ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವನ್ಯಜೀವಿ ಭೇಟೆಗೆ ಮುಂದಾಗಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕುದುರೆಮುಖ ವನ್ಯಜೀವಿ ವಿಭಾಗದ ಮಾಳ ಗ್ರಾಮದ ಮುಳ್ಳೂರು ಅರಣ್ಯ ತನಿಖಾ ಠಾಣೆ ವ್ಯಾಪ್ತಿಯಲ್ಲಿ ಜ.9 ರಂದು ಘಟನೆ ಸಂಭವಿಸಿದ್ದು, ಅಂದು ರಾತ್ರಿ ಐದಾರು ಮಂದಿ ಕಾರಿನಲ್ಲಿ ಬಂದೂಕು ಮತ್ತು ಕೊಟ್ರೇಟ್ಟ್ನೊಂದಿಗೆ ಬೇಟೆಗೆ ಹೊಂಚು ಹಾಕುತ್ತಿದ್ದು, ಈ ವೇಳೆ ಕಾರ್ಕಳ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಮಂಗಳೂರು ಕಾಟಿಪಳ್ಳ ನಿವಾಸಿ ಪಾಸ್ವಿಮ್ ಆಲಿ (35) ಎಂಬಾತನನ್ನು ಬಂಧಿಸಲಾಗಿದ್ದು, ಉಳಿದವರು ಕಾರು ಮತ್ತು ಬಂದೂಕಿನೊಂದಿಗೆ ಪರಾರಿಯಾಗಿದ್ದಾರೆ.
Author: main-admin
ಕಡಬ: ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಎಂಬವರು ಭಾನುವಾರದಂದು ನೆಲ್ಯಾಡಿಯಲ್ಲಿ ನಡೆದ ಕಾರ್ಯಕ್ರಮಕ್ಕೆಂದು ಮನೆಗೆ ಬೀಗ ಹಾಕಿ ತೆರಳಿದ್ದರು. ಸಂಜೆ ವೇಳೆಗೆ ಮನೆ ಮಂದಿ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದನ್ನು ಕಳ್ಳರು ದೋಚಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಗ್ರಾಮಾಂತರ ಇನ್ಸ್ಪೆಕ್ಟರ್ ರವಿ ಬಿ.ಎಸ್., ಕಡಬ ಠಾಣಾ ಸಬ್ ಇನ್ಸ್ಪೆಕ್ಟರ್ ಅಭಿನಂದನ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತ ಮಗು. ಅನಾಸ್ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ. ಬಳಿಕ ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದು, ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು. ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಳಿಲ್ಲ.
ಉಳ್ಳಾಲ : ಇಲ್ಲಿನ ಮಂಜನಾಡಿಯ ಖಂಡಿಗ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ತಾಯಿ-ಮಕ್ಕಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಶನಿವಾರ ಸಂಜೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಘಟನೆಯಲ್ಲಿ ತಾಯಿ ಖತೀಜತ್ತುಲ್ ಖುಬ್ರ ಹಾಗೂ ಇಬ್ಬರು ಪುತ್ರಿಯರಾದ ಝಲೈಕಾ ಮೆಹ್ದಿ, ಸಲ್ಮಾ ಮಝಿಯಾ ಮೃತಪಟ್ಟಿದ್ದರು. ಮೃತಪಟ್ಟ ಮೂವರಿಗೆ ತಲಾ 5ಲಕ್ಷ ರೂ. ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಸಿಎಂ ನೀಡಿದರು.
ಮಂಗಳೂರು: ನಗರದ ಮರವೂರು ಬಳಿಯ ಸೇತುವೆಯಿಂದ ಕೆಳಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರವಿವಾರ ಬೆಳಳಗ್ಗೆ ನಡೆದಿದೆ.ಕುಂಜತ್ತಬೈಲು ನಿವಾಸಿ ರೇವತಿ (60) ಮೃತ ಮಹಿಳೆ ಎಂದು ತಿಳಿದು ಬಂದಿದೆ. ರವಿವಾರ ಬೆಳಿಗ್ಗೆ 7.30 ರಿಂದ 8.30ರ ಸುಮಾರಿಗೆ ಅಂಗಡಿಗೆ ಹೋಗುತ್ತಿದ್ದ ರೇವತಿ ಅವರು ಮರವೂರು ಸೇತುವೆಯ ಬಳಿ ಏಕಾಏಕಿ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯರು ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿಗೆ ಹೋಗಿದ್ದ ರೇವತಿಯನ್ನು ಕಾಣದಾದಾಗ ಮನೆಯವರು ಅವರನ್ನು ಹುಡುಕುತ್ತಾ ಬಂದಿದ್ದರು.ಬಳಿಕ ಮೃತರ ಮಗ ಮೃತದೇಹ ತಾಯಿ ರೇವತಿಯದ್ದು ಎಂದು ದೃಢ ಪಡಿಸಿದ್ದರು. ಮೃತದೇಹವನ್ನು ಮಹಜರುಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ರೇವತಿಯವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಕಾವೂರು ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.
ಬೆಳ್ಳಾರೆ: ಯುವಕನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಯುವಕ ಆಶೀರ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ರಾತ್ರಿ 9:30 ಸಮಯಕ್ಕೆ ಬೆಳ್ಳಾರ ಪೇಟೆಯಲ್ಲಿ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಆಶೀರ್ ಎಂಬ ಯುವಕ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ. ಹಲ್ಲೆಯಿಂದ ಗಾಯಗೊಂಡಿದ್ದ ಯುವಕನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಮಂಗಳೂರು:ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜ10ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು. ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಮಾತನಾಡಿ, ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮತ್ತು ಕಚೇರಿ ಆವರಣದಲ್ಲಿ ಧೂಮಪಾನ ಮತ್ತು ಇತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಲಾಗಿದೆ. ದ.ಕ. ಜಿಲ್ಲೆಯ ಲ್ಲಿರುವ ಎಲ್ಲಾ ಸರಕಾರಿ ಕಚೇರಿಗಳು ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಸೂಚಿಸಿದರು. ಶಾಲಾ ಕಾಲೇಜುಗಳ 100 ಮೀಟರ್ ಅಂತರದಲ್ಲಿ ಸಿಗರೇಟು ಸೇರಿದಂತೆ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳ ಪರವಾನಿಗೆ ರದ್ದು ಮಾಡಲು ಎಲ್ಲಾ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸೂಚಿಸಿದರು. ಇತ್ತೀಚೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವ ವಿದ್ಯಮಾನ ಕಂಡು ಬರುತ್ತಿದೆ. ಈ ಬಗ್ಗೆ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳ ನಡವಳಿಕೆಗಳನ್ನು ಗಮನಿಸಬೇಕು ಎಂದು ಅವರು ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ತಿಮ್ಮಯ್ಯ ಎಚ್.ಆರ್., ಎಸಿಪಿ ಗೀತಾ ಕುಲಕರ್ಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್ ಹಾಗೂ ಜಿಲ್ಲಾ ತಂಬಾಕು…
ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ ಎಂದರು. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದು…
ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಹಂಪನಕಟ್ಟೆ ಲೈಟ್‌ಹೌಸ್‌ಹಿಲ್ ರೋಡ್ ನಿವಾಸಿ ಬ್ರಯಾನ್ ರಿಚರ್ಡ್ ಅಮನ್ನಾ (34) ಶಿಕ್ಷೆಗೊಳಗಾದ ಅಪರಾಧಿ ಸಂತ್ರಸ್ತ ಯುವತಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಗೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ಜಾಯ್‌ಲಿನ್ ಗ್ಲಾನೆಲ್ ಪಿಂಟೋ ಎಂಬಾತ ಪರಿಚಿತನಾಗಿದ್ದ. ಆತನಿಗೆ ಅಂಡಮಾನ್‌ಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ 2021ರ ಫೆ.5ರಂದು ಸ್ನೇಹಿತರಿಗಾಗಿ ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೊಡಿಕಾಡು ಎಂಬಲ್ಲಿನ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಯುವತಿಯೂ ಭಾಗವಹಿಸಿದ್ದರು. ಈ ಪಾರ್ಟಿಗೆ ಕ್ಯಾಟರಿಂಗ್ ಸರಬರಾಜಿನ ವ್ಯವಸ್ಥೆ ಮಾಡಿದ್ದ ಬ್ರಯಾನ್ ಅಮನ್ನಾ ಯುವತಿಗೆ ತನ್ನನ್ನು ಜಾಯಿಲಿನ್ ಸ್ನೇಹಿತ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ವೈನ್‌ಗೆ ಪ್ರಜ್ಞೆ ತಪ್ಪುವ ಅಮಲು ಪದಾರ್ಥವನ್ನು ಬೆರೆಸಿ ಅದನ್ನು ಯುವತಿಗೆ ಒತ್ತಾಯಪಡಿಸಿ ನೀಡಿದ್ದ. ಬಳಿಕ ಯುವತಿ ಕೊಠಡಿಗೆ…
ಪುತ್ತೂರು: ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ. 21 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಅಂತರಾಜ್ಯ ಮನೆ ಕಳ್ಳತನದ ಪ್ರಮುಖ ಆರೋಪಿ ಕೇರಳ ಮೂಲದ ಸೂರಜ್ ಕೆ ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಭಕ್ತಕೋಡಿ ಎಂಬಲ್ಲಿ ಡಿಸೆಂಬರ್ 20 ರಂದು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡ್ರೆಜನ್ನು ಮೀಟಿ ಚಿನ್ನಾಭರಣವನ್ನು ಕಳವು ಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಕಳ್ಳತನ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ…









