ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಡಿ.26 ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
Author: main-admin
ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ. ನಾಡಬಾಂಬ್‍ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್‍ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಬೈಕ್ ಹಾಗೂ 32 ನಾಡಬಾಂಬ್‍ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.
ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್ ಅಝದ್(21)ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸುಲ್ತಾನ್ ಬತ್ತೇರಿ ಬಳಿ ಡ್ರಗ್ಸ್ ಸೇವನೆ ಮಾಡಿದ್ದ ವಾಮಂಜೂರು ತಿರುವೈಲ್‌ನ ಸಚಿನ್(29)ನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ: ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಇಲ್ಲಿನ ತಂಗಚ್ಚನ್ ಎಂಬವರ ಮನೆಗೆ ನುಗ್ಗಿದ ಕಳ್ಳರು 2.46 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕದ್ದಿದ್ದಾರೆ. ಮನೆ ಮಂದಿ ಸಮೀಪದ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮುಂಭಾಗದ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ 78 ಸಾವಿರ ರೂ. ನಗದು ಸಹಿತ 42 ಗ್ರಾಮ್ ತೂಕದ ವಿವಿಧ ಚಿನ್ನದ ಆಭರಣಗಳನ್ನು ಕದ್ದಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ.
ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್‌ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿ ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ. ಬಳಿಕ ಹಂದಿ ಶಾಲಾ ರಸ್ತೆಯತ್ತ ಪರಾರಿಯಾಗಿದೆ ಎನ್ನಲಾಗಿದೆ.
ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್ ಸಿದ್ದಿಕ್, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28…
ಮಡಿಕೇರಿ: ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ದುರ್ಘಟನೆ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಗ್ರಾಮದಲ್ಲಿ ಚಿನ್ನಾಭರಣಗಳ ಕೆಲಸ ಮಾಡುತ್ತಿದ್ದ ಚಿದಾನಂದ ಆಚಾರ್ಯ ಮತ್ತು ನಳಿನಿ ದಂಪತಿ ಸಾವನ್ನಪ್ಪಿರುವ ದುರ್ದೈವಿಗಳು. ಚಿದಾನಂದ ಆಚಾರ್ಯ (47) ಎಂಬವರು ತನ್ನ ಸ್ಕೂಟಿ ಸಂಖ್ಯೆ (ಕೆಎ 12-ಡಬ್ಲು 7708)ಯಲ್ಲಿ ತನ್ನ ಪತ್ನಿ ನಳಿನಿ (40) ಅವರೊಂದಿಗೆ ಮಂಗಳೂರಿನಲ್ಲಿ ನಡೆಯ ಬೇಕಾಗಿದ್ದ ಉಪನಯನ ಕಾರ್ಯಕ್ಕೆಂದು ತೆರಳುತ್ತಿರುವ ಸಂದರ್ಭ ಕಂಟೈನರ್ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಲಾರಿಯು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಚಾಲನೆ ಮಾಡುತ್ತಿದ್ದ ಚಿದಾನಂದ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಪತ್ನಿ ನಳಿನಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತ ಚಿದಾನಂದ ಆಚಾರ್ಯ ನೆಲ್ಲಿಹುದಿಕೇರಿ ಗ್ರಾಮದ ಮುಖ್ಯ ರಸ್ತೆಯ ಅಂಗಡಿಯೊಂದಲ್ಲಿ ಚಿನ್ನಾಭರಣಗಳನ್ನು ರಿಪೇರಿ ಹಾಗೂ ತಯಾರಿಸುವ ಕೆಲಸವನ್ನು ಮಾಡಿಕೊಂಡಿದ್ದರು. ಪತ್ನಿ ನಳಿನಿ ಸಿದ್ದಾಪುರ ಸಂತ ಅನ್ನಮ್ಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳೂರಿನಲ್ಲಿ ನಡೆಯುವ…
ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರನ್ನು ನಂಬಿಸಿ 1.71ಕೋಟಿ ರೂ. ವಂಚನೆ ಮಾಡಿರುವ ಕೇರಳ ಮೂಲದ ಯುವಕನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದಾರೆ. ಕೇರಳ ರಾಜ್ಯದ ಕೋಝಿಕೋಡ್ ಜಿಲ್ಲೆಯ ಮಾವೂರ್, ಪಳ್ಳಿಯೊಲ್, ಚಿರಕ್ಕಲ್ ತಝಾಮ್, ಚೊಕ್ಕತ್‌ನ ಆಕಾಶ್ ಎ.(22) ಬಂಧಿತ ಆರೋಪಿ. ಪಿರ್ಯಾದಿದಾರರಿಗೆ ಅಪರಿಚಿತ ವ್ಯಕ್ತಿ TRAIನಿಂದ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬ್ರ ರಿಜಿಸ್ಟರ್ ಆಗಿದೆ. ಮಾರ್ಕೆಟಿಂಗ್ ನೆಪದಲ್ಲಿ ತಮಗೆ ಸಂಬಂಧಿಸಿದ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ಕಿರುಕುಳ ಕೊಡುತ್ತಿರುವುದರ ಬಗ್ಗೆ FIR ದಾಖಲಾಗಿದೆ. ಆದ್ದರಿಂದ ತಕ್ಷಣ ಎಫ್ಐಆರ್ ದಾಖಲಾದ ಅಂಧೇರಿ(E) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ಸಂಖ್ಯೆ (9967014480)ಯ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುತ್ತದೆ. ಅಲ್ಲದೆ ಅಂಧೇರಿಯ ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಇದಕ್ಕೆ Identity ಬಳಸಿ ಸಿಮ್ ಖರೀದಿಸಲಾಗಿದೆ. ಆದ್ದರಿಂದ ತಮ್ಮನ್ನು ಬಂಧಿಸಿ ಜೈಲಿಗಟ್ಟಲಾಗುತ್ತದೆ. ಡಿಜಿಟಲ್ ಆರೆಸ್ಟ್…
ಮಂಗಳೂರು: ಅಧಿಕ ಲಾಭಾಂಶದ ಆಮಿಷವೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ 10.84ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಸೆನ್ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ, ಪಾಲಕ್ಕಾಡ್‌ನ ಮಲಪ್ಪುರಂ ಪುಲಪಟ್ಟ ಪರಕ್ಕಾಡ್‌ನ ಜಾಫರ್ ಕೆ(49) ಬಂಧಿತ ಆರೋಪಿ. ಅಪಚಿರಿತ ವ್ಯಕ್ತಿಯೊಬ್ಬನು ಪಿರ್ಯಾದಿದಾರರಿಗೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ. ಅದರಂತೆ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಸ್ಟೋಕ್ ಫ್ರಂಟ್ ಲೈನ್ ಎಂಬ ಲಿಂಕ್ ಅನ್ನು ವಾಟ್ಸ್ಆ್ಯಪ್‌ಗೆ ಕಳುಹಿಸಿದ್ದಾರೆ. ಅದರಂತೆ ಪಿರ್ಯಾದಿದಾರರಿಂದ ಹಂತ ಹಂತವಾಗಿ 10,84,017ರೂ. ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆಯಲ್ಲಿ ಪಿರ್ಯಾದಿದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಈತ ಕೇರಳ ಮೂಲದ ಜಾಫರ್ ಎಂದು ತಿಳಿದು ಬಂದಿದೆ. ಕೇರಳ ರಾಜ್ಯಕ್ಕೆ ತೆರಳಿದ ಮಂಗಳೂರು ಸೆನ್ ಪೊಲೀಸರು ಆರೋಪಿತನನ್ನು ಪತ್ತೆ ಮಾಡಿ…










