Author: main-admin

ಕಲಬುರ್ಗಿ : ನಗರದ ಅತ್ಯಂತ ಪ್ರಮುಖ ಹಾಗೂ ಜನನಿಬಿಡ ಪ್ರದೇಶವಾದ ಜಗತ್ ವೃತ್ತದಲ್ಲಿ ಮಂಗಳವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (CAR) ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು, ತಮ್ಮ ಸೇವಾ ರೈಫಲ್‌ನಿಂದಲೇ ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘಟನೆಯು ಇಡೀ ಪೊಲೀಸ್ ಇಲಾಖೆ ಹಾಗೂ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿಯನ್ನು ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ನಿವಾಸಿ ಶಿವಕುಮಾರ ನರಿಬೋಳ (32) ಎಂದು ಗುರುತಿಸಲಾಗಿದೆ. ಮೃತ ಶಿವಕುಮಾರ ಅವರು ಸಶಸ್ತ್ರ ಮೀಸಲು ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ದುರಂತದ ಸಮಯದಲ್ಲಿ ಅವರು ಎಂದಿನಂತೆ ಜಗತ್ ವೃತ್ತದಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಸಣ್ಣ ಮಕ್ಕಳನ್ನು ಅಗಲಿದ್ದಾರೆ. ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಜಗತ್ ವೃತ್ತದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ…

Read More

ಬೆಳ್ತಂಗಡಿ: ತಾಲೂಕಿನ ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರ್ಯ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ದಲಿತ ಸಮುದಾಯಕ್ಕೆ ಸೇರಿದ ಮಹಿಳೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಪಲ್ಲದೋಡಿ ಕಾಳಿಕಾಂಬಾ ನಿವಾಸ ಯಶೋಧ ಆಚಾರ್ಯ ಎಂಬವರ ಮನೆಗೆ ಎ.ಎಲ್.ಒ‌ ಮಾಧವ ಎಂಬರೊಂದಿಗೆ ಜು.6 ರಂದು ಎಸ್.ಐ.ಆರ್ ಗೆಂದು ತೆರಳಿದ್ದಾರೆ. ಇವರ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಇಲ್ಲಿಗೆ ಬರುವುದಿಲ್ಲ” ಎಂದು ಹೇಳಿದ್ದು ಮನೆಯ ಸಿಟ್ ಔಟ್ ಗೆ ಪ್ರವೇಶ ನೀಡದೆ ಮೆಟ್ಟಿಲು ಬಳಿಯೇ ಮಾತಿನಲ್ಲಿಯೇ ತಡೆದು ನಿಲ್ಲಿಸಿ ಅಪಮಾನ ಮಾಡಿ ಜಾತಿ ನಿಂದನೆ ಮಾಡಿರುವುದಾಗಿ ಜು.7 ರಂದು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ…

Read More

ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ ಐಪಿಸಿ ಕಲಂ 379ರಡಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ರಾಜೇಶ್ ಆರೋಪಿ ಆಗಿದ್ದನು. ಆದರೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ (2355) ಹಾಗೂ ಸಿಪಿಸಿ ಶಿವಾನಂದ (2462) ಅವರು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಕೇರಳ: ಕಳೆದ ಎರಡು ವರ್ಷಗಳ ಹಿಂದೆ ಚೂರಲ್ಮಲದಲ್ಲಿ ನಡೆದಿದ್ದ ಭೀಕರ ಭೂಕುಸಿತದ ಕಹಿ ನೆನಪು ಮಾಸುವ ಮುನ್ನವೇ, ಕೇರಳದ ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೆಪ್ಪಾಡಿ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸುರಂಗ ಮಾರ್ಗ ನಿರ್ಮಾಣದ ಪ್ರದೇಶದಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. ವಯನಾಡು ಸುರಂಗ ಯೋಜನೆಯ ಮೀನಾಕ್ಷಿ ಸೇತುವೆ ಬಳಿ ಈ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿದ ಕಾರ್ಮಿಕರು; ಮುಂದುವರಿದ ಆತಂಕ ದುರಂತದ ತೀವ್ರತೆಗೆ ಸುಮಾರು 20 ಕಾರ್ಮಿಕರು ಮಣ್ಣಿನ ರಾಶಿಯಡಿಯಲ್ಲಿ ಸಿಲುಕಿಕೊಂಡಿದ್ದು, 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ನೂರಾರು ವಾಹನಗಳು ಕೂಡ ಮಣ್ಣಿನಡಿ ಹೂತುಹೋಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ. ಸ್ಥಳೀಯರ ಸಕಾಲಿಕ ರಕ್ಷಣಾ ಕಾರ್ಯಾಚರಣೆಯಿಂದಾಗಿ ಆರು ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ಅವರನ್ನು ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರನ್ನು ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು…

Read More

ಉಡುಪಿ ಜಿಲ್ಲೆಯ ಪಡುಬಿದ್ರಿ‌ ಸಮೀಪದ ಹೆಜಮಾಡಿ ಕನ್ನಂಗಾರ್ ನ ಹುಸೇನ್ ಎಂಬವರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೆದರಿಕೆ ಹಾಕಿದ ಆರೋಪಿ ಜಾಕೀರ್ ಹುಸೇನ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ: ಪಿರ್ಯಾದಿದಾರರಾದ ಬಿ.ಎಂ. ಹುಸೇನ್‌ ,ಹೆಜಮಾಡಿ ಗ್ರಾಮ, ಕಾಪು ಇವರು ದಿನಾಂಕ 04/04/2025 ರಂದು ಶುಕ್ರವಾರದ ಜುಮ್ಮಾ ನಮಾಜನ್ನು ಮಾಡಲು ಕಾಫು ತಾಲೂಕು ಹೆಜಮಾಡಿ ಗ್ರಾಮದ ಕನ್ನಂಗಾರ್‌ ಜುಮ್ಮಾ ಮಸೀದಿಗೆ ಬಂದು ನಮಾಜ್‌ ಮಾಡಿ ವಾಪಾಸು ಹೋಗಲು ಮಸೀದಿ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಕುಳಿತುಕೊಂಡಾಗ ಮದ್ಯಾಹ್ನ 1:30 ಗಂಟೆಗೆ ಆರೋಪಿ ಜಾಕೀರ್‌ ಹುಸೇನ್‌ ಇತರರೊಂದಿಗೆ KA-20-MG-0243 ನೇ ಕಾರಿನಲ್ಲಿ ಬಂದು ಪಿರ್ಯಾದಿದಾರರಿಗೆ ಮುಂದಕ್ಕೆ ಹೋಗದಂತೆ ಅಡ್ಡಗಟ್ಟಿ ಇದು ನಾವು ಪಾರ್ಕ್‌ ಮಾಡುವ ಸ್ಥಳ ನೀನೇಕೆ ಇಲ್ಲಿ ಕಾರು ನಿಲ್ಲಿಸಿದ್ದಿಯಾ ಎಂದು ಬೈದು, ಚಾಕು ತೋರಿಸಿ ಬೆದರಿಕೆ ಹಾಕಿರುವುದಾಗಿ…

Read More

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವುಗೊಂಡ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ. ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ದೇವರ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಪತ್ತೆಯಾಯಿತು. ಸುತ್ತಮುತ್ತ ಹುಡುಕಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 43/2026, ಕಲಂ 303(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ…

Read More

ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಗಂಭೀರ ಕಾರ್ಯವಿಧಾನದ ಲೋಪಗಳ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ಹೆಚ್‌ಸಿ 404 ಮಾಲತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ವಾರಂಟ್ ಆರೋಪಿಯನ್ನು ಬಂಧಿಸಿದ್ದರು ಆದರೆ ಕಾನೂನಿನ ಪ್ರಕಾರ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಆರೋಪಿ ವಿರುದ್ದ ಜಾರಿಯಾಗಿರುವ ವಾರೆಂಟನ್ನು ರಿ-ಕಾಲ್ ಮಾಡಿಸಿಕೊಳ್ಳಲು ಸಹಕರಿಸಿರುವುದು ಕಂಡುಬಂದಿದ್ದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಆಪಾದಿತ ಅಕ್ರಮಗಳು ಬೆಳಕಿಗೆ ಬಂದಿದ್ದು, ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯ ಲೋಪವನ್ನು ಸೂಚಿಸುವ ಪ್ರಾಥಮಿಕ ಸಂಶೋಧನೆಗಳ ನಂತರ, ಪೊಲೀಸ್ ಇಲಾಖೆ ಶಿಸ್ತು ಕ್ರಮವನ್ನು ಪ್ರಾರಂಭಿಸಿ, ವಿವರವಾದ ವಿಚಾರಣೆಯವರೆಗೆ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿದೆ.

Read More

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾ‌ರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Read More

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ; ಪಾಂಡಿಚೇರಿ ಮೂಲದ ಗಂಗಾಧರನ್ ಮಾಸ್ಟರ್ ಮೈಂಡ್, 14 ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ ವಿವಿಧ ಜಿಲ್ಲೆಗಳಿಗೆ ಸೇರಿದ ಶ್ರೀರಾಗ್, ಅತುಲ್, ಮಿಥುನ್‌ಲಾಲ್‌, ಅಜೀ‌ರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಕೊಡಗಿನ ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್, ಜಮೀರ್ ಅಲಿಕಾ ಎಂಬವರು ಆರೋಪಿಗಳು ಎಂದು ಗುರುತಿಸಲಾಗಿದೆ. ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಾರಣ ಆರೋಪಿಗಳ ಬಂಧನಕ್ಕೆ…

Read More

ಬಂಟ್ವಾಳ: ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ ಬಳಿಕ ಬಸ್ ನಿಲ್ದಾಣದಲ್ಲಿ ರಕ್ತದ ಗುರುತುಗಳು ಕಂಡುಬಂದಿವೆ. ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.

Read More