ಉಡುಪಿ: ಆನ್‌ಲೈನ್ ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿದ್ದು, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿದ್ದಾರೆ. ಈ ಬಗ್ಗೆ ಉಪೇಂದ್ರ ಭಟ್ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತಂಡ ರಚಿಸಿ ಆರೋಪಿಗಳಾದ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲೆಡ್ಜ್. ಬಿ, (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ…
Author: main-admin
ಮೂಡುಬಿದಿರೆ: ಅಪ್ರಾಪ್ತ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಆಕೆಯ ತಂದೆಯನ್ನೇ ಮೂಡುಬಿದಿರೆ ಪೊಲೀಸರು ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲಿಯೇ ಪ್ರೌಢಶಾಲಾ ವ್ಯಾಸಂಗ ಮಾಡುತ್ತಿರುವ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆರೋಪಿ ತಂದೆಯೇ ಆಕೆಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಬಾಲಕಿ ಆರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆ ಎನ್ನಲಾಗಿದೆ. ಇನ್ನೂ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಆತ ಒಪ್ಪಿಕೊಂಡಿದ್ದಾನೆ. ಆದ್ದರಿಂದ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಲಾಗಿದೆ. ಗುರುವಾರ ಕಾಮುಕ ತಂದೆಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು:ಲಾಭಾಂಶದಲ್ಲಿ ಅಧಿಕ ಪಾಲು ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 9.78 ಲಕ್ಷ ರೂ. ವಂಚಿಸಿರುವ ಘಟನೆಯ ಬಗ್ಗೆ ದೂರು ದಾಖಲಾಗಿದೆ. ವಾಟ್ಸ್‌ಆ್ಯಪ್ ಗೆ ಬಂದಿದ್ದ ವೆಬ್‌ಸೈಟ್ ಲಿಂಕ್‌ನಲ್ಲಿ ವರ್ಕ್ ಪ್ರಂ ಹೋಮ್ ಎಂಬ ಸಂದೇಶವಿತ್ತು. ಅದನ್ನು ಕ್ಲಿಕ್ ಮಾಡಿದಾಗ 10,000 ರೂ. ಹೂಡಿಕೆ ಮಾಡಿದರೆ 18,000 ರೂ. ದೊರೆಯುತ್ತದೆ ಎಂದು ತಿಳಿಸಲಾಗಿತ್ತು. ಅದನ್ನು ನಂಬಿದ ತಾನು 10,000 ರೂ. ವನ್ನು ಅಪರಿಚಿತರು ತಿಳಿಸಿದ ಖಾತೆಗೆ ಜಮೆ ಮಾಡಿದ್ದೆ. ಮರುದಿನ ವೆಬ್‌ಸೈಟ್ ಮೂಲಕ ತನ್ನನ್ನು ಸಂಪರ್ಕಿಸಿದ ಅಪರಿಚಿತ ವ್ಯಕ್ತಿಗಳು 40,000 ರೂ. ಹೂಡಿಕೆ ಮಾಡುವಂತೆ ತಿಳಿಸಿ ಟಾಸ್ಕ್ ಪೂರ್ತಿಗೊಳಿಸಲು ತಿಳಿಸಿದರು. ಅದರಂತೆ ತಾನು ಟಾಸ್ಕ್ ಪೂರ್ತಿಗೊಳಿಸಿದೆ ಮತ್ತೆ ಅಪರಿಚಿತರು ತಿಳಿಸಿದಂತೆ ತಾನು ಹಂತ ಹಂತವಾಗಿ 9.78 ಲಕ್ಷ ರೂ. ವರ್ಗಾವಣೆ ಮಾಡಿದ್ದರೂ ಬಳಿಕ ತನಗೆ ಹಣ ವಾಪಸ್ ನೀಡದೆ ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಸಂಚಾರಿ ಠಾಣೆಗಳಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಮಾಹಿತಿ ನೀಡಿದ್ದು, ಕೆಲವು ಅಹಿತಕರ ಘಟನೆಗಳು ನಡೆದಿವೆ. ನೊಂದವರಿಗೆ ನೆರವು ನೀಡಬೇಕು. ಕಾನೂನು ಪಾಲನೆ ದೃಷ್ಟಿಯಿಂದ ಮಹಿಳಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಕಡಿವಾಣ ಹಾಕಲು ಡ್ರಂಕ್ & ಡ್ರೈವ್ ಚೆಕ್ ಮಾಡಲಾಗುತ್ತದೆ. ಮಹಿಳೆಯರ ಸುರಕ್ಷತೆಗಾಗಿ ರಾತ್ರಿ ಕರ್ತವ್ಯಕ್ಕೆ ಪ್ರತಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿಯೂ ಇಬ್ಬರು ಮಹಿಳಾ ಹೆಚ್ ಸಿ ಹಾಗೂ ಪಿಸಿ ನಿಯೋಜನೆ ಮಾಡಲಾಗಿದೆ. ರಾತ್ರಿ ಡ್ಯೂಟಿಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಎರಡು ರೀತಿ ಡ್ಯೂಟಿ ಇರುತ್ತದೆ. ಒಬ್ಬರು ಠಾಣೆಯ ಒಳಗಡೆ ಕರ್ತವ್ಯ ನಿರ್ವಹಿಸುತ್ತಾರೆ ಇನ್ನೊಬ್ಬರು ಠಾಣೆಯ ಹೊರಗೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುವ ಕಾರಣ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
ಮಂಗಳೂರು: ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ, ಅರೆನಗ್ನಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿದ್ದಾರೆ. ದಿಯಾನ್, ಅಫ್ಘಾನ್, ಸಲ್ಮಾನ್ ಬಂಧಿತ ಆರೋಪಿಗಳು. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ.14ರಂದು ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೇ ಕೋಪದಲ್ಲಿ ಆ.19ರಂದು ಸಂಜೆ ಪಾಂಡೇಶ್ವರದಲ್ಲಿ ನಿಂತಿದ್ದ ಅಪ್ರಾಪ್ತ ವಯಸ್ಸಿನ ಮೂವರು ವಿದ್ಯಾರ್ಥಿಗಳನ್ನು ತಂಡವೊಂದು ಕಾರಿನಲ್ಲಿ ಅಪಹರಿಸಿ ಅರೆಬೆತ್ತಲೆಗೊಳಿಸಿ ಅಮಾನುಷ ವಾಗಿ ಹಲ್ಲೆ ನಡೆಸಿ, ಕೈಮುಗಿದು ಕ್ಷಮೆ ಕೇಳುವಂತೆ ಒತ್ತಾಯಿಸಿದೆ. ಅಲ್ಲದೆ ದುಷ್ಕರ್ಮಿಗಳು ತಾವು ಹಲ್ಲೆ ನಡೆಸಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಪ್ರಕರಣ ಬಯಲಾಗುತ್ತಿದ್ದಂತೆ ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅದರಂತೆ ವಿದ್ಯಾರ್ಥಿಗಳಾದ ದಿಯಾನ್, ಅಫ್ಘಾನ್, ಸಲ್ಮಾನ್‌ರನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇಬ್ಬರು ಅಪ್ರಾಪ್ತರ ಸಹಿತ ಇನ್ನೂ ಕೆಲವರು…
ಮಂಗಳೂರು : ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಐವಾನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ ಎಂದು ಹೇಳಿದ್ದರು.
ಕಾರ್ಕಳ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಮಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸೆಯ ಆತಂಕಕಾರಿ ಘಟನೆಗಳ ಹೆಚ್ಚಳಕ್ಕೆ ಪ್ರತಿಕ್ರಿಯೆಯಾಗಿ ಮಂಗಳೂರಿನ ಪ್ರಮುಖ ಸಂಘಟನೆಗಳ ಒಕ್ಕೂಟವು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಐಕ್ಯ ಪ್ರತಿಭಟನೆಯನ್ನು ಆಗಸ್ಟ್ 23 ರಂದು ಮಧ್ಯಾಹ್ನ 3:30 ಗಂಟೆಗೆ ಮಂಗಳೂರಿನ ಟೌನ್ ಹಾಲ್ ಬಳಿ ಆಯೋಜಿಸಿದೆ. ಈ ಮಹತ್ವದ ಕಾರ್ಯಕ್ರಮವನ್ನು ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಮತ್ತು ಸಾಮಾಜಿಕ ನ್ಯಾಯ ಆಯೋಗಗಳು ಮತ್ತು ಯುವ ಮತ್ತು ಸಾಮಾಜಿಕ ಸಂವಹನ ಆಯೋಗಗಳು, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ (AKUCFHR), ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಮದರ್ ಥೆರೆಸಾ ವಿಚಾರ ವೇದಿಕೆ, ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಮತ್ತು ಕಾನ್ಫರೆನ್ಸ್ ಆಫ್ ರಿಲಿಜಿಯಸ್ ಇಂಡಿಯಾ (CRI) ಮಂಗಳೂರು ಘಟಕ ಜಂಟಿಯಾಗಿ ಆಯೋಜಿಸಿವೆ. ಇತ್ತೀಚಿನ ದಿನಗಳಲ್ಲಿ ರಾಷ್ಟ್ರದಾದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನೊಳಗೊಂಡ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಇಂತಹ ಘಟನೆಗಳಲ್ಲಿ ಕೆಲವು ದಿನನಿತ್ಯದ ಮುಖ್ಯಾಂಶಗಳಾದರೆ , ಇತರ ಘಟನೆಗಳು ಗಮನಕ್ಕೆ…
ಬ್ರಹ್ಮಾವರ: ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ್ದಾರೆ. ಮಣಿಪಾಲದ ಹಣಕಾಸು ಸಂಸ್ಥೆಯೊಂದರಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ ಬೆಲೆಗೆ ನೀಡುವುದಾಗಿ ಇವರು ನಿತ್ಯಾನಂದ (64) ಹಾಗೂ ಇತರರನ್ನು ನಂಬಿಸಿ 2023ರ ಡಿ.11ರಿಂದ 2024ರ ಜು.16ರವರೆಗೆ ಈ ಹಣವನ್ನು ಪಡೆದಿದ್ದರು ಎನ್ನಲಾಗಿದೆ. ಆದರೆ ಇದುವರೆಗೂ ಅವರು ಹೇಳಿದ ಚಿನ್ನವನ್ನು ನೀಡದೇ, ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ಮತ್ತು ಹಣವನ್ನು ವಾಪಾಸು ಕೇಳಿದ್ದಕ್ಕೆ ಆರೋಪಿಗಳು ಬೆದರಿಕೆ ಹಾಕಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










