Author: main-admin

ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC GD) ಭರ್ಜರಿ ಸಿಹಿಸುದ್ದಿ ನೀಡಿದ್ದು, 50,000 ಕ್ಕೂ ಹೆಚ್ಚು SSC GD ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವೆಬ್‌ಸೈಟ್‌ನಲ್ಲಿನ ಅಧಿಕೃತ ಅಧಿಸೂಚನೆಯು 2024-2025 ನೇ ಸಾಲಿನ ಪರೀಕ್ಷೆಗಳ ತಾತ್ಕಾಲಿಕ ಕ್ಯಾಲೆಂಡರ್ ಪ್ರಕಾರ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಕಾನ್‌ಸ್ಟೆಬಲ್ (ಜಿಡಿ) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಎಸ್‌ಎಸ್‌ಎಫ್, ರೈಫಲ್‌ಮ್ಯಾನ್ (ಜಿಡಿ), ಮತ್ತು ನಾರ್ಕೋಟಿಕ್ಸ್ 2025ರ ಕಾನ್‌ಸ್ಟೆಬಲ್ ಪರೀಕ್ಷೆಗೆ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕಂಟ್ರೋಲ್ ಬ್ಯೂರೋ ಸೂಚನೆಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ 27.08.2024 ರಂದು ಪ್ರಕಟಿಸಬೇಕಿತ್ತು. ಆದಾಗ್ಯೂ, ಆಡಳಿತಾತ್ಮಕ ಕಾರಣಗಳಿಂದಾಗಿ, ಈ ಪರೀಕ್ಷೆಯ ಸೂಚನೆಯನ್ನು ಈಗ 05.09.2024 ರಂದು ಬಿಡುಗಡೆ ಮಾಡಲಾಗುತ್ತದೆ. ಅಧಿಕೃತ ಅಧಿಸೂಚನೆಯ ದಿನಾಂಕ: ಸೆಪ್ಟೆಂಬರ್ 5, 2024 ರಂದು SSC GD ನೇಮಕಾತಿ 2025 ರ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ವಯಸ್ಸಿನ ಮಿತಿ: ಅಭ್ಯರ್ಥಿಗಳ ವಯಸ್ಸಿನ ಮಿತಿಯು 1 ಜನವರಿ 2025 ರಂತೆ 18 ರಿಂದ 25 ವರ್ಷಗಳ ನಡುವೆ…

Read More

ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ (30), ಸೂರಜ್ ರೈ(26) ಬಂಧಿತ ಆರೋಪಿಗಳು. ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಸಾಗಿಸುತ್ತಿದ್ದರು. ಇಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಕೆ.ಸಿ.ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 75 ಸಾವಿರ ಮೌಲ್ಯದ 15 ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕಮಾಪಕ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,65,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ.ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ.ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Read More

ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ. ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು. ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ ಪಡಿತರ ಚೀಟಿಯ ಒರಿಜಿನಲ್ ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ. ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ. ನಿಮ್ಮ ಪಡಿತರ…

Read More

ಉಪ್ಪಿನಂಗಡಿ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಗರುಡ ಗ್ಯಾಂಗ್‌ನ ಸದಸ್ಯ ಹಾಗೂ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಆ. 27ರಂದು ಬಂಧಿಸಿದ್ದಾರೆ. ಕಡಬ ತಾಲೂಕು ಐತ್ತೂರು ಗ್ರಾಮದ ಕಾಯರ್ತಡ್ಕ ನಿವಾಸಿ ಝಕಾರಿಯಾ ಎಂಬವರ ಪುತ್ರ ಅಬ್ದುಲ್ ಹಮೀದ್ (27) ಬಂಧಿತ ಆರೋಪಿ. 2023ರ ಅಕ್ಟೋಬರ್ 10ರಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುವ ಕೆ.ಎನ್.ಆರ್. ಸಂಸ್ಥೆಯ ಕಬ್ಬಿಣದ ಶೀಟ್‌ಗಳನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ. ಅಲ್ಲದೇ ಈತನ ಮೇಲೆ ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಚೋದನೆ, ದಾವಣಗೆರೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದವಾಗಿ ಸಿಲುಕಿದ ಪ್ರಕರಣ,…

Read More

ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ ಇದುವರೆಗೆ ಬಂಧಿತರಾದವರ ಸಂಖ್ಯೆ 13ಕ್ಕೇರಿದೆ. ಕೇರಳ ತ್ರಿಶೂರ್ ನಿವಾಸಿಗಳಾದ ಡೆವಿನ್, ಗಾಡ್ವಿನ್, ಅಮಲ್‌ ಕೃಷ್ಣ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿಯ ರೇಮಂಡ್ ಡಿಸೋಜ, ನೀರುಮಾರ್ಗದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ, ತ್ರಿಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್ ಹುಸೇನ್, ಸಜೀಶ್ ಎಂ., ವಿನೋಜ್ ಪಿ.ಕೆ. ಹಾಗೂ ಕಾರು ಚಾಲಕ ಬಿಪಿನ್‌ರಾಜ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು. 13 ಮಂದಿ ಆರೋಪಿಗಳ ಪೈಕಿ ಮೂವರು ದ.ಕ. ಜಿಲ್ಲೆಯವರಾಗಿದ್ದರೆ ಉಳಿದ 10 ಮಂದಿ ಕೇರಳದವರು. ಬಂಧಿತ ಆರೋಪಿಗಳಿಂದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರ ಬಂಧನವಾಗಲು…

Read More

ಬಂಟ್ವಾಳ: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸ ಇರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಗುಡ್ಡ ಒಮ್ಮೆಲೇ ಪಕ್ಕದಲ್ಲಿ ವಾಸ ಇರುವ ಆಯಿಷಾ ಪೊನ್ನೋಟ್ಟು ಅವರ ಮನೆಯ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದೆ. ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ.ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ ಸಲ್ಲಿಸಿದ್ದರು. ಆದರೆ ಯಾರೂ ಸ್ಪಂದನೆ ನೀಡಿರುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Read More

ಪುತ್ತೂರು : ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ನೇಮಕಗೊಂಡಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರು ಕೇಂದ್ರ ಕಚೇರಿಯಲ್ಲಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ. ಇದೀಗ ಪುತ್ತೂರು ನಗರ ಪೊಲೀಸ್ ಠಾಣೆಗೆ ಇನ್‌ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.

Read More

ಮಣಿಪಾಲ: ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ ಅರೋಪಿ. 1993ರ ಜುಲೈ 21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ ಅವರ ಗದ್ದೆಯ ಬಳಿ : ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಅನಂತರ ಆತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್‌ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ಅವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್‌ ಠಾಣಾ ಸಿಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಕಟಪಾಡಿಯ ಮಣಿಪುರ ಗುಜ್ಜಿ ಹೌಸ್‌ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಬೆಂಗಳೂರು: ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನ ರಚಿಸಲಾಗಿದೆ. ಕಾರಾಗೃಹದ ನಿಯಮಗಳನ್ನ ಉಲ್ಲಘಿಸಿರುವ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್​ ಅವರೇ ಪ್ರಮುಖ ಆರೋಪಿಯಾಗಿದ್ದಾರೆ. ಮೂರೂ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ‌ ತಂಡಗಳನ್ನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ರಚಿಸಿದ್ದಾರೆ. ಮೊದಲನೇ ಪ್ರಕರಣದ ತನಿಖೆಯನ್ನ ಬೇಗೂರು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ನಡೆಸಲಿದ್ದಾರೆ. ದರ್ಶನ್ ಅವರು ಜೈಲಿನ ಲಾನ್​ನಲ್ಲಿ ರೌಡಿಶೀಟರ್ಸ್ ಜೊತೆ ಕುಳಿತು ಕಾಫಿ ಕುಡಿಯುತ್ತ ಸಿಗರೇಟ್ ಸೇದುತ್ತಿದ್ದುದರ ಕುರಿತು ತನಿಖೆ ನಡೆಯಲಿದ್ದು, ಲಾನ್​ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಕುರ್ಚಿಗಳ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಕೊಟ್ಟವರು ಯಾರು? ಸಿಗರೇಟ್, ಮದ್ಯ, ಮಾದಕವಸ್ತುಗಳು ಜೈಲಿನಲ್ಲಿ ನಿಷೇಧವಿದ್ದರೂ ಸಿಕ್ಕಿದ್ದು ಹೇಗೆ ಎಂದು ತನಿಖೆ ನಡೆಯಲಿದೆ. ಎರಡನೇ ಪ್ರಕರಣದ ತನಿಖೆಯ ಜವಾಬ್ದಾರಿಯನ್ನ ಹುಳಿಮಾವು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿಯವರಿಗೆ…

Read More