Author: main-admin

ಬೆಂಗಳೂರು: ನಿನ್ನೆ ಟೌನ್ ಹಾಲ್‌ನಲ್ಲಿ ನಾಗಮಂಗಲ ಘಟನೆ ಸಂಬಂಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಅಲ್ಲಿಗೆ ತಂದಿದ್ದ ಗಣೇಶ ಮೂರ್ತಿಯನ್ನು ಪ್ರತಿಭಟನಾಕಾರರ ಜೊತೆ ಪೊಲೀಸ್ ವಾಹನದಲ್ಲಿ ಕೊಂಡೊಯ್ದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ ಕಾರಿದ್ದಾರೆ. ಇದು ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ X ಖಾತೆಯಲ್ಲಿ ಇದರ ಬಗ್ಗೆ ಟೀಕಿಸಿರುವ ವಿಜಯೇಂದ್ರ, ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ ಎಂದು ಕಿಡಿಕಾರಿದ್ದಾರೆ. ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ…

Read More

ಮಂಗಳೂರು: ಐದು ವರ್ಷಗಳ ಹಿಂದೆ ನಗರದಲ್ಲಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29ತುಂಡುಗಳನ್ನಾಗಿ ಬೇರ್ಪಡಿಸಿ ಬೇರೆಬೇರೆ ಕಡೆಗಳಲ್ಲಿ ಎಸೆದ ಪ್ರಕರಣದಲ್ಲಿ ಮೂವರ ಮೇಲಿನ ಆರೋಪ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ‌‌. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಲಾಗಿದೆ. ನಗರದ ವೆಲೆನ್ಸಿಯಾ ಸಮೀಪದ ಸೂಟರ್‌ಪೇಟೆಯ ಜೋನಸ್ ಸ್ಯಾಟ್ಸನ್(40), ವಿಕ್ಟೋರಿಯಾ ಮಥಾಯಿಸ್ (47) ಹಾಗೂ ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ಶಿಕ್ಷೆಗೊಳಗಾದ ಆರೋಪಿಗಳು. ಈ ಪೈಕಿ ಜೋನಸ್ ಮತ್ತು ವಿಕ್ಟೋರಿಯಾ ಜೈಲಿನಲ್ಲೇ ಶಿಕ್ಷೆ ಅನುಭವಿಸುತ್ತಿದ್ದಾರೆ. ರಾಜು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಆತನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ(42) ಶ್ರೀ ಪೊಳಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ಇಟ್ಟುಕೊಂಡಿದ್ದರು. ಜೊತೆಗೆ ಕುರಿ ಚಿಟ್‌ಫಂಡ್ ವ್ಯವಹಾರ ನಡೆಸುತ್ತಿದ್ದರು. ಈ ಕುರಿಫಂಡ್‌ನಲ್ಲಿ ಜೋನಸ್ 2ಸದಸ್ಯತ್ವ ಹೊಂದಿದ್ದ. ಆದರೆ ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಮಾಸಿಕ ಕಂತುಗಳ ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.‌ 2019ರ ಮೇ 11ರಂದು ಬೆಳಗ್ಗೆ…

Read More

ಉಡುಪಿ: ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ , ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ . ಕೆ ಆದೇಶ ಮಾಡಿದ್ದಾರೆ.ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು, ಅಮಾನತು ಆದೇಶ ಮಾಡಿದ್ದಾರೆ. ಉಡುಪಿಗೆ ಡಾ. ಅರುಣ್ ಅವರು, ವರಿಷ್ಠಾಧಿಕಾರಿಯಾದ ನಂತರ ಇಲಾಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸತತ ಅಮಾನತು ಮಾಡಲಾಗುತ್ತಿದೆ. ಈಗಾಗಲೇ 4 ಮಂದಿ ಎಸ್‌ಐಗಳು ಸಹಿತ 80 ಕ್ಕೂ ಅಧಿಕ ಸಿಬಂದಿಗಳು ಅಮಾನತುಗೊಂಡಿದ್ದಾರೆ. ಜಿಲ್ಲೆೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳಾದ ಗುರುನಾಥ ಹಾದಿಮನೆ, ಶಂಭುಲಿಂಗ, ಅಶೋಕ್ , ಸುಷ್ಮಾ ಅಮಾನತು ಮಾಡಲಾಗಿದ್ದು, ಈ ಪೈಕೆ ಕೆಲವು ಮಂದಿಯ ಅಮಾನತು ಆದೇಶ ಮುಕ್ತಾಯಗೊಂಡಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಪೊಲೀಸ್ ಕರ್ತವ್ಯ ಹೊರತುಪಡಿಸಿ ಇತರ ಕರ್ತವ್ಯ ನಡೆಸಿ ಇಲಾಖಾ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕೆಲವರ ಮೇಲೆ ಈಗಾಗಲೇ ಶಿಸ್ತು ಕ್ರಮ…

Read More

ಉಡುಪಿ: ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ , ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ . ಕೆ ಆದೇಶ ಮಾಡಿದ್ದಾರೆ.ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು, ಅಮಾನತು ಆದೇಶ ಮಾಡಿದ್ದಾರೆ. ಉಡುಪಿಗೆ ಡಾ. ಅರುಣ್ ಅವರು, ವರಿಷ್ಠಾಧಿಕಾರಿಯಾದ ನಂತರ ಇಲಾಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸತತ ಅಮಾನತು ಮಾಡಲಾಗುತ್ತಿದೆ. ಈಗಾಗಲೇ 4 ಮಂದಿ ಎಸ್‌ಐಗಳು ಸಹಿತ 80 ಕ್ಕೂ ಅಧಿಕ ಸಿಬಂದಿಗಳು ಅಮಾನತುಗೊಂಡಿದ್ದಾರೆ. ಜಿಲ್ಲೆೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳಾದ ಗುರುನಾಥ ಹಾದಿಮನೆ, ಶಂಭುಲಿಂಗ, ಅಶೋಕ್ , ಸುಷ್ಮಾ ಅಮಾನತು ಮಾಡಲಾಗಿದ್ದು, ಈ ಪೈಕೆ ಕೆಲವು ಮಂದಿಯ ಅಮಾನತು ಆದೇಶ ಮುಕ್ತಾಯಗೊಂಡಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಪೊಲೀಸ್ ಕರ್ತವ್ಯ ಹೊರತುಪಡಿಸಿ ಇತರ ಕರ್ತವ್ಯ ನಡೆಸಿ ಇಲಾಖಾ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕೆಲವರ ಮೇಲೆ ಈಗಾಗಲೇ ಶಿಸ್ತು ಕ್ರಮ…

Read More

ಮಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಶ್ವ ಹಿಂದೂ ಪರಿಷದ್ ಧರಣಿ ಕೈಗೊಂಡಿದೆ. ಈ ವೇಳೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ಕೊಡಬಾರದು. ಅನುಮತಿ ಕೊಟ್ಟರೆ ಮತ್ತೆ ಇವರು ಗಲಭೆ ಮಾಡುತ್ತಾರೆ. ಇದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಹೊಣೆ ಆಗುತ್ತದೆ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಈದ್ ಮೆರವಣಿಗೆ ಮೇಲೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ. ಆದ್ದರಿಂದ ನಿನ್ನೆಯ ದಾಳಿಕೋರರಿಗೆ ಎಚ್ವರಿಕೆ ಸಂದೇಶ ಕೊಡುತ್ತಿದ್ದೇವೆ. ಸರ್ಕಾರ ಈದ್ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಈದ್ ನೆಪದಲ್ಲಿ ಕೂಡ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ನಿನ್ನೆಯ ಮಂಡ್ಯ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಕೈವಾಡ ಇದೆ‌. ನಮ್ಮ ಮೆರವಣಿಗೆಗೆ ರಾಜ್ಯ ಸರ್ಕಾರ…

Read More

ಮಂಗಳೂರು: ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ (24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಿವಾಸಿ ದಿಲ್ ದಾರ್ ಆಲಿ(28) ಬಂಧಿತ ಆರೋಪಿಗಳು. ಆರೋಪಿಗಳು ಒರಿಸ್ಸದಲ್ಲಿ ಗಾಂಜಾ ಖರೀದಿಸಿ ಮಂಗಳೂರಿಗೆ ಸಾಗಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಖಚಿತ ಮಾಹಿತಿ ಪಡೆದಿದ್ದಾರೆ. ಇವರು ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರುತ್ತಿದ್ದ ಸಂದರ್ಭ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 2,60,000 ರೂ. ಮೌಲ್ಯದ 8.650 ಕೆಜಿ ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 3 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಉಪ್ಪಿನಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಸಂಭವಿಸಿದೆ. ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಮಾಬೇನ್ ಮೃತ ದುರ್ದೈವಿಗಳಾಗಿದ್ದಾರೆ. ಜೇಮ್ಸ್‌ ಜತ್ತನ್ನ ಪೂರ್ವಜರ ಮನೆ ಇದಾಗಿದ್ದು, ಪಾಲಿನಲ್ಲಿ ಅವರಿಗೆ ಈ ಮನೆ ಸಿಕ್ಕಿತ್ತು. ಮನೆಗೆ ತಾಗಿಕೊಂಡಂತೆ ಅಡ್ವಿನ್‌ ಅವರ ಮನೆ ಇದೆ. ಜೇಮ್ಸ್‌ ಅವರು ತನ್ನ ಹಳೆ ಮನೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮನೆ ಕಟ್ಟಲು ಉದ್ದೇಶಿಸಿದ್ದು, ಅದರಂತೆ ಜೆಸಿಬಿ ಮೂಲಕ ಮನೆ ಕೆಡಹುವ ಕಾರ್ಯ ಬುಧವಾರ ಆರಂಭವಾಗಿತ್ತು.ಗುರುವಾರ ಬೆಳಗ್ಗೆ ಮತ್ತೆ ಕೆಲಸ ಆರಂಭವಾಗಿದ್ದು, ಈ ವೇಳೆ ಜೇಮ್ಸ್‌ ಸ್ಥಳದಲ್ಲೇ ಇದ್ದು ಉಸ್ತುವಾರಿ ನೋಡಿಕೊಂಡಿದ್ದರು. ಈ ಮನೆಗೆ ತಾಗಿಕೊಂಡೇ ಅಡ್ವಿನ್‌ ಮನೆ ಇರುವುದರಿಂದ ಕೆಡಹುವ ಸಮಯದಲ್ಲಿ ಅಡ್ವಿನ್‌, ತಮ್ಮ ಮನೆಗೆ ಹಾನಿಯಾಗಿದೆಯೇ ಎಂಬುದನ್ನು ನೋಡಲು ಜೇಮ್ಸ್‌ ಮನೆ ಕಂಪೌಂಡಿಗೆ ಬಂದಿದ್ದರು. ಈ ಸಂದರ್ಭ ಜೇಮ್ಸ್‌ ಅವರು ಪಕ್ಕದ ಇನ್ನೊಂದು ಮನೆಯ ಜಗುಲಿಯಲ್ಲಿದ್ದು, ಅಡ್ವಿನ್‌…

Read More

ಪುತ್ತೂರು: ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ ಅಂಗಡಿಯಲ್ಲಿದ್ದ ವ್ಯಕ್ತಿ ಹಾಗೂ ಇನ್ನೊಬ್ಬರು ಗಾಯಗೊಂಡವರು ಅವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಣೇಶ ಉತ್ಸವದ ಪ್ರಯುಕ್ತ ತಾತ್ಕಲಿಕ ನೆಲೆಯಲ್ಲಿ ತೆರೆದಿದ್ದ ಅಂಗಡಿಗೆ ಕಾರು ಢಿಕ್ಕಿ ಹೊಡೆದಿದ್ದು, ಅಂಗಂಡಿ ಜಖಂ ಆಗಿದೆ. ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮೂಲದ ವೆಂಕಟರಮಣ ಭಟ್ ಎಂಬವರಿಗೆ ಸೇರಿದ ಕೇರಳ ನೋಂದಣಿ ಹೊಂದಿದ್ದ ಕಾರು ಅಪಘಾತಕ್ಕಿಡಾದ ವಾಹನ. ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

Read More

ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಳವುಗೈದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಚಿನ್ನಾಭರಣ ಮಳಿಗೆಯೊಂದರಲ್ಲಿ ಸುಮಾರು ಹದಿನೆಂಟು ಗ್ರಾಂ ಕರಿಮಣಿ ಸರವನ್ನು ಎಗರಿಸಿದ್ದ ವ್ಯಕ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಪರಾರಿಯಾಗುತ್ತಿದ್ದ ವೇಳೆ ಕಳ್ಳ ಸಾರ್ವಜನಿಕರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಬಳಿಕ ಸಾರ್ವಜನಿಕರು ಕಳ್ಳನನ್ನು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Read More