ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್‌ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು ಮಾರುಕಟ್ಟೆ ಹೂಡಿಕೆಗಳ ಬಗ್ಗೆ ಆಕರ್ಷಕ ಮಾಹಿತಿಯನ್ನು ಒದಗಿಸುವುದರೊಂದಿಗೆ, ಗಮನಾರ್ಹ ಆದಾಯ ನೀಡುವುದಾಗಿ ಭರವಸೆ ನೀಡಿದರು. ಕ್ಯಾಸ್ಟೆಲಿನೊ ಮತ್ತು ಅವನ ಮಗನ ವಿಶ್ವಾಸವನ್ನು ಗಳಿಸಿದ ವಂಚಕರು ಸ್ಟಾಕ್ ಮಾರ್ಕೆಟ್ ನಲ್ಲಿ ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಾಡುವಂತೆ ಸಲಹೆ ನೀಡುತ್ತಾರೆ. Also Read ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ ವಂಚಕರ ಸಲಹೆಯಂತೆ ಕ್ಯಾಸ್ಟೆಲಿನೊ ಅವರ ಖಾತೆಯಿಂದ 12 ಲಕ್ಷ ರೂ., ಅವರ ಪತ್ನಿ…
Author: main-admin
ಮಂಗಳೂರು: ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ. ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮರ ಬಿದ್ದ ಜಾಗದಲ್ಲಿ ನಿಲ್ಲಿಸಿದ್ದ ಆಟೋ ಹಾಗೂ ಕೆಲವು ವಾಹನಗಳಿಗೆ ಹಾನಿ ಆಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಮರ ಬಿದ್ದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್, ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.ಸ್ಥಳಕ್ಕೆಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಉಳ್ಳಾಲ: ದ್ವಿಚಕ್ರ ವಾಹನವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಅಝರ್ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಅವರ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ. ಅವರ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿಯ ತತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್ ಹಿತೇಶ್ ಕುಮಾರ್ (43) ಮರಣದಂಡನೆಗೊಳಗಾದ ಅಪರಾಧಿ. ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡಿನಲ್ಲಿ 2022 ಜೂನ್ 23ರಂದು ಸಂಜೆ ಆರೋಪಿಯು ತನ್ನ 14, 11 ಮತ್ತು 4 ವರ್ಷದ ಮಕ್ಕಳನ್ನು ಮನೆಯ ಬಳಿ ಇರುವ ಬಾವಿಗೆ ತಳ್ಳಿ ಕೊಲೆ ಮಾಡಿದ್ದನು. ಕೆಲಸದಿಂದ ಮನೆಗೆ ಬಂದು ಮಕ್ಕಳನ್ನು ಹುಡುಕುತ್ತಿದ್ದ ಹೆಂಡತಿ ಲಕ್ಷ್ಮೀಯವರನ್ನು ಕೂಡಾ ಅದೇ ಬಾವಿಗೆ ತಳ್ಳಿ ಕೊಲ್ಲಲು ಯತ್ನಿಸಿದ್ದ. ಆರೋಪಿಯು ತನ್ನ ಉದಾಸೀನ ಪ್ರವೃತ್ತಿಯಿಂದ ಯಾವುದೇ ಕೆಲಸಕ್ಕೆ ಹೋಗದೇ ಹೆಂಡತಿ, ಮಕ್ಕಳನ್ನು ಸಾಕಲು ಕಷ್ಟವಾಗುತ್ತದೆ ಎಂದು ಈ ಕೃತ್ಯ ಎಸಗಿದ್ದನು. ಹೆಂಡತಿ ಮಕ್ಕಳನ್ನು ಸಾಯಿಸಿದ್ದಲ್ಲಿ ತಾನು ಹೇಗೆ ಬೇಕಾದರೂ ಜೀವಿಸಬಹುದೆಂದು ಯೋಚಿಸಿ ಈ ಕೃತ್ಯ ಎಸಗಿದ್ದ. ಬಾವಿಗೆ ಬಿದ್ದ ಮಕ್ಕಳು…
ಮಂಗಳೂರು: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‌ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ(21) ಎಂಬವರು ಅರ್ಕುಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರರಾದ ಪ್ರವಿತ್ ಆಚಾರ್ಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್‌ಡಬ್ಲ್ಯು ವಿದ್ಯಾರ್ಥಿ. ಕಾಲೇಜು ವ್ಯಾಸಂಗದ ಉದ್ದೇಶದಿಂದ ಮಂಗಳೂರು ಸಮೀಪ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರು. ಪ್ರವಿತ್ ಆಚಾರ್ಯ ಪಡೀಲ್ ಅಥವಾ ಬಿ.ಸಿ.ರೋಡ್‌ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ವಿಟ್ಲಕ್ಕೆ ಕಾಲೇಜಿಗೆ ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಪ್ರವಿತ್ ಸಂಜೆ ಕಾಲೇಜು ಮುಗಿಸಿ ಬಿ.ಸಿ.ರೋಡ್‌ನಲ್ಲಿದ್ದ ಬೈಕ್ ಹತ್ತಿ ಮಂಗಳೂರಿನತ್ತ ಬರುತ್ತಿದ್ದರು. ಅರ್ಕುಳಕ್ಕೆ ಬರುತ್ತಿದ್ದಂತೆ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಐಸ್‌ಕ್ರೀಂ ಸಾಗಾಟದ ವಾಹನ ಪ್ರವಿತ್ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದನಾಗಿರುವ ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿಯೂ ಯಕ್ಷಗಾನ ಕಲಾಸಕ್ತರ…
ಬೆಳ್ತಂಗಡಿ: ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ಇಂದು(ಡಿ.31) ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.
ಬಂಟ್ವಾಳ: ಡಿ. 29ರಂದು ಎರಡು ತಂಡಗಳು ಹೊಡೆದಾಡಿದ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲಿನಲ್ಲಿ ನಡೆದಿದೆ. ಒಂದು ತಂಡದಿಂದ ತೇಜಾಕ್ಷ ಎಂಬವರು ದೂರು ನೀಡಿದರೇ. ಇನ್ನೊಂದು ತಂಡದಿಂದ ಸುಲೈಮಾನ್ ಎಂಬವರು ದೂರು ನೀಡಿದ್ದಾರೆ. ಘಟನೆಯ ಹಿನ್ನಲೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದೆ. ಘಟನೆಯ ಕುರಿತು ಜಿಲ್ಲಾ ಎಸ್‌ಪಿ ಯತೀಶ್ ಅವರು ಗ್ರಾಮಾಂತರ ಠಾಣೆಗೆ ಭೇಟಿ ನೀಡಿ ತನಿಖೆಯ ಕುರಿತು ಸಲಹೆ ನೀಡಿದ್ದಾರೆ. ಡಿ. 29ರಂದು ಮಧ್ಯಾಹ್ನ ತಾರಿಪಡ್ಡು ನಿವಾಸಿ ತೇಜಾಕ್ಷ ಅವರು ಮನೆಗೆ ಹೋಗುತ್ತಿದ್ದ ವೇಳೆ ಪರಿಚಯದ ಉಮೇಶ ಎಂಬವನಿಗೆ ತಂಡವೊಂದು ಹೊಡೆಯುತ್ತಿದ್ದು, ಈ ವೇಳೆ ತೇಜಾಕ್ಷ ಅಲ್ಲಿಗೆ ಹೋಗಿ ಉಮೇಶನಿಗೆ ಯಾಕೆ ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದು, ಪರಿಚಯದ ಆರೋಪಿಗಳಾದ ಮುಸ್ತಾ, ನವಾಜ್, ರಜಿಂ ಮತ್ತು ಇತರರು ಸೇರಿ ನೀನು ಯಾರು ನಮ್ಮನ್ನು ಕೇಳಲು ಎಂದು ಅವಾಚ್ಯವಾಗಿ ಬೈದು ಕೈಯಿಂದ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿ ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದು, ಆ ಸಮಯ…
ಮಂಗಳೂರು: ಮನೆಮಂದಿ ಮನೆಗೆ ಬೀಗ ಹಾಕದೆ ತೋಟಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳನೋರ್ವ ಕೋಣೆಯ ಶೆಲ್ಫ್ ನಲ್ಲಿಟ್ಟಿದ್ದ 50 ಸಾವಿರ ರೂ.ಗಳ ನೋಟಿನ ಕಟ್ಟನ್ನು ಕಳವು ಮಾಡಿದ ಘಟನೆ ಡಿ. 28ರಂದು ಸಂಜೆ 5.30ರ ಸುಮಾರಿಗೆ ಬಂಟ್ವಾಳದ ಅಂತರ ಮಣಿಗುತ್ತಿನಲ್ಲಿ ನಡೆದಿದೆ. ಅಂತರ ಮಣಿಗುತ್ತು ನಿವಾಸಿ ಪೂರ್ಣಿಮಾ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಸಂಜೆ 5.45ರ ಸುಮಾರಿಗೆ ಮನೆಯ ಬಳಿ ನಾಯಿಗಳು ಬೊಗಳುವ ಶಬ್ದ ಕೇಳಿದ್ದು, ಆಗ ಅವರ ಜತೆಯಲ್ಲಿದ್ದ ಧನುಷ್ ಮನೆಗೆ ಬಂದಾಗ ಅಪರಿಚಿತ ವ್ಯಕ್ತಿ ಮನೆಯ ಒಳಗಿನಿಂದ ಪ್ಲಾಸ್ಟಿಕ್ ಬಾಕ್ಸ್ ಹಿಡಿದುಕೊಂಡು ಓಡುತ್ತಿದ್ದಾಗ ಬಾಕ್ಸ್‌ನಲ್ಲಿದ್ದ 500 ರೂ.ಗಳ 4 ಕಟ್ಟುಗಳು ನೆಲಕ್ಕೆ ಬಿದ್ದಿದೆ. ಅದರಲ್ಲಿ 1 ಕಟ್ಟನ್ನು ಆತ ಹೆಕ್ಕಿ ಪರಾರಿಯಾಗಿದ್ದಾನೆ. ಈ ವೇಳೆ ಧನುಷ್ ಬೊಬ್ಬೆ ಹಾಕಿದ್ದು, ತೋಟದಲ್ಲಿದ್ದ ಪೂರ್ಣಿಮಾ ಕೂಡ ಓಡಿ ಬಂದಿದ್ದಾರೆ. ಪೂರ್ಣಿಮಾ ಅವರ ಪತಿ ಸಿಲ್ವೆಸ್ಟರ್ ಡಿ’ಸೋಜಾ ಅವರು ಅಪಘಾತದಲ್ಲಿ ಮೃತಪಟ್ಟಿದ್ದು, ಅದರ ವಿಮೆ ಹಣ ಹಾಗೂ ಅಡಿಕೆ ಮಾರಾಟ ಮಾಡಿದ ಸಿಕ್ಕಿದ…
ಉಡುಪಿ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್‌ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ 20,11,900ರೂ. ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ ಟಿ , ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ (ಪ್ರಭಾರ) ರಾಮಚಂದ್ರ ನಾಯಕ್, ಉಡುಪಿ ನಗರ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಪುನೀತ್ ಕುಮಾರ್ ಬಿ, ಸುರೇಶ್.ಕೆ, ಅಬ್ದುಲ್ ಬಶೀರ್, ಹೇಮಂತ, ಆನಂದ, ಶಿವಕುಮಾರ್, ಸೆನ್ ಅಪರಾಧ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ರಾಘವೇಂದ್ರ, ಮಾಯಪ್ಪ, ಪ್ರಶಾಂತ್ ಅವರನ್ನೊಳಗೊಂಡ ತಂಡ…
ಮಂಗಳೂರು: ಹೊಸವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ, ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕೆಲವೊಂದು ಮಾರ್ಗಸೂಚಿಗಳನ್ನು ಪಾಲಿಸಲು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಹೊಸವರ್ಷದ ಆಚರಣೆಯ ನೆಪದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ವೀಲಿಂಗ್/ಡ್ರಾಗ್ ರೇಸ್‌ಗಳಲ್ಲಿ ಭಾಗಿಯಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಮಾರ್ಗಸೂಚಿಗಳು ಈ ರೀತಿಯಿದೆ * ಅಮಲು ಪದಾರ್ಥವನ್ನು ಸೇವಿಸಿ ವಾಹನ ಚಾಲನೆ ಮಾಡಬಾರದು. * ದ್ವಿಚಕ್ರ ವಾಹನಗಳಲ್ಲಿ ಎರಡಕ್ಕಿಂತ ಹೆಚ್ಚು ಮಂದಿ ಸವಾರಿ ಮಾಡಬಾರದು. * ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವವವರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು. * ಕಾರು ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಬೇಕು. * ಸಾರ್ವಜನಿಕರು ತಮ್ಮ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ/ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಾರ್ಕ್ ಮಾಡುವುದು. * ಮಂಗಳೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ರಸ್ತೆಗಳಲ್ಲಿ/ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ ತಪಾಸಣೆ ನಡೆಸಲಾಗುವುದು. ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತಕ್ರಮ…










