ಉಡುಪಿ: ಜಿಲ್ಲೆಯ ಶಿರ್ವ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಿರ್ವ, ಕಾಪು, ಬೆಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವುಗೈದ ಆರೋಪಿಯೋರ್ವನನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಓಂ ಕೋಲಾರ ಎಂದು ಗುರುತಿಸಲಾಗಿದೆ. ಡಿ.5ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಪ್ರಾರಂಭಿಸಿದ್ದರು. ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಿ ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಶೋಧ ಕಾರ್ಯ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಯಿಂದ ಶಿರ್ವ, ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್ ನಾಯ್, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಡಾ. ಹರ್ಷ ಪ್ರಿಯಂವದಾ ಹಾಗೂ…
Author: main-admin
ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮ ಆಯೋಜಕರು ಹಾಗೂ ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಉಂಟಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ವಾಹನ ಚಾಲನೆ, ವೀಲಿಂಗ್, ಅಸಭ್ಯ ವರ್ತನೆ ಸೇರಿದಂತೆ ಸಾರ್ವಜನಿಕ ಕಿರುಕುಳದ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ನಗರದಾದ್ಯಂತ ಭದ್ರತಾ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟ್ ಪಾಯಿಂಟ್ಗಳು, ಚೆಕ್ಪೋಸ್ಟ್ಗಳು ಹಾಗೂ ರೌಂಡ್ಸ್ ಕರ್ತವ್ಯಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ಆರ್ಪಿ ತುಕಡಿಗಳು, ಎಫ್ಎಎಫ್ ತುಕಡಿ ಹಾಗೂ ಸಿಎಆರ್…
ಮಂಗಳೂರು: ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿ ಆತನಿಂದ ಒಟ್ಟು 21,000/- ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ 425 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಮೂಲತಃ ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ವಾಸಿಯಾದ ಪಾಲ್ ಎಂದು ಗುರುತಿಸಲಾಗಿದೆ. ಆರೋಪಿ ಗಾಂಜಾವನ್ನು ಉತ್ತರ ಪ್ರದೇಶದಿಂದ ಬಂದು ಹಣಕ್ಕಾಗಿ ಬೇರೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 278/2025 ಕಲಂ 8(c), 20(b) ಎನ್.ಡಿ.ಪಿ.ಎಸ್ ಕಾಯ್ದೆ 1985 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಅಧಿಕೃತ ವಾಟ್ಸಾಪ್ ಸಂಖ್ಯೆಯನ್ನೇ ಹ್ಯಾಕ್ ಮಾಡಲಾಗಿದ್ದು, ಶಾಸಕರ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಲೂಟಿ ಮಾಡಲು ಸಂಚು ರೂಪಿಸಿದ್ದಾರೆ. ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿರುವ ಹ್ಯಾಕರ್ಸ್‌ಗಳು, ಶಾಸಕರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವ ಹಲವು ವ್ಯಕ್ತಿಗಳಿಗೆ ಗೂಗಲ್ ಪೇ ಮೂಲಕ ತುರ್ತಾಗಿ ಹಣ ಕಳುಹಿಸುವಂತೆ ಸಂದೇಶ ರವಾನಿಸುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಾಸಕರು, ‘ಯಾರೂ ಇಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಮತ್ತು ಹಣ ನೀಡಬೇಡಿ’ ಎಂದು ಸಾರ್ವಜನಿಕರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ. ಹ್ಯಾಕರ್ಸ್‌ಗಳು ಸಾಮಾನ್ಯವಾಗಿ ‘ಫಿಶಿಂಗ್ ಎಂಬ ತಂತ್ರಾಂಶದ ಮೂಲಕ ಬಳಕೆದಾರರಿಗೆ ಅಪರಿಚಿತ ಸಂಖ್ಯೆಯಿಂದ ಲಿಂಕ್ ಕಳುಹಿಸಿ ಅಥವಾ “ವಾಟ್ಸಾಪ್ ಅಪ್‌ಡೇಟ್ ಮಾಡಿ” ಎಂಬ ಆಮಿಷದ ಸಂದೇಶ ಕಳುಹಿಸುತ್ತಾರೆ. ಅಪ್ಪಿತಪ್ಪಿ ಆ ಲಿಂಕ್ ಕ್ಲಿಕ್ ಮಾಡಿದರೆ ಅಥವಾ ಮೊಬೈಲ್‌ಗೆ ಬರುವ ಒಟಿಪಿ ನೀಡಿದರೆ, ಖಾತೆ ಹ್ಯಾಕರ್ ಪಾಲಾಗುತ್ತದೆ. ಒಮ್ಮೆ ಅವರು ಲಾಗಿನ್ ಆದರೆ, ಬಳಕೆದಾರನ ಫೋನ್‌ನಿಂದ ವಾಟ್ಸಾಪ್ ಲಾಗ್ ಔಟ್ ಆಗಿ ಅತಂತ್ರ ಸ್ಥಿತಿಗೆ ತಲುಪುತ್ತದೆ. ಈ ಹಿಂದೆ ವಂಚಕರು…
ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು. ಡಿ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ದ ಧಿಕ್ಕಿನಿಂದ ಬಂದ್ದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ಅಕ್ರಮ ಪ್ರವೇಶಗೈದು ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಟೋಲ್ ಇನ್ ಚಾರ್ಜ್…
ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಈಗ ಮತ್ತಷ್ಟು ಜಟಿಲಗೊಂಡಿದ್ದು, ಈಗ ಕಾನೂನು ಹೋರಾಟದತ್ತ ಹೊರಳಿದೆ. ಈ ಕುರಿತು ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಕರ್ಮ ಸಮುದಾಯದ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಕೆ.ಪಿ.ನಂಜುಂಡಿ ಎಲ್ಲ ಸಂಧಾನಗಳು ವಿಫಲವಾಗಿರುವುದರಿಂದ ಈಗ ಕಾನೂನು ಹೋರಾಟವೊಂದೇ ಉಳಿದಿರುವ ದಾರಿ ಎಂದಿದ್ದಾರೆ. ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿ ತಿಂಗಳುಗಳೇ ಕಳೆದರೂ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಡಿಎನ್ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಆತ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಅನೇಕರು ಸಂಧಾನಕ್ಕೆ ಯತ್ನಿಸಿದ್ದರೂ ವಿಫಲವಾಗಿದೆ. ಪರಿಣಾಮವಾಗಿ ಕಾನೂನು ಹೋರಾಟವೊಂದೇ ನಮಗೆ ಉಳಿದಿರುವ ದಾರಿ ಎಂದು ಸಂತ್ರಸ್ತೆಯ ಕುಟುಂಬ ಹೇಳಿಕೊಂಡಿದೆ. ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ…
ಉಡುಪಿಯ ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ರಂ ಬಂಧನಕ್ಕೆ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಸೆ. 27ರಂದು ಸೈಫುದ್ದೀನ್ ಕೊಲೆ ನಡೆದ ಬಳಿಕ ಸೈಫ್ ಆಪ್ತ ಅಕ್ರಂ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಸೈಫುದ್ದೀನ್ ಕೊಲೆಯಲ್ಲಿ ಅಕ್ರಂ ಪ್ರಮುಖ ಆರೋಪಿ ಎನ್ನುವುದು ತಿಳಿದು ಬಂದಿದೆ. ಇದೀಗ ಸೈಫ್ ಕೊಲೆಗೆ ಸಂಚು ರೂಪಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅಕ್ರಂ ಬಂಧನಕ್ಕೆ ಉಡುಪಿ ಪೊಲೀಸರು ಇಂಟರ್ ಪೋಲ್ ಸಹಾಯದಿಂದ ಬಲೆ ಬೀಸಿದ್ದಾರೆ. 2016ರ ಜು.14ರಂದು ಆತ್ರಾಡಿ ಸಮೀಪದ ಶೇಡಿಗುಡ್ಡೆ ಎಂಬಲ್ಲಿ ನಡೆದ ಕೆಮ್ಮಣ್ಣುವಿನ ಶೇಖ್ ಮಹಮ್ಮದ್ ತಸ್ಲೀಮ್ ಕೊಲೆ ಪ್ರಕರಣದಲ್ಲಿ ಸೈಫ್ ಜೊತೆ ಅಕ್ರಂ ಕೂಡ ಆರೋಪಿಯಾಗಿದ್ದನು. ಆ ಬಳಿಕ ವ್ಯವಾಹರದಲ್ಲಿ ಇವರಿಬ್ಬರು ಜೊತೆಯಾಗಿದ್ದರು. ಅಕ್ರಂ, ವ್ಯವಹಾರಕ್ಕೆ ಸಂಬಂಧಿಸಿ ಸಾಲಗಳನ್ನು ಸೈಫ್ ಮತ್ತು ಸೈಫ್‌ನ ಪತ್ನಿ ಹೆಸರಿಗೆ ಹಾಗೂ ಲಾಭದ ವ್ಯವಹಾರವನ್ನು ತನ್ನ ಪಾಲಿಗೆ ಮಾಡಿದ್ದನು. ಇದೇ ವಿಚಾರದಲ್ಲಿ ಮನಸ್ತಾಪ ನಡೆದಿತ್ತು ಎನ್ನಲಾಗಿದೆ. ಅಲ್ಲದೇ ಸೈಫ್…
ಮಂಗಳೂರಿನ ಕಾರಾಗೃಹಕ್ಕೆ ತಡರಾತ್ರಿ ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಾರಾಗೃಹದಲ್ಲಿ ಈ ವಸ್ತುಗಳು ನಿಷೇಧಿತವಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿದೆ. ಕಾರಾಗೃಹ ಇಲಾಖೆಯ ಮುಖ್ಯಸ್ಥ ಅಲೋಕ್ ಕುಮಾರ್ ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.
ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿಚಾರಣೆಗೆ ಪದೇ ಪದೇ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು. ಇದೀಗ ಅವರ ವಿರುದ್ಧ ಮತ್ತೆ ವಾರೆಂಟ್ ಜಾರಿಯಾಗಿದೆ.
ಮಂಗಳೂರು ಹೊರವಲಯದ ಉಳ್ಳಾಲ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಿದ್ದ ರಿಕ್ಷಾವೊಂದನ್ನು ಕಳವುಗೈದ ಕಳ್ಳನೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಬಂಧಿತ ಆರೋಪಿ. ಬಂಧಿತನಿಂದ ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿಸೆಂಬರ್ 13ರಂದು ರಾತ್ರಿ ನಿಲ್ಲಿಸಿದ್ದರು. ಆದರೆ ರಿಕ್ಷಾವು ಕಳವಾಗಿದ್ದು, ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.










