Author: main-admin

ಮಂಗಳೂರು: ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆ ಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.

Read More

ಮಂಗಳೂರು: ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು ಶರೀಫ್ ಒಡ್ಡಿದ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು. ಈ ನಡುವೆ ಮಧ್ಯರಾತ್ರಿ ಪೊಲೀಸರು ಪುನೀತ್‌ ಅತ್ತಾವರರನ್ನು ಮಂಡ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ ಈ ಹಿನ್ನಲೆ  ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ನೀಡಿದ್ದು ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಇನ್ನು ಹೆಚ್ಚುವರಿ ಪೊಲೀಸರ ನಿಯೋಜನೆ ಕೂಡ ಮಾಡಲಾಗುವುದು.

Read More

ಶಿರ್ವ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಲಾ ಬಾಲಕಿಗೆ ಶಾಲಾ ಬಸ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಭಾನುವಾರ (ಸೆ. 15 ರಂದು) ಕಾಪು-ಶಿರ್ವ ರಸ್ತೆಯ ಬಾಲಾಜಿ ರೆಸ್ಟೋರೆಂಟ್‌ ಬಳಿ ನಡೆದಿದೆ. ಶಿರ್ವ ನಿವಾಸಿ ಜೋಸೆಫ್‌ ಮಸ್ಕರೇನಸ್‌ ಅವರ ಪುತ್ರಿ ಮರ್ಲಿನ್‌ ಮಸ್ಕರೇನಸ್‌ (12) ಗಂಭೀರ ಗಾಯಗೊಂಡ ಬಾಲಕಿ .ಶಿರ್ವ ಡಾನ್‌ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಈಕೆ ಶಾಲೆಯ ಅನುಮತಿಯಂತೆ ಎರ್ಮಾಳಿನಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಳು. ಶಾಲಾ ಬಸ್ಸಿನಲ್ಲಿ ವಾಪಾಸು ಬಂದ ಈಕೆ ತನ್ನ ಮನೆಯ ಬಳಿ ಇಳಿದು ಬಸ್‌ನ ಮುಂಭಾಗದಿಂದ ಬಲಭಾಗದಲ್ಲಿರುವ ತನ್ನ ಮನೆಗೆ ಬರುವಾಗ ಬಸ್‌ನ ಹಿಂಭಾಗದಿಂದ ಬಂದ ಮತ್ತೂಂದು ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ವೇಗವಾಗಿ ಬಂದು ಬಾಲಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬಾಲಕಿಯ ಪಕ್ಕೆಲುಬು,ತಲೆ ,ಕಣ್ಣು ಹಾಗೂ ಬಲಭುಜಕ್ಕೆ ತೀವ್ರ ಸ್ವರೂಪದ ಗಾಯವಾಗಿದ್ದು, ಗಂಭೀರ ಗಾಯಗೊಂಡು ಉಡುಪಿಯ…

Read More

ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರ ನಿವಾಸಿ ಸಂತೋಷ ಕುಮಾರ್(45) ಎಂಬವರಿಗೆ ಅಪರಿಚಿತರು ಟೆಲಿಕಾಂ ರೆಗ್ಯುಲೇಟರ್‌ ಅಥಾರಿಟಿ ಆಫ್ ಇಂಡಿಯಾದಿಂದ ಕರೆ ಮಾಡುತ್ತಿರುವುದಾಗಿ ನಂಬಿಸಿ, ನಿಮ್ಮ ಮೊಬೈಲ್ ನಂಬರ್ ನಿಂದ ಕಾನೂನು ಬಾಹಿರ ಜಾಹೀರಾತು ಹಾಗೂ ಅಶ್ಲೀಲ ಸಂದೇಶ ಬಂದಿದ್ದು, ಅದರಂತೆ ನಿಮ್ಮ ಮೇಲೆ ಒಟ್ಟು 17 ಎಫ್.ಐ.ಆರ್ ಆಗಿರುವುದಾಗಿ ತಿಳಿಸಿದ್ದಾರೆ. ಇನ್ನು 2 ಗಂಟೆಯ ಒಳಗೆ ನಿಮ್ಮ ಹೆಸರಿನಲ್ಲಿರುವ ಎಲ್ಲಾ ಕಾಂಟಾಕ್ಟ್ ನಂಬರ್ ಡಿಸ್ಕನೆಕ್ಟ್ ಮಾಡಲಾಗುವುದು ಮತ್ತು ನಿಮ್ಮ ಮೇಲೆ ಆರೆಸ್ಟ್ ವಾರಂಟ್ ಆಗಿದೆ ಎಂದು ಬೆದರಿಸಿದ್ದಾರೆ. ನಂತರ ಪೊಲೀಸ್‌ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್‌ ಅಧಿಕಾರಿ ಎಂದು ಹೇಳಿ ವಾಟ್ಸಪ್ ವಿಡಿಯೋ ಕರೆ ಮಾಡಿದ್ದು, ಪ್ರಕರಣ ದಾಖಲಾಗಿರುವ ಬಗ್ಗೆ ತಿಳಿಸಿ ಬ್ಯಾಂಕ್ ಖಾತೆ ಹಾಗೂ ಅದರಲ್ಲಿನ ಹಣದ ವಿವರವನ್ನು ಪಡೆದಿದ್ದಾನೆ. ಖಾತೆಯಲ್ಲಿರುವ ಹಣವನ್ನು ತಾನು ಸೂಚಿಸಿದ ಖಾತೆಗೆ…

Read More

ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಾನವ ಸರಪಳಿ ನಿರ್ಮಾಣವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಹೆಜಮಾಡಿ ಟೋಲ್ ಗೇಟ್‌ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೆಪಿಟಿ ಸರ್ಕ್ಯೂಟ್ ಹೌಸ್ ಜಂಕ್ಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗ್ಗೆ 9.30ಕ್ಕೆ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಲಾವಿದ್ಯಾರ್ಥಿಗಳನ್ನು ಒಳಗೊಂಡ ಬೃಹತ್ ಮಾನವ ಸರಪಳಿ ರಚಿಸಲಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿದರು. ಆ ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಸಂವಿಧಾನ ಪ್ರಸ್ತಾವನೆಯನ್ನು ಓದಿದರು. ಅದನ್ನು ಎಲ್ಲರೂ ಪುನರುಚ್ಚರಿಸಿದರು. ಬೆಳಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿ ಎಲ್ಲರೂ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಿದರು. ಈ ವೇಳೆ ವಿವಿಧ ಕಲಾ ಪ್ರಕಾರಗಳಿಂದ ಪ್ರದರ್ಶನ ನಡೆಯಿತು.…

Read More

ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಅವರು ಈ ರೀತಿ ಹೇಳಿದ್ದಾರೆ.ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ತಿಳಿಸಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಮೊದಲ ಭಾಷಣದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೂಪಿಸಿರುವ ಷಡ್ಯಂತ್ರಗಳಿಂದ ಅವರ ‘ಬಂಡೆಯಂತಹ ಸಂಕಲ್ಪ’ ಮುರಿಯಲು ಸಾಧ್ಯವಿಲ್ಲ ಮತ್ತು ದೇಶಕ್ಕಾಗಿ ಹೋರಾಟ ಮುಂದುವರಿಸುವುದಾಗಿ ಹೇಳಿದರು. ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ನ್ಯಾಯಾಲಯವು ನಮ್ಮ ಪರವಾಗಿ ಎಲ್ಲವನ್ನೂ ಮಾಡಿದೆ. ನಾವು ನ್ಯಾಯಾಲಯಕ್ಕೆ ತುಂಬಾ ಕೃತಜ್ಞರಾಗಿರುತ್ತೇವೆ. ನ್ಯಾಯಾಲಯ ನನಗೆ ಜಾಮೀನು ನೀಡಿದೆ, ಈಗ ಪ್ರಕರಣ ಮುಂದುವರಿಯಲಿದೆ. ನಾನು ವಕೀಲರನ್ನು ಕೇಳಿದೆ, ನ್ಯಾಯಾಲಯದಿಂದ ನಾನು ಖುಲಾಸೆಯಾಗುವವರೆಗೂ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಮನಸ್ಸು ಮಾಡಿದ್ದೇನೆ. ಎಂದು ಅವರು…

Read More

ಕಾಸರಗೋಡು: ರೈಲು ಹಳಿಯನ್ನು ದಾಟುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರಿನ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಕಾಞಂಗಾಂಡ್‌ನಲ್ಲಿ‌ ನಡೆದಿದೆ. ಕೋಟ್ಟಯಂ ಚಿಙವನಂ ನಿವಾಸಿಗಳಾದ ಆಲೀಸ್ ಥೋಮಸ್ (63), ಚಿನ್ನಮ್ಮ (68) ಮತ್ತು ಏಂಜೆಲ್ (30) ರೈಲು ಬಡಿದು ಮೃತಪಟ್ಟ ಮಹಿಳೆಯರು. ಇವರು ಕಾಞಂಗಾಡ್‌ನ ಕಳ್ಳಾರ್‌ನಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿವಾಹ ಕಾರ್ಯಕ್ರಮದ ಬಳಿಕ ತಮ್ಮ ಊರು ಕೋಟಯಂಗೆ ಹಿಂದಿರುಗಲು ಕಾಞಂಗಾಡ್ ರೈಲು ನಿಲ್ದಾಣಕ್ಕೆ ತೆರಳಲು ರೈಲು ಹಳಿ ದಾಟಿ ಬರುತ್ತಿದ್ದ ವೇಳೆ ಕಣ್ಣೂರಿನಿಂದ ಮಂಗಳೂರು ಮಾರ್ಗವಾಗಿ ಬರುತ್ತಿದ್ದ ರೈಲು ಢಿಕ್ಕಿ ಹೊಡೆದು ಈ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಉಡುಪಿ : ಭ್ರಷ್ಟಾಚಾರ ಮತ್ತು ಕರ್ತವ್ಯಲೋಪದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬ್ಬಂದಿಯನ್ನು ಅಮಾನತುಮಾಡಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪೊಲೀಸರು ಅಮಾನತುಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಎಸಗಿದವರಿಗೆ ಅಮಾನತು ಹಾಗೂ ವರ್ಗಾವಣೆ ಮಾಡಲಾಗಿದೆ.ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದೆ. ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ ಎಸ್‌ಐಗಳನ್ನ ಅಮಾನತು ಮಾಡಲಾಗಿದೆ.ಇದು ಹಂತಹಂತವಾಗಿ ನಡೆಯುವ ಪ್ರಕ್ರಿಯೆ. ಕರ್ತವ್ಯ ಲೋಪವೆಸಗಿದ ಕೆಲವರನ್ನು ಅಮಾನತು ಮಾಡಲಾಗಿದೆ. ಇಲಾಖೆಯನ್ನು ಬಲಪಡಿಸಲು ಮತ್ತು ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಗೆ…

Read More

ಕಾಸರಗೋಡು: ಕೊಚ್ಚಿ ನಿವಾಸಿ ಸುಭದ್ರಾ (73) ಅವರನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ದಂಪತಿಯನ್ನು ಕರ್ನಾಟಕದ ಮಣಿಪಾಲದಿಂದ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಟೂರು ಪಳ್ಳಿಪರಂಬಿಲ್‌ನ ಮ್ಯಾಥ್ಯೂಸ್‌ ಯಾನೆ ನಿತಿನ್‌(35) ಮತ್ತು ಪತ್ನಿ ಕರ್ನಾಟಕದ ಉಡುಪಿ ನಿವಾಸಿ ಶರ್ಮಿಳಾ(36)ನನ್ನು ಮಣ್ಣಾಂ ಚೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉಡುಪಿಯಲ್ಲಿದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಅವರ ಮೊಬೈಲ್‌ ಲೊಕೇಶನ್‌ ಕೇಂದ್ರೀಕರಿಸಿ ಪೊಲೀಸರು ಅವರ ಬೆನ್ನು ಬಿದ್ದಿದ್ದರು. ಸೆ.12ರಂದು ಬೆಳಗ್ಗೆ ಮಂಗಳೂರಿನಲ್ಲಿ ಶರ್ಮಿಳಾ ಫೋನ್‌ ಆನ್‌ ಆಗಿತ್ತು. ಕೂಡಲೇ ಪೊಲೀಸರು ಉಡುಪಿ ಹಾಗೂ ಮಂಗಳೂರು ಮೊದಲಾದೆಡೆ ಕೆಲವರನ್ನು ಸಂಪರ್ಕಿಸಿ ಆರೋಪಿಗಳ ಮೇಲೆ ನಿಗಾ ಇರಿಸುವಂತೆ ಸೂಚನೆ ನೀಡಿದ್ದರು. ಮಧ್ಯಾಹ್ನ ಶರ್ಮಿಳಾ ಫೋನ್‌ ಮಣಿಪಾಲದಲ್ಲಿ ಕಾರ್ಯಾಚರಿಸಿದೆ. ಆಕೆ ಈ ಹಿಂದೆ ವಾಸಿಸಿದ್ದ ಪೆರಂಪಳ್ಳಿಯ ಮಹಿಳೆಯೊಬ್ಬರ ಮನೆಗೆ ಬಂದಿದ್ದನ್ನು ಪೊಲೀಸರು ತಿಳಿದುಕೊಂಡು ಅಲ್ಲಿಂದ ಅವರನ್ನು ಬಂಧಿಸಲಾಯಿತು. ಆರೋಪಿಗಳ ಶೋಧ ಕಾರ್ಯಕ್ಕೆ ಮಣಿಪಾಲ ಪೊಲೀಸರು ಸಹಕರಿಸಿದ್ದರು ಎಂದು ಮಾಹಿತಿ ತಿಳಿಯಲಾಗಿದೆ.

Read More

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಬಳಿ ತಡೆರಹಿತ ಬಸ್ ಡಿಕ್ಕಿಯಾಗಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ (40)ಎಂದು ಗುರುತಿಸಲಾಗಿದೆ. ಮೃತ ಭೀಮಪ್ಪ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಉಡುಪಿ ಕಡೆ ನಮ್ಮ ಮಂಗಳೂರು ಕಡೆಗೆ ಹೋಗುತ್ತಿದ್ದ ತಡೆರಹಿತ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಭೀಮಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Read More