ಪಡುಬಿದ್ರೆ : ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ, ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಸಾಲಗಾರರು ನಿರಂತರವಾಗಿ ಮನೆಗೆ ಬರುತ್ತಿರುವುದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟು ನೋವುಂಟು ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು. ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು…
ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಗಾಂಜಾ ಸಹಿತ ಓರ್ವ ನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಬಂಧಿತ ಆರೋಪಿ.ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುನಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಯಿತು.ಗಾಂಜಾವನ್ನು ಪ್ಲಾಸ್ಟಿಕ್ ಕವರ್ ಗಳಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್‌ನಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿ ಅರ್ಜಿ ವಜಾ ಮಾಡಿದೆ. ಡಿ.19ರಂದು ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ 4,00,000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದನು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಜ.8ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಅದರಂತೆ ಬುಧವಾರ ಈ ದಿನ ದಿನಾಂಕ 08.01.2025 ರಂದು ನ್ಯಾಯಾಧೀಶೆ ಸಂಧ್ಯಾ ಎಸ್ ಅವರು ವಿಚಾರಣೆ ನಡೆಸಿ, ಆರೋಪಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿರವರು ವಾದಿಸಿರುತ್ತಾರೆ. ಆರೋಪಿ ಅಧಿಕಾರಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ ಎಂಬುದಾಗಿ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ನಟರಾಜ ಎಂ.ಎ. ತಿಳಿಸಿದ್ದಾರೆ.
ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ಬೀದರ್ ಜಿಲ್ಲೆಯ ಪರಮೇಶ್ವರ್, ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ಎಂಬವರು ಈಜಾಡಲು ನೀರಿಗೆ ಇಳಿದಿದ್ದಾರೆ. ಆ ಸಂದರ್ಭದಲ್ಲಿ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಪರಮೇಶ್ವರ್ ಅಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ಅವರ ಮೃತದೇಹ ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿದೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್‌ವೊಂದರಲ್ಲಿ ಬೆಳಗ್ಗಿನ…
ಮಲ್ಪೆ: ದುರಸ್ತಿಗೆಂದು ಹೋಗಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ಬೋಟಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಅಪಾರ ನಷ್ಟ ಉಂಟಾದ ಘಟನೆ ಸಂಭವಿಸಿದೆ. ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು ಹರೀಶ್ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡು ಹೋಗುತ್ತಿದ್ದರು. ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್ ಮೈಲು ದೂರದಲ್ಲಿ ಚಲಿಸುತ್ತಿರುವಾಗ ರಾತ್ರಿ 7.30ರ ವೇಳೆಗೆ ದೊಡ್ಡದಾದ ಮರದ ದಿಮ್ಮಿ ಬಂದು ಬೋಟಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಬೋಟಿನ ಮುಂಭಾಗದ ತಳಬದಿಯಲ್ಲಿ ಹಾನಿಯಾಗಿ ನೀರು ಒಳ ಬರಲು ಪ್ರಾರಂಭಿಸಿತ್ತು. ನೀರಿನ ಒಳ ಹರಿವು ಜಾಸ್ತಿಯಾಗಿ ಬೋಟು ಮುಳುಗುವ ಸಂಭವ ಇರುವುದನ್ನು ಗಮನಿಸಿದ ಬೋಟಿನ ತಾಂಡೇಲ ರವಿ ಸಾಲ್ಯಾನ್ ಬೇರೆ ಬೋಟ್ ಗೆ ಮಾಹಿತಿ ನೀಡಿದರು. ಜಲರಾಣಿ ಬೋಟಿನವರು ಮುಳುಗಡೆಗೊಳ್ಳುತ್ತಿದ್ದ ಬೋಟಿನಲ್ಲಿದ್ದ ರವಿ ಸಾಲ್ಯಾನ್ ಮತ್ತು ಹರೀಶ್ ಅವರನ್ನು ರಕ್ಷಣೆ ಮಾಡಿ ಬೋಟನ್ನು ತಮ್ಮ ಬೋಟಿಗೆ ಹಗ್ಗ…
ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್‌ನೊಬ್ಬ ವೈಯಕ್ತಿಕ ಖಾತೆಯ ಕ್ಯು ಆರ್ ಕೋಡ್‌ನ್ನು ಹಾಕಿ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ನೀಡಲಾಗಿದೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್‌ಲೆಟ್ ಪ್ರೈಯೆಲ್ ಬಂಕ್ ನಲ್ಲಿ ಸೂಪರ್‌ವೈಸರ್ ಆಗಿ ದ್ದ ಮೋಹನದಾಸ್ ಎಂಬಾತ ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ ಜವಾಬ್ದಾರಿ ನೋಡಿಕೊಂಡಿದ್ದನು ಈತ 2023ರ ಮಾ.1ರಿಂದ ಜು.31ರವರೆಗೆ ಪೆಟ್ರೋಲ್ ಬಂಕ್‌ನಲ್ಲಿ ಸಂಸ್ಥೆಯ ಕ್ಯುಆರ್ ಕೋಡ್ ತೆಗೆದು ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್‌ನ್ನು ಅಳವಡಿಸಿ ಆ ಮೂಲಕ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ ಫ್ಯುಯೆಲ್ ಬಂಕ್‌ನ ಮ್ಯಾನೇಜರ್ ನಗರದ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ರಾಜ್ಯದ ವಿವಿಧೆಡೆ 8 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿದೆ. ಅಸಮತೋಲಿತ ಆಸ್ತಿ ಸಂಗ್ರಹದ ಆರೋಪದಡಿ ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಲೋಕಾಯುಕ್ತ ದಾಳಿಗೊಳಗಾದ ಅಧಿಕಾರಿಗಳ ವಿವರ ಶೋಭಾ – ಜಂಟಿ ಆಯುಕ್ತೆ, ಸಾರಿಗೆ ಇಲಾಖೆ, ಬೆಂಗಳೂರು ಡಾ.ಎಸ್.ಎನ್ ಉಮೇಶ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ – ಕಡೂರು ತಾಲ್ಲೂಕು, ಚಿಕ್ಕಮಗಳೂರು ರವೀಂದ್ರ – ಇನ್ಸ್‌ಪೆಕ್ಟರ್, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಬಸವ ಕಲ್ಯಾಣ, ಬೀದರ್ ಪ್ರಕಾಶ್ ಶ್ರೀಧರ್ ಗಾಯಕ್ವಾಡ್ – ತಹಶಿಲ್ದಾರ್, ಖಾನಾಪುರ, ಬೆಳಗಾವಿ ಎಸ್.ರಾಜು – ಪ್ರಾದೇಶಿಕ ಸಾರಿಗೆ ಅಧಿಕಾರಿ (ನಿವೃತ್ತ), ಪ್ರಾದೇಶಿಕ ಸಾರಿಗೆ ಇಲಾಖೆ, ತುಮಕೂರು ಹುಚ್ಚೇಶ್ – ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಇನ್ ಚಾರ್ಜ್), ಗದಗ – ಬೆಟಗೇರಿ ಪುರಸಭೆ, ಗದಗ ಆರ್.ಎಚ್.ಲೋಕೇಶ್ – ಕಲ್ಯಾಣಾಧಿಕಾರಿ, ಹಿಂದುಳಿದ…
ಕಾಸರಗೋಡು: :ಮದುವೆ ಗೆಂದು ಲಿಫ್ಟ್‌ನಲ್ಲಿ ಸಭಾಂಗಣಕ್ಕೇರುತ್ತಿದ್ದ ವೇಳೆ ಲಿಫ್ಟ್ ದಿಢೀರ್ ಕೈಕೊಟ್ಟು ವಧೂ-ವರರ ಸಹಿತ 18 ಮಂದಿಯಿದ್ದ ವಿವಾಹ ತಂಡ ಎರಡು ಗಂಟೆಗಳ ತನಕ ಲಿಫ್ಟ್‌ನಲ್ಲೇ ಸಿಲುಕಿಕೊಂಡ ಘಟನೆ ತೃಕ್ಕರಿ ಪುರ ವಡಕ್ಕೇ ಕೊವ್ವಲ್‌ನಲ್ಲಿ ನಡೆದಿದೆ. ಪಳಯಂಗಾಡಿ ನಿವಾಸಿಯಾದ ವರ ಹಾಗೂ ಹೊಸದುರ್ಗ ನಿವಾಸಿಯಾದ ವಧು ಮತ್ತು ಅವರ ಕುಟುಂಬದವರು 1ನೇ ಮಹಡಿಯಲ್ಲಿರುವ ಸಭಾಂಗಣಕ್ಕೆ ಹೋಗಲು ಲಿಫ್ಟ್ ಗೇರಿದ್ದರು. ಲಿಫ್ಟ್ ಮೇಲೇರುತ್ತಿದ್ದಂತೆ ಭಾರೀ ಸದ್ದಿನೊಂದಿ ಗೆ ಅರ್ಧದಲ್ಲೇ ನಿಂತಿತ್ತು. ಅಗ್ನಿಶಾಮಕದಳದ ಎರಡು ಗಂಟೆಗಳ ಪ್ರಯತ್ನದಿಂದ ಲಿಫ್ಟ್‌ನ ಬಾಗಿಲು ತೆರೆದು ಅದರಲ್ಲಿ ಸಿಲುಕಿಕೊಂಡಿದ್ದವರನ್ನು ಏಣಿಯ ಮೂಲಕ ರಕ್ಷಿಸಲಾಯಿತು. ನಿಗದಿತ ಸಂಖ್ಯೆಗಿಂತ ಅಧಿಕ ಮಂದಿ ಲಿಫ್ಟ್ ಏರಿದ್ದು, ಲಿಫ್ಟ್ ನಿಲುಗಡೆಗೆ ಕಾರಣವೆನ್ನಲಾಗಿದೆ.
ಮಂಗಳೂರು: ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಜಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ. 10ರಂದು ಘಟನೆ ನಡೆದಿತ್ತು. ಆರೋಪಿ ಗಗನ್ (24) ಮನೆಯೊಂದರ ಕಾಂಪೌಂಡ್ ಗೋಡೆಯೇರಿ ಎಕ್ಸಾಸ್ಟ್ ಫ್ಯಾನ್ ಹಾಕಲೆಂದು ಬಿಟ್ಟಿದ್ದ ಕಿಟಕಿಯಲ್ಲಿ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ್ದ. ಪ್ರಕರಣ ನಡೆದು 9 ತಿಂಗಳಲ್ಲಿ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಆರೋಪಿಗೆ 1 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದಲ್ಲಿ 10 ಸಾವಿರ ರೂ.ಗಳನ್ನು ಅಲ್ಲದೆ ಪ್ರತ್ಯೇಕವಾಗಿ 1 ಲ.ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು. ಆರೋಪಿ ಚಿತ್ರೀಕರಿಸಿದ್ದ ದೃಶ್ಯಗಳನ್ನು ಡಿಲೀಟ್ ಮಾಡಿದ್ದರೂ, ಸಾಕ್ಷಿಗಳ ಹೇಳಿಕೆಯ ಆಧಾರದಲ್ಲಿ…







