Author: main-admin

ಬೆಳ್ತಂಗಡಿ; 2022ರ ಅ.9ರಂದು ಬೆಳ್ತಂಗಡಿಯಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಸದಾಶಿವ ಎಂಬಾತ 2022ರ ಅ.9ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಸಮೀಪದಲ್ಲಿರುವ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ, ಮನೆಗೆ ತೆರಳಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು. 2022 ಅ.10ರಂದು ಮತ್ತೆ ಫೇಸ್‌ಬುಕ್ ಸಂದೇಶ ಹಾಕಿದ್ದ ಆರೋಪಿ ಬಾಲಕಿ ಬಳಿ ‘ನನ್ನನ್ನು ಕ್ಷಮಿಸು, ಇನ್ನು ನಿನಗೆ ತೊಂದರೆ ಕೊಡಲ್ಲ, ನನ್ನಷ್ಟಕ್ಕೆ ನಾನಿರುವೆ’ ಎಂದು ಹೇಳಿದ್ದ. ಇದರಿಂದ ನೊಂದ ಬಾಲಕಿ ಡೀಸೆಲ್ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 14 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. 33 ದಾಖಲೆಗಳನ್ನು ಗುರುತಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,…

Read More

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಅವಿನಾಶ್‌ ಹೆಚ್‌ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿರುತ್ತಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟ್ರೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, 2 ಅಟೋರಿಕ್ಷಾಗಳು, 1 ಮೊಟಾರ್ ಸೈಕಲ್ ಪತ್ತೆಯಾಗಿರುತ್ತದೆ. ಸೊತ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ನೋಂದಣಿ ಹೇಗೆ? * 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ * 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ₹2 ಶುಲ್ಕ * 30 ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ₹5 ಶುಲ್ಕ * 1 ವರ್ಷ ನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು 10 ಶುಲ್ಕ

Read More

ಬಜಪೆ:ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕುಪ್ಪೆಪದವಿನ ನಿವಾಸಿಗಳಾದ ಮಹ್ರೂಪ್ (22),ಮಹಮ್ಮದ್ ಪೈಝನ್(22) ಹಾಗೂ ಎಡಪದವಿನ ಜೀವನ್(24) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಎಡಪದವು,ಸೂರಲ್ಪಾಡಿ ಮತ್ತು ಪೆರ್ಮುದೆ ಮುಂತಾದ ಕಡೆಗಳಿಂದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಬಜಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್,ಪಿ ಎಸ್.ಐ ರೇವಣ್ಣ ಸಿದ್ದಪ್ಪ,ಪಿ.ಎಸ್.ಐ ಶ್ರೀಮತಿ ಲತಾ,ಸಿಬ್ಬಂದಿಗಳಾದ ಸುಜನ್,ಮಂಜುನಾಥ್,ಬಸವರಾಜ್ ಪಾಟೀಲ್ ,ಚಿದಾನಂದ,ಚಂದ್ರಕಾಂತ ಹಾಗೂ ಕೆಂಚನಗೌಡ ಪಾಲ್ಗೊಂಡಿದ್ದರು.

Read More

ಕಾಸರಗೋಡು: ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಗಸ್ಟ್ 30 ರಂದು ಮೇಲ್ಪರಂಬದಲ್ಲಿ 49.33 ಗ್ರಾಂ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಉಪ್ಪಳದ ಮನೆಗೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕಾರ್ಡ್ ಬೋರ್ಡ್ ಪೆಟ್ಟಿಗೆಯಲ್ಲಿರಿಸಲಾಗಿದ್ದ 3ಕಿಲೋ ಎಂಡಿಎಂಎ ಹಾಗೂ ಒಂದು ಕಿಲೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಹಲವಾರು ಮಾದಕ ದ್ರವ್ಯ ಹಾಗೂ ಮಾತ್ರೆಯನ್ನು ವಶಪಸಿಕೊಳ್ಳಲಾಗಿದೆ. ಹಲವು ವರ್ಷಗಳ ಹಿಂದೆ ಈ ಮನೆಯನ್ನು ಖರೀದಿಸಿ ಮಾದಕ ವಸ್ತು ವಹಿವಾಟು ನಡೆಸಿದ್ದಾಗಿ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ.ಪೊಲೀಸರು ದಾಳಿ ನಡೆಸಿ, ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

Read More

ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್‌-ಬಹಾರ್‌ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ, ಮಡಂತ್ಯಾರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪಿಎಸ್‌ಐ (ಕಾ&ಸು) ನಂದಕುಮಾರ್‌ ಎಂ.ಎಂ ರವರು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿ ಕೃತ್ಯದಲ್ಲಿ ತೊಡಗಿದ್ದ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು, ಜುಗಾರಿ ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ನಗದು ಸೇರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 36729/- ಆಗಬಹುದು. ಈ ಬಗ್ಗೆ ಮಾನ್ಯ ನ್ಯಾಯಾಲಯದಿಂದ…

Read More

ಮಂಗಳೂರು: ಲಾರಿ ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬಿಬಿಎ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್‌ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ ಕೂಳೂರಿನಿಂದ ಕೆಪಿಟಿ ಕಡೆಗೆ ಸಂಚರಿಸುತ್ತಿದ್ದರು. ಸಂಜೆ 4ಗಂಟೆ ಸುಮಾರಿಗೆ ಕುಂಟಿಕಾನ ಪ್ಲೈಓವರ್ ಬಳಿ ಬರುತ್ತಿದಂತೆ ಅದೇ ಬದಿಯಲ್ಲಿ ಬರುತ್ತಿದ್ದ ಲಾರಿ ನಿರ್ಲಕ್ಷತನ ಮತ್ತು ಅಜಾಗರೂಕತೆಯಿಂದ ಬಂದು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದ ಮೊಹಮ್ಮದ್ ಜಾಸಿಂರವರಿಗೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಶಾಹಿದ್ ಸುಲೇಮಾನ್‌ರವರಿಗೆ ಬಲಗಾಲಿನ ಮೂಳೆ ಮುರಿತಗೊಂಡು ಗಾಯಗೊಂಡಿದ್ದಾನೆ. ಈ ಬಗ್ಗೆ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಯಲಿದೆ. ಈ ಬಗ್ಗೆ ಮಾತನಾಡಿ, ವಿಧಾನ ಪರಿಷತ್ ಸ್ಥಾನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 392 ಸ್ಥಳೀಯಾಡಳಿತಗಳ 6,037 ಮಂದಿ ಮತ ಚಲಾಯಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3ರವರೆಗೆ ಅವಕಾಶವಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಅಕ್ಟೋಬರ್ 7ರಂದು ನಾಮಪತ್ರ ವಾಪಸ್‌ಗೆ ಕೊನೆ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ ಎಂದರು. ಆದ್ದರಿಂದ ಸೆಪ್ಟೆಂಬರ್ 19ರಿಂದಲೇ ಮಾದರಿ ನೀತಿಸಂಹಿತೆ ಜಾರಿಗೊಂಡಿದ್ದು, ಅಕ್ಟೋಬರ್ 28ರವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಸರಕಾರದ ಯಾವುದೇ ಅಭಿವೃದ್ಧಿಪರ ಕಾರ್ಯಗಳ ಘೋಷಣೆ ಮಾಡುವಂತಿಲ್ಲ. ಗುದ್ದಲಿ ಪೂಜೆ, ಶಿಲಾನ್ಯಾಸ ನಡೆಸುವಂತಿಲ್ಲ. ಶುಭಾಶಯ ಕೋರಿ ರಾಜಕೀಯ ನಾಯಕರ, ಅಭ್ಯರ್ಥಿಗಳ ಬ್ಯಾನರ್ ಅಳವಡಿಸುವಂತಿಲ್ಲ. ಅಧಿಕಾರಿಗಳು ಕಾರ್ಯಕ್ರಮ ಯಾವುದೇ ಸರ್ಕಾರಿ ಹಾಗೂ…

Read More

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ದೂರು ನೀಡಿದ ಗುತ್ತಿಗೆದಾರ 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಈ ಕಾಮಗಾರಿಯ ರೂ 9,77,154 ಮೊತ್ತದ ಬಿಲ್ಲು ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ರವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ 37,000 ಲಂಚವನ್ನು ನೀಡುವಂತೆ ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರಿಗೆ ರೂ 15,000 ಲಂಚವನ್ನು ನೀಡಬೇಕೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯ‌ರ್ ಇಂಜಿನಿಯ‌ರ್ ನಾಗರಾಜು…

Read More