Author: main-admin

ಬೆಂಗಳೂರು: ಲಿಫ್ಟ್ ಕೇಳಿದ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್‌ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಯುವತಿ ಈತನ ಕೃತ್ಯಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ. ಜೊತೆಗೆ ಇದೇ ವೇಳೆ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಪರಾರಿಯಾಗಿದ್ದಾನೆ.

Read More

ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ರುತಿಸಲಾಗಿದೆ. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬವರು ಶುಕ್ರವಾರದಂದು ಮುದುಂಗಾರು ಕಟ್ಟೆ ಶಾಲಾ ಹಿಂಭಾಗದ ಪರಿಸರದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಮಹಿಳೆಯ ಸುಮಾರು ಒಂದುವರೇ ಪವನ್ ನ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭ ಮಹಿಳೆ ಬೊಬ್ಬೆ ಹಾಕಿದ್ದರು. ಬಳಿಕ ಕೂಡಲೇ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು ಹಾಗು ಸಿಸಿ ಟಿವಿಗಳ ಪರಿಶೀಲನೆಯನ್ನು ಮಾಡಿದ್ದರು. ಕಳ್ಳತನ ನಡೆದ ಎರಡನೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವಣ ಗೌಡ ಹಾಗೂ ಸುರೇಶ್…

Read More

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 34.80 ಲಕ್ಷ ರೂಪಾಯಿ ಪಡೆದು ವಂಚಿಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರು ಜುಲೈ 1ರಂದು ಇನ್‌ಸ್ಟಾಗ್ರಾಂನಲ್ಲಿ ಷೇರು ವ್ಯಾಪಾರ ಕಂಪೆನಿಯ ಬಗ್ಗೆ ಇದ್ದ ಲಿಂಕ್ ಅನ್ನು ನೋಡಿ ಅದರ ಮೂಲಕ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಅನಂತರ ಅದರಲ್ಲಿ ಕಸ್ಟಮರ್ ಸರ್ವೀಸ್ ನ ಚಾಟ್ ಬಾಕ್ಸ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸಬಹುದೆಂದು ಪ್ರೇರೇಪಿಸಿದ್ದರು. ಅದನ್ನು ನಂಬಿ ಜುಲೈ 1ರಿಂದ ಆಗಷ್ಟ್ 12ರವರೆಗೆ ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಒಟ್ಟು 34,80,000 ರೂಪಾಯಿಗಳನ್ನು ವರ್ಗಾಯಿಸಿದ್ದರು. ಕೆಲವು ದಿನಗಳ ಅನಂತರ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಮುಂದಾದಾಗ ಅಪರಿಚಿತ ವ್ಯಕ್ತಿಗಳು ಶೇಕಡಾ 20ರಷ್ಟು ತೆರಿಗೆ ಪಾವತಿಸುವಂತೆ ತಿಳಿಸಿದರು. ದೂರುದಾರರು ಹಣವನ್ನು ವಾಪಸ್‌ ಪಡೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆಗ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಈ ಬಗ್ಗೆ ಸೈಬರ್…

Read More

ಬಂಟ್ವಾಳ: ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಉರಿಮಜಲು ಜಂಕ್ಷನ್ ನಲ್ಲಿ ಭಾನುವಾರ ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ ಆಪೀ ಚೂರಿ ಇರಿತದ ಆರೋಪಿಯಾಗಿದ್ದಾನೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಶರೀಫ್ ರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Read More

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿಯೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ. ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್ ತಂಝೀರ್ (16) ಮೃತ ಬಾಲಕನಾಗಿದ್ದಾನೆ. ತಂಝೀರ್ ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದು, ತನ್ನ ಶಾಲಾ ಶಿಕ್ಷಕರೋರ್ವರ ತಾಯಿಯ ಪುಣ್ಯ ತಿಥಿಯಲ್ಲಿ ಭಾಗವಹಿಸಲೆಂದು ಕರಾಯ ಗ್ರಾಮದ ಹಲೇಜಿಗೆ ಹೋಗಿದ್ದ. ಮಧ್ಯಾಹ್ನ ಊಟ ಮಾಡಿ ಹಿಂದಿರುಗುವ ವೇಳೆ, ಸನಿಹದಲ್ಲೇ ಹರಿಯುವ ತೋಡಿನ ನೀರಿಗೆ ಬಿದ್ದು ಕಣ್ಮರೆಯಾಗಿದ್ದ. ಜೊತೆಗಿದ್ದ ಸಹಪಾಠಿಗಳು ಹುಡುಕಾಟ ನಡೆಸಿ ವಿಫಲರಾದಾಗ, ಶಿಕ್ಷಕರ ಮನೆಗೆ ಮಾಹಿತಿ ನೀಡಿದ್ದು, ಶಿಕ್ಷಕರು ಮತ್ತವರ ಸಂಬಂಧಿಕರು ಬಾಲಕ ನೀರಿನಲ್ಲಿ ಮುಳುಗಿದ ಸ್ಥಳಕ್ಕೆ ಧುಮುಕಿ ನೀರಿನಾಳದಿಂದ ಆತನನ್ನು ಹೊರ ತೆಗೆದರಾದರೂ, ಆ ವೇಳೆಗೆ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಮಹಮ್ಮದ್ ಮುಸ್ತಾಫರ ತಾಯಿ, ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಅವರ ಪುತ್ರನೂ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿ ಮೃತ…

Read More

ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು, ಸದ್ಯ ಯುವತಿಯನ್ನು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರಮಂಗಲದ ಪಬ್ ಗೆ ಹೋಗಿದ್ದ ಯುವತಿ ಅಪಘಾತವಾಗಿದೆ. ಬಳಿಕ ಆಟೋದಲ್ಲಿ ಹೋಗುತ್ತಿದ್ದ ವೇಳೆ ಎರಡರಿಂದ ಮೂವರು ಕಾಮುಕರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Read More

ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಉಸ್ತಾದ್ ನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಬಂಧಿತ ಆರೋಪಿಯಾಗಿದ್ದಾನೆ. ಅಬ್ದುಲ್ ಕರೀಂ ಉಸ್ತಾದ್ ಆಗಿದ್ದು ಶನಿವಾರ ಈ ಘಟನೆ ನಡೆದಿದೆ. ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಆರೋಪಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ. ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮದ್ಯ ಪ್ರವೇಶಿ ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಅಬ್ದುಲ್ ಕರೀಂ ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯದರ್ಶಿ ಅವಿನಾಶ್ ವಿ ರೈ ಒತ್ತಾಯಿಸಿದ್ದಾರೆ.

Read More

ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ತಿಳಿದುಬಂದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ನಗರದ ಬಂದರಿನಲ್ಲಿ ಕಾರು ಹಾಗೂ ಅಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಸಬಾ ಬೆಂಗ್ರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶಾಹೀದಾ ಅವರು ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್‌ನಲ್ಲಿ ಈ ಅಪಘಾತ ನಡೆದಿತ್ತು. ಅಕ್ಟೀವಾ – ಕಾರು ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕಿ ಶಾಹೀದಾ ಮೃತಪಟ್ಟಿದ್ದಾರೆ. ಮೂಲತಃ ಪುತ್ತೂರಿನ ಪರ್ಲಡ್ಕ ಸಮೀಪದ ಕುಂಜೂರು ನಿವಾಸಿಯಾಗಿದ್ದ ಪ್ರಸ್ತುತ ಬೆಂಗ್ರೆ ನಿವಾಸಿಯಾಗಿರುವ ಬಹುಃ ಕೆ.ಪಿ.ಇಸ್ಮಾಯಿಲ್ ಉಸ್ತಾದ್ ರವರ ಮಗಳು. ಉಳ್ಳಾಲ ಪೊಲೀಸ್ ಠಾಣೆಯ ASI ಮುಹಮ್ಮದ್ ಅವರ ಪತ್ನಿಯಾಗಿರುವ ಶಾಹಿದಾ ಒಬ್ಬ ಪುತ್ರ ಮತ್ತು ಇಬ್ಬರು ಹೆಣ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲಥಾವರ್ಚಂದ್ಗೆಹ್ಲೋಟ್ಮುಖ್ಯಮಂತ್ರಿಸಿದ್ದರಾಮಯ್ಯವಿರುದ್ಧಪ್ರಾಸಿಕ್ಯೂಷನ್ಗೆಅನುಮತಿನೀಡಿದ್ದಾರೆ. ಇಂದು ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್ ಮೈಸೂರುನಗರಾಭಿವೃದ್ಧಿಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ . ಈ ಮೂಲಕ ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ . ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂನೀಡಿದ್ದದೂರಿಗೆಸಂಬಂಧಿಸಿದಂತೆಸಿಎಂ ಸಿದ್ದರಾಮಯ್ಯ ವಿರುದ್ಧಪ್ರಾಸಿಕ್ಯೂಷನ್ಗೆರಾಜ್ಯಪಾಲರುಅನುಮತಿನೀಡಿದ್ದಾರೆ.

Read More