ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬಾತನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಮುಂಜಾನೆ ಜಾವ ಪ್ರಸಾದ್ ಪಂಗಣ್ಣಾಯನನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
Author: main-admin
ಮೂಲ್ಕಿ: ಇಲ್ಲಿ ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಈ ವಿಶಿಷ್ಟ ನೋಟವು ಇಡೀ ಹಳ್ಳಿಯನ್ನು ಬೆಚ್ಚಿಬೀಳಿಸಿದೆ. ಗ್ರಾಮಸ್ಥರು ಇದನ್ನು ದೇವರ ಪವಾಡವೆಂದು ಪರಿಗಣಿಸುತ್ತಿದ್ದಾರೆ. ಎರಡು ತಲೆಯ ಕರುಗಳ ಆಘಾತಕಾರಿ ಘಟನೆಯೊಂದು ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಗ್ರಾಮದ ಗ್ರಾಮವೊಂದರಲ್ಲಿ ನಡೆದಿದೆ. ಈ ಕರುವಿಗೆ ಎರಡು ತಲೆಗಳು, ಒಂದು ದೇಹ, ಒಟ್ಟು ನಾಲ್ಕು ಕಣ್ಣುಗಳಿವೆ, ಅವುಗಳಲ್ಲಿ ಮಧ್ಯದ ಎರಡು ಕಣ್ಣುಗಳು ಕೆಲಸ ಮಾಡುತ್ತಿಲ್ಲ. ಉಳಿದ ಎರಡು ಕಣ್ಣುಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ಕರುವಿಗೆ ಈಗ ನಿಲ್ಲಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಪಶುವೈದ್ಯರು ಏನು ಹೇಳುತ್ತಾರೆ: ಈ ಸಂದರ್ಭದಲ್ಲಿ, ಇದು ಅಪರೂಪದ ಘಟನೆ ಎಂದು ಪಶುವೈದ್ಯರು ಹೇಳುತ್ತಾರೆ. ಇದು ಸಾಮಾನ್ಯವಾಗಿ ಜನ್ಮಜಾತ ಅಸ್ವಸ್ಥತೆಯಿಂದ ಉಂಟಾಗುತ್ತದೆ. ಆದಾಗ್ಯೂ, ಈ ಕರು ಬದುಕುಳಿಯುವ ಸಾಧ್ಯತೆಗಳು ತುಂಬಾ ಕಡಿಮೆ. ಗ್ರಾಮಸ್ಥರು ಈ ಘಟನೆಯನ್ನು ದೇವರ ಪವಾಡವೆಂದು ಪರಿಗಣಿಸುತ್ತಿದ್ದಾರೆ. ಅವರು ಈ ಕರುವನ್ನು ಪೂಜಿಸುತ್ತಿದ್ದಾರೆ ಮತ್ತು ಅದಕ್ಕೆ ದೀರ್ಘಾಯುಷ್ಯವನ್ನು ಹಾರೈಸುತ್ತಿದ್ದಾರೆ. ಇದು ಮಾತ್ರವಲ್ಲ, ಹತ್ತಿರದ ಹಳ್ಳಿಗಳ ಜನರು ಸಹ ಈ ಕರುವನ್ನು ನೋಡಲು…
ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯನ್ನು ವಿವಾಹವಾಗಿದ್ದರು. ಮೊದಲನೆ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ : ವಿದ್ಯುತ್ ಕಂಬಕ್ಕೆ ಶಾಲಾ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾ ವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದಕ್ಕೆ ಢಿಕ್ಕಿ ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೈಮಾಸ್ಟ್ ವಿದ್ಯುತ್ ಕಂಬ ಮುರಿದುಬಿದ್ದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳು ಇಲ್ಲದೇ ಇದ್ದುದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿದ್ದಾರೆ.
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಎಂದು ಗುರುತಿಸಲಾಗಿದೆ. ಇವರಿಂದ ಮಾದಕ ವಸ್ತು ವಶಪಡಿಸಲಾಗಿದೆ. ಪೊಲೀಸರು ಮಾಲಾಡಿ ಕೋರ್ಟ್ ರಸ್ತೆ ಕಡೆಯಿಂದ ಗೋಲ್ಡ್‌ಫಿಂಚ್ ಮೈದಾನದ ಕಡೆಗೆ ಹೋಗುತ್ತಿದ್ದಾಗ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಿಸಿದರು. ಈ ವೇಳೆ ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ, ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ. ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿ ಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆದುಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೇಯರ ಸ್ಥಾನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಮನೋಜ್ ಹಾಗೂ ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಮನಪಾ ಸದಸ್ಯರಾಗಿರುವ ಶ್ರೀಮತಿ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ಆಯ್ಕೆಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಛೇರಿಯಲ್ಲಿ ಸಭೆಯಲ್ಲಿ ನಡೆಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ `ಒಂದು ದೇಶ, ಒಂದು ಚುನಾವಣೆ ವರದಿಗೆ ಅನುಮೋದನೆ ಸಿಕ್ಕಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಒಂದು ದೇಶ, ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ.
ಬಂಟ್ವಾಳ ಸಮೀಪ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸಂಭವಿಸಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ, ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ. ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,…









