Author: main-admin

ಕಲಬುರಗಿ- ಸಾಮಾನ್ಯವಾಗಿ ಉದ್ಯಮಿ ಗಳು, ರಾಜಕಾರಣಿಗಳು, ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡುವುದನ್ನು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಖತರ್ನಾಕ್ ಮಹಿಳೆ ಪೊಲೀಸ್ ಕಾನ್ಸಟೇಬಲ್‌ ಒಬ್ಬರನ್ನು ಹನಿ ಟ್ರ್ಯಾಪ್ ಖೆಡ್ಡಾಗೆ ಖೆಡವಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಖತರ್ನಾಕ ಮಹಿಳೆಯೊಬ್ಬರು ಪೊಲೀಸರನ್ನೇ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವಿ ಬರೊಬ್ಬರಿ 8 ಲಕ್ಷ ರೂ. ಹಣ ವಸೂಲು ಮಾಡಿದ್ದಾಳೆ. ಈ ಖತರ್ನಾಕ್ ಲೇಡಿಯ ಕಾಟಕ್ಕೆ ಬೇಸತ್ತು ಕಾನ್ಸಟೇಬಲ್‌ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಹಿಂದೆ ಕಲಬುರಗಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಈ ಪೂಜಾ ಭಾಗಿಯಾಗಿದ್ದಳು. ಕಲಬುರಗಿಯ ಸೆನ್ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್‌ನನ್ನು ಪೂಜಾ ಡೊಂಗರಗಾಂವ್ ಎಂಬ ಮಹಿಳೆ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದಾಳೆ. ಆ ಬಳಿಕ ಕಾನ್ಸಟೇಬಲ್‌ ಪತ್ನಿಯಿಂದ ಎಂಟು ಲಕ್ಷ ಹಣ ವಸೂಲಿ ಮಾಡಿದ್ದಾಳಂತೆ. ಆರೋಪಿ ಪೂಜಾ ಡೊಂಗರಗಾಂವ್ ಕಾಟಕ್ಕೆ ಬೇಸತ್ತು ಕಾನ್ಸಟೇಬಲ್‌ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಪೂಜಾ ಮತ್ತು ಅಮರ್ ಸಿಂಗ್ ಎಂಬುವರಿಂದ 15 ಲಕ್ಷಕ್ಕೆ ಬೇಡಿಕೆ ಇಟ್ಟು 8 ಲಕ್ಷ ಹಣ…

Read More

ಮಂಗಳೂರು: ವಿದೇಶಾಂಗ ಸಚಿವಾಲಯದಲ್ಲಿ ನೋಂದಣಿಯಾಗದೆ, ಅನಧಿಕೃತವಾಗಿ ಸಾಗರೋತ್ತರ ಉದ್ಯೋಗಗಳಿಗೆ ಜಾಹೀರಾತು ನೀಡಿ ನೇಮಕಾತಿಯಲ್ಲಿ ತೊಡಗಿಸಿಕೊಂಡ ಮಂಗಳೂರಿನ ಎಸ್ಸೆಲ್ ವಿಲ್ಕನ್ ಎಂಬ ಸಂಸ್ಥೆಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ Protector of Emigrants, Ministry of External Affairs ಬೆಂಗಳೂರಿನಿಂದ ದೂರು‌ ಬಂದಿತ್ತು. ಮಂಗಳೂರಿನ ಬೆಂದೂರುವೆಲ್‌ನ Essel Willcon ಎಂಬ ಸಂಸ್ಥೆಯ M/S Hireglow Elegant Overseas International (OPC) Pvt, Mangaluru ಎಂಬ ಏಜನ್ಸಿಯಿಂದ ಈ ಕೃತ್ಯ ಎಸಗಿದೆ. ಎಮಿಗ್ರೇಷನ್ ಆ್ಯಕ್ಟ್ 1983ರಡಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ನೋಂದಣಿಯಾಗದೆ, ಅನಧಿಕೃತವಾಗಿ ಸಾಗರೋತ್ತರ ಉದ್ಯೋಗಗಳಿಗೆ ಜಾಹೀರಾತು ನೀಡುವ ಮೂಲಕ ಸಾಗರೋತ್ತರ ನೇಮಕಾತಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ದೂರಲಾಗಿತ್ತು. ನೇಮಕಗೊಂಡ ಅಭ್ಯರ್ಥಿಗಳಿಂದ ಅನಧಿಕೃತವಾಗಿ ನಿಯಮ ಬಾಹಿರವಾಗಿ ಪಾಸ್‌ಪೋರ್ಟ್‌ಗಳನ್ನು ಸಂಗ್ರಹಿಸಿದ್ದಾರೆ. ಈ ಏಜೆನ್ಸಿ ವಿದೇಶಾಂಗ ಸಚಿವಾಲಯದಲ್ಲಿ ನಿಯಮದ ಪ್ರಕಾರ ನೋಂದಣಿಯಾಗಿಲ್ಲ. ಆದ್ದರಿಂದ ಇಮಿಗ್ರೇಷನ್ ಆಕ್ಟ್ 1983ನ್ನು ಉಲ್ಲಂಘಿಸಿದ್ದಾರೆ ಎಂದು ದೂರು ನೀಡಲಾಗಿದೆ.

Read More

ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೆ.ಉಮ್ಮರಬ್ಬ ಮೊಯ್ದೀನ್ ಬಂಧಿತ ಆರೋಪಿ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಅದರಂತೆ ಅಪರಾಧ ಕ್ರಮಾಂಕ: 141/2023 ಐಪಿಸಿ ಕಲಂ 464, 465, 466, 468, 471, 474ರಂತೆ ಆರೋಪಿ ಕೆ. ಉಮ್ಮರಬ್ಬ ಮೊಯ್ದೀನ್‌ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Read More

ಪುತ್ತೂರು: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ…

Read More

ಮಂಗಳೂರು: ಚಾಕು ತೋರಿಸಿ ಮೆಡಿಕಲ್ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣ ಸುಲಿಗೆಗೈದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೊಂದೇಲ್‌ನ ಪಟ್ರಕೋಡಿ ನಿವಾಸಿ ಸುನೀಲ್ (31) ಬಂಧಿತ ಆರೋಪಿ. ಡಿಸೆಂಬರ್ 28ರಂದು ಮಧ್ಯಾಹ್ನ ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್‌ವೊಂದಕ್ಕೆ ಆರೋಪಿ ಸುನಿಲ್ ಹೋಗಿದ್ದಾನೆ. ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿದ ಈತ ಹಲ್ಲೆ ನಡೆಸಿ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ 19,300ರೂ. ನಗದು ಸುಲಿಗೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಯ ಪತ್ತೆಗೆ ತಂಡವನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಅದರಂತೆ ಗುರುವಾರ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಂದ ಕಳವು ಮಾಡಿದ 17,500ರೂ. ಹಣ, ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರ ಸೊತ್ತುಗಳನ್ನು ಸೇರಿಸಿ ಒಟ್ಟು 1,20,000ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.

Read More

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತ ಈ ಬಾರಿಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಸಲು ಸಜ್ಜಾಗಿದೆ. ಇದೀಗ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್‌ಗೆ’ ದಿನಾಂಕ ನಿಗದಿಯಾಗಿದೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರೀಧರ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3 ಜನವರಿ 18 ರಿಂದ 22ರವರೆಗೆ ನಡೆಯಲಿದೆ ಎನ್ನುವುದು ಖಚಿತವಾಗಿದೆ. ಪ್ರತಿದಿನ ಸಂಜೆ 4ರಿಂದ ರಾತ್ರಿ 10ರವರೆಗೆ ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ ಈ ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಯಲಿದೆ. ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3ರ ಸಿದ್ಧತೆ ಭರದಿಂದ ಸಾಗುತ್ತಿದ್ದು, ಆನ್ ಲೈನ್ ಮೂಲಕ…

Read More

ಅಂಗನವಾಡಿಯಲ್ಲಿ ಸಹಾಯಕಿ ಹುದ್ದೆ ಕೊಡಿಸುವುದಾಗಿ ಮಹಿಳೆಯಿಂದ ಹದಿನೈದು ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಸಿಡಿಪಿಒ ಕಚೇರಿಯ FDA ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ FDA ಶಿಲ್ಪಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಹುದ್ದೆ ಕೊಡಿಸುವುದಕ್ಕೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಒಂದು ಹುದ್ದೆಗಾಗಿ ಈಗಾಗಲೇ ಮಹಿಳೆಯಿಂದ ಈಗಾಗಲೇ FDA ಶಿಲ್ಪ 35,000 ಲಂಚ ಪಡೆದಿದ್ದರು. ಉಳಿದ 15 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಶಿಲ್ಪಾ ಬಿದ್ದಿದ್ದಾರೆ. FDA ಶಿಲ್ಪಾಳನ್ನು ಸದ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಮೇರಿಹಿಲ್ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಚಾಲಕ ತಕ್ಷಣ ಕಾರನ್ನು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರನ್ನು ಕೂಡ ಕೆಳಗಿಳಿಸಿದ್ದಾರೆ. ಜೊತೆಗೆ ಅಕ್ಕಪಕ್ಕದಲ್ಲಿದ್ದವರು ನೀರು ತಂದು ಸುರಿದು ಬೆಂಕಿ ನಿಯಂತ್ರಿಸಿದರು. ಕದ್ರಿ ಅಗ್ನಿಶಾಮಕ ದಳದವರು ಕೂಡ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಕಾರಿನ ಇಂಜಿನ್ ಭಾಗಶಃ ಸುಟ್ಟು ಹೋಗಿದ್ದು, ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದೆಂದು ಅಗ್ನಿಶಾಮಕ ದಳದ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

Read More

ವಿಟ್ಲ: ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

Read More

ಮಂಗಳೂರು: ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು ಗುರುತಿಸಲಾಗಿದೆ. ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ

Read More