Author: main-admin

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ. ಇದರ ಹಿಂದೆ ಗೋಲ್ಡ್‌ ಮಾಫಿಯಾ ಶಂಕ ವ್ಯಕ್ತವಾಗಿದ್ದು , ಆ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ. ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ ಸಮೀರ್ ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು ಈತನ ಚಲನವಲನಗಳ ಮೇಲೆ 4-5 ಮಂದಿ ದುಷ್ಕರ್ಮಿಗಳ ತಂಡ ಕಣ್ಣಿಟ್ಟಿತ್ತು. ಬಾನುವಾರ ರಾತ್ರಿ 10.15ರ ವೇಳೆಗೆ ಸಮೀರ್ ತನ್ನ ತಾಯಿ. ಪತ್ನಿ. ಮಕ್ಕಳ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟವುಡ್ ಸೆಂಟರ್‌ವೊಂದಕ್ಕೆ ಬಂದಿದ್ದಾರೆ. ಈ ವೇಳೆ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಅಪಾಯವನ್ನರಿತ ಸಮೀರ್ ತಪ್ಪಿಸಿಕೊಂಡು ರೈಲ್ವೆ ಹಳಿ ಕಡೆಗೆ ಒಡಿದ್ದಾನೆ. ಆದರೆ ದುಷ್ಕರ್ಮಿಗಳು ಬೆನ್ನಟ್ಟಿ ಸಮೀರ್‌ನನ್ನು ಕೊಲೆಗೈದಿದ್ದಾರೆ. ಪೊಲೀಸರು ಕೆಲಹೊತ್ತು ಹುಡುಕಾಡಿದ ಬಳಿಕ ಸಮೀರ್ ಮೃತದೇಹ ಸಿಕ್ಕಿದೆ. ಘಟನಾ ಸ್ಥಳಕ್ಕೆ ದಕ್ಷಿಣ…

Read More

ಮೂಡುಬಿದಿರೆ: ದ‌.ಕ.ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ ಬಂಧಿತ ಆರೋಪಿ. ಆರೋಪಿ ಮತ್ತು ಕತ್ತರಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದರು. ಇಬ್ಬರೂ ಆತ್ಮೀಯರಾಗಿದ್ದರು. ಆದರೆ ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶೆಗೊಂಡ ಆರೋಪಿ ಮಂಜುನಾಥ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದಿದ್ದನು. ಅದರಂತೆ ಸೋಮವಾರ ಕಾಲೇಜಿಗೆ ಬಂದಿದ್ದ ಆತ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಕತ್ತರಿಯಿಂದ ಚುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಆರೋಪಿ ಮಂಜುನಾಥನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇನ್‌ಸ್ಪೆಕ್ಟ‌ರ್ ಸಂದೇಶ್‌ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್‌ಟಾಪ್‌ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಯೂರ್ ನಾಯ್ಕ ಮತ್ತು ಚರಣ್ ಎಂಬವರು ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆ.9ರಂದು ರಾತ್ರಿ ಕಂಪೆನಿಯ ಕೆಲಸ ಮುಗಿಸಿ ಬೇರೆ ಬ್ಯಾಗ್‌ಗಳಲ್ಲಿ 2 ಲ್ಯಾಪ್‌ಟಾಪ್‌ಗಳನ್ನಿಟ್ಟು ಮಲಗಿದ್ದರು. ಮರುದಿನ ಬೆಳಗ್ಗೆ 8 ಗಂಟೆಗೆ ಎದ್ದು ನೋಡಿದಾಗ ಲ್ಯಾಪ್‌ಟಾಪ್‌ಗಳು, 800 ರೂ., ಎಟಿಎಂ ಕಾರ್ಡ್ ಸಹಿತ ಅಂದಾಜು 2,11,500 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More

ಮಂಗಳೂರು: “ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ ತನ್ನ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. 1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುವ ಮೂಲಕ ಸಮುದಾಯಕ್ಕೆ ಉನ್ನತ ಯೋಗಕ್ಷೇಮವನ್ನು ನೀಡುವಲ್ಲಿ ನಿರತವಾಗಿದೆ. ಕಳೆದ ಕಾಲು ಶತಮಾನದಲ್ಲಿ, ಇದು ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸೇರಿದಂತೆ ವಿಶಾಲವಾದ ಸೇವೆಗಳನ್ನು ಒದಗಿಸುವ ಅತ್ಯಾಧುನಿಕ ವೈದ್ಯಕೀಯ ಕೇಂದ್ರವಾಗಿ ಬೆಳೆದಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಸಯ್ಯದ್ ನಿಜಾಮುದ್ದಿನ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಇಂದಿರಾ ಎಜ್ಯುಕೇಶನಲ್ ಟ್ರಸ್ಟ್ – ನರ್ಸಿಂಗ್, ಅಲೈಡ್ ಆರೋಗ್ಯ ಮತ್ತು ಫಿಸಿಯೋಥೆರಪಿ ಕೋರ್ಸ್‌ಗಳನ್ನು ಒಳಗೊಂಡ ಪ್ರಮುಖ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆದಿದೆ. ಉತ್ತಮ ಆರೋಗ್ಯ ವೃತ್ತಿಪರರನ್ನು ನಿರ್ಮಿಸುವಲ್ಲಿ ತನ್ನ ಬದ್ಧತೆಗೆ ಪ್ರಸಿದ್ಧವಾಗಿದೆ. ಈ ಪ್ರಮುಖ ಮೈಲಿಗಲ್ಲನ್ನು ನೆನಪಿಸಿಕೊಳ್ಳಲು, ಇಂದಿರಾ ಆಸ್ಪತ್ರೆ ತನ್ನ ಗೌರವಾನ್ವಿತ ವೈದ್ಯರು ಮತ್ತು ಸಿಬ್ಬಂದಿಯಕೊಡುಗೆಗಳನ್ನು ಗೌರವಿಸಲು ವಾರ್ಷಿಕೋತ್ಸವ ಸಂಭ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಹೆಚ್ಚುವರಿಯಾಗಿ, ಸಮುದಾಯದ ಆರೋಗ್ಯವನ್ನು ಬೆಂಬಲಿಸಲು ರಕ್ತದಾನ ಶಿಬಿರವನ್ನು…

Read More

ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಜೇನುತುಪ್ಪದಲ್ಲಿರುವ ಆಯಂಟಿಆಕ್ಸಿಡೆಂಟ್‌ಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜೇನುತುಪ್ಪದ ದೈನಂದಿನ ಬಳಕೆ ಹೃದಯಕ್ಕೆ ಒಳ್ಳೆಯದು. ಜೇನುತುಪ್ಪವು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಅದರ ಕೆಲವು ಮುಖ್ಯ ಅನುಕೂಲಗಳು: ಬ್ಯಾಕ್ಟೀರಿಯಾ ವಿರೋಧಿ:ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇವು ಬ್ಯಾಕ್ಟೀರಿಯಾದ ಸೋಂಕನ್ನು ತಡೆಯಲು ಸಹಾಯ ಮಾಡುತ್ತವೆ. ನೋಯುತ್ತಿರುವ ಗಂಟಲು, ಕೆಮ್ಮು ಮತ್ತು ಶೀತದಂತಹ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹ ಇದು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ:ಜೇನುತುಪ್ಪವು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಮಲಬದ್ಧತೆ ತಡೆಯಲು ಸಹಾಯ ಮಾಡುತ್ತದೆ. ಶಕ್ತಿ:ಜೇನುತುಪ್ಪವು ನೈಸರ್ಗಿಕ ಸಕ್ಕರೆಯಾಗಿದ್ದು ಅದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಇದು ಆಯಾಸವನ್ನು ಕಡಿಮೆ ಮಾಡಲು ಮತ್ತು ದೈಹಿಕ ಚಟುವಟಿಕೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿದ್ರೆ:ಜೇನುತುಪ್ಪವು ಮೆಲಟೋನಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ನಿದ್ರೆಯನ್ನು ಉತ್ತೇಜಿಸುವ ಹಾರ್ಮೋನ್ ಆಗಿದೆ.…

Read More

ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ ಚಾಲನೆ ನೀಡಿದ್ದು ಇದೇ ಬರುವ ಆಗಸ್ಟ್ 15 ರಂದು ಮೊದಲ ಡ್ರಾ ನಡೆಯಲಿದೆ. ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತದ ಬಹುಮಾನಗಳನ್ನು ಒಳಗೊಂಡ ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಕೊನೆಯ ಮೂರು ದಿನಗಳ ಅವಕಾಶವಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9036790323 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ. ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ,…

Read More

ನವದೆಹಲಿ : ಜನರೊಂದಿಗೆ ಸ್ಪ್ಯಾಮ್ ಕರೆಗಳ ಹೆಸರಿನಲ್ಲಿ ನಿರಂತರ ವಂಚನೆ ಪ್ರಕರಣಗಳ ಬಗ್ಗೆ ಸರ್ಕಾರ ಕಟ್ಟುನಿಟ್ಟಾಗಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಈ ಬಗ್ಗೆ ಹೊಸ ನಿಯಮವನ್ನು ಜಾರಿಗೆ ತರಲು ಹೊರಟಿದೆ. ಈ ಹೊಸ ನಿಯಮದ ಪ್ರಕಾರ, ಯಾರಾದರೂ ಖಾಸಗಿ ಮೊಬೈಲ್ ಸಂಖ್ಯೆಯಿಂದ ಟೆಲಿಮಾರ್ಕೆಟಿಂಗ್ ಕರೆಗಳನ್ನು ಮಾಡಿದರೆ, ಟೆಲಿಕಾಂ ಆಪರೇಟರ್ಗಳು ಅವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಟೆಲಿಕಾಂ ವಲಯದಲ್ಲಿ ಅನಗತ್ಯ ಕರೆಗಳ ಮೂಲಕ ವಂಚನೆಯನ್ನು ತಡೆಗಟ್ಟಲು ಸರ್ಕಾರ ದೀರ್ಘಕಾಲದಿಂದ ಕೆಲಸ ಮಾಡುತ್ತಿದೆ. ಟ್ರಾಯ್ ಹೊರಡಿಸಿದ ಈ ನಿಯಮವು ಸೆಪ್ಟೆಂಬರ್ 1, 2024 ರಿಂದ ಜಾರಿಗೆ ಬರಲಿದೆ. ದೇಶದ ಎಲ್ಲಾ ಟೆಲಿಕಾಂ ಕಂಪನಿಗಳಿಗೆ ಸರ್ಕಾರವು ಸೂಚನೆಗಳನ್ನು ನೀಡಿದೆ. ಟ್ರಾಯ್ ನ ಹೊಸ ನಿಯಮ ಏನು ಹೇಳುತ್ತದೆ? ಇತ್ತೀಚಿನ ದಿನಗಳಲ್ಲಿ, ಸ್ಪ್ಯಾಮ್ ಕರೆಗಳ ಹೆಸರಿನಲ್ಲಿ ನಿರಂತರ ವಂಚನೆಯ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ನಿಯಮ ತರಲಾಗಿದೆ. ಇದರಲ್ಲಿ, ಯಾರಾದರೂ ಖಾಸಗಿ ಮೊಬೈಲ್ ಸಂಖ್ಯೆಯಿಂದ ಟೆಲಿಮಾರ್ಕೆಟಿಂಗ್…

Read More

ಮಣಿಪಾಲ: ಮಣಿಪಾಲದಲ್ಲಿ ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ನಡೆದಿದೆ. ಮೃತನನ್ನು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಳ್ತೂರು ಗ್ರಾಮದ ನಿವಾಸಿ ಉದಯ (43) ಎಂದು ಗುರುತಿಸಲಾಗಿದೆ. ಹೋಟೆಲ್ ನಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Read More

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿ, ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ. 2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್…

Read More

ಲಕ್ನೋ: ಸಬ್‌ಇನ್‌ಸ್ಪೆಕ್ಟರ್ ಒಬ್ಬರು ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಅಮಾನತುಗೊಂಡ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ. ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಸಬ್‌ಇನ್‌ಸ್ಪೆಕ್ಟರ್ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ‘ಆಲೂಗಡ್ಡೆ’ ಎಂಬ ಪದವನ್ನು ಲಂಚಕ್ಕಾಗಿ ಕೋಡ್ ಆಗಿ ಬಳಸಲಾಗಿದೆ ಎಂದು ತನಿಖೆಯ ಮೂಲಕ ತಿಳಿದುಬಂದಿದೆ. ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯ ಭವಲ್‌ಪುರ ಚಾಪುನ್ನಾ ಚೌಕಿಯಲ್ಲಿ ಸಬ್‌ಇನ್‌ಸ್ಪೆಕ್ಟರ್ ರಾಮ್ ಕೃಪಾಲ್ ಸಿಂಗ್ ನಿಯೋಜನೆಗೊಂಡಿದ್ದರು. ಇದೀಗ ಘಟನೆ ಬೆಳಕಿಗೆ ಬರುತ್ತಿದ್ದಂತೆ ಕನೌಜ್ ಎಸ್‌ಪಿ ಅಮಿತ್ ಕುಮಾರ್ ಆನಂದ್ ಅವರು ಸಬ್‌ಇನ್‌ಸ್ಪೆಕ್ಟರ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಪ್ರಕರಣದ ಇಲಾಖಾ ತನಿಖೆಗೂ ಆದೇಶಿಸಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಆಡಿಯೋದಲ್ಲಿ ಆರೋಪಿ ಪೋಲೀಸ್, ರೈತರೊಬ್ಬರಿಂದ 5 ಕೆಜಿ ಆಲೂಗಡ್ಡೆಗೆ ಬೇಡಿಕೆ ಇಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ಕಷ್ಟ ಎಂದ ರೈತ, 5 ಕೆಜಿ ಬದಲಿಗೆ 2 ಕೆಜಿ…

Read More