ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಕರಂಬಳ್ಳಿಯಲ್ಲಿ ನಡೆದಿದೆ.ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎಂಬ ಮಾಹಿತಿ ಲಭಿಸಿದೆ.
Author: main-admin
ತುಮಕೂರು : ಶ್ರಾವಣ ಶನಿವಾರ ಪ್ರಯುಕ್ತ ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ನಡೆದಿದೆ. ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ವಾಂತಿ, ಭೇದಿ ಕಾಣಿಸಿಕೊಂಡು ಮೂವರು ಮಹಿಳೆಯರು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವರ ಜಾತ್ರೆಯಲ್ಲಿ ಮಾಡಿದ್ದ ಪ್ರಸಾದ ಸೇವನೆಯಿಂದ ಇವರು ಮೃತಪಟ್ಟಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ. ಬುಳ್ಳಾಸಂದ್ರ ಗ್ರಾಮದ ಮುತ್ತುರಾಯಸ್ವಾಮಿ, ಕರಿಯಮ್ಮ ದೇವಿ, ಭೂತಪ್ಪ ಸ್ವಾಮಿ ದೇವರಿಗೆ ಹರಿಸೇವೆ ಏರ್ಪಡಿಸಿದ್ದು, ಆರತಿ ಬೆಳಗಿದ ಹೆಣ್ಣು ಮಕ್ಕಳು ಪ್ರಸಾದವಾಗಿ ಹೆಸರುಬೇಳೆ ಪಾಯಸ, ಅನ್ನ ಸಾಂಬಾರ್ ಸೇವಿಸಿ ಮನೆಗೆ ಮರಳಿದ್ದಾರೆ. ನಂತರ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಿಮ್ಮಕ್ಕ(90), ಹಿರಿಯಮ್ಮ(80), ಕಾಟಮ್ಮ(40) ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ. ಗ್ರಾಮದ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡಲಾಗಿದೆ.
ಮಂಗಳೂರು: ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡಿನ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್‌ನಲ್ಲಿ ನಡೆದಿದೆ. ಬೇಡಡ್ಕ ತೆಕ್ಕೆಕರೆ ನಿವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಪಿ.ಶ್ರೀನೇಶ್ (39) ಮೃತಪಟ್ಟವರು. ಕಾಞಂಗಾಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿನಿಂದ ಬೇಡಡ್ಕಕ್ಕೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಪಡನ್ನ ಕ್ಯಾಡ್ ಮೇಲು ಸೇತುವೆಯಲ್ಲಿ ಈ ಅಪಘಾತ ನಡೆದಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮುಂಬಯಿಯ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಗುಜರಾತ್ ರಾಜ್ಯದ ಸೂರತ್ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್ ಭಾಯಿ/ಗಣೇಶ್ ಭಾಯಿ (44), ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಆಕಾಶವಾಣಿ ಚೌಕ್ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್ ಕಮಲೇಶ್ ಚೌಹಾನ್ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್ ಫೋನ್‌ಗಳನ್ನು ಹಾಗೂ 13.95 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ವೈದ್ಯರಾಗಿರುವ ಡಾ| ಅರುಣ್ ಕುಮಾರ್ (53) ಅವರಿಗೆ ಜು. 29ರಂದು ಅಪರಿಚಿತ ವ್ಯಕ್ತಿಗಳು ಫೋನ್ ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ, ನಿಮ್ಮ ಆಧಾರ್ ನಂಬರ್ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200 ಗ್ರಾಂ. ಎಂಡಿಎಂಎ ಹಾಗೂ 5000 ಯುಎಸ್…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿತ್ತು. ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡ ವೈರಲ್ ಆಗಿತ್ತು. ಇದೀಗ ಇದರ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ಬಳಿಕ ಈ…
ಉಡುಪಿ: ಇತ್ತೀಚೆಗೆ ಕಾಡಬೆಟ್ಟುವಿನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನ ಆರೀಫ್ ಮುನ್ನಾ ಮೊಹಮ್ಮದ್ ಆರೀಫ್ ಬಂಧಿತ ಆರೋಪಿ.ಕಾಡಬೆಟ್ಟು ರಾಮಣ್ಣ ಶೆಟ್ಟಿ ಕಾಲನಿಯ ಜೀವನ ನಗರ ಎಂಬಲ್ಲಿ ಟಿ. ಪ್ರಶಾಂತ್ ಪೈ ಅವರ ನಿವಾಸದಲ್ಲಿ ಇತ್ತೀಚೆಗೆ ಆರೋಪಿ ಕಳವು ಮಾಡಿದ್ದ. ಆರೋಪಿಯು ಮನೆಯ ಮುಖ್ಯ ಬಾಗಿಲನ್ನು ಯಾವುದೋ ಸಾಧನ ಬಳಸಿ ಮುರಿದು ಒಳಗೆ ಪ್ರವೇಶಿಸಿದ್ದ. ಬಳಿಕ ದೇವರ ಫೋಟೋ ಮೇಲಿದ್ದ ಸುಮಾರು ತಲಾ ಒಂದು ಗ್ರಾಂ ತೂಕವಿರುವ 7 ಚಿನ್ನದ ಲಕ್ಷ್ಮೀ ಪದಕವಿರುವ ಮಾಲೆಯನ್ನು ಕಳವು ಮಾಡಿದ್ದು, ಆತ ಕಳ್ಳತನ ಮಾಡಿದ್ದ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 35,000 ರೂ. ಆಗಿತ್ತು.ಪೊಲೀಸರ ವಿಶೇಷ ತಂಡವು ಆ. 24ರಂದು ಆರೋಪಿಯನ್ನು ಉಡುಪಿಯ ಕೃಷ್ಣ ಮಠದ ರಾಜಾಂಗಣದ ಬಳಿ ಬೈಕ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯು ಉಡುಪಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಟ್ಟು 35,964ರೂ. ಮೌಲ್ಯದ 5.400 ಗ್ರಾಂ ಚಿನ್ನಾಭರಣ ಹಾಗೂ ಕಳವು ಮಾಡಲು ಬಳಸಿದ ಹೀರೋ ಹೊಂಡಾ ಸ್ಪೆಂಡರ್…
ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ಈ ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ. ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿದ್ದು ಎಂದು ತಿಳಿಸಿದ್ದಾನೆ. ಬಳಿಕ ಆರೋಪಿ ಅಲ್ತಾಫ್ ತೋರಿಸಿದ ಪುಡಿಯನ್ನು ಪೊಲೀಸರು ಎಫ್ಎಸ್‌ಎಲ್ ಗೆ ಕಳುಹಿಸಲಾಗಿದ್ದು, ಅದು ಯಾವ ಡ್ರಗ್ಸ್ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಸಂತ್ರಸ್ತೆಯ ರಕ್ತದಲ್ಲಿ ಪತ್ತೆಯಾಗಿರುವುದು ಇದರದ್ದೇ ಅಂಶವೇ ಎಂಬ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ.ಅರುಣ್ ತಿಳಿಸಿದ್ದಾರೆ.
ಮುಲ್ಕಿ: ಇಲ್ಲಿನ ಕೊಲಕಾಡಿ ರೈಲ್ವೇ ಗೇಟ್ ಬಳಿ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಉತ್ತರ ಪ್ರದೇಶ ಕನೋಜ್ ಜಿಲ್ಲೆಯ ರೊಹಿಲಾ ನಿವಾಸಿ ಸ್ವದೇಶ್ ಅಲಿಯಾಸ್ ಸುದ್ದನ್ ಸಿಂಗ್ (21) ಎಂದು ಗುರುತಿಸಲಾಗಿದೆ. ಮೃತ ಸ್ವದೇಶ್ ಕೃಷಿ ಕೆಲಸ ಮಾಡುತ್ತಿದ್ದು ತನ್ನ ಸ್ನೇಹಿತರೊಂದಿಗೆ ಕೇರಳದ ಕಾಸರಗೋಡು ಜಿಲ್ಲೆಯ ಕಣ್ಣೂರಿಗೆ ಕೂಲಿ ಕೆಲಸಕ್ಕೆ ಎಂದು ಉತ್ತರ ಪ್ರದೇಶದ ಮಥುರಾ ದಿಂದ ನಿಜಾಮುದ್ದೀನ್ ಎಕ್ಸ್ಪ್ರೆಸ್‌ನಲ್ಲಿ ಆಗಸ್ಟ್ 23 ರಂದು ಹೊರಟಿದ್ದು ಅಗಸ್ಟ್ 25ರ ಮುಂಜಾನೆ ಮುಲ್ಕಿ ಸಮೀಪದ ಕೊಲಕಾಡಿ ರೈಲ್ವೇ ಗೇಟ್ ಬಳಿ ಸ್ವದೇಶ್ ರೈಲಿನ ಬಾಗಿಲು ಬಳಿ ಕಿವಿಗೆ ಹೆಡ್ ಫೋನ್ ಇರಿಸಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ರೈಲು ಹಳಿ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ವಿಕ್ರಂ ಸಿಂಗ್ ಎಂಬಾತ ನೀಡಿದ ದೂರಿನಂತೆ ಮುಲ್ಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಇವತ್ತು ನಟ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿದೆ. ಹೌದು ಪರಪ್ಪನ ಅಗ್ರಹಾರ ಜೈಲಿನ ಸ್ಪೆಷಲ್ ಬ್ಯಾರಕ್ ನ ಹೊರಗಡೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಮತ್ತೊಬ್ಬ ವ್ಯಕ್ತಿಯ ಜೊತೆ ದರ್ಶನ್ ಅವರು ಚೇರ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ಸ್ಪೆಷಲ್ ಬ್ಯಾರಕ್ ನಿಂದ ದರ್ಶನ್ ರೌಡಿಗಳ ಜೊತೆಗೆ ಆಚೆ ಕುಳಿತಿರುವ ಫೋಟೋ ಇದೀಗ ವೈರಲ್ ಆಗಿದೆ.ರೇಣುಕಾ ಸ್ವಾಮಿ ಕೊಲೆ ಪ್ರಕರಣದ 11ನೆ ಆರೋಪಿ ನಾಗರಾಜ್, ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತೊಬ್ಬರ ಜೊತೆ ದರ್ಶನ್ ಕಾಫಿ ಕುಡಿಯುತ್ತಿದ್ದಾರೆ ಎನ್ನುವ ಫೋಟೋ ಇದೀಗ ವೈರಲ್ ಆಗಿದೆ. ಎರಡು ದಿನಗಳ ಹಿಂದೆ ಜೈಲಿನ ಮೇಲೆ ಸಿಸಿಬಿ…
ಉಡುಪಿ: ಇತ್ತೀಚೆಗೆ ವರದಿಯಾಗಿದ್ದ ಕಾರ್ಕಳದಲ್ಲಿನ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ , ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ನನ್ನು ಪೊಲೀಸ್ ಕಸ್ಟಡಿಗೆ ಕಾರ್ಕಳ ನಗರಠಾಣೆ ಪೊಲೀಸರು ಕೇಳಿದ್ದರು. ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.ಸಂತ್ರಸ್ತ ಯುವತಿಗೆ ಇನ್‌ಸ್ಟಾಗ್ರಾಂ ಮೂಲಕ ಅಲ್ತಾಫ್ ಪರಿಚಯವಾಗಿದ್ದ. ನಂತರ ಯುವತಿಯನ್ನು ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಸ್ನೇಹಿತರನ್ನು ಕರೆಸಿ ಬಿಯರ್ ಅದರಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿವೆ.









