ಪುತ್ತೂರು: ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕನ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಸರಗೋಡು ಮುಳ್ಳೇರಿಯ ನಿವಾಸಿ ರಾಘವೇಂದ್ರ ಕೆದಿಲಾಯ(52), ಮುರಳೀಕೃಷ್ಣ (20) ಎಂದು ಗುರುತಿಸಲಾಗಿದೆ. ಆಗಸ್ಟ್ 20 ರಂದು ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡಕ್ಕಿಲ್ಲಾಯ (83) ಎಂಬವರನ್ಮು ಕಡಿದು ಕೊಲೆಮಾಡಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ ವೇಳೆ ಇಬ್ಬರು ಬಾಯಿಬಿಟ್ಟಿದ್ದಾರೆ. ಬಂಧಿತ ಆರೋಪಿಗಳಲ್ಲಿ ಓರ್ವನ ಮೇಲೆ ಕೇರಳದ ಬದಿಯಡ್ಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳ ಬಂಧನ ಬಾಕಿ ಇದೆ.
Author: main-admin
ಕಾಸರಗೋಡು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್ ರಮೇಶ್ ಬಿ . ಎನ್. (50) ಮೃತ ಪಟ್ಟ ಘಟನೆ ನಡೆದಿದೆ. ಕಲ್ಲಕಟ್ಟ ಪಾಂಬಾಚಿ ಕಡವು ನಿವಾಸಿಯಾಗಿದ್ದ ರಮೇಶ್ ಬುಧವಾರ ರಾತ್ರಿ ಯಿಂದ ನಾಪತ್ತೆಯಾಗಿದ್ದರು. ಚಂದ್ರಗಿರಿ ಸೇತುವೆ ಬಳಿಯಿಂದ ಅಪರಿಚಿತ ವ್ಯಕ್ತಿ ಹಾರಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ, ಪೊಲೀಸರು ಮತ್ತು ಹಾಗೂ ಪರಿಸರವಾಸಿಗಳು ಶೋಧ ನಡೆಸಿದ್ದರು. ಶನಿವಾರ ಬೆಳಿಗ್ಗೆ ನೆಲ್ಲಿಕುಂಜೆ ಹಾರ್ಬರ್ ಸಮೀಪ ಸಮುದ್ರದಲ್ಲಿ ಮೃತ ದೇಹ ಪತ್ತೆ ಯಾಗಿವೆ.ರಮೇಶ್ ಬಳಸುತ್ತಿದ್ದ ಸ್ಕೂಟರ್ ಚಂದ್ರಗಿರಿ ಸೇತುವೆ ಬಳಿ ಸ್ಕೂಟರ್ ಪತ್ತೆಯಾಗಿತ್ತು.ಸ್ಕೂಟರ್ ಪತ್ತೆಯಾ ದುದುರಿಂದ ಸಂಶಯಗೊಂಡು ನಾಗರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.ಕಳೆದ 32 ವರ್ಷಗಳಿಂದ ಸಹಕಾರಿ ಬ್ಯಾಂಕ್ ನ ಪಿಗ್ಮಿ ಕಲೆಕ್ಟರ್ ಆಗಿ ದುಡಿಯುತ್ತಿದ್ದರು. ಕಾಸರಗೋಡು ಠಾಣಾ ಪೊಲೀಸರು ಮಹಜರು ನಡೆಸಿದರು.
ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಬೆಳಾಲು ಗ್ರಾಮದ ನಿವಾಸಿ ನಿವೃತ್ತ ಮುಖ್ಯೋಪಾಧ್ಯಯ ಎಸ್. ಪಿ ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಎಂಬವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವನು ಅಫರಾಧಿಕ ಹಿನ್ನೆಲೆ ಹೊಂದಿದ್ದು ಆತನ ವಿರುದ್ದ ಕೇರಳ ರಾಜ್ಯದ ಬಡಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವು ದಾಖಾಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವ ಬಗ್ಗೆಯೂ ತಿಳಿದು ಬಂದಿರುತ್ತದೆ.
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಮತ್ತು ಮಗ ಪ್ರಜ್ವಲ್ ರೇವಣ್ಣ ರಾಸಲೀಲೆಗಳು ಈಗ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಅಪ್ಪ-ಮಗನ ರಾಸಲೀಲೆಯ ವಿವರ ಬಯಲಾಗಿದೆ. ಪ್ರಜ್ವಲ್ ಬಸವನಗುಡಿಯ ಮನೆಯಲ್ಲಿ ದೂರುದಾರ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವುದು ನಿಜ ಎಂದು ಚಾರ್ಜ್ ಶೀಟ್ ನಲ್ಲಿ ಹೇಳಲಾಗಿದೆ. ಇನ್ನು ಎಚ್ ಡಿ ರೇವಣ್ಣ ಹಣ್ಣು ಕೊಡುವ ನೆಪದಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಈಗ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ, ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸ್ ಐಟಿ ಅಧಿಕಾರಿಗಳು ಒಟ್ಟು 2144 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 150 ಸಾಕ್ಷಿಗಳ ಉಲ್ಲೇಖ ಮಾಡಲಾಗಿದೆ. ಚಾರ್ಜ್ ಶೀಟ್ ನಲ್ಲಿ ಪ್ರಜ್ವಲ್ ಬಗ್ಗೆ ಏನೇನಿದೆ?ಬೆಂಗಳೂರಿನ ಮನೆಯಲ್ಲಿ ಸಂತ್ರಸ್ತೆಯ…
ಬೆಂಗಳೂರು : ಬೆಳ್ಳಂಬೆಳಿಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿರುವ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ನಟೋರಿಯಸ್ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸುನೀಲ ಸೇರಿದಂತೆ ಹಲವು ಆರೋಪಿಗಳು ಕೇಂದ್ರ ಕಾರಾಗೃಹದಲ್ಲಿದ್ದು ಜೈಲಿನಲ್ಲಿ ಕೂತು ಹೊರಗಡೆ ಇರುವ ಸಹಚರರ ಮೂಲಕ ಅಪರಾಧ ಚಟುವಟಿಕೆಗಳನ್ನ ನಿಯಂತ್ರಿಸುತ್ತಿದ್ದಾರೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿತ್ತು. ಅಲ್ಲದೆ ಕೇಂದ್ರ ಕಾರಾಗೃಹದಲ್ಲಿರುವ ಕೆಲವು ಅಪರಾಧಿಗಳನ್ನ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸುವ ಪ್ರಸ್ತಾಪ ಸಹ ಇದೆ. ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯೇ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ್ದು, ಬ್ಯಾರಕ್‌ನಲ್ಲಿ ಮೊಬೈಲ್, ಶಸ್ತ್ರಾಸ್ತ್ರ ಸೇರಿದಂತೆ ಹಲವು ವಸ್ತುಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಮೊಬೈಲ್ ಫೋನ್ ಸ್ಟೋರ್ ಒಂದರ ಉದ್ಯೋಗಿ ಮೊಹಮ್ಮದ್ ಶಿಬಾನ್ ಎಂಬಾತ 7 ಮೊಬೈಲ್ ಫೋನ್ (ಒಟ್ಟು 2,36,510 ರೂ. ಮೌಲ್ಯ) ಮತ್ತು ಅಂಗಡಿಯ ಕ್ಯಾಶ್ ಡ್ರಾಯರ್ ನಲ್ಲಿದ್ದ 58,100 ರೂ. ನಗದು ಕಳವು ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಜಾನ್ವಿ ಪ್ಲಾಝಾದಲ್ಲಿರುವ ಮೊಬೈಲ್ ಅಂಗಡಿಯ ಸ್ಟೋರ್ ಮ್ಯಾನೇಜರ್ ಸಂದೇಶ್ ಶೆಟ್ಟಿ ಎನ್ನುವವರು ರಜೆಯಲ್ಲಿ ತೆರಳುವ ಕಾರಣಕ್ಕೆ ಸ್ಟೋರ್‌ನ ಸಂಪೂರ್ಣ ಹೊಣೆಯನ್ನು ಮೊಹಮ್ಮದ್ ಶಿಬಾನ್‌ಗೆ ವಹಿಸಿದ್ದರು. ಆದರೆ ಆತ ಕಂಪೆನಿಯ ಕೆಲಸ ವನ್ನು ಸರಿಯಾಗಿ ನಿರ್ವಹಿಸದೇ ಇದ್ದುದರಿಂದ ಅವರು ರಜೆಯನ್ನು ಅರ್ಧದಲ್ಲಿ ಮೊಟಕು ಗೊಳಿಸಿ ಬಂದಾಗ ಸ್ಟೋರಿನ ಬಾಗಿಲು ಹಾಕಲಾಗಿತ್ತು. ಈ ಬಗ್ಗೆ ಕಂಪೆನಿಯ ಮೇಲಾ ಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಅನುಮತಿ ಮೇರೆಗೆ ಬಾಗಿಲನ್ನು ತೆರೆದಾಗ ಅಂಗಡಿಯ ಒಳಗಿನ ಸೊತ್ತುಗಳು ಅಸ್ತವ್ಯಸ್ತವಾಗಿದ್ದವು. ಅವರು ಬೆಂಗಳೂರಿನಿಂದ ಬಂದು ಅಡಿಟ್ ಮಾಡಿ ಪರಿಶೀಲಿಸಿದಾಗ ಅಂಗಡಿಯಲ್ಲಿದ್ದ 7 ಮೊಬೈಲ್ ಫೋನ್‌ಗಳು…
ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ಒಂದು ನಡೆದಿದೆ ಎನ್ನಲಾದ ಘಟನೆ ಇಂದು ಸಂಭವಿಸಿದೆ. ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಯುವತಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 4 ಮಂದಿ ಈ ಕೃತ್ಯದಲ್ಲಿ ತೊಡಗಿದ್ದು, ಇದರಲ್ಲಿ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಕಿ ಗ್ಯಾಂಗ್ ರೇಪ್ ಮಾಡಿದವರ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯ ಆಗಬೇಕಿದೆ. ಅನ್ಯ ಕೋಮಿನ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯ ಆಗಿದ್ದು, ಸಂಪೂರ್ಣ ಮಾಹಿತಿಯನ್ನು ಪೊಲೀಸರು ಇನ್ನಷ್ಟೇ ಹೇಳಬೇಕಾಗಿದೆ. ಈ ಕುರಿತು ಹಿಂದೂ ಸಂಘಟನೆಗಳು ದುಷ್ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.
ಪುತ್ತೂರು: ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು. ವಿದ್ಯಾರ್ಥಿನಿಯನ್ನು ಸಂಸ್ಥೆಯಿಂದ ವಜಾಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಪಿ ಎಂದು ಬಾಲಕನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ. ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ಸಭೆ ನಡೆಸಿದ್ದು, ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯು ಅದೇ ಕಾಲೇಜಿನ ವಿದ್ಯಾರ್ಥಿಯ ಮೇಲೆ ಸುಳ್ಳು ಆರೋಪ ಹೊರಿಸಿರುವುದನ್ನು ಖಂಡಿಸಿದರು. ಈ ಸಭೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಬೇಕು ಮತ್ತು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ಆತನ ಹೆಸರನ್ನು ಕೆಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆಸ್ಪತ್ರೆಗೆ ದಾಖಲಾದ…
ಉಡುಪಿ: ಸಾಫ್ಟ್ ವೇರ್ ಎಂಜಿನಿಯರ್ ಯುವತಿಗೆ ಮುಂಬಯಿ ಸೈಬರ್ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.ಮಂಗಳೂರಿನ ಕಂಪೆನಿಯೊಂದರಲ್ಲಿ ಇವರು ಕೆಲಸ ಮಾಡುತ್ತಿದ್ದಾರೆ. ಆಕೆ ಕರ್ತವ್ಯದಲ್ಲಿರುವಾಗ 9259996764 ನಂಬರ್‌ನಿಂದ ಮುಂಬಯಿ ಸೈಬರ್ ಪೊಲೀಸರ ಹೆಸರಿನಲ್ಲಿ ಮಹಿಳೆಯೊಬ್ಬರು ಕರೆ ಮಾಡಿ ನಿಮ್ಮ ಹೆಸರಿನಲ್ಲಿ ಬಂದಿರುವ ಕೊರಿಯರ್‌ನಲ್ಲಿ ನಿಷೇಧಿತ ಡ್ರಗ್ಸ್ ಇರುವುದಾಗಿ ತಿಳಿಸಿ, ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು. ಅನಂತರ ಮತ್ತೋರ್ವರಿಗೆ ಕರೆ ಕನೆಕ್ಟ್ ಮಾಡಿದ್ದರು.ಈ ಸಂದರ್ಭ ಮತ್ತೊಬ್ಬ ಮಹಿಳೆ ಮಾತನಾಡಿ, ನಾನು ನಾರ್ಕೋಟಿಕ್ ಡ್ರಗ್ ಡಿಪಾರ್ಟ್‌ಮೆಂಟ್‌ನ ಪೊಲೀಸ್ ಅಧಿಕಾರಿಯಾಗಿದ್ದು, ವಿವರಕ್ಕಾಗಿ ಟೆಲಿಗ್ರಾಂ ಆ್ಯಪ್ ಅನ್ನು ಓಪನ್ ಮಾಡುವಂತೆ ತಿಳಿಸಿದ್ದಳು. ಆಗ ಆ್ಯಪ್ ಇಲ್ಲವೆಂದು ಹೇಳಿದ್ದಕ್ಕೆ ಆ್ಯಪ್ ಡೌನ್‌ಲೋಡ್ ಮಾಡಿಸಿದ್ದರು. ಬಳಿಕ ಮಹಿಳಾ ಪೊಲೀಸ್ ಅಧಿಕಾರಿಯ ಪ್ರೊಪೈಲ್ ಇರುವ ಐಡಿಯೊಂದನ್ನು ಕಳುಹಿಸಿ ನೀವು ಕೊರಿಯರ್ ಕಳುಹಿಸಿರುವ ಬಗ್ಗೆ ನಮಗೆ…
ಬ್ರಹ್ಮಾವರ: ಬೆಳ್ಳಂಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಈ ಜಗಳ ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ್ದಾರೆ ಎನ್ನಲಾದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಳಿ ಎಂಬಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ. ಆರೋಪಿಯನ್ನು ಸಾಸ್ತಾನ ಗುಂಡ್ಮಿ ನಿವಾಸಿ ಕಿರಣ್ ಉಪಾಧ್ಯಾಯ(30) ಎಂದು ಗುರುತಿಸಲಾಗಿದೆ. ಆತನ ಪತ್ನಿ ಜಯಶ್ರೀ(28) ಮೃತ ದುರ್ದೈವಿ.9 ತಿಂಗಳ ಹಿಂದಷ್ಟೇ ಕಿರಣ ಉಪಾಧ್ಯಾಯ ಹಾಗೂ ಜಯಶ್ರೀ ವಿವಾಹವಾಗಿತ್ತೆನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ ಪಡುವಳಿಯ ಮನೆಯಲ್ಲಿ ಬಾಡಿಗೆಯಲ್ಲಿ ವಾಸ ಮಾಡಿಕೊಂಡಿದ್ದರು. ಸ್ಥಳೀಯರು ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಇದರಿಂದಲೇ ಪತಿ ಪತ್ನಿಗೆ ಹಲ್ಲೆ ನಡೆಸಿದ್ದಾಗ ಪತ್ನಿ ಜಯಶ್ರೀ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ.ಜಯಶ್ರೀ ಮೃತ ದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










