ಸುರತ್ಕಲ್: ಸುರತ್ಕಲ್ ಸಮೀಪದ ಮಧ್ಯಾಹ್ನದ ಗಣೇಶಪುರದಲ್ಲಿ ವೇಳೆ ಕೈಕಂಬ ಮಂಗಳಪೇಟೆ ರಸ್ತೆ ಬದಿ ನಿಗೂಢ ಸ್ಪೋಟದ ಶಬ್ದ ಕೇಳಿ ಬಂದು ಜನತೆ ಬೆಚ್ಚಿಬಿದ್ದ ಘಟನೆ ನಡೆದಿದೆ. ಸಮೀಪದ ರಿಕ್ಷಾ ಚಾಲಕರು, ಜನರು ಏನಾಯಿತು ಎಂದು ಸುತ್ತಮುತ್ತ ಹುಡುಕಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಗೂ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ಸಿಲಿಂಡರ್ ಮಾರಾಟ ಮಳಿಗೆಯಲ್ಲಿ ನಾಬ್ ಸಿಕ್ಕಿಸುವ ವೇಳೆ ಅದು ಆಕಸ್ಮಿಕವಾಗಿ ಹಾರಿದ ಕಾರಣ ಶಬ್ದ ಉಂಟಾಗಿದೆ ಎಂದು ತಿಳಿದುಬಂದಿದೆ. ಅನಂತರ ಅಲ್ಲಿನ ಜನ ನಿಟ್ಟುಸಿರು ಬಿಟ್ಟರು.
Author: main-admin
ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು. ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ. ಈ ಬಗ್ಗೆಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವದ್ಧರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟ ಬೆಂಗ್ರೆಯ ಧರ್ಮರಾಜ್ ಸುವರ್ಣ(50) ಬಂಧಿತ ಆರೋಪಿಯಾಗಿದ್ದಾನೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಚೂಂಪಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿ ಪಣಂಬೂರು ಪೊಲೀಸರು ಆರೋಪಿಯನ್ರಿನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿಸಿದ್ದಾರೆ. ಸೆಪ್ಟೆಂಬರ್ 21 ರಂದು ಈ ಕೊಲೆ ನಡೆದಿತ್ತು. ಬಂಧಿತ ಆರೋಪಿ ಧರ್ಮರಾಜ್ ಮೀನುಗಾರಿಕಾ ಕೆಲಸ ಮಾಡಿಕೊಂಡಿದ್ದು, ತೋಟಾ ಬೆಂಗ್ರೆಯಲ್ಲಿ ವಾಸಮಾಡಿಕೊಂಡಿದ್ದ. ಆರೋಪಿ ಧರ್ಮರಾಜ್ ಸುವರ್ಣ ಮತ್ತು ಮೃತ ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪ ಕಳೆದ ಕೆಲವು ಸಮಯದಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲ್ ನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಈ ಸಂದರ್ಭ ಆರೋಪಿ ಧರ್ಮರಾಜ್ …
ಮಂಗಳೂರು: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ. ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದ್ದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಫ್ಲೋಂಟ್ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆಯು ತಾತ್ಕಾಲಿಕವಾಗಿ ಮುಚ್ಚುಗಡೆ ಮಾಡಿದೆ. ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ರ ನಿರ್ದೇಶನದಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅವರು ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಫ್ಲೋಂಟ್ ಕ್ಲಿನಿಕ್ ನ್ನು ಮುಚ್ಚಿಸಿದ್ದಾರೆ. ಕಾಸ್ಮೆಟಿಕ್ ಸರ್ಜರಿಗೆ ಮುನ್ನ ಅರಿವಳಿಕೆ ನೀಡುವಾಗ ಎಸಗಿರುವ ನಿರ್ಲಕ್ಷ್ಯವೇ ಮಾಝಿನ್‌ರ ಸಾವಿಗೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿರುವ ವರದಿ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಮಾಝಿನ್ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯ ನಿವಾರಣೆಗಾಗಿ ಶನಿವಾರ ಫ್ಲೋಂಟ್ ಕ್ಲಿನಿಕ್ ಗೆ…
ಮುಲ್ಕಿ :ಪೊಲೀಸ್ ಠಾಣಾ ವ್ಯಾಪ್ತಿಯ ಎಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಬಳಿ ಶಾಂಭವಿ ನದಿಗೆ ಹೋಗುವ ರಸ್ತೆಯಲ್ಲಿ ಮರಳು ತುಂಬಿದ ಲಾರಿಯೊಂದು ಮುಗುಚಿ ಬಿದ್ದಿರುವುದಾಗಿ ಮಾಹಿತಿ ತಿಳಿದು ಮುಲ್ಕಿ ಪೊಲೀಸರು ಪಟ್ಟೆ ಕ್ರಾಸ್ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಬಯಲಿಗೆ ಬಂದಿದ್ದು ಮರಳನ್ನು ಸಹಿತ ಕ್ರೇನ್ ಹಾಗೂ ಜೆಸಿಬಿಯನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನಂದಿನಿನದಿ ಬದಿಗೆ ಹಾದು ಹೋಗುವ ಕಚ್ಚಾ ಮಣ್ಣು ರಸ್ತೆಯ ಇಳಿಜಾರು ಪ್ರದೇಶದಲ್ಲಿ ಸುಮಾರು 1 ಟಿಪ್ಪರ್ ಲಾರಿ ಲೋಡಿನಷ್ಟು ಸಾಮಾನ್ಯ ಮರಳು ಬಿದ್ದುಕೊಂಡಿದ್ದು ಸ್ಥಳದಲ್ಲಿದ್ದ ಕ್ರೇನ್ ನ ಅಪರೇಟರ್ ಜಬ್ಬರ್ ಬಳಿ ವಿಚಾರಿಸಿದಾಗ ಮರಳು ತುಂಬಿದ ಟಿಪ್ಪರ್ ಲಾರಿಯು ರಸ್ತೆ ಬದಿಗೆ ಬಿದ್ದಿರುವ ಬಗ್ಗೆ ಟಿಪ್ಪರ್ ಲಾರಿಯ ಮಾಲಕ ಸುಜಿತ್ ಎಂಬವರು ಕರೆ ಮಾಡಿದಂತೆ ತನ್ನ ಕ್ರೇನ್ ನಲ್ಲಿ ಟಿಪ್ಪರ್ ಲಾರಿಯನ್ನು ಮೇಲಕ್ಕೆತ್ತಲು ಕ್ರೇನ್ ಹಾಗೂ ಜೆಸಿಬಿ ಬಂದಿರುವುದಾಗಿ ತಿಳಿಸಿದ್ದಾನೆ.ಟಿಪ್ಪರ್ ಲಾರಿಯ ಪಕ್ಕದಲ್ಲಿ ನಿಂತುಕೊಂಡಿದ್ದ…
ಮಂಗಳೂರು: ಕಾಲಿಯ ರಫೀಕ್ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ನಿರಾಪರಾಧಿ ಎಂದು ಘೋಷಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶ ಮಲ್ಲಿಕಾರ್ಜುನ ಸ್ವಾಮಿ ಆದೇಶಿಸಿದ್ದಾರೆ. 2017 ಫೆ.14ರಂದು ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್‌ನಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗ ಕಾಲಿಯ ರಫೀಕ್ ಮತ್ತು ಆತನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆಸಿದ್ದರು. ಈ ಸಂದರ್ಭ ಪೆಟ್ರೋಲ್ ಬಂಕ್ ಕಡೆಗೆ ಓಡಿದ್ದ ಕಾಲಿಯ ರಫೀಕ್‌ನನ್ನು ಆರೋಪಿಗಳು ಬೆನ್ನಟ್ಟಿಕೊಂಡು ಹೋಗಿ ಗುಂಡು ಹಾರಿಸಿ ಹಾಗೂ ತಲವಾರಿನಿಂದ ತೀವ್ರ ಸ್ವರೂಪದ ಹಲ್ಲೆ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ 9ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ಅಂದಿನ ತನಿಖಾಧಿಕಾರಿ ಉಳ್ಳಾಲ ಠಾಣಾ ಪೋಲಿಸ್ ನಿರೀಕ್ಷಕ ಕೆ.ಆರ್.ಗೋಪಿಕೃಷ್ಣ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಕೊಲೆಗೆ ಕೇರಳ ರಾಜ್ಯದ ಮಂಜೇಶ್ವರದ ಹಿದಾಯತ್ ನಗರದ ಕ್ಲಬ್‌ನಲ್ಲಿ ಸಂಚಯ ರೂಪಿಸಿದ್ದರು. ಈ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಿಗೆ…
ಕಾರವಾರ: ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್ ಶವ ಪತ್ತೆಯಾಗಿದೆ. ಲಾರಿಯಲ್ಲೇ ಅರ್ಜುನ್ ಶವ ಇರುವುದು ಕಂಡುಬಂದಿದೆ. ಕೆಲ ದಿನಗಳಿಂದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಪುನಃ ಆರಂಭವಾಗಿ ಕಳೆದ ಆರು ದಿನಗಳಿಂದ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಈ ವೇಳೆ ಅರ್ಜುನ್ ಹಾಗೂ ಲಾರಿ ಪತ್ತೆಯಾಗಿದೆ. ಗುಡ್ಡಕುಸಿತ ಭೀಕರತೆ ತೋರಿಸುತ್ತಿರುವ ಲಾರಿ ಗುಡ್ಡಕುಸಿತಕ್ಕೆ ಸಿಕ್ಕಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಣ್ಣಿನ ಒಳಗೆ ಸಿಲುಕಿರುವ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಹುಡುಕಾಟ ನಡೆಸಲಾಗಿತ್ತು. ಆದರೆ ಟ್ಯಾಂಕರ್ ಬಿಡಿಭಾಗಗಳು ದೊರಕಿದ್ದವು. ಹಿಂದೆಯೇ ಈ ಟ್ಯಾಂಕರ್‌ನ ಟ್ಯಾಂಕ್ ದೊರೆತಿತ್ತು. ಬಳಿಕ ಅರ್ಜುನ ಚಲಿಸುತ್ತಿದ್ದ ಭಾರತ ಬೆಂಜ್ ಲಾರಿಯಲ್ಲಿ ನಾಟಾ ತುಂಬಿದ್ದು, ಆರಂಭದಲ್ಲಿಯೇ ನಾಟಾದ ಒಂದು ತುಂಡು ದೊರೆತಿತ್ತು. ಹಾಗಾಗಿ…
ಮಂಗಳೂರು: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಕಡಬ ದಿಂದ ರೋಗಿಯನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಡೀಲ್ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ಭೀಕರತೆಗೆ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 6 ವಾರಗಳ ತನಿಖೆ ಆಗಬೇಕು ಎಂದು ಕೋರ್ಟ್ ಆದೇಶ ನೀಡಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ…