Author: main-admin

ಬೆಂಗಳೂರು : ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಕಂಟಕವಾಗಿ ಪರಿಣಮಿಸಿದೆ. 1984ರಲ್ಲಿ ಸಿದ್ದರಾಮಯ್ಯ ಅವರು ಶಾಸಕರಾಗಿದ್ದಾಗ ಬದಲಿ ನಿವೇಶನ ಕೋರಿ ಮುಡಾ ಅಧ್ಯಕ್ಷರಿಗೆ ಬರೆದ್ದರು ಎನ್ನಲಾದ ಪತ್ರವನ್ನು ಜೆಡಿಎಸ್ ರಿಲೀಸ್ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ‘ಗುಳಿಗೆ ಸಿದ್ದ ಒಳಗೆ ಮೇಯಿದ’ ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ‘ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ’ ಎಂದು ಸುಳ್ಳು ಹೇಳುವ ನೀವು ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದಿದೆ ಎಂದು ಆರೋಪಿಸಿದೆ. ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ ಎಂದು ಕುಟುಕಿದೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು ನಡೆಸಲು ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಮಳೆಗಾಲದಲ್ಲಿ ರಜೆ ನೀಡುವಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಈ ರಜಾದಿನಗಳು ಪಾಠದ ಮೇಲೆ ಪರಿಣಾಮ ಬೀರುತ್ತವೆ. ಆದಾಗ್ಯೂ, ಈ ನಷ್ಟವನ್ನು ಸರಿದೂಗಿಸಲು ಯಾವುದೇ ರೀತಿಯ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿರಲಿಲ್ಲ.ಪಿಯು ಕಾಲೇಜುಗಳಿಗೆ ಶನಿವಾರ ಮತ್ತು ಭಾನುವಾರ ಪೂರ್ಣ ದಿನ ತರಗತಿ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಆದಾಗ್ಯೂ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ತರಬೇತಿಗೆ ಹಾಜರಾಗುವುದರಿಂದ ಅವರು ಭಾನುವಾರದ ತರಗತಿಗಳಿಗೆ ಒಪ್ಪುತ್ತಿಲ್ಲ. ಕೆಲವು ಕಾಲೇಜುಗಳು ಈಗಾಗಲೇ ಶನಿವಾರ ಪೂರ್ಣ ದಿನ ತರಗತಿಗಳನ್ನು ನಡೆಸಲು ಪ್ರಾರಂಭಿಸಿವೆ. ಬೇರೆ ಕಾಲೇಜುಗಳು ಶೀಘ್ರದಲ್ಲೇ…

Read More

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಘಟನೆ ನಡೆದಿದ್ದು ಸಿಫ್ಟ್ ಕಾರ್ ಮೇಲೆ ಕಂಟೇನರ್ ಮಗುಚಿ ಬಿದ್ದಿದ್ದು ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಾಂತಿ ಬಂತೆಂದು ಕಾರು ರಸ್ತೆ ಬದಿ ನಿಲ್ಲಿಸಿ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ದೊಡ್ಡ ಗಾತ್ರದ ವಾಹನ ತಿರುಗಿಸುವಾಗ ಈ ಅಪಘಾತ ನಡೆದಿರುವುದಾಗಿ ತಿಳಿದು ಬಂದಿದ್ದು ಕಾರಿನವರ ವಿವರ ಸದ್ಯ ಲಭಿಸಿಲ್ಲ.

Read More

ಬೆಳ್ತಂಗಡಿ: ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಸಂಸದ್ ಭವನದ ಪ್ರಧಾನಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು. ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ, ದೇಶಕ್ಕೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಮೋದಿ ಅವರೊಂದಿಗೆ ಹೆಗ್ಗಡೆ ಅವರು ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಹೆಗ್ಗಡೆಯವರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದು ಒಂದು ಮಾದರಿ ಸಂಸದರ ನಿಧಿಯ ಸದ್ವಿನಿಯೋಗ ಎಂದು ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಶ್ರೀ ಹೆಗ್ಗಡೆಯವರು ವಿವರಿಸಿದರು. ಇಲ್ಲಿಯವರೆಗೆ ಸುಮಾರು 3 ಕೋಟಿ…

Read More

ಉಪ್ಪಿನಂಗಡಿ: ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಅಟೋ ರಿಕ್ಷಾ ಹಾಗೂ 9.36 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ. ಅನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮ ನಿವಾಸಿ ಮೊಹಮ್ಮದ್ ನಾಸೀರ್ (24 ವ), ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ(21 ವ) ಹಾಗೂ ಸಿನಾನ್ ಆರೋಪಿಗಳು ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ಎಚ್. ಮತ್ತು ಸಿಬ್ಬಂದಿ ಆ.9ರಂದು 34 ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಟೋ ರಿಕ್ಷಾವೊಂದು ಬಂದಿದ್ದು, ಇದನ್ನು ತಪಾಸಣೆಗೆ ನಿಲ್ಲಿಸಲು ಸೂಚಿಸಿದಾಗ ಅಟೋ ರಿಕ್ಷಾವನ್ನು ಅಲ್ಲಿ ನಿಲ್ಲಿಸದೇ ಮುಂದಕ್ಕೆ ರಸ್ತೆ ಬದಿ ನಿಲ್ಲಿಸಿ ಅದರಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬಾತ ಓಡಿ ಪರಾರಿಯಾಗಲು ಯತ್ನಿಸಿದರು. ಆ ಸಂದರ್ಭ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಟೋ…

Read More

ಮಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಲವ್ ಜಿಹಾದ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕೇರಳದ ನಟೋರಿಯಸ್ ಕ್ರಿಮಿನಲ್ ಇದೀಗ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹವಾಗಿದ್ದಾನೆ ಎಂದು ವಿಚಾರ ಬೆಳಕಿಗೆ ಬಂದಿದೆ. ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯಾಳನ್ನು ಅಶ್ಪಕ್ ಎಂಬ ನಟೋರಿಯಸ್ ಕ್ರಿಮಿನಲ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಕೇವಲ ಎರಡೇ ತಿಂಗಳಲ್ಲಿ ಆತ ಪ್ರೀತಿಯ ಖೆಡ್ಡಾಕ್ಕೆ ಬೀಳಿಸಿದ್ದ ಎಂದು ಆರೋಪಿಸಲಾಗಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿದ್ದುಕೊಂಡು ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಾಳನ್ನು ಜೂ.6ರಂದು ಅಲ್ಲಿಂದಲೇ ಕರೆದುಕೊಂಡು ಹೋಗಿದ್ದ ಅಶ್ಪಕ್. ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಆಕೆಯನ್ನು ಪತ್ತೆಹಚ್ಚಿ ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿರಿಸಿದ್ದರು. ಆದರೆ ಅಷ್ಪಕ್ ನೊಂದಿಗೆ ತೆರಳುವುದಾಗಿ ಹೇಳಿದ್ದಳು. ವಿಸ್ಮಯಳನ್ನು ಮತಾಂತರ ನಡೆಸಿರುವುದಾಗಿ ಆಕೆಯ ತಂದೆ ಆರೋಪಿಸಿದ್ದರು. ಬಳಿಕ ಮಂಗಳೂರಿನ ವಿಎಚ್‌ಪಿ ನಾಯಕರನ್ನು ಭೇಟಿಯಾಗಿ ವಿಸ್ಮಯಾ ತಂದೆ ಮಗಳನ್ನು ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದರು. ಕೊನೆಗೂ ಆಕೆ ತಂದೆಯ ಕೈಗೆ ಸಿಗದೇ ಅಶ್ಪಕ್ ನನ್ನು ವಿಸ್ಮಯಾ ಮುಸ್ಲಿಂ ಪದ್ಧತಿ ಪ್ರಕಾರ ವಿವಾಹವಾಗಿದ್ದಾಳೆ.…

Read More

ಕುಂದಾಪುರ: ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸಂತೋಷ್‌ ಆಚಾರ್ಯ (45) ಅವಿವಾಹಿತರಾಗಿದ್ದರು ಎಂದು ಗುರುತಿಸಲಾಗಿದೆ. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನೆಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯರವರು ಫೋನ್ ಮಾಡಿದ್ದು ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅವರು ಅಣ್ಣನ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿದೆ ಎಂದು ತಿಳಿಸಿದ್ದು ಸಂತೋಷ್ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಸಂತೋಷ್ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿದ್ದರು. ಮನೆಯ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಫ್ಯಾನ್ ತಿರುಗುತ್ತಿತ್ತು. ಮೊಬೈಲ್ ಇಯರ್ ಫೋನ್…

Read More

ಉಡುಪಿ: ನಗರದಲ್ಲಿ ಮಗು ಮಾರಾಟ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್‌ ಸಯ್ಯದ್‌ ಅವರಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ಆ ಮಗು ಅವರ ವಶದಲ್ಲಿ ಇಲ್ಲದಿರುವ ಬಗ್ಗೆ ಆ. 6ರಂದು ಪೆರಂಪಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರಿತಾ ಡಿ’ಸೋಜಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು. ಅನಂತರ ಮಕ್ಕಳ ರಕ್ಷಣ ಘಟಕದ ಸಾಮಾಜಿಕ ಕಾರ್ಯಕರ್ತರಾದ ಸುರಕ್ಷಾ, ಯೋಗೀಶ್‌ ಹಾಗೂ ಸರಿತಾ ಡಿ’ಸೋಜಾ ಅವರು ಪೆರಂಪಳ್ಳಿಯ ಶೀಂಬ್ರ ಭಟ್ರಕೋಡಿಯಲ್ಲಿರುವ ಆರೋಪಿಗಳ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಖಾಲಿದ್‌ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. ಈ ಬಗ್ಗೆ ಸುರಕ್ಷಾ ಅವರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆ.7ರಂದು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು. ವಿಚಾರಣೆ ವೇಳೆ ಆರೋಪಿಗಳು ಮಗುವನ್ನು ಮೂಲ್ಕಿಯ ನಿವಾಸಿ…

Read More

ಮಂಗಳೂರು: ವ್ಯಕ್ತಿಯೊಬ್ಬರನ್ನು ಅಪಹರಿಸಿದ ಘಟನೆ ನಗರದಲ್ಲಿ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಶರತ್ ಬಾಬು (35) ಅಪಹರಣಕ್ಕೊಳಗಾದವರು. ಇವರು ಖಾಸಗಿ ಮೆಡಿಕಲ್, ನರ್ಸಿಂಗ್ ಕಾಲೇಜುಗಳಿಗೆ ಸೀಟು ಕೊಡಿಸುವ ಬ್ರೋಕರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಳೆದ ವರ್ಷ ಕೇರಳ ಮೂಲದ ಓರ್ವರಿಂದ 9 ಲಕ್ಷ ರೂ. ಪಡೆದು ಬೆಂಗಳೂರಿನ ನರ್ಸಿಂಗ್ ಕಾಲೇಜಿನಲ್ಲಿ ಸೀಟು ತೆಗೆಸಿಕೊಡುವುದಾಗಿ ತಿಳಿಸಿದ್ದರೆನ್ನಲಾಗಿದೆ. ಆದರೆ ಕಾಲೇಜಿನವರಿಗೆ 2 ಲಕ್ಷ ರೂ. ನೀಡಿ ಉಳಿದ 7 ಲಕ್ಷ ರೂ.ಗಳನ್ನು ತನ್ನಲ್ಲಿಯೇ ಇಟ್ಟುಕೊಂಡಿದ್ದ ಎನ್ನಲಾಗಿದೆ. ಹಾಗಾಗಿ ಆ ಹಣವನ್ನು ವಾಪಸ್ ಕೇಳಿದ್ದು, ಶರತ್‌ ಬಾಬು ವಾಪಸ್ ಕೊಡದ ಸಿಟ್ಟಿನಲ್ಲಿ ನಗರದ ಪಿವಿಎಸ್ ಬಳಿ ಕಾರಿನಲ್ಲಿ ಬಂದ ಇಬ್ಬರು ಬಲವಂತವಾಗಿ ಅಪಹರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶರತ್‌ ಬಾಬು ಸಂಪರ್ಕಕ್ಕೆ ಸಿಕ್ಕಿದ್ದಾನೆ. ಹಣದ ವಿಚಾರವಾಗಿಯೇ ಅಪಹರಿಸಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.

Read More

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನು ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More