ಕಾರ್ಕಳ: ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ಕಾರ್ಕಳದ ಕಸಬಾ ಗ್ರಾಮದಲ್ಲಿ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತನು ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಮನನೊಂದು ನಿನ್ನೆ ತಡರಾತ್ರಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Author: main-admin
ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ. ಇನ್ನು 24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಗೊಳಿಸುವಂತೆ ಕೋರ್ಟ್ ಮೊರೆ ಹೋಗಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ…
ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗಂಡಿ ದೇವರ್, ಯೋಶುವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ(36) ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಸಹಕಾರಿ ಸಂಘದಿಂದ ಸುಮಾರು 4 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಕೇರಳ ಮೂಲಕ ತಮಿಳುನಾಡಿಗೆ ಆರೋಪಿಗಳು ಪರಾರಿಯಾಗಿದ್ದರು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ದರೋಡೆಗೆ ಬಳಸಿದ ಕಾರು, ಮಾರಕಾಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ. ದರೋಡೆ ಪ್ರಕರಣ ಸಂಬಂಧಿಸಿ ಒಟ್ಟು ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮುಂಬೈ, ಕೇರಳ, ತಮಿಳುನಾಡಿಗೆ ಪೊಲೀಸರು ತೆರಳಿದ್ದು, ಮಾಹಿತಿ ಆಧರಿಸಿ ಕಾರನ್ನು ಬೆನ್ನಟ್ಟಿ ಹೋಗಿದ್ದರು. ಈ ವೇಳೆ, ತಿರುನಲ್ವೇಲಿಯನಲ್ಲಿ ಮೂವರು ಸಿಕ್ಕಿಬಿದ್ದಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ ಸ್ಥಳೀಯರು ಸಹಕಾರ ನೀಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಮುಂಬೈಯಿಂದ ಮಾಹಿತಿ ಕಲೆ…
ಮಣಿಪಾಲ: ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್’ಗೆ ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ ಒರ್ವನನ್ನು ವಶಕ್ಕೆ ಪಡೆಯಲಾಗಿದೆ. ಜನವರಿ 19 ರಂದು ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಪರ್ಕಳ ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀ ಸಾಯಿ ಲಾಡ್ಜ್ ನ ರಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಬಾತ್ಮೀದಾರರಿಂದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧೀಕ್ಷಕರಿಗೆ ತಿಳಿಸಿ ಅನುಮತಿ ಪಡೆದು 15:15 ಗಂಟೆಗೆ ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿತ ಶರಣಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರು: “ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್ ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ ಅದನ್ನು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿಯ ಸಂದರ್ಭದಲ್ಲಿ ನೀಡಿದ್ದೇವೆ“ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಈ ಬಗ್ಗೆ ತನಿಖೆ ಮಾಡುವಂತೆ ಪಾಲಿಕೆಯ ನೂತನ ಕಮಿಷನರ್ ಅವರಿಗೆ ಸತ್ಯಶೋಧನಾ ವರದಿ ನೀಡಿದ್ದೇವೆ. ನಾವು ದೂರು ಕೊಟ್ಟು ಸುಮ್ಮನೆ ಇರುವುದಿಲ್ಲ. ಅದು ನಿಜವೇ ಸುಳ್ಳೇ ಎಂಬ ಬಗ್ಗೆ ತನಿಖೆ ಮಾಡುತ್ತೇವೆ. ಪಚ್ಚನಾಡಿ, ಬಜಾಲ್, ಮಧ್ಯದಲ್ಲಿರುವ ಎಸ್ ಟಿಪಿಯನ್ನು ನಿರ್ವಹಣೆ ಮಾಡಲು ಎಂಆರ್ ಪಿಎಲ್…
ಶಬರಿಮಲೆ : ಶಬರಿಮಲೆಯಲ್ಲಿ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರ ಮುಕ್ತಾಯಗೊಂಡಿದೆ. ಇದರೊಂದಿಗೆ ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ಸೋಮವಾರ ಬೆಳಿಗ್ಗೆ ವಿಧ್ಯುಕ್ತವಾಗಿ ಮುಚ್ಚಲಾಯಿತು. ನವೆಂಬರ್ 15 ರಂದು ಮಂಡಲ-ಮಕರವಿಳಕ್ಕು ಉತ್ಸವದ ಪ್ರಾರಂಭದಿಂದ ಜನವರಿ 17 ರವರೆಗೆ ಒಟ್ಟು ಸಂದರ್ಶಕರ ಸಂಖ್ಯೆ 51,92,550 ರಷ್ಟಿದೆ. ಡಿಸೆಂಬರ್ 30 ರಂದು ಮಕರವಿಳಕ್ಕು ಋತುವಿನ ಆರಂಭವಾಗಿತ್ತು, ಅಂದಿನಿಂದ ಸುಮಾರು 19,00,789 ಅಯ್ಯಪ್ಪ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆಯಲ್ಲಿ ಟಿಡಿಬಿ ತಿಳಿಸಿದೆ. ಪಂದಳ ರಾಜ ಕುಟುಂಬದ ಪ್ರತಿನಿಧಿ ತ್ರಿಕ್ಕೇಟನಲ್ ರಾಜರಾಜ ಶರ್ಮಾ ಅವರು ದರ್ಶನ ಪಡೆದ ಬಳಿಕ ಬೆಳಿಗ್ಗೆ 6.30ಕ್ಕೆ ದೇಗುಲವನ್ನು ಮುಚ್ಚಲಾಯಿತು. ಬೆಳಿಗ್ಗೆ 5 ಗಂಟೆಗೆ ತೆರೆದ ದೇಗುಲದ ಪೂರ್ವ ಮಂಡಪಂನಲ್ಲಿ ಗಣಪತಿ ಹೋಮ ನಡೆಯಿತು. ಈ ಬಾರಿ ಶಬರಿಮಲೆಯ ಯಾತ್ರೆ ಸಂದರ್ಭ ಯಾವುದೇ ರೀತಿಯ ಲೋಪಗಳಾಗದಂತೆ ದೇವಸ್ವಂ ಮಂಡಳಿ, ವಿವಿಧ ಸರ್ಕಾರಿ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಿದ್ದವು, ಕೇರಳ ಹೈಕೋರ್ಟ್ ಕಣ್ಗಾವಲಿನಲ್ಲಿ ಈ ಬಾರಿ ಶಬರಿಮಲೆ ಋತುವಿನಲ್ಲಿ ಯಾವುದೇ ಸಮಸ್ಯೆಗಳು ಕಾಣಿಸಲಿಲ್ಲ.…
ಮಂಗಳೂರು: ನಗರದ ತಲಪಾಡಿಯ ಕೆ.ಸಿ. ರೋಡ್‌ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಶುಕ್ರವಾರ ನಡೆದ ದರೋಡೆ ಪ್ರಕರಣದಲ್ಲಿ ಆರು ಮಂದಿಯಿದ್ದ ತಂಡದಲ್ಲಿ ಜೊತೆಯಾಗಿ ಬಂದವರು ದರೋಡೆ ಬಳಿಕ ಇಬ್ಭಾಗವಾಗಿ ಎರಡು ತಂಡಗಳಾಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಹಳೆಯ ಫಿಯೇಟ್ ಕಾರಿನಲ್ಲಿ ದರೋಡೆಗೆ ಬಂದವರು ಮಾರ್ಗಮಧ್ಯೆ ಶವರ್ಲೇಟ್ ಕಾರಿನಲ್ಲಿ ಗೋಣಿ ತುಂಬಾ ಇದ್ದ ಕದ್ದ ಚಿನ್ನ ಸಾಗಿಸಿದ್ದಾರೆ ಎನ್ನಲಾಗಿದೆ. ಇವರು ಮಂಗಳೂರಿನಲ್ಲಿ ಮೊಬೈಲ್ ಎಸೆದು ಬಂಟ್ವಾಳ ಕಡೆಗೆ ತೆರಳಿರುವ ಶಂಕೆಯಿದೆ. ಆದರೆ ಬಿ.ಸಿ.ರೋಡ್‌ನಲ್ಲಿ ಟೋಲ್ ಹಾಗೂ ಸಿಸಿಟಿವಿ ತಪ್ಪಿಸಲು ಟೋಲ್‌ನ ಪಕ್ಕದ ರಸ್ತೆ ಬಳಸಿ ಎಸ್ಕೇಪ್ ಆಗಿರುವ ಶಂಕೆಯಿದೆ. ಬಳಿಕ ವಿಟ್ಲ ಮೂಲಕ ಕೇರಳ ಗಡಿ ತಲುಪಿ ಕೇರಳದ ಗ್ರಾಮೀಣ ಪ್ರದೇಶ ತಲುಪಿರುವ ಸಾಧ್ಯತೆಯಿದೆ. ಎರಡು ದಿಕ್ಕಿನಲ್ಲಿ ಸಾಗಿದ ಕಾರುಗಳು ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಸಂಧಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿಯಿದೆ. ಈ ನಿಟ್ಟಿನಲ್ಲಿ ಮೂರು ಖಾಕಿ ಟೀಮ್ ಕೇರಳದಲ್ಲಿ ಬೀಡುಬಿಟ್ಟಿದೆ.
ರಾಜ್ಯದಲ್ಲಿ ಆನ್ ಲೈನ್ ಗೇಮ್ ಬ್ಯಾನ್ ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ಬಸ್ ನಿಲ್ದಾಣದ ಬಳಿಯಿರುವ ಪುಷ್ಪಗಿರಿ ಲಾಡ್ಜ್ ನಲ್ಲಿ ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ (23) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್ ಟಾಟಾ ಕ್ಯಾಪಿಟಲ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ತಿಂಗಳಿಂದ ಆನ್ ಲೈನ್ ಗೇಮ್ ಆಡುತ್ತಿದ್ದ ಎನ್ನಲಾಗಿದೆ. ರಮ್ಮಿ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ ರಾಕೇಶ್ ಗೌಡ ಇದೀಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಮ್ಮಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಗೇಮ್ ಆಡಬೇಡಿ ಎಂದು ಡೆತ್ ನೋಟ್ ನಲ್ಲಿ ಮನವಿ ಮಾಡಿದ್ದಾನೆ.
ಪೊಲೀಸ್ ಕ್ವಾರ್ಟರ್ಸ್ ನಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಲ್ಲೆ ಮಾಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯಲ್ಲಿ ಪಿಎಸ್ಐ ನಿತ್ಯಾನಂದ ಪತ್ನಿ ದೂರು ನೀಡಿದ್ದರು. ಇದೀಗ ಈ ಒಂದು ದೂರಿನ ಅನ್ವಯದ ಮೇಲೆ PSI ನಿತ್ಯಾನಂದನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯ ಪಿಎಸ್ಐ ನಿತ್ಯಾನಂದ ಅಮಾನತು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ನಿತ್ಯಾನಂದನ ವಿರುದ್ಧ ರಾತ್ರೋರಾತ್ರಿ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದರು.ಕಳಸ ಪೋಲಿಸ್ ವಸತಿಗೃಹದಲ್ಲಿ ನನ್ನ ಮೇಲೆ ನಿತ್ಯಾನಂದ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಅಮಿತಾ ದೂರು ನೀಡಿದ್ದರು. ಮಾನಸಿಕ ಹಾಗು ದೈಹಿಕ ಹಿಂಸೆ ನೀಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ. ಮಹಿಳೆಯರ ಜೊತೆಗೆ ಪತಿ ನಿತ್ಯಾನಂದ ಅನೈತಿಕ ಸಂಬಂಧ ಹೊಂದಿದ್ದ ಅಲ್ಲದೆ ವರದಕ್ಷಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಪತ್ನಿ ಅಮಿತಾ ಕಳಸ ಠಾಣೆಗೆ ದೂರು ನೀಡಿದ್ದರು.ನಿತ್ಯಾನಂದ…
ಬಂಟ್ವಾಳ: ಟೋಲ್ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದ ಮೂಲಕ ಹರಿದಾಡುತ್ತಿದೆ. ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿರುವ ವಿವಾದಾತ್ಮಕ ಟೋಲ್ ಗೇಟ್ ನಲ್ಲಿ ನಡೆದ ಘಟನೆಯಾಗಿದ್ದು, ಈವರೆಗೆ ಸ್ಥಳೀಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ ಬ್ರಹ್ಮರಕೂಟ್ಲುನಲ್ಲಿರುವ ಟೋಲ್ ಗೇಟ್ ನಲ್ಲಿ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಕೈಯಿಂದ ಹಲ್ಲೆ ನಡೆಸಿದ್ದಲ್ಲದೆ, ಲಾರಿ ಬಾಗಿಲು ತೆರೆದು ಆತನ ಕೈ ಹಿಡಿದು ಹೊರಗೆ ಎಳೆಯುತ್ತಿದ್ದಾನೆ. ಸಾಲದು ಎಂಬಂತೆ ಅವ್ಯಾಚ್ಚ ಶಬ್ದಗಳಿಂದ ಬೈದು ಲಾರಿಯನ್ನು ವಾಪಸ್ ಹಿಂದೆ ಕಳುಹಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಟೋಲ್ ಗೇಟ್ ಸಿಬ್ಬಂದಿಯ ರೌದ್ರಾವತಾರದ ವಿಡಿಯೋವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಮಾಡುವ ಇತರ ವಾಹನ ಸವಾರರು ತೆಗೆದು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರಿಗೆ ಕಳುಹಿಸಿದ್ದಾರೆ.










