ಮಂಗಳೂರು : ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್ ಎಂದು ಗುರುತಿಸಲಾಗಿದೆ. ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆಂದು ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್ ಎಂಬವರು ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ ಮೇಲಿಟ್ಟು ಶೂಟ್ ಮಾಡಿಕೊಂಡಿದ್ದಾರೆ. ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಪಡೀಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Author: main-admin
ಮಂಗಳೂರು: ನಗರದ ಜೈಲಿನೊಳಗಡೆ ಮೊಬೈಲ್ ಹಾಗೂ ಸಿಗರೆಟ್ ಎಸೆಯಲು ಯತ್ನಿಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಪ್ರಜ್ವಲ್(21) ಎಂಬಾತ ಬಂಧಿತ ಆರೋಪಿ. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿ ಪ್ರಜ್ವಲ್ ಜೈಲು ಸಮೀಪದ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ್ದಾನೆ. ಅಲ್ಲಿಂದ ಕಾರಾಗೃಹದೊಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ. ಇದನ್ನು ಗಮನಿಸಿದ ಗಸ್ತು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎ- ಸಿಬ್ಬಂದಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಪೊಟ್ಟಣದೊಳಗೆ ಎರಡು ಕೀ ಪ್ಯಾಡ್ ಮೊಬೈಲ್ ಮತ್ತು ಎರಡು ಪ್ಯಾಕೆಟ್ ಸಿಗರೇಟ್ ಇತ್ತು. ಪ್ರಜ್ವಲ್ ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟು ಕಾರಾಗೃಹದಲ್ಲಿದ್ದ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ…
ನವದೆಹಲಿ : HMPV (ಹ್ಯೂಮನ್ ಮೆಟಾಪ್ನ್ಯೂಮೋವೈರಸ್) ಭಾರತಕ್ಕೆ ಬಂದಿದೆ ಮತ್ತು ಅದರ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಹೆಚ್‌ಎಂಪಿವಿ ವೈರಸ್‌ನ ಇಬ್ಬರು ಶಂಕಿತ ರೋಗಿಗಳು ಪತ್ತೆಯಾಗಿದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ 2, ಗುಜರಾತ್‌ನಲ್ಲಿ 1 ಮತ್ತು ತಮಿಳುನಾಡಿನಲ್ಲಿ ಎರಡು ಪ್ರಕರಣಗಳು ವರದಿಯಾಗಿದ್ದವು. ನಾಗ್ಪುರದಲ್ಲಿ 13 ವರ್ಷದ ಬಾಲಕಿ ಮತ್ತು 7 ವರ್ಷದ ಬಾಲಕನಲ್ಲಿ ವೈರಸ್ ಲಕ್ಷಣಗಳು ಕಂಡುಬಂದಿವೆ. ನಿರಂತರ ಶೀತ, ಕೆಮ್ಮು ಮತ್ತು ಜ್ವರದ ನಂತರ, ಕುಟುಂಬವನ್ನು ಖಾಸಗಿ ಲ್ಯಾಬ್‌ನಲ್ಲಿ ಪರೀಕ್ಷಿಸಲಾಯಿತು ಮತ್ತು ವರದಿ ಪಾಸಿಟಿವ್ ಬಂದಿತು, ನಂತರ ಕುಟುಂಬ ಸದಸ್ಯರು ಭಯಗೊಂಡರು. ಈ ಎರಡೂ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಿಲ್ಲವಾದರೂ ಮನೆಯಲ್ಲಿ ಚಿಕಿತ್ಸೆ ನೀಡಿದ್ದರಿಂದ ಅವರ ಸ್ಥಿತಿ ನಿಯಂತ್ರಣದಲ್ಲಿದೆ. ಈ ವೈರಸ್ ಮಕ್ಕಳನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ, ಮಕ್ಕಳ ಆರೈಕೆಯು ಬಹಳ ಮುಖ್ಯವಾಗಿದೆ. ಮಕ್ಕಳ ಬಗ್ಗೆ ಕಾಳಜಿ ವಹಿಸಲು ಈ ವಿಷಯಗಳನ್ನು ನೆನಪಿನಲ್ಲಿಡಿ. ನಿಯಮಿತವಾಗಿ ಕೈಗಳನ್ನು ಸ್ವಚ್ಛಗೊಳಿಸಲು ಮಕ್ಕಳಿಗೆ ಸಲಹೆ ನೀಡಿನಿಮ್ಮ ಮಗುವನ್ನು ಸೋಂಕಿನಿಂದ ರಕ್ಷಿಸಲು ಸೂಕ್ತ ಕ್ರಮಗಳನ್ನು…
ಬೆಂಗಳೂರು : ಪೊಲೀಸ್ ಇಲಾಖೆಗೆ ನಕಲಿ ದಾಖಲೆ ಪ್ರಮಾಣ ಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಪಿಎಸ್ಐ ಕಾಶಿಲಿಂಗೇಗೌಡ ಸಸ್ಪೆಂಡ್ ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ PSI ಕಾಶಿಲಿಂಗೇಗೌಡನ ವಿರುದ್ಧ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪಿಎಸ್ಐ ಜಾಮೀನು ಪಡೆದುಕೊಂಡಿದ್ದ ನಂತರ ಪೊಲೀಸ್ ಠಾಣೆಗೆ ಪಿಎಸ್ಐ ಕರ್ತವ್ಯಕ್ಕೆ ಹಾಜರಾಗಿದ್ದ, ಇದೀಗ ಪಿಎಸ್ಐ ಅಮಾನತು ಮಾಡಿ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೂಪ್ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನು ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ…
ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕೃತ್ಯದ ರೂವಾರಿಗಳಾದ ರವೀಶ, ರಘುನಂದನ ಎಂ.ಡಿ., ಅಮೀನಾ ಬೇಗಂ, ಡಯನಾ ಲೂವಿಸ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 20 ಕ್ಕೇರಿದೆ. ಬಾಯಾರು ಧರ್ಮತ್ತಡ್ಕ ಕರುವಾಜೆಯ ಮರಿಯಮ್ಮತ್ ಸಪೂರ ನೀಡಿದ ದೂರಿನಂತೆ ಸಚಿತಾ ರೈ ವಿರುದ್ದ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಾಸರಗೋಡು ಕೇಂದ್ರೀಯ ವಿದ್ಯಾಲಯದಲ್ಲಿ ಸೀನಿಯರ್ ಕ್ಲಾರ್ಕ್ ಉದ್ಯೋಗ ಭರವಸೆ ನೀಡಿ 13,80,000 ರೂ. ವಂಚಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. 2023 ಡಿ.13 ರಿಂದ 2024 ಎಪ್ರಿಲ್ 30 ರ ವರೆಗಿನ ಕಾಲಾವಧಿಯಲ್ಲಿ ಹಣ ನೀಡಿರುವುದಾಗಿ ದೂರದಾರರು ದೂರಿನಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಪಡೆದ ಹಿಂದೂ ಸಂಘಟನಾ ಕಾರ್ಯಕರ್ತರು ಕಾರ್ಯಚರಣಿ ನಡೆಸಿ ವಾಹನ ಸಹಿತ ಗೋಸಾಗಾಟಗಾರರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ರಾತ್ರಿ ಮೂಡುಬಿದಿರೆಯಲ್ಲಿ ನಡೆದಿದೆ. ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ನಿವಾಸಿಗಳಾದ ಪ್ರವೀಣ್ ಡಿಸೋಜ ಹಾಗೂ ಭಾಸ್ಕರ್ ಶೆಟ್ಟಿ ಗೋಸಾಗಾಟಗಾರರು. ಇವರಿಬ್ಬರು ಮೂಡುಬಿದಿರೆ ತಾಲೂಕಿನ ತೋಡಾರು ಶಾಂತಿಗಿರಿಯಲ್ಲಿ ಅಕ್ರಮವಾಗಿ ಪಿಕಪ್‌ನಲ್ಲಿ ಎರಡು ಗೋವುಗಳನ್ನು ತೋಡಾರಿನ ಅದ್ದು ಎಂಬವರ ಕಸಾಯಿಖಾನೆಗೆ ಸಾಗಿಸುತ್ತಿದ್ದರು. ಈ ವೇಳೆ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ವಾಹನಗಳನ್ನು ತಡೆದು ನಿಲ್ಲಿಸಿ, ಎರಡು ಗೋವುಗಳೊಂದಿಗೆ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದರು. ಅಕ್ರಮ ಗೋ ಸಾಗಾಟ ವಿಚಾರದಲ್ಲಿ ಶನಿವಾರ ರಾತ್ರಿ ಕೇಸು ದಾಖಲಾಗಿದ್ದರೂ ರವಿವಾರ ಬೆಳಗ್ಗೆ 7.20ರ ಸುಮಾರಿಗೆ ಇಬ್ಬರೂ ಆರೋಪಿಗಳು ಅಶ್ವತ್ಥಪುರದಲ್ಲಿರುವ ಹಾಲಿನ ಡೈರಿಗೆ ಹಾಲು ಹಾಕಿ ಬಂದಿದ್ದಾರೆನ್ನಲಾಗಿದೆ. ಭಾಸ್ಕರ ಶೆಟ್ಟಿ ಅವರು ತೆಂಕಮಿಜಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.
ಮಂಗಳೂರು: ಗದ್ದೆಗೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪಟ್ಟೆ ಮಾಗಂದಡಿ ನಿವಾಸಿ ಅಶೋಕ್ ಶೆಟ್ಟಿ(60) ಎಂದು ಗುರುತಿಸಲಾಗಿದೆ. ಕುಸಿದು ಬಿದ್ದ ಅಶೋಕ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.










