Author: main-admin

ಉಡುಪಿ: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಅವಿನಾಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬೈಕ್ ನ್ನು ಲಾರಿ ಎಳೆದುಕೊಂಡ ಹೋದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಲಾರಿಗೆ ಹಬ್ಬಿ ಲಾರಿ ಹಾಗೂ ಬೈಕ್ ಎರಡೂ ಸುಟ್ಟು ಕರಕಲಾಗಿವೆ.ಸ್ಥಳಕ್ಕೆ ಉಡುಪಿ ಸಂಚಾರ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕಟಪಾಡಿ: ದ್ವಿ ಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಉಡುಪಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ, ಬೈಕ್ ಸವಾರ ಪಣಿಯೂರು ನಿವಾಸಿ, ಆನಂದ ಆಚಾರ್ಯ ಅವರ ಪುತ್ರ ಅವಿನಾಶ್ ಆಚಾರ್ಯ (18) ಗಂಭೀರ ಗಾಯಗೊಂಡ ಯುವಕ. ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ.

Read More

ಪಶ್ಚಿಮ ಘಟ್ಟಗಳಲ್ಲಿ ಎರಡು ದಶಕದಿಂದ ಬೇರೂರಿದ್ದ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದಾರೆ. ಶರಣಾದ ಎಲ್ಲರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಶರಣಾದ ಒಂದೇ ದಿನದಲ್ಲಿ ಮೂರು ಲಕ್ಷ ಪ್ಯಾಕೇಜ್ ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಆಗಿದೆ. ಮತ್ತೊಂದು ಕಡೆ ಎನ್ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಇಲಾಖೆಗೆ ಬಿಜೆಪಿ ಮೊರೆ ಹೋಗುತ್ತಿದೆ. ಶರಣಾಗತಿ ನಂತರ ನ್ಯಾಯದ ಪ್ರಕ್ರಿಯೆ ಶುರುವಾಗಿದೆ. 6 ಜನ ನಕ್ಸಲರನ್ನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು 6 ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಒಟ್ಟು 14 ದಿನಗಳ ಕಾಲ ಅಂದ್ರೆ ಜನವರಿ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ಬೆನ್ನಲ್ಲೆ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೆಲ್ಲದರ ನಡುವೆ ಈಗ ನಕ್ಸಲರ ಗನ್ ಗಳು ಪತ್ತೆಯಾಗಿವೆ. ಕಿತ್ತಲೇಗಂಡಿ ಕಾಡಿನಲ್ಲಿ 5 ಗನ್ಗಳು ಪತ್ತೆಯಾಗಿವೆ. ಎಕೆ 47, 303ಕೋವಿ, ಒಂದು…

Read More

ಮಂಗಳೂರು : ಸರ್ಕಾರಿ ಆಸ್ಪತ್ರೆ ವೆನ್ಲಾಕ್​ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು ಲಿವರ್ ದಾನ ಪ್ರಕ್ರಿಯೆ ನಡೆಯಿತು. ಶಿವಮೊಗ್ಗ ರಾಗಿಗುಡ್ಡೆಯ ರೇಖಾ (41) ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಜನವರಿ 6 ರಂದು ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾದ ರೇಖಾ ಅವರ ಮೆದುಳು ನಿಷ್ಕ್ರಿಯವಾಗಿದ್ದರಿಂದ ಆಸ್ಪತ್ರೆಯ ವೈದ್ಯರು ಅಂಗಾಂಗ ದಾನದ ಸಲಹೆ ನೀಡಿದ್ದು, ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ರೇಖಾ ಅವರ ಕಣ್ಣು ಮತ್ತು ಲಿವರ್ ತೆಗೆದು ದಾನ ಪ್ರಕ್ರಿಯೆ ನಡೆಸಲಾಯಿತು. ಎರಡು ಕಣ್ಣನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಲಿವರ್​ ಅನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಮೂಲಕ ಮೃತ ಮಹಿಳೆ ರೇಖಾ ಮೂರು ಮಂದಿಯ ಬಾಳಿಗೆ ಬೆಳಕಾದರು. ಈ ಬಗ್ಗೆ ಮಾತನಾಡಿದ ವೆನ್ಲಾಕ್ ಆಸ್ಪತ್ರೆಯ…

Read More

ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರಂದು ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More

ಪುತ್ತೂರು ನರಿಮೊಗರು ಕೂಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 9ರಂದು ನಡೆದಿದೆ. ನರಿಮೊಗರು ಕೇಶವ ಎಂಬುವವರ ಪುತ್ರಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ನೇರವಾಗಿ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Read More

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ಮೋಸಗೊಳಿಸಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿ, ಪಿರ್ಯಾದಿದಾರರಿಂದ 10,32,000 ರೂಪಾಯಿ ಹಣವನ್ನು ವಂಚಿಸಿದ್ದರು. ಪೊಲೀಸರು ನಡೆಸಿದ ತನಿಖೆಯಲ್ಲಿ, ಪಿರ್ಯಾದಿದಾರರಿಂದ ವರ್ಗಾವಣೆಯಾದ ಹಣವು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದ್ದು ಕಂಡುಬಂದಿದೆ. ಈ ಸಂಬಂಧ ಕೇರಳದ ತ್ರಿಶೂರ್ ಜಿಲ್ಲೆಯ ನಿಧಿನ್ ಕುಮಾರ್ ಕೆ.ಎಸ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Read More

ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ತಲಯಾಡ್ ಪೋಸ್ಟ್‌ನ ಕಂದಲಾಡ್ ಗ್ರಾಮದ ನಿವಾಸಿ ಶಮೀರ್ ಪಿ.ಕೆ.(42) ಬಂಧಿತ ಆರೋಪಿ. ಈತ ನಿಷೇಧಿತ ಮಾದಕದ್ರವ್ಯ ಹೈಡ್ರೋವಿಡ್ ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ.‌ ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಬಪ್ಪನಾಡು ರಾಷ್ಟ್ರೀಯ ಹೆದ್ದಾರಿ ಬಳಿ ಕಾರನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 73 ಲಕ್ಷ ರೂ. ಮೌಲ್ಯದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 80,10,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹೈಡ್ರೋವಿಡ್ ಗಾಂಜಾವನ್ನು ವಿದೇಶದಿಂದ…

Read More

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25)ನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಅನರುಲ್​ ಶೇಖ್​​​ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಅನರುಲ್​ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್​ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಮಂಗಳೂರು: ಹಳೆಯ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ಮಂಗಳೂರು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು ಫೇಸ್ಬುಕ್ ನೋಡುತ್ತಿರುವಾಗ ಹಳೆಯ ನ್ಯಾಣ್ಯಗಳನ್ನು ಖರೀದಿಸಿ ಹೆಚ್ಚಿನ ಹಣ ನೀಡುವುದಾಗಿ ತಿಳಿಸಿರುವ ಜಾಹಿರಾತನ್ನು ನೋಡಿದ್ದಾರೆ. ಬಳಿಕ ಆ ಜಾಹಿರಾತಿನಲ್ಲಿದ್ದ ವಾಟ್ಸ್ಆ್ಯಪ್ ಖಾತೆಗೆ ತಮ್ಮ ಬಳಿ ಇದ್ದ 15 ಹಳೆಯ ನ್ಯಾಣ್ಯಗಳ ಫೋಟೋಗಳನ್ನು ಕಳುಹಿಸಿದ್ದರು. ಅದರಂತೆ, ಆ ಕಡೆಯಿಂದ 15 ಹಳೆಯ ನ್ಯಾಣ್ಯಗಳನ್ನು ಖರೀದಿಸಿ, ಅದಕ್ಕೆ ಪ್ರತಿಯಾಗಿ 49,00,000 ರೂ. ಹಣ ನೀಡುವುದಾಗಿ ಆರೋಪಿ ತಿಳಿಸಿದ್ದ ಎಂದು ವಂಚನೆಗೊಳಗಾದವರು ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ, ನಾಣ್ಯ ಮಾರಲು ಇಷ್ಟವಿದ್ದರೆ ಮೊದಲಿಗೆ ಆರ್ ಬಿಐ ನೋಂದಣಿ ಮಾಡಲು 750 ರೂ. ಹಣ ಪಾವತಿಸುವಂತೆ ಆರೋಪಿ ತಿಳಿಸಿದ್ದು, ವ್ಯಕ್ತಿಯು ಯುಪಿಐ ಮೂಲಕ ಪಾವತಿಸಿದ್ದರು. ಆ ಬಳಿಕ ಜಿಎಸ್ ಟಿ ಪ್ರೊಸಿಡಿಂಗ್ ಡಾಟಾ ಶುಲ್ಕವೆಂದು 17,500 ರೂ., ಇನ್ಶೂರೆನ್ಸ್ ಶುಲ್ಕ 94,500 ರೂ., ಟಿಡಿಎಸ್ ಮೊತ್ತದ…

Read More