ಬಂಟ್ವಾಳ : ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೀರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ.ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.ಇದೀಗ ಗ್ರಾಮಾಂತರ ಎಸ್.ಐ.ಹರೀಶ್ ಅವರ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Author: main-admin
ಮಂಗಳೂರು: ಲೋಕಾಯುಕ್ತ ಎಂದು ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರನ್ನೇ ವಂಚಿಸಲು ಹೋದ ಖದೀಮನೋರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ಓ.ಡಿ.ಸಿ ಮಂಡಲ್, ವೆಂಕಟಾಪುರಂ ಪಂಚಾಯತ್, ನಲ್ಲಗುಟ್ಲಪಲ್ಲಿ ಗ್ರಾಮದ ನಿವಾಸಿ ಧನಂಜಯ ರೆಡ್ಡಿ ತೋಟ ಬಂಧಿತ ಆರೋಪಿ. 2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರ್ ಪುರುಷೋತ್ತಮ ಅವರ ಮೊಬೈಲ್‌ಗೆ ಅಪರಿಚಿತನಿಂದ ವಾಟ್ಸ್ಆ್ಯಪ್ ಕರೆ ಬಂದಿದೆ. ಅತ್ತಕಡೆಯಿಂದ ಮಾತನಾಡಿದ ಅಪರಿಚಿತ ‘ತಾನು ಲೋಕಾಯುಕ್ತದಿಂದ ಮಾತನಾಡುತ್ತಿದ್ದೇನೆ. ತಮ್ಮ ಮೇಲೆ ಆರೋಪ ಬಂದಿದೆ. ನಮ್ಮ ಟೆಕ್ನಿಕಲ್ ಆಫೀಸರ್ ನಿಮ್ಮ ಆಫೀಸಿಗೆ ಬರುವ ಮೊದಲು ಅದನ್ನು ಸರಿ ಮಾಡುವುದಾದರೆ ಮಾಡುವ’ ಎಂದು, ‘ಹಣ ನೀಡುವಂತೆ’ ತಿಳಿಸಿದ್ದಾನೆ. ‘ಇಲ್ಲವಾದಲ್ಲಿ ತೊಂದರೆ ಮಾಡುವುದಾಗಿ’ ಬೆದರಿಕೆ ಹಾಕಿದ್ದಾನೆ. ಆತ ಕರೆ ಮಾಡಿರುವ ಮೊಬೈಲ್ ಸಂಖ್ಯೆಯನ್ನು ಟ್ರೂಕಾಲರ್‌ನಲ್ಲಿ ಪರೀಶೀಲಿಸಿದಾಗ ಡಿ.ಪ್ರಭಾಕರ ಲೋಕಾಯುಕ್ತ ಪಿ.ಐ ಎಂದು ಬಂದಿದೆ. ಈ ಬಗ್ಗೆ ಪುರುಷೋತ್ತಮ ಅವರು ಕರ್ನಾಟಕ ಲೋಕಾಯುಕ್ತ ಮಂಗಳೂರು ಇಲ್ಲಿನ ಅಧಿಕಾರಿಗಳಲ್ಲಿ ಕರೆ ಮಾಡಿ ವಿಚಾರಿಸಿದ್ದಾರೆ. ಆಗ…
ಉಡುಪಿ: ಅಕ್ರಮ ಗೋವಾ ಮದ್ಯ ಮಾರಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ದಯಾನಂದನನ್ನು ಕೇರಳದ ತ್ರಿಶ್ಯೂರು ಜಿಲ್ಲೆಯ ಚಾಲಕುಡಿಯಲ್ಲಿರುವ ಆತನ ಮನೆಯಿಂದಲೇ ಉಡುಪಿ ಸೆನ್ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2009ರಲ್ಲಿ ಇಂದ್ರಾಳಿ ರೈಲು ನಿಲ್ದಾಣದ ಬಳಿ ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ದಯಾನಂದನನ್ನು ಅಂದಿನ ಜಿಲ್ಲಾ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಇನ್‌ಸ್ಪೆಕ್ಟರ್ ಸಿ.ಇ. ತಿಮ್ಮಯ್ಯ ಮತ್ತು ಸಿಬಂದಿ ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಆತ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಪುತ್ತೂರು: ನಾಯಿ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಆಟೋ ಚಾಲಕ ಬೊಳ್ವಾರ್ ನಿವಾಸಿ ಸೂರ್ಯ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಅವರ ಎಲೆಕ್ನಿಕ್ ಆಟೋ ಪಲ್ಟಿಯಾಗಿತ್ತು ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು : ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂದು ಗುರುತಿಸಲಾಗಿದೆ. ದಿನಾಂಕ 19.12.2024 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿತೆಯರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ. ಇನ್ನೊಂದು ಪ್ರಕರಣದಲ್ಲಿ ದಿನಾಂಕ 13-12-2024 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /-…
ಮಂಗಳೂರು: ಬೆಂಗ್ರೆಯ ಮರಳಿನ ಹಳ್ಳದ ನಿವಾಸಿ ಮೊಹಮ್ಮದ್ ರಮಶೀದ್ ಅಲಿಯಾಸ್ ರಮ್ಶಿ ಎಂಬಾತನಿಗೆ ದಕ್ಷಿಣ ಕನ್ನಡದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಎಫ್‌ಟಿಎಸ್‌ಸಿ-1 ಪೋಕ್ಸೋ) ಐದು ವರ್ಷಗಳ ಸಾದಾ ಸಜೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ಹೆಚ್ಚುವರಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಆರೋಪಿಯು ಜಾಮೀನು ಪಡೆಯಲು ಸಾಧ್ಯವಾಗದ ಕಾರಣ ಕಳೆದ ಐದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದರು. ಈ ಸಮಯದಲ್ಲಿ, ವಿಚಾರಣೆ ಪೂರ್ಣಗೊಂಡಿತು, ಮತ್ತು ಅವನ ಅಪರಾಧ ಸಾಬೀತಾಯಿತು. ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ನಿರ್ದೇಶನದಲ್ಲಿ ಮತ್ತು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ಧಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ಮಾಜಿ ಡಿಸಿಪಿ ಮನೋಜ್ ಕುಮಾರ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆ ನಡೆಸಲಾಯಿತು. ಪಣಂಬೂರು ಠಾಣೆ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ತನಿಖೆಯ ಮೇಲ್ವಿಚಾರಣೆ ನಡೆಸಿದ್ದು, ಪ್ರಸ್ತುತ…
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನಲ್ಲಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೈಸೂರಿನ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್, ಹೆಚ್.ಡಿ ಕೋಟೆ ಆಲನಹಳ್ಳಿಯ ಕುಮಾರ ನಾಯಕ್ ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಗಳು, ಅರಣ್ಯ ಸಂಚಾರ ದಳದ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.ವ್ಯಾಘ್ರ ಉಗುರನ್ನು ಪದಕವನ್ನಾಗಿ ಧರಿಸುವುದರಿಂದ ಹೃದಯಕ್ಕೆ ಹತ್ತಿರವಾಗಿ ಧರಿಸುವುದು ಅದೃಷ್ಟ ಮತ್ತು ರಕ್ಷಣೆಯನ್ನು ತರುತ್ತದೆ. ಹುಲಿ ಉಗುರಿನ ಲಾಕೆಟ್ ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ಹಿಂದಿನಿಂದಲೂ ನಂಬಿಕೊಂಡು ಬರಲಾಗಿದೆ. ಆದುದರಿಂದ ಹುಲಿ ಉಗುರಿನ ಅಕ್ರಮ ಸಾಗಾಟ ನಡೆಯುತ್ತೆ. ಆದರೆ ಇದು ಕಾನೂನು ಬಾಹಿರ.
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಲು ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಇಬ್ಬರು ಆರೋಪಿಗಳನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ರಾಜ್ಯದ ಗಂಜಂ ಜಿಲ್ಲೆಯ ನೌಗಾನ ತಾಲೂಕಿನ ರಂಪ ಗ್ರಾಮದ ನಿವಾಸಿ ಕಣಾತಲ ವಾಸುದೇವ ರೆಡ್ಡಿ (25) ಮತ್ತು ಕೇರಳ ರಾಜ್ಯದ ಕೋಝಿಕೋಡ್‌ನ ತಾಮರಚೇರಿ ರಾರೋತ್, ಪರಪ್ಪನ್ ಪೊಯಿಲ್ ನಿವಾಸಿ ಜಯಂತ್ ಪಿ (35) ಬಂಧಿತ ಆರೋಪಿಗಳು. ಕಣಾತಲ ವಾಸುದೇವ ರೆಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಬರುವ ಆಮಿಷವೊಡ್ಡಿ ‘ಸ್ಟೋಕ್ ಫ್ರಂಟ್ ಲೈನ್’ ಎಂಬ ಲಿಂಕ್ ಕಳುಹಿಸಿ ವ್ಯಕ್ತಿಯೊಬ್ಬರಿಂದ ಹಂತಹಂತವಾಗಿ ಒಟ್ಟು 10,84,017 ರೂಪಾಯಿ ಪಡೆದು ವಂಚನೆ ಮಾಡಿದ್ದ ಎಂದು ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಸ್ತಗಿರಿಯಾಗಿದ್ದ ನಡವೂಲು ವೀರ ವೆಂಕಟ ಸತ್ಯ ನಾರಾಯಣ ರಾಜು ಎಂಬಾತನ ಹೇಳಿಕೆಯ ಆಧಾರದಲ್ಲಿ ಭಾರತದಿಂದ 500ಕ್ಕೂ ಅಧಿಕ ಕಂಪೆನಿಗಳ ಸಿಮ್‌ಗಳನ್ನು ದುಬೈನಲ್ಲಿ ಸೈಬರ್ ವಂಚಕರಿಗೆ ಮಾರಾಟ ಮಾಡಿದ್ದ, ಕಣಾತಲ…
ಮಂಗಳೂರು: ಡಿಎಲ್ ಇಲ್ಲದೆ ವಾಹನ ಚಲಾಯಿಸಿ ಅಪಘಾತ ನಡೆಸಿದ ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಐ ವಿದ್ಯಾರ್ಥಿಯಾದ ಆತ ಡಿಸೆಂಬರ್ 11 ರಂದು ದ್ವಿಚಕ್ರ ವಾಹನ ಚಲಾಯಿಸಿ ಅಪ ಘಾತ ನಡೆಸಿದ್ದು ಈತನಲ್ಲಿ ಡಿಎಲ್ ಇರಲಿಲ್ಲ. ಆ್ಯಕ್ಟಿವಾ ಸವಾರನೊಂದಿಗೆ ಮಾತುಕತೆ ನಡೆಸಿದ ಪ್ರಕಾರ ಹಣ ನೀಡಲು ವ್ಯವಸ್ಥೆಯಾಗದ ಕಾರಣ ಹಾಗೂ ಇದರಿಂದ ಕೇಸ್ ಆದರೆ ತೊಂದರೆಯಾಗುತ್ತದೆ ಎಂದು ಹೆದರಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುರತ್ಕಲ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.
ಮುಲ್ಕಿ : ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡ್ ಗ್ರಾಮದ ವನಭೋಜನ ಬಳಿ ಕಳೆದ 2020 ಜನವರಿ30ರಂದು ನಡೆದ ಶರಣಪ್ಪ (31) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಬಿಹಾರ ಮೂಲದ ಸನ್ನಿಬಾಬು ಮತ್ತು ಗಲ್ಲುರಾಮ ಅಲಿಯಾಸ್ ಸಚಿನ್ ಎಂಬವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ನೇ ಜನವರಿ 30ರಂದು ರಾತ್ರಿ ಸುಮಾರು 10 ಗಂಟೆಗೆ ಮುಲ್ಕಿ ಸಮೀಪದ ಕಾರ್ನಾಡ್ ವನಭೋಜನ ಬಳಿ ಮೃತ ಶರಣಪ್ಪನು ಆರೋಪಿಗಳಿಗೆ ಹಾಗೂ ಆರೋಪಿಗಳ ತಂದೆ -ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಗಳು ಶರಣಪ್ಪನ ಕುತ್ತಿಗೆಗೆ ಚೂರಿಯಿಂದ ಕೊಲೆಮಾಡಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಗಳನ್ನು, ವಿಚಾರಣೆ ನಡೆಸಿದ 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್•ವಿ ರವರು ಒಂದು ಮತ್ತು ಎರಡನೇ ಆರೋಪಿಗಳಿಗೆ ಕಲಂ 302 ಐಪಿಸಿ ಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10000 ದಂಡ, ಹಾಗೂ 341ಐಪಿಸಿ ಗೆ…










