ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ಗ್ರಾಹಕನಾಗಿ ತೆರಳಿದ್ದಾಗ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಶಾಸ್ತ್ರಿಯ ನಿಜಬಣ್ಣ ಬಯಲಾಗುತ್ತಿದ್ದಂತೆ ಶೀಘ್ರ ನಡೆಯಬೇಕಿದ್ದ ಈತನ ನಿಶ್ಚಿತಾರ್ಥ ರದ್ದುಗೊಂಡಿದೆ. ಪೊಲೀಸರು ಬಾಂಗ್ಲಾ ಮೂಲದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.
Author: main-admin
ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.
ಮೂಡುಬಿದಿರೆ: ದ್ವಿಚಕ್ರದಲ್ಲಿ ವಾಹನದಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ಮಾರ್ನಾಡುವಿನಲ್ಲಿ ನಡೆದಿದೆ. ಮೂರು ಮಾರ್ನಾಡು ನಿವಾಸಿ ಪ್ರೇಮಾ (82) ಎಂಬವರು ಪೇಟೆಗೆ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಹಿಳೆಯ ಕತ್ತಿನಲ್ಲಿದ್ದ 24 ಗ್ರಾಂ ತೂಕದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಪ್ರೇಮಾರ ಕತ್ತಿನಲ್ಲಿ ಸಣ್ಣ ಗಾಯವಾಗಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಯಂಬ್ಯುಲೆನ್ಸ್ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರು:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹ 40 ಸಾವಿರ ನಗದು ಸೇರಿ ₹ 1.35 ಲಕ್ಷ ಮೌಲ್ಯದ ಸ್ವತ್ತು ಕಳವಾದ ಬಗ್ಗೆ ನಗರ ಪೂರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಅಗಸ್ಟ್ 30 ಸಂಜೆ 7.30 ಗಂಟೆಗೆ ಅಂಗಡಿ ಮುಚ್ಚಿದ್ದೆ. ಮರುದಿನ ಬೆಳಿಗ್ಗೆ 9ಕ್ಕೆ ಬಂದು ನೋಡಿದಾಗ ಅಂಗಡಿಯ ಬಾಗಿಲು ತೆರೆದಿತ್ತು. ಅಂಗಡಿಯಲ್ಲಿಟ್ಟಿದ್ದ, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ನಗದೀಕರಿಸಿದ್ದ ₹40 ಸಾವಿರ ನಗದು, 30 ಛತ್ರಿಗಳು ಹಾಗೂ 50 ಜೊತೆ ಚಪ್ಪಲಿಗಳು ಕಳುವಾಗಿದ್ದವು. ಕಳುವಾದ ಛತ್ರಿ ಮತ್ತು ಚಪ್ಪಲಿಗಳ ಅಂದಾಜು ಮೌಲ್ಯ ₹ 95ಸಾವಿರ’ ಎಂದು ಅಂಗಡಿ ಮಾಲೀಕ ರಾಮ ಎಸ್.ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಳ ಗ್ರಾಮದ ನಿವಾಸಿ ತಂಗಚ್ಚನ್ ಮಗ ಸಂತೋಷ್ ಟಿ. ಬಂಧಿತ ಆರೋಪಿಯಾಗಿದ್ದು ಈತ ಆ. 30 ರಂದು ಗುರ್ಗಾಲ್ ಗುಡ್ಡೆಯ ಮನೆಯೊಂದರ ಬಾಗಿಲು ಮುರಿದು ಬೆಡ್ ರೂಂನ ಲಾಕರ್ ನಲ್ಲಿದ್ದ 33 ಪವನ್ ಮೌಲ್ಯದ ವಿವಿಧ ರೀತಿಯ ಚಿನ್ನಾಭರಣ ಕಳ್ಳತನ ಮಾಡಿದ್ದ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಾ ಪಿಎಸ್‌ಐ ದಿಲೀಪ್ ಜಿ. ಆರ್., ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ಹಾಗೂ ಸಿಬ್ಬಂದಿ ಮಹಾಂತೇಶ್, ಪ್ರಶಾಂತ್ ಕೆ., ವಿಶ್ವನಾಥ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ ರಾಘವೇಂದ್ರ, ಅಶೋಕ ಭಾಗಿಯಾಗಿದ್ದರು.
ಮಂಗಳೂರು: ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ ನಗರದಲ್ಲಿ ಶಾಂತಿ ಕಾಪಾಡಬೇಕು ಮತ್ತು ಎಲ್ಲಾ ಧರ್ಮದ ಮುಖಂಡರು ಇದಕ್ಕೆ ಸಹಕರಿಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ತನ್ನ ಕಚೇರಿಯಲ್ಲಿ ಸೋಮವಾರ ಶಾಂತಿ ಸಭೆ ನಡೆಸಿ ಧಾರ್ಮಿಕ ಮತ್ತು ಸಮಾಜದ ಮುಖಂಡರಿಗೆ ಕೆಲವೊಂದು ಸೂಚನೆಗಳನ್ನು ಆಯುಕ್ತರು ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ, 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಗಳಿವೆ. ಅದಲ್ಲದೆ ಸೆ.15/16ರಂದು ಮೀಲಾದುನ್ನಬಿ ಆಚರಣೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ.6ರಿಂದ ಸೆ.17ರವರೆಗೆ 165 ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಈ ಪೈಕಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ, 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಗಳಿವೆ. ಅದಲ್ಲದೆ ಸೆ.15/16ರಂದು ಮೀಲಾದುನ್ನಬಿ ಆಚರಣೆ ನಡೆಯಲಿದೆ. ಹಾಗಾಗಿ ಎಲ್ಲಾ ಧರ್ಮದ…
ಬೆಳ್ತಂಗಡಿ ಸಮೀಪ ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆ. 31ರ ವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿತ್ತು. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಯಲಾಗಿದೆ. ಬೆಳಾಲು ನಿವಾಸಿ ಬಾಲಕೃಷ್ಣ ಭಟ್ ಅವರನ್ನು ಆ. 20ರಂದು ಅವರ ಮನೆಯಲ್ಲಿ ಕೊಲೆ ಮಾಡಿರುವ ಆರೋಪದಲ್ಲಿ ಆ. 24ರಂದು ಧರ್ಮಸ್ಥಳ ಠಾಣೆ ಪೊಲೀಸರು ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54) ಮತ್ತು ಆತನ ಪುತ್ರ ಮುರಳಿಕೃಷ್ಣ(21)ನನ್ನು ಆ. 27ರಂದು ಬಂಧಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಆ. 31ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದರು. ಅದರಂತೆ ಪೊಲೀಸರು ಸ್ಥಳ ಮಹಜರು ಮಾಡಿದ ಬಳಿಕ ಆರೋಪಿಗಳ ಕಾಸರಗೋಡಿನ ಕುಂಬ್ಡಾಜೆಯ ವಡಂಬಳೆಯ ಮನೆಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಅದರಲ್ಲಿ ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್, ಬಟ್ಟೆ, ಕತ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಮಂಗಳೂರು ಸಬ್‌ಜೈಲ್‌ಗೆ ಕರೆದೊಯ್ಯಲಾಗಿದೆ. ಇಬ್ಬರು…
ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು: ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿ ಮಗುವನ್ನು ಮತ್ತೆ ಹೆತ್ತವರ ಮಡಿಲಿಗೊಪ್ಪಿಸಿದ ಘಟನೆ ನಡೆದಿದೆ. ಕೇರಳ ರಾಜ್ಯದ ಎರ್ನಾಕುಲಂ ತಾತಾಪಿಲ್ಲಿ, ಪರವೂರ್, ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ ಕಿಡ್ನ್ಯಾಪರ್ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೆಲಸಗಾರರ ಎರಡುವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ 4.30ಗಂಟೆಗೆ ನಾಪತ್ತೆಯಾಗಿತ್ತು. ಹೆತ್ತವರು ಮಗುವನ್ನು ಹುಡುಕಾಡಿ ಕಾಣದಿದ್ದಾಗ ಸಂಜೆ 7.30ಗಂಟೆಗೆ ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಕಂಕನಾಡಿ ನಗರ ಪೊಲೀಸರು ಎಲ್ಲ ಕಡೆ ಮಾಹಿತಿ ನೀಡಿದ್ದಾರೆ. ರೈಲ್ವೆ ಜಂಕ್ಷನ್‌ಗೆ ಭೇಟಿ ನೀಡಿ ಅಲ್ಲಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದ್ದಾರೆ. ಆಗ ಓರ್ವ ಮಗುವನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಆತ ಕೇರಳದ ಕಡೆಗೆ ಹೋಗುತ್ತಿದ್ದ ರೈಲಿನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿರುವುದನ್ನು ಗಮನಿಸಿ ತಕ್ಷಣ ಕಂಕನಾಡಿ ಪೊಲೀಸರು ಕಾಸರಗೋಡು ರೈಲ್ವೆ…









