ಉಡುಪಿ: ಜಿಲ್ಲೆಯ ಮಣಿಪಾಲ ಸರಳಬೆಟ್ಟು ಸಮೀಪ ನಡೆದ ದುರ್ಘಟನೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು, ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ನಡೆದ ಈ ಅಪಘಾತದಲ್ಲಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಶಾಲಾ ವಾಹನಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Author: main-admin
ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಗುರುಪುರ ಸಮೀಪದ ಅಡ್ಡರು ಕೆಳಗಿನಕೆರೆ ನಿವಾಸಿ ಅಫ್ರೀದ್ ಯಾನೆ ಅಪ್ಪಿ(20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ -2 ಪೊಕ್ಸ್ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಬಂಟ್ವಾಳ ತಾಲೂಕಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ 17 ವರ್ಷ ಪ್ರಾಯದ ಬಾಲಕಿಗೆ ಕಾರು ಚಾಲಕನಾಗಿದ್ದ ಅಫ್ರೀದ್‌ನ ಪರಿಚಯವಾಗಿದೆ. ಬಳಿಕ ಮಾತುಕತೆ ಮಾಡುತ್ತಲೇ ಪ್ರೀತಿಸುವುದಾಗಿ ಹೇಳಿ. ಮದುವೆಯಾಗುವುದಾಗಿ ನಂಬಿಸಿದ್ದ. 2024ರ ಮೇ 27ರಂದು ಬಾಲಕಿಯು ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಬಲತ್ಕರಿಸಿದ್ದ. ಅಲ್ಲದೆ ಕೃತ್ಯದ ವೀಡಿಯೋ ಮಾಡಿರುವುದಾಗಿ ಹೇಳಿ ಮುಂದೆ ದೈಹಿಕ ಸಂಪರ್ಕಕ್ಕೆ ಒಪ್ಪದಿದ್ದರೆ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದ. ನಂತರ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಮದುವೆಯಾಗುವುದಿಲ್ಲ ಎಂದು ಹೇಳಿ ವಂಚಿಸಿದ್ದ.…
ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ.
ಬೆಳ್ತಂಗಡಿ: ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡ ಘಟನೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಗುರುವಾರ(ಜು.09) ಬೆಳಗ್ಗೆ ಸಂಭವಿಸಿದೆ. ಗಾಯಾಳುಗಳನ್ನು ಮಂಗಳೂರಿನ ಕಾವೂರು ನಿವಾಸಿಗಳಾದ ವಿನಿತಾ(22), ಗೌರಮ್ಮ(49) ಮತ್ತು ಕೊಟ್ರೆಗೌಡ(55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರದ ಭೀಮಣ್ಣ(65), ಶ್ರೀನಿವಾಸ(32) ಮತ್ತು ಶಶಿಧರ(33) ಎಂದು ಗುರುತಿಸಲಾಗಿದೆ. ಅಪಘಾತದ ಬೆನ್ನಲ್ಲೇ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್, ಕಾರಿನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
ವಿಟ್ಲ: ಮೋಟಾರ್‌ಸೈಕಲ್ ಕೆಟ್ಟು ರಸ್ತೆ ಬದಿಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೇಂಟಿಂಗ್ ಕೆಲಸ ಮಾಡುತ್ತಿರುವ ಮಹಮ್ಮದ್ ನಸೀಫ್ (22) ಅವರು ನೀಡಿದ ದೂರಿನ ಪ್ರಕಾರ, ಜುಲೈ 7ರಂದು ಸಂಜೆ ಕೊಳಂಬೆಯಲ್ಲಿರುವ ತಮ್ಮ ಅಜ್ಜಿ ಮನೆಯಿಂದ ಮಾಣಿಯಲ್ಲಿರುವ ಬಾಡಿಗೆ ಮನೆಗೆ ಮೋಟಾರ್‌ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಅನಂತಾಡಿ ಗ್ರಾಮದ ಬಾಬನಕಟ್ಟೆ ಸಮೀಪ ವಾಹನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಸ್ನೇಹಿತ ಮಹಮ್ಮದ್ ಜಾಹೀದ್ ಡಿ ಅವರು ಸ್ಕೂಟರ್‌ನಲ್ಲಿ ಅಲ್ಲಿಗೆ ಬಂದಿದ್ದರು. ಆಗ ಆಟೋರಿಕ್ಷಾದಲ್ಲಿ ಬಂದ ವಿವೇಕ ಶೆಟ್ಟಿ, ಉಮೇಶ್ ಹಾಗೂ ಶಿವರಾಮ ಶೆಟ್ಟಿ ಎಂಬವರು ಆಟೋರಿಕ್ಷಾ ನಿಲ್ಲಿಸಿ ‘ನೀವು ಏಕೆ ಇಲ್ಲಿ ನಿಂತಿರುವುದು, ನೀವು ಬ್ಯಾರಿಗಳು ನಿಮಗೇನು ಕೆಲಸ ಇಲ್ಲಿ’ ಎಂದು ಹೇಳಿದಾಗ ದೂರುದಾರರು ಮೋಟರ್ ಸೈಕಲ್ ಹಾಳಾಗಿದ್ದು ಅದಕ್ಕೆ ರಸ್ತೆಯಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ನಂತರ ಆರೋಪಿತರು…
ಉಡುಪಿ : ಬ್ಲ್ಯಾಕ್‌ಮೇಲ್ ಮಾಡಿ 51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ಪೈಕಿ ಝೀನತ್ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಬಂಧಿತಳಾಗಿದ್ದಾಳೆ. ಬನ್ನಂಜೆಯ ತೇಜೇಶ್ವರ್ ರಾವ್ ಅವರು 2018ರಿಂದ 2022ರವರೆಗೆ ಉಡುಪಿಯ ಮಹಾಮಾಯ ಕಾಂಪ್ಲೆಕ್ಸ್‌ನಲ್ಲಿ ಮೋದಿಕೇರ್ ಸ್ಟಾಕ್ ಪಾಯಿಂಟ್ ಅಂಗಡಿಯನ್ನು ನಡೆಸುತ್ತಿದ್ದರು. ಇದೇ ಅವಧಿಯಲ್ಲಿ ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ಅವರ ಪರಿಚಯವಾಗಿತ್ತು. ಮೋದಿಕೇರ್ ಕಚೇರಿಯಲ್ಲಿ ಝೀನತ್ ಅವರು ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ವಿಡಿಯೊ ಮಾಡಿಕೊಂಡು, ಅದನ್ನು ದುರುಪಯೋಗಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿ ಅಕ್ರಮ ಲಾಭ ಪಡೆಯುವ ಉದ್ದೇಶದಿಂದ ತೇಜೇಶ್ವರ್ ರಾವ್ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಹಂತ ಹಂತವಾಗಿ 36,84,000 ರೂಪಾಯಿ ಹಣವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ. ಇನ್ನೊಬ್ಬ ಆರೋಪಿತೆ ಗೀತಾರಾವ್ ಅವರು ಸಹ ತೇಜೇಶ್ವರ್ ರಾವ್ ಅವರು…
ಬಂಟ್ವಾಳ: ಟೋಲ್ ಶುಲ್ಕ ಪಾವತಿಸದೆ ಟೋಲ್ ಗೇಟ್ ನ ಸೆನ್ಸಾರ್ ಬ್ಯಾರಿಯರ್ ಅನ್ನು ಮುರಿದು ಕಾರು ಚಲಾಯಿಸಿಕೊಂಡು ಹೋದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು ಟೋಲ್ ಗೇಟ್ ನಲ್ಲಿ ನಡೆದಿದೆ. ಸದ್ಯ ಟೋಲ್ ಗೇಟ್ ಸಹಾಯಕ ವ್ಯವಸ್ಥಾಪಕ ಯಶವಂತ ಕುಂದರ್ ಅವರು ನೀಡಿದ ದೂರಿನ ಮೇರೆಗೆ ಕಾರು ಚಾಲಕನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೋಲ್ ಶುಲ್ಕ ಪಾವತಿಸದ ಕಾರಣ ಸೆನ್ಸಾರ್ ಬ್ಯಾರಿಯರ್ ತೆರೆಯದೆ ವಾಹನವನ್ನು ತಡೆದಿತ್ತು. ಈ ವೇಳೆ ಕಾರಿನ ಚಾಲಕ ವಾಹನದಿಂದ ಇಳಿದು ಬಂದಿದ್ದು, ಟೋಲ್ ಸಿಬ್ಬಂದಿ ಶುಲ್ಕ ಪಾವತಿಸಿ ಮುಂದುವರಿಯುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಟೋಲ್ ಸಿಬ್ಬಂದಿಯನ್ನು ತಡೆದು ನಿಲ್ಲಿಸಿ, ಸೆನ್ಸಾರ್ ಗೇಟ್ ನ ಬಳಿಗೆ ತೆರಳಿ ಅದನ್ನು ಕೈಯಿಂದ ಮುರಿದು ಹಾಕಿ, ಬಳಿಕ ಕಾರನ್ನು ಚಲಾಯಿಸಿಕೊಂಡು ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಂಗಳೂರು: ಸುಮಾರು 12 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಜಪ್ಪು ನಿವಾಸಿ ಶಕೀಲ್ (33) ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2014ರ ಅಪರಾಧ ಸಂಖ್ಯೆ 236/2014ರಡಿ ಅಪಹರಣ ಹಾಗೂ ಡಕಾಯಿತಿ (IPC 364(A), 395 ಹಾಗೂ 34) ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದರಿಂದ, ಆತನ ವಿರುದ್ಧ Absconding Charge Sheet ಸಲ್ಲಿಸಲಾಗಿತ್ತು. ಬಳಿಕ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (Long Pending Case) ಎಂದು ಪರಿವರ್ತಿಸಿತ್ತು.ಆರೋಪಿ ಇರುವಿಕೆ ಕುರಿತು ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪುಟ್ಟರಾಮ (HC-465) ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಲಿಕ್ ಜಾನ್ (PC-2367) ಅವರು ನಂದಿಗುಡ್ಡ ಸರ್ಕಲ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಿಗ್ಗಾಮುಗ್ಗವಾಗಿ ಥಳಿಸಿರುವ ಘಟನೆ ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದೆ. ಅಲ್ಲದೆ ಧರ್ಮಗುರು ಮೇಲೆ ಹಲ್ಲೆಗೈದು ಕೊಲೆ ಬೆದರಿಕೆ ಹಾಕಲಾಗಿದೆ. ಮದರಸ ಕಲಿಸುವ ವೇಳೆ ವಿದ್ಯಾರ್ಥಿಗೆ ಧರ್ಮಗುರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೃಷ್ಣಾಪುರ ಭಾಗದ ದ್ವೈಬ ಮಸೀದಿಯ ಧರ್ಮ ಗುರುವಿನ ಮೇಲೆ ಹಲ್ಲೆ ನಡೆದಿದೆ ಮಗುವಿನ ತಂದೆ ತಾಯಿ ಮತ್ತು ಕುಟುಂಬದವರಿಂದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸೂರತ್ಕಲ್ ಠಾಣೆಗೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಮಸೀದಿ ಆಡಳಿತ ಹಾಗೂ ಧರ್ಮ ಗುರುವಿನಿಂದ ದೂರು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಉಡುಪಿಗೆ ಕೆಲಸಕ್ಕೆಂದು ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯ ಭರವಸೆ ನೀಡಿ ಗರ್ಭವತಿಯನ್ನಾಗಿ ಮಾಡಿದ ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಹಾಗೂ ಕೌಶಲ್ ಸೇರಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಡಿಸೆಂಬರ್ ತಿಂಗಳಿನಿಂದ ಒಬ್ಬರಾದ ಬಳಿಕ ಒಬ್ಬರು ದುರ್ಬಳಕೆ ಮಾಡುತ್ತಿದ್ದರು. ಬಾಲಕಿ ಸದ್ಯ 7 ತಿಂಗಳ ಗರ್ಭಿಣಿಯಾಗಿದ್ದು, ಆಪ್ತರ ಸಹಾಯದೊಂದಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.










