಳೂರು: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ…
Author: main-admin
ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿ ಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.ಅಂಬ್ಯುಲೆನ್ಸ್ ನಲ್ಲಿದ್ದ ಅರ್ಜುನ್ ರ ಸಹೋದರಿ ಪತಿ ಜಿತಿನ್, ಸಹೋದರ ಅಭಿಜಿತ್ ರವರನ್ನು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಾಂತ್ವನ ಪಡಿಸಿದರು. ಮಂಜೇಶ್ವರ ಶಾಸಕ ಎ . ಕೆ . ಎಂ ಅಶ್ರಫ್ , ಕಾರವಾರ ಶಾಸಕ ಸತೀಶ್ ಸೈಲ್ ರವರು ಜೊತೆಗಿದ್ದರು.ಅರ್ಜುನ್ ಪ್ರತಿಬಾರಿ ಲಾರಿಕೊಂಡೊಯ್ಯುವ ದಾರಿಯಾಗಿಯೇ ಅಂಬ್ಯುಲೆನ್ಸ್ ತೆರಳುತ್ತಿದೆ. ಬಳಿಕ ಅಂಬ್ಯುಲೆನ್ಸ್ ಕೋಝಿಕ್ಕೋಡ್ ಗೆ ಪ್ರಯಾಣ ಬೆಳೆಸಿತು. ಇಂದು ಬೆಳಿಗ್ಗೆ ೮. ೩೦ ರ ಸುಮಾರಿಗೆ ಅರ್ಜುನ್ ರ ಮೃತದೇಹ ಮನೆಗೆ…
ಕಾಸರಗೋಡು :ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವನ್ನು ವಶಪಡಿಸಿ ಕೊಳ್ಳಲಾಗಿದೆ. ಪೈವಳಿಕೆ ಬಾಯಿ ಕಟ್ಟೆ ಯಿಂದ ನಾಲ್ವರನ್ನು ಬಂಧಿಸಿದ್ದು, ಕಾರನ್ನು ವಶಪಡಿಸಿ ಕೊಳ್ಳಲಾಗಿದೆ. ಬಂಧಿತರನ್ನು ಬಳ್ಳೂರಿನ ಮುಹಮ್ಮದ್ ಅಶ್ರಫ್ (21), ಕೊಡಿಬೈಲ್‌ನ ಸಯ್ಯದ್ ನವಾಝ್ ( 30), ಬೆಳ್ಳೂರಿನ ಅಹಮ್ಮದ್ ಶಮ್ಮಾಸ್ (20) ಮತ್ತು ಬಂಟ್ವಾಳದ ಮುಹಮ್ಮದ್ ಇಸಾಕ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ ಮೇಲ್ನೋಟದಲ್ಲಿ ಡಿವೈಎಸ್ಪಿಪಿ. ಸುನಿಲ್ ಕುಮಾರ್ ಹಾಗೂ ಮಂಜೇಶ್ವರ ಠಾಣಾ ಸಬ್ ಇನ್ಸ್ ಪೆಕ್ಟರ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಉಪ್ಪಳದಲ್ಲಿ ಮನೆಯೊಂದು ಕೇಂದ್ರೀಕರಿಸಿ ನಡೆಯುತ್ತಿದ್ದ ಬ್ರಹತ್ ಡ್ರಗ್ಸ್ ಜಾಲವನ್ನು ಪೊಲೀಸರು ಭೇಧಿಸಿದ್ದರು
ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಬೈಕ್ ಸವಾರ ಚಂದನ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಆತನ ಮೇಲೆ ಸಂಚರಿಸುತ್ತಿದ್ದ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಚೇತನ್ ಕುಮಾರು ರವರು ಬೆಳಿಗ್ಗೆ ಬೈಕು ನೊಂದಣಿ ಸಂಖ್ಯೆ: KA-19-EJ-4072 ನೇಯದರಲ್ಲಿ ಲತೀಶ್ ಎಂಬುವರನ್ನು ಹಿಂಬದಿ ಸವಾರರನ್ನಾಗಿ ಕರೆದುಕೊಂಡು ಕುಲಶೇಖರ ಕಡೆಯಿಂದ ವಾಮಂಜೂರು ಕಡೆಗೆ ಹೋಗುತ್ತಿರುವಾಗ ಸಮಯ 9-43 ಗಂಟೆಗೆ ಸ್ರಾಕೇಡ್ ಹಾರ್ಟ್ ಶಾಲೆಯ ಎದುರು ತಲುಪುತ್ತಿದ್ದಂತೆ ವಾಮಂಜೂರು ಕಡೆಯಿಂದ ಕುಲಶೇಖರ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ನೊಂದಣಿ ಸಂಖ್ಯೆ: KA-20-AA-8844 ನೇಯದನ್ನು ಅದರ…
ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಬೇಡಡ್ಕದ ಅಶ್ವತಿ (17) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಬಾವಿಯಲ್ಲಿ ಗುರುವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈಕೆ ಕುಂಡಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಗುರುವಾರ ಬೆಳಿಗ್ಗೆ ಶಾಲೆಗೆ ತೆರಳಿದ್ದ ಈಕೆ ನಾಪತ್ತೆಯಾಗಿದ್ದಳು . ಸಂಜೆಯಾದರೂ ಮನೆಗೆ ಬಾರದೆ ಇದ್ದುದರಿಂದ ಮನೆಯವರು ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಮನೆಯವರು ಶೋಧ ನಡೆಸಿದಾಗ ಮನೆ ಸಮೀಪದ ಜನವಾಸ ಇಲ್ಲದ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತದೇಹ ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ.
ಸುರತ್ಕಲ್: ಸುರತ್ಕಲ್ ಸಮೀಪದ ಮಧ್ಯಾಹ್ನದ ಗಣೇಶಪುರದಲ್ಲಿ ವೇಳೆ ಕೈಕಂಬ ಮಂಗಳಪೇಟೆ ರಸ್ತೆ ಬದಿ ನಿಗೂಢ ಸ್ಪೋಟದ ಶಬ್ದ ಕೇಳಿ ಬಂದು ಜನತೆ ಬೆಚ್ಚಿಬಿದ್ದ ಘಟನೆ ನಡೆದಿದೆ. ಸಮೀಪದ ರಿಕ್ಷಾ ಚಾಲಕರು, ಜನರು ಏನಾಯಿತು ಎಂದು ಸುತ್ತಮುತ್ತ ಹುಡುಕಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಗೂ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ಸಿಲಿಂಡರ್ ಮಾರಾಟ ಮಳಿಗೆಯಲ್ಲಿ ನಾಬ್ ಸಿಕ್ಕಿಸುವ ವೇಳೆ ಅದು ಆಕಸ್ಮಿಕವಾಗಿ ಹಾರಿದ ಕಾರಣ ಶಬ್ದ ಉಂಟಾಗಿದೆ ಎಂದು ತಿಳಿದುಬಂದಿದೆ. ಅನಂತರ ಅಲ್ಲಿನ ಜನ ನಿಟ್ಟುಸಿರು ಬಿಟ್ಟರು.
ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು. ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ. ಈ ಬಗ್ಗೆಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವದ್ಧರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟ ಬೆಂಗ್ರೆಯ ಧರ್ಮರಾಜ್ ಸುವರ್ಣ(50) ಬಂಧಿತ ಆರೋಪಿಯಾಗಿದ್ದಾನೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಚೂಂಪಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿ ಪಣಂಬೂರು ಪೊಲೀಸರು ಆರೋಪಿಯನ್ರಿನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿಸಿದ್ದಾರೆ. ಸೆಪ್ಟೆಂಬರ್ 21 ರಂದು ಈ ಕೊಲೆ ನಡೆದಿತ್ತು. ಬಂಧಿತ ಆರೋಪಿ ಧರ್ಮರಾಜ್ ಮೀನುಗಾರಿಕಾ ಕೆಲಸ ಮಾಡಿಕೊಂಡಿದ್ದು, ತೋಟಾ ಬೆಂಗ್ರೆಯಲ್ಲಿ ವಾಸಮಾಡಿಕೊಂಡಿದ್ದ. ಆರೋಪಿ ಧರ್ಮರಾಜ್ ಸುವರ್ಣ ಮತ್ತು ಮೃತ ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪ ಕಳೆದ ಕೆಲವು ಸಮಯದಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲ್ ನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಈ ಸಂದರ್ಭ ಆರೋಪಿ ಧರ್ಮರಾಜ್ …
ಮಂಗಳೂರು: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ. ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದ್ದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಫ್ಲೋಂಟ್ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆಯು ತಾತ್ಕಾಲಿಕವಾಗಿ ಮುಚ್ಚುಗಡೆ ಮಾಡಿದೆ. ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ರ ನಿರ್ದೇಶನದಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅವರು ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಫ್ಲೋಂಟ್ ಕ್ಲಿನಿಕ್ ನ್ನು ಮುಚ್ಚಿಸಿದ್ದಾರೆ. ಕಾಸ್ಮೆಟಿಕ್ ಸರ್ಜರಿಗೆ ಮುನ್ನ ಅರಿವಳಿಕೆ ನೀಡುವಾಗ ಎಸಗಿರುವ ನಿರ್ಲಕ್ಷ್ಯವೇ ಮಾಝಿನ್‌ರ ಸಾವಿಗೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿರುವ ವರದಿ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಮಾಝಿನ್ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯ ನಿವಾರಣೆಗಾಗಿ ಶನಿವಾರ ಫ್ಲೋಂಟ್ ಕ್ಲಿನಿಕ್ ಗೆ…










