Author: main-admin

ಪುತ್ತೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ  ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Read More

ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ (praveen chougalel ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉಡುಪಿ ನ್ಯಾಯಾ ಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರೆಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಿದ್ದಾರೆ. ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ…

Read More

ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬ್ಯಾಂಕ್ ಖಾತೆಗಳನ್ನು “ಡ್ಯೂಲ್” ಅಕೌಂಟ್‌ಗಳೆಂದು ಪರಿಗಣಿಸಿ ಖಾತೆದಾರರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಭಾವಿಸಿ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರದ “ಪೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್” ರವರು ಆದೇಶಿಸಿರುತ್ತಾರೆ ಎಂದಿದ್ದಾರೆ. ಕೆಲವರು ಅಲ್ಪ ಹಣದ ಆಸೆಯಿಂದ ಅಥವಾ ಅತಿಯಾದ ನಂಬಿಕೆಯಿಂದ ಅಥವಾ ತಿಳುವಳಿಕೆ ಕೊರತೆಯಿಂದ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮದಲ್ಲದ ಮೊಬೈಲ್ ನಂಬರ್‌ಗಳನ್ನು ಲಿಂಕ್ ಮಾಡಿಸಿ, ಅಪರಿಚಿತ…

Read More

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಮಾದರಿಯನ್ನು ಭಾನುವಾರ ಬೆಂಗಳೂರಿನ ಬಿಇಎಂಎಲ್ ಸ್ಥಾವರದಲ್ಲಿ ಅನಾವರಣಗೊಳಿಸಲಾಯಿತು ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ. ರೈಲು ಅಟೆಂಡೆಂಟ್‌ಗಳಿಗೆ ಪ್ರತ್ಯೇಕ ಬರ್ತ್‌ಗಳನ್ನು ಹೊಂದಿದೆ ಮತ್ತು ರಾತ್ರಿಯಲ್ಲಿ ವಾಶ್‌ರೂಮ್‌ಗೆ ಹೋಗುವ ಪ್ರಯಾಣಿಕರಿಗೆ ಏಣಿಯ ಕೆಳಗೆ ನೆಲದ ಎಲ್‌ಇಡಿ ಪಟ್ಟಿಗಳನ್ನು ಹೊಂದಿದೆ. ರೈಲು ಗರಿಷ್ಠ 160 kmph ಕಾರ್ಯಾಚರಣೆಯ ವೇಗವನ್ನು ಹೊಂದಿರುತ್ತದೆ (ಪರೀಕ್ಷೆಯ ಸಮಯದಲ್ಲಿ 180 kmph). ಹೊಸದಾಗಿ ಪರಿಚಯಿಸಲಾದ ಕೋಚ್ ಸುಮಾರು 10 ದಿನಗಳ ಕಾಲ ಪರೀಕ್ಷಾರ್ಥ ಚಾಲನೆಯನ್ನು ನಡೆಸಲಿದೆ. ನಂತರ ಟ್ರ್ಯಾಕ್‌ನಲ್ಲಿ ಸಹ ಪರೀಕ್ಷೆ ನಡೆಸಲಾಗುತ್ತದೆ. ಮುಂದಿನ ಮೂರು ತಿಂಗಳಲ್ಲಿ ರೈಲು ಸಾರ್ವಜನಿಕರಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

Read More

ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಹಾನಿಯುಂಟಾದ ಘಟನೆ ಇಲ್ಲಿನ ಪುರುಷರಕಟ್ಟೆ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ ‌ ಪುರುಷರಕಟ್ಟೆಯ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು, ಅಪಾರ ನಷ್ಟ ಉಂಟಾಗಿದೆ ಎನ್ನುವ ಮಾಹಿತಿ ದೊರಕಿದೆ. ವಿದ್ಯುತ್ ಶಾರ್ಟ್ ಸಕ್ಯೂರ್ಟ್ ಅಥವಾ ಬೇರೆ ಕಾರಣದಿಂದ ಬೆಂಕಿ ತಗಲಿದೆಯೇ ಅನ್ನುವ ಬಗ್ಗೆ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಉಡುಪಿ: ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌ ಗಳು ಸೇರಿ 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾ ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುತ್ತಿದ್ದು , ಸಾಲದ ಹಣದಲ್ಲಿ 1,25,787 ರೂಪಾಯಿ ಹಣವನ್ನು ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿದ್ದಾನೆ.ಅದೇ ರೀತಿ ಲೋನ್‌ ಆಫೀಸರ್‌ ಗಳಾದ ಅಕ್ಷಯ್‌ 49,000 ರೂಪಾಯಿ ಹಾಗೂ ದೀಕ್ಷಿತ್‌ 3 ಲಕ್ಷ ರೂಪಾಯಿ ಹಣವನ್ನು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡು ಸಂಸ್ಥೆಯ ಮ್ಯಾನೇಜರ್‌ ಜತೆ ಸೇರಿ ಈ ಮೂವರು ಒಟ್ಟು 4,74,787 ರೂಪಾಯಿ ಹಣವನ್ನು ಸಂಸ್ಥೆಗೆ ಕಟ್ಟದೇ ವಂಚಿಸಿರುವುದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮೂಡುಬಿದಿರೆ: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಪೊಲೀಸರ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಮಂಗಳೂರು ತಾಲೂಕು ಕೊಳವೂರಿನ ಅಯ್ಯನ ಮನೆ ನಿವಾಸಿ ರಮೇಶ (38) ಬಂಧಿತ ಆರೋಪಿ. ಮೂಡುಬಿದಿರೆಯ ಗಾಂಧಿನಗರದ ನ್ಯೂ ಕಿರಣ್ ಫ್ಯಾಕ್ಟರಿಗೆ ಬ್ಯಾಂಕೊಂದರಿಂದ 2010ರಲ್ಲಿ ಸಾಲ ಪಡೆದುಕೊಳ್ಳಲಾಗಿತ್ತು. ಅದನ್ನು ಹಿಂದಿರುಗಿ ಪಾವತಿಸಿಲ್ಲ ಎಂದು ಆರೋಪಿಸಿ ಬ್ಯಾಂಕ್‌ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಆದೇಶದ ಅನ್ವಯ ಬ್ಯಾಂಕ್ ನ ವ್ಯವಸ್ಥಾಪಕರಾದ ಎಲ್.ಸಿ. ಸಿಂದಗೇರಿ ಅವರು ಫ್ಯಾಕ್ಟರಿಯ ಸ್ಥಿರಾಸ್ತಿ ಹಾಗೂ ಸೊತ್ತುಗಳನ್ನು 2010 ಸೆಪ್ಟೆಂಬರ್ 6ರಂದು ಜಪ್ತಿ ಮಾಡಿ ಸೀಲ್ ಮಾಡಿಸಿದ್ದರು. ಅಲ್ಲದೆ, ಕಾವಲುಗಾರನನ್ನು ನೇಮಿಸಿದ್ದರು. ಆದರೆ, ಆರೋಪಿ ರಮೇಶ ಸಹಿತ ಫ್ಯಾಕ್ಟರಿಯ ಮೆನೇಜಿಂಗ್ ಡೈರೆಕ್ಟರ್ ಎಂ.ಎಂ. ಮಹದೇವಪ್ಪ, ಹರೀಶ ಶೆಟ್ಟಿ, ಹರೀಶ, ನಾಗೇಶ, ರಾಮಚಂದ್ರ ಮೊದಲಾದವರು 2010ರ ಸೆ.18ರಂದು ರಾತ್ರಿ ಮಾರಕಾಸ್ತ್ರಗಳೊಂದಿಗೆ ಸೀಲ್ ಮಾಡಿದ್ದ ಫ್ಯಾಕ್ಟರಿಯ ಬೀಗ ಮುರಿದು ಗಾವಲುಗಾರನಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಬ್ಯಾಂಕ್ ನ ವ್ಯವಸ್ಥಾಪಕರಾದ ಎಲ್.ಸಿ. ಸಿಂದಗೇರಿ…

Read More

ಕಾರ್ಕಳ : ಕಾರ್ಕಳ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ಮಾದಕ ದ್ರವ್ಯ ಪಡೆದಿರುವ ಬಗ್ಗೆ ಕಾರ್ಕಳ ನಗರ ಠಾಣೆಯ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿದ್ದು, ಆರೋಪಿಗಳು ಯುವತಿಗೆ ನೀಡಿರುವ ಡ್ರಗ್ ಸಿಂಥೆಟಿಕ್ ಡ್ರಗ್ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್ ಬಂದಿದ್ದು ಎಲ್ಲಿಂದ? ಡ್ರಗ್ಸ್ ಪೆಡ್ಲರ್ ಪರಿಚಯವಾಗಿದ್ದು ಹೇಗೆ ಎಂಬ ಎಲ್ಲಾ ಮಾಹಿತಿಯನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಆರೋಪಿ ಅಲ್ತಾಫ್ ಕಾರಿನಲ್ಲಿ ಕರೆದೊಯ್ದು ಯುವತಿ ರೇಪ್ ಮಾಡಿದ್ದ. ಯುವತಿಗೆ ಸಿಂಥೆಟಿಕ್ ಡ್ರಗ್ಸ್​ ನೀಡಲಾಗಿತ್ತು. ಆದರೆ ಅಲ್ತಾಫ್​ ಗೆ ಡ್ರಗ್ಸ್ ಬಂದಿದ್ದು ಎಲ್ಲಿಂದ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಅಲ್ತಾಫ್ & ಟೀಂ ಬೆಂಗಳೂರಿಗೆ ತೆರಳಿ ವ್ಯಕ್ತಿಯೋರ್ವನಿಂದ ಡ್ರಗ್ಸ್ ಖರೀದಿಸಿದ್ದರು. ಬೆಂಗಳೂರು ಡ್ರಗ್ ಪೆಡ್ಲರ್ ಅಲ್ತಾಫ್​ಗೆ ಪರಿಚಯವಾಗಿದ್ದು ಹೇಗೆ..? ಬಿಜೆಪಿ ಕಾರ್ಯಕರ್ತ ಅಭಯ್ ಮೂಲಕ ಅಲ್ತಾಫ್​ಗೆ ಬೆಂಗಳೂರು ಮೂಲದ ಡ್ರಗ್ಸ್ ಸೇಲ್ ಮಾಡುವ ವ್ಯಕ್ತಿಯೋರ್ವ ಪರಿಚಯವಾಗಿದ್ದ. ಆರೋಪಿ ಅಭಯ್ ತನ್ನ ಜೊತೆ ಅಲ್ತಾಫ್ & ಇತರರನ್ನು ಬೆಂಗಳೂರಿಗೆ ಕರೆದೊಯ್ದು ಡ್ರಗ್ಸ್…

Read More

ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ನಿಗೂಢ ರೀತಿಯಲ್ಲಿ ಗಂಡಸಿನ ಶವವು ಪತ್ತೆಯಾಗಿರುವ ಘಟನೆ ಸಂಭವಿಸಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಬಹಳ ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೋಲಿಸ್ ಠಾಣೆಯ ಎಸ್.ಐ ಪುನೀತ್ ಕುಮಾರ್ ಬಿ.ಇ, ಎ.ಎಸ್.ಐ ಹರೀಶ್, ಜಾಸ್ವ, ಹಾಗೂ ರೈಲ್ವೆ ಆರ್.ಪಿ.ಎಫ್ ಸುಧೀರ್ ಶೆಟ್ಟಿ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು.ಮಹಜರು ಪ್ರಕ್ರಿಯೆ ಬಳಿಕ ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಯಿತು. ಈ ವ್ಯಕ್ತಿಯನ್ನು ಕೊಂದು ನೇತು ಹಾಕಿರಬಹುದೆ ಅಥವಾ ಇದೊಂದು ಆತ್ಮಹತ್ಯೆಯೇ ಎಂಬ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Read More

ಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿ ಕೋಟಿ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೂ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಹಣಹೊಂದಿರುವ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು. ಹೀನಾ ಎಂಟರ್‍ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಕೊಡಿಸುತ್ತೇನೆ ಎಂದು ಕಚೇರಿ ಮಾಡಿಕೊಂಡಿದ್ದಳು. 18 ವರ್ಷದಿಂದ ಇದನ್ನೇ ಬ್ಯುಸಿನೆಸ್ ಮಾಡಿಕೊಂಡಿದ್ದಳು. ಅಲ್ಲದೇ ಯು.ಟಿ. ಖಾದರ್ ಬಳಿ ಬ್ಲ್ಯಾಕ್ ಮನಿ ಇದೆ. ಅದನ್ನ ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಜನರನ್ನು ನಂಬಿಸಿದ್ದಳು. 1 ಕೋಟಿ ರೂ. ಲೋನ್ ಬೇಕಾದರೆ 15 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದಳು.…

Read More