Author: main-admin

ಉಡುಪಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ನಡೆದಿದ್ದು, ಆತಂಕ ಸೃಷ್ಟಿಸಿದೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಿಗಾ ವಹಿಸುತ್ತಿದ್ದಾರೆ.

Read More

ಉಪ್ಪಿನಂಗಡಿ: ರಿಕ್ಷಾವೊಂದರಲ್ಲಿ ಸಾಗಿಸುತ್ತಿದ್ದ ಒಂದೂವರೆ ಕೆಜಿ ತೂಕದ ಗಾಂಜಾವನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು, ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಎಸ್‌ಐ ಅವಿನಾಶ್‌ ಎಚ್‌. ಮತ್ತವರ ತಂಡ 34ನೇ ನೆಕ್ಕಿಲಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಲಾಗುತ್ತದೆ. ಆದರೆ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ ಚಾಲಕ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್‌ ಸಲೀಂ (35)ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸಾಗಿಸುತ್ತಿದ್ದುದು ತಿಳಿದು ಬಂತು. ನೌಶಾದ್‌ ಎಂಬಾತ ತನಗೆ ಗಾಂಜಾ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Read More

ಮಂಗಳೂರು: ನಾನು ಮುಂಬೈನಲ್ಲಿ ಬೆಳೆದರೂ, ಹುಟ್ಟೂರು ತುಳುನಾಡಿನ ಬಗ್ಗೆ ಅತೀವ ಹೆಮ್ಮೆ ಇದೆ. ಇಲ್ಲಿನ ಸಂಸ್ಕೃತಿ, ಜಾಗ ಅದ್ಭುತ. ಮುಂದೊಂದು ದಿನ ಪೂರ್ಣ ಪ್ರಮಾಣದಲ್ಲಿ ತುಳು ಸಿನಿಮಾ ಮಾಡುವ ಆಸೆಯಿದೆ ಎಂದು ಹೆಸರಾಂತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಹೇಳಿದ್ದಾರೆ. ಬಿಗ್‌ಬಾಸ್ ವಿನ್ನರ್, ನಟ ರೂಪೇಶ್ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ ಜೈ ತುಳು ಸಿನಿಮಾದಲ್ಲಿ ಅಭಿನಯಿಸಲು ಎರಡು ದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿರುವ ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ತುಳು ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಅಭಿನಯ ಮಾಡುತ್ತಿದ್ದೇನೆ. ತುಳು ಸಿನಿಮಾದವರು ತಾನು ತುಳು ಸಿನಿಮಾದಲ್ಲಿ ನಟಿಸಬೇಕೆಂದು ನಿರಂತರವಾಗಿ ಕೇಳುತ್ತಾ ಬಂದಿದ್ದರೂ ಸಮಯಾವಕಾಶ ಕೂಡಿ ಬಂದಿರಲಿಲ್ಲ. ಈಗ ಜೈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದೇನೆ.‌ ಇದನ್ನೂ ಮೀರಿ ಪೂರ್ಣ ಪ್ರಮಾಣದಲ್ಲಿ ತುಳು ಕಾಮಿಡಿ ಸಿನಾ ಮಾಡುವ ಆಸೆಯಿದೆ. ಕಾಮಿಡಿ ಎನ್ನುವುದು ಯೂನಿವರ್ಸಲ್ ಭಾಷೆ, ಹಾಗಾಗಿ ಕಾಮಿಡಿ ಆಯ್ದುಕೊಂಡಿರುವುದಾಗಿ ಹೇಳಿದರು. ಮಲಯಾಳಂ, ಬೆಂಗಾಲಿ, ಮರಾಠಿ ಭಾಷೆಗಳ ಸಿನಿಮಾಗಳು ಜಗತ್ತಿನ ಗಮನ ಸೆಳೆಯುತ್ತಿರುವುದು…

Read More

ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ 15 ರಂದು ನಡೆದಿದೆ. ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿದ್ದರು.

Read More

ಪುತ್ತೂರು : ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಸ್ಕೂಟರ್‌ ಮೇಲೆ ಕುಳಿತಿದ್ದ ಯುವಕನಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಉಸ್ಮಾನ್‌ (26) ಎಂದು ತಿಳಿಯಲಾಗಿದೆ. ರಸ್ತೆಯ ಎಡ ಬದಿಯ ಮಣ್ಣು ರಸ್ತೆಯಲ್ಲಿ ಸ್ಕೂಟರನ್ನು ನಿಲ್ಲಿಸಿ ಸ್ಕೂಟರಿನ ಮೇಲೆ ಕುಳಿತುಕೊಂಡು ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಿದ್ದ ಉಸ್ಮಾನ್‌ ಅವರ ಸ್ಕೂಟರಿಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ ಸವಾರ ಚರಂಡಿಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಚಾಲಕ ಸದಾಶಿವ ಶೆಟ್ಟಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಸರ್ವಾಣಿ, ಮೀನಾಕ್ಷಿ, ಪವಿತ್ರಾ ಶೆಟ್ಟಿ, ನಂದನ್‌ ರೈ ಗಾಯಗೊಂಡಿದ್ದಾರೆ.

Read More

ಮಂಗಳೂರು : ಗಡಿ ಭಾಗದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯ ಕಾಯರ್‌ಕಟ್ಟೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್‌ನೊಳಗೆ ವ್ಯಕ್ತಿಯೊಬ್ಬನ ಮೃತ ದೇಹ ಸಿಕ್ಕಿದ್ದು, ಪೈವಳಿಕೆ ಬಾಯಾರು ಪದವು ಕ್ಯಾಂಪ್ಕೋ ಕಂಪೌಂಡ್‌ ಬಳಿಯ ಮುಹಮ್ಮದ್‌ ಆಶಿಫ್‌ (29) ಎಂದು ಗುರುತಿಸಲಾಗಿದೆ. ಬುಧವಾರ ಮುಂಜಾನೆ 3.20ಕ್ಕೆ ಟಿಪ್ಪರ್‌ನೊಳಗೆ ಆಶಿಫ್‌ ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೈವೇ ಪಟ್ರೋಲಿಂಗ್‌ ಪೊಲೀಸ್‌ ಹಾಗೂ ಸ್ಥಳೀಯರು ಅಶಿಫ್ ಅವರನ್ನು ಬಂದ್ಯೋ ಡ್‌ನ‌ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಕುಂಬಳೆಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ, ಫೋನ್‌ ಕರೆ ಬಂದ ಹಿನ್ನೆಲೆಯಲ್ಲಿ ಮುಂಜಾನೆ 2 ಕ್ಕೆ ಆಶಿಫ್‌ ತನ್ನ ಟಿಪ್ಪರ್‌ ಸಹಿತ ಮನೆ ಯಿಂದ ತೆರಳಿದ್ದರು. ಸಂಬಂಧಿಕನೋರ್ವ ಫೋನ್‌ ಮಾಡಿದ್ದಾಗಿ ಹೇಳಲಾಗಿದೆ. ಉಪ್ಪಳಕ್ಕೆ ತಲುಪಬೇಕಾದ ಸಮಯವಾದರೂ ತಲುಪದ ಕಾರಣ, ಮನೆಯಿಂದ 3 ಕಿ.ಮೀ ದೂರದ‌ ಕಾಯರ್‌ಕಟ್ಟೆಯ ರಸ್ತೆ ಬದಿ ಟಿಪ್ಪರ್‌ ನಿಲ್ಲಿಸಿದ್ದು ಕಂಡುಬಂದಿತು. ಆಶಿಫ್‌ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹೃದಯಾಘಾತದಿಂದ ಸಾವು ಸಂಭವಿ ಸಿರಬಹುದು ಎಂದು ಶಂಕಿಸಿದ್ದರೂ ಪ್ರಕರಣ ನಿಗೂಢವಾಗಿದೆ. ಟಿಪ್ಪರ್‌ನೊಳಗೆ…

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಮದುವೆ ಪ್ರಮಾಣ ಪತ್ರ ಪೋಷಕರ ಪಡಿತರ ಚೀಟಿ ಅಗತ್ಯ. ಪಡಿತರ ಚೀಟಿಗೆ…

Read More

ಮಂಗಳೂರು: ಸೈಬರ್ ಅಪರಾಧಿಗಳಿಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ಸಹಕರಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸೆನ್ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಪಿರ್ಯಾದಿದಾರರಿಗೆ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ನಂಬಿಸಿ ಹಂತ ಹಂತವಾಗಿ ಒಟ್ಟು 77,96,322.08 ರೂ. ಹಣ ಪಡೆದು ವಂಚನೆಗೈದಿದ್ದ.‌ ಈ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ 108/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 318(4),3(5) ಬಿ.ಎನ್.ಎಸ್ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಪಿರ್ಯಾದಿದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ 26,27,114.4ರೂ. ಹಣ ವರ್ಗಾವಣೆಯಾಗಿದ್ದು ತಿಳಿದು ಬಂದಿದೆ. ಸದ್ರಿ ಬ್ಯಾಂಕ್ ಖಾತೆಯಿಂದ ಕೇರಳ ರಾಜ್ಯದ ವಲಿಯ ಪರಂಬತ್ ಮೂಲದ ಉಮ್ಮರ್ (41) ಎಂಬಾತನ ಬ್ಯಾಂಕ್ ಖಾತೆಗೆ ರೂ,6,00,000/- ರೂ ಹಣ ವರ್ಗಾವಣೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡಾಗ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪತಾಯಕುನ್ನುವಿನ ರಿಯಾಸ್ ಎಂ.ವಿ(45) ಎಂಬಾತ…

Read More

ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಾಲಾಡಿ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು,ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.14 ರಂದು ಧರ್ಮಸ್ಥಳ ಪೋಲಿಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Read More