ಮಂಗಳೂರು: ಮಂಗಳೂರು ನಗರದ ಲಾಲ್ ಭಾಗ್ ನ ಹೊಟೇಲ್‌ವೊಂದರಲ್ಲಿ ಯುವತಿಗೆ ಹಲ್ಲೆಗೈದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಲು ಮುಂದಾಗಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪಾರ್ಕಿಂಗ್ ವಿಷಯದಲ್ಲಿ ಆಗಸ್ಟ್ 25ರಂದು ಈ ಘಟನೆ ನಡೆದಿದೆ. ಕಿಡಿಗೇಡಿಗಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸಿಸಿ ಕ್ಯಾಮೆರಾ ಪರಿಶೀಲಿಸಿ ತನಿಖೆ ಮಾಡುತ್ತಿದ್ದೇವೆ. ಅಷ್ಟೇ ಅಲ್ಲ ಯುವತಿಯ ಕಪಾಳಕ್ಕೆ ಹೊಡೆದವರು ಮತ್ತು ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದ ಲಾಲ್‌ಬಾಗ್‌ನ ಹೋಟೆಲ್‌ವೊಂದರ ಬಳಿ ಯುವಕರ ತಂಡವೊಂದು ತನ್ನ ಮೇಲೆ ಹಲ್ಲೆ ಮಾಡಿದೆ. ಈ ಬಗ್ಗೆ ಬರ್ಕೆ ಠಾಣೆಗೆ ದೂರು ನೀಡಿದರೂ ಯಾವುದೇ ಕ್ರಮ ಆಗಿಲ್ಲ ಎಂದು ಯುವತಿ ಆರೋಪಿಸಿದ್ದಲ್ಲದೆ ತನ್ನ ಮಾತಿನ ವೀಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದು ವೈರಲ್ ಕೂಡಾ ಆಗಿತ್ತು. ಆ.25ರ ರಾತ್ರಿ 9:30ಕ್ಕೆ…
Author: main-admin
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವ ಯುವಕನ ಮೇಲಿನ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೊತೆಗೆ ಆರೋಪಿಯ ತಂದೆ ಹಾಗೂ ಭಾವನಿಗೂ 5ವರ್ಷಗಳ ಕಾರಾಗೃಹ ಶಿಕ್ಷೆಗೊಳಗಾಗಿದ್ದಾರೆ. ಪುತ್ತೂರು ಕಬಕದ ನಿವಾಸಿ ನಿತೇಶ್(39) ಶಿಕ್ಷೆಗೊಳಗಾದ ಆರೋಪಿ. ಈತನೊಂದಿಗೆ ತಂದೆ ರಾಮಣ್ಣ ಪೂಜಾರಿ(63) ಮತ್ತು ಭಾವ ನಿಖಿತಾಶ್ ಸುವರ್ಣ(40) 5ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೊಳಗಾದವರು. ನಿತೇಶ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿದ್ದ. ಅಲ್ಲದೆ ಆಕೆಯ ಮನೆಯಲ್ಲೂ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಮದುವೆಯಾಗಲು ಕೇಳಿಕೊಂಡಾಗ ನಿರಾಕರಿಸಿ, ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಭಾವ ಒಪ್ಪುತ್ತಿಲ್ಲ ಎಂದು ಹೇಳಿದ್ದ. ಆಕೆ ತಂದೆ ಹಾಗೂ ಭಾವನ ಬಳಿ ಕೇಳಿಕೊಂಡಾಗ ಅವರು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಆದ್ದರಿಂದ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಅಂದಿನ…
ಮಂಗಳೂರು ನಗರದ ಕೊಟ್ಟಾರದ ಬಳಿ ಇರುವ ಇವನ್ನ ಹೋಮ್ಸ್ ಬಹು ಮಹಡಿ ಕಟ್ಟಡದಲ್ಲಿ 2018 ರಿಂದ 2021 ರವರೆಗೆ 2 ಬಿ ಎಚ್ ಕೆ ಮತ್ತು 3 ಬಿ ಎಚ್ ಕೆ ಕಟ್ಟಡ ಮಾಲೀಕರು ತಮ್ಮ ಪ್ಲಾಟಿನ ವಿಸ್ತೀರ್ಣಕ್ಕೆ ಅನುಸಾರವಾಗಿ ಮತ್ತು ಅವಿಭಜಿತ ಹಕ್ಕಿಗನುಗುಣವಾಗಿ ಮಾಸಿಕ ನಿರ್ವಹಣಾ ವೆಚ್ಚ ( Monthly Maintenance) ಪಾವತಿಸುತ್ತಿದ್ದರು, ಆದರೆ 2021 ರಲ್ಲಿ ಕಟ್ಟಡದ ಅಸೋಸಿಯೇಷನ್ ಕಾನೂನಿಗೆ ವಿರುದ್ಧವಾಗಿ ಎಲ್ಲಾ ಫ್ಲಾಟ್ ಮಾಲೀಕರು ಏಕರೂಪದ ಮಾಸಿಕ ನಿರ್ವಹಣಾ ವೆಚ್ಚ ಕೊಡಬೇಕಾಗಿ ನಿರ್ಣಯವನ್ನು ತೆಗೆದುಕೊಂಡಿದ್ದರು. ಕೋರ್ಟು ಆದೇಶದ ಪ್ರತಿ ಇಲ್ಲಿದೆ👇 KADK030008732021 (1)Download ಈ ನಿರ್ಣಯದ ವಿರುದ್ಧ ಕಟ್ಟಡದ ಮಾಲೀಕರಾದ ಚಂದ್ರಹಾಸ ಅಮೀನ್ ಇವರು ಕೋರ್ಟಿನಲ್ಲಿ ದಾವೆ ಹೊಡಿದ್ದರು. ವಾದ ಮತ್ತು ಪ್ರತಿವಾದಯು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ ಸಾಕ್ಷಿ ವಿಚಾರಣೆಯನ್ನು ಪರಿಗಣಿಸಿ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ 1972ನೇ ಅಪಾರ್ಟ್ಮೆಂಟ್ ಓನರ್ಶಿಪ್ ಆಕ್ಟ್ ಪ್ರಕಾರ ಮಾಲೀಕರು ತಮ್ಮ ಪ್ಲಾಟಿನ ವಿಸ್ತೀರ್ಣ ಅಥವಾ ಶೇಕಡಾವಾರು ಅವಿಭಜಿತ ಹಕ್ಕುಗಳುಸಾರವಾಗಿ…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಲಾಗಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಈಗ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಮರು ತನಿಖೆ ಕೋರಿ ಸೌಜನ್ಯ ಪೋಷಕರು ತಾಯಿ ಕುಸುಮಾವತಿ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರ ಜೊತೆಗೆ ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಕೂಡ ವಜಾ ವಜಾಗೊಳಿಸಲಾಗಿದೆ. ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಪೀಠದಿಂದ ಆದೇಶ ಹೊರಬಿದ್ದಿದೆ. ಈ ಮೂಲಕ ಮೂರೂ ಅರ್ಜಿಗಳನ್ನ ವಜಾಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ…
ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ‘ಇ’ ಆಟೋಗಳ ಯಾರು ಗೊಂದಲ ಸೃಷ್ಟಿ ಮಾಡಬೇಡಿ. ದೇಶಾದ್ಯಂತ ಇ ಆಟೋ ಗಳಿಗೆ ಇರುವ ನಿಯಮಗಳನ್ನೇ ದಕ್ಷಿಣ ಕನ್ನಡದಲ್ಲಿ ಜಾರಿಗೆ ತರಲಾಗಿದೆ ಹೊರತು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಯಾವುದೇ ರೀತಿಯ ಹೊಸ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೇಶಾದ್ಯಂತ ಇ ಆಟೋಗಳಿಗೆ ಪರ್ಮಿಟ್ ಯಾವುದೇ ನಿರ್ಬಂಧ ಹೇರುವಂತಿಲ್ಲ. ಈ ಬಗ್ಗೆ ಈ ಹಿಂದೆ ನಿಯಮಾವಳಿ ಜಾರಿ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ ಇ ಆಟೋ ಚಾಲಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕಾನೂನು ಪ್ರಕಾರ ಇ ಆಟೋ ಗಳಿಗೆ ಯಾವುದೇ ಪರ್ಮಿಟ್ ಬಗ್ಗೆ ನಿರ್ಬಂಧ ಹಾಕುವಂತಿಲ್ಲ. ಹೈಕೋರ್ಟ್ ಕೂಡ ಈ ಬಗ್ಗೆ ಕಾನೂನು ಪಾಲಿಸುವಂತೆ ಸೂಚನೆ ನೀಡಿತ್ತು ಎಂದ ಅವರು ಈ ಬಗ್ಗೆ ಆಟೋ ಚಾಲಕರ ಸಂಘಟನೆಗಳಿಗೆ ತಿಳಿಸಿಕೊಡಲಾಗಿದೆ. ಜಿಲ್ಲೆಯಲ್ಲಿ ಇ ಆಟೋ ಗಳಿಗೆ ಪ್ರತ್ಯೇಕ ಆದೇಶ ಯಾವುದು ಮಾಡಿಲ್ಲ.…
ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಮೋರ್ಗನ್ಸ್ ಗೇಟ್ – ಸ್ಟೇಟ್‌ಬ್ಯಾಂಕ್ ನಡುವೆ ಸಂಚರಿಸುವ ಪಿಟಿಸಿ ಎಂಬ ಖಾಸಗಿ ಬಸ್ ಗುರುವಾರ ಮಧ್ಯಾಹ್ನ ಕೊನೆಯ ಸ್ಟಾಪ್ ಸ್ಟೇಟ್‌ಬ್ಯಾಂಕ್ ಕಡೆಗೆ ಸಂಚರಿಸುತ್ತಿತ್ತು. ಬಸ್ ಮಿಲಾಗ್ರಿಸ್ ಸ್ಟಾಪ್‌ನಲ್ಲಿ ನಿಂತು ಹೊರಡಿತ್ತು. ಇನ್ನೇನು ಸಿಗ್ನಲ್ ತಲುಪುವ ಮೊದಲೇ ಬಸ್ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ ಕುಸಿದು ಬಿದ್ದಿದ್ದಾರೆ. ಬಸ್ ನಿಧಾನ ಗತಿಯಲ್ಲಿತ್ತು. ಅಲ್ಲಿಯೇ ಮುಂಭಾಗದಲ್ಲಿದ್ದ ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಕಾರು ಹಾಗೂ ಬಸ್ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ಆದರೆ ಅದೃಷ್ಟವಶಾತ್ ಆಟೊಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ…
ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್ ನೊರೋನ್ಹಾ (30) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್ ವಶಕ್ಕೆ ನೀಡಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು. ಒಟ್ಟು ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಶಾಜಹಾನ್. ಪಿ.ಎಂ(32) ಕೀಯೂರ್ ಹೌಸ್, ಚಂದ್ರಗಿರಿ ಪೋಸ್ಟ್, ಕಳನಾಡು, ಕಾಸರಗೋಡು ಜಿಲ್ಲೆ, ಕೇರಳ ಮೊಹಮ್ಮದ್ ನಿಶಾದ್(27), ದೇವರಡ್ಕ ಹೌಸ್, ಅಡೂರು, ದೇಲಂಪಾಡಿ ಪೋಸ್ಟ್, ಕಾಸರಗೋಡು ಜಿಲ್ಲೆ, ಕೇರಳ ಪ್ರಸ್ತುತ ರೂಮ್ ನಂಬ್ರ 305, ಸಾರಾ ಟವರ್, ಈಜಿಪುರ, ಕೋರಮಂಗಲ, 5ನೇ ಬ್ಲಾಕ್, ಬೆಂಗಳೂರು, ಮನ್ಸೂರು ಎಂ.ಎಂ(27), ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬೆ ಪಾಲ್ಸ್…
ಮಂಗಳೂರು: ಶ್ರೀಮಡಪ್ಪುರಾಯಿಲ್ ಶರ್ಫುದ್ದೀನ್ ಟ್ರೇಡಿಂಗ್ ಕಂಪೆನಿಯ ಮಹಿಳಾ ಲೆಕ್ಕಪರಿಶೋಧಕಿ 48 ಲಕ್ಷ ರೂ ಹಣಕಾಸು ವಂಚನೆಗೈದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಶ್ರೀಮಡಪ್ಪುರಾಯಿಲ್ ಶರ್ಫುದ್ದೀನ್ ಟ್ರೇಡಿಂಗ್ ಕಂಪೆನಿಯ ಹಣಕಾಸು ವ್ಯವಹಾರಗಳನ್ನು ಲೆಕ್ಕಪರಿಶೋಧಕಿ ಪುಷ್ಪಲತಾ ನೋಡಿಕೊಳ್ಳುತ್ತಿದ್ದರು. ಮಾಲಕ ಮತ್ತು ಆಡಿಟರ್ ಕಂಪೆನಿಯ ಹಣಕಾಸು ವ್ಯವಹಾರಗಳ ಸಮಗ್ರ ಪರಿಶೀಲನೆ ನಡೆಸಿದಾಗ ಕಳೆದ ಮೂರು ವರ್ಷಗಳಿಂದ ದೊಡ್ಡ ಹಣಕಾಸು ಅವ್ಯವಹಾರ ನಡೆದಿರುವುದು ಪತ್ತೆಯಾಗಿದೆ. 2024ರ ಜ.11ರಿಂದ 2024ರ ಆ.20ರವರೆಗೆ, 48,83,405 ರೂ. ಹಣ ಕಂಪೆನಿಯ ಸೌತ್ ಇಂಡಿಯನ್ ಬ್ಯಾಂಕ್ ಖಾತೆಯಿಂದ ಅಕ್ಸಿಸ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಪುಷ್ಪಲತಾ ಈ ಹಣವನ್ನು ತನ್ನ ಪರಿಚಿತ ರಿತೇಶ್ ಎಂಬಾತನ ಖಾತೆಗೆ ವರ್ಗಾಯಿಸಿದ್ದು, ಬಳಿಕ ತನ್ನ ಸೌತ್ ಇಂಡಿಯನ್ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದು ಕಂಡುಬಂದಿದೆ. ಪುಷ್ಪಲತಾ ಕಂಪನಿಯ ಜಿಎಸ್‌ಟಿ ಪಾವತಿಗೆ ಮೀಸಲಾಗಿದ್ದ 48,83,405 ರೂ. ಹಣವನ್ನು ತನ್ನ ಮತ್ತು ರಿತೇಶ್ ಖಾತೆಗೆ ವರ್ಗಾಯಿಸಿ, ವಿಶ್ವಾಸಘಾತುಕ ಮತ್ತು ವಂಚನೆ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ…
ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್ ಶುರೈಮ್(22)ನನ್ನು ಬಂಧಿಸಿದ್ದಾರೆ. ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ರಾತ್ರಿ ವೇಳೆ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುವ ರೈಲು ಹತ್ತಿದ್ದರು.ಬೆಳಗ್ಗೆ 11ಕ್ಕೆ ರೈಲು ಮೂಲ್ಕಿ ದಾಟಿದ ಬಳಿಕ ಆಕೆಗೆ ಆರೋಪಿ ಪದೇಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಳಿಕ ಗಲಾಟೆ ನಡೆದು ಕ್ಷಮೆ ಯಾಚಿಸಿದ್ದ. ಕೂಡಲೇ ಯುವತಿ ಆತನ ಚಿತ್ರ ತೆಗೆದು ರೈಲ್ವೇಗೆ ಆ್ಯಪ್ ಮೂಲಕ ದೂರು ನೀಡಿದ್ದರು. ಅನಂತರ ಉಡುಪಿ ರೈಲು ನಿಲ್ದಾಣಕ್ಕೆ ಬಂದ ಬಳಿಕ ರೈಲ್ವೇ ಪೊಲೀಸರಿಗೂ ದೂರು ನೀಡಿದ್ದರು. ರೈಲ್ವೇ ಪೊಲೀಸರು ಇದನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದರು. ಈ ನಡುವೆ ರೈಲ್ವೇ ಆ್ಯಪ್ ಮೂಲಕ ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಇಳಿದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.










