Author: main-admin

ಉಡುಪಿ: ನಗರದ ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಕಾರಿನಲ್ಲೇ ಜೋಡಿಯೊಂದು ಕಾಮದಾಟ ನಡೆಸಿ ಸಿಕ್ಕಿಬಿದ್ದಿದೆ. ಕಾರು ಪಾರ್ಕ್ ಮಾಡಿ ಹಾಡ ಹಗಲಿನಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಯುವ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಬಳಿಕ ಪರಾರಿಯಾಗಿದೆ. ಕೆಂಬಣ್ಣದ ಕಾರಿನ ಗಾಜಿಗೆ ಒಳಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿದ್ದು ಕಾರಿನ ಅಲುಗಾಟ ಕಂಡು ಸಂಶಯಗೊಂಡ ಸ್ಥಳೀಯರು ಇಣುಕಿ ನೋಡಿದ್ದಾರೆ. ಈ ವೇಳೆ ಜೋಡಿಯ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ. ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಬಳಿಕ ಮುಜುಗರದಿಂದ ಜೋಡಿ ಪರಾರಿಯಾಗಿದ್ದಾಗಿ ತಿಳಿದುಬಂದಿದೆ. ಕಾರನ್ನು ಕಳೆದ ಒಂದು ವಾರದಿಂದ ಈ ಜಾಗದಲ್ಲಿ ಅನುಮಾನಾಸ್ಪದವಾಗಿ ಪಾರ್ಕ್ ಮಾಡಲಾಗುತ್ತಿತ್ತು ಎಂದು ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಲೇ ಜೋಡಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥೆನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್ ಅಥವಾ ಗುರುತಿನ ಸಂಖ್ಯೆಗಳನ್ನು ಪೋಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ 24-11-2022ರ ಅಧಿಸೂಚನೆ ಮತ್ತು 23-01-2023 ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ. ಮೋಟಾರು ವಾಹನ ಕಾಯಿದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು…

Read More

ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್‌ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸ ಮಾಡುತ್ತಿದ್ದರು. ಆ.3ರಂದು ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಆ.4ರಂದು ವಾಪಾಸು ಹಿಂದಿರುಗಿ ಮನೆಗೆ ಬರುವ ಈ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ‘ಮನೆಯ ಎದುರು ಬಾಗಿಲನ ಬೀಗವನ್ನು ಯಾರೋ ಕಳ್ಳರು ಯಾವುದೋ ಸಾಧನದಿಂದ ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿದೆ. ಮನೆಯ ಒಳಗೆ ಬೆಡ್ರೂಮಿನಲ್ಲಿದ್ದ ಕಬ್ಬಿಣದ ಗೋದ್ರೇಜನ್ನು ತೆರೆದು ಅದರ ಲಾಕರನ್ನು ಕಳ್ಳರು ಯಾವುದೋ ಸಾಧನದಿಂದ ಮುರಿದು, ಅದರಲ್ಲಿದ್ದ ಒಟ್ಟು 34 ಗ್ರಾಂ ನಷ್ಟು ಚಿನ್ನ ಹಾಗು 6000/-ರೂ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ವಿದೇಶದ ನೋಟುಗಳು ಹಾಗೂ ನಾಣ್ಯಗಳಿದ್ದ ಡಬ್ಬವನ್ನು ಕದ್ದೊಯ್ದಿದ್ದಾರೆ. ವಿಜಯ ಅವರ ಪುತ್ರಿಯ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕವನ್ನು ಎಸೆದು ಬ್ಯಾಗನ್ನು ಕೊಂಡೊಯ್ದಿದ್ದಾರೆ.…

Read More

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ನ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ಸಂಭವಿಸಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು . ಇಂದು ಮಂಗಳವಾರ ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳ್ಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದಾರೆ. ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿ ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಪತ್ತೆಯಾಗಿದ್ದಾಳು. ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ವಿಷಯ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್…

Read More

ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಈ ದಾಳಿ ನಡೆಸಿದ್ದರು ಎಂದು ಅಪಾದಿಸಲಾಗಿತ್ತು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೂ ತಂಡ ದಾಳಿ ಮಾಡಿತ್ತು ಎಂದು ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು.ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಸೇರ್ಪಡೆಗೊಂಡಿದ್ದ ಪತ್ರಕರ್ತ ನವೀನ್…

Read More

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದರೆ, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು * ಪಿಂಚಣಿ ಸೌಲಭ್ಯ * ಕುಟುಂಬ ಪಿಂಚಣಿ ಸೌಲಭ್ಯ * ದುರ್ಬಲತೆ ಪಿಂಚಣಿ * ಟೂಲ್ ಕಿಟ್ ಸೌಲಭ್ಯ * ಹೆರಿಗೆ ಸೌಲಭ್ಯ * ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ * ಶೈಕ್ಷಣಿಕ ಸಹಾಯಧನ * ವೈದ್ಯಕೀಯ ಸಹಾಯಧನ * ಅಪಘಾತ ಪರಿಹಾರಧನ * ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ * ಮದುವೆ ಸಹಾಯಧನ * ತಾಯಿ ಮಗು ಸಹಾಯ ಹಸ್ತ

Read More

ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು. ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಜುಲೈ 30 ರಂದು ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಯುವತಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

Read More

ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ‌ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ಇಂದು ರಾತ್ರಿ ನಡೆದಿದೆ.ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ಸುಜುಕಿ ಆಕ್ಸಿಸ್ ನಲ್ಲಿ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್ ಗೆ ಡಿಕ್ಕಿ‌ ಹೊಡೆದಿದ್ದಾರೆ. ಇದರ ಪರಿಣಾಮ ಸ್ಕೂಟರ್ ಸಮೇತ‌ ರಸ್ತೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಂಗಳೂರು : ಫೊರಮ್‌ಮಾಲ್‌ನಲ್ಲಿರುವ ಶೆರ್‌ಲಾಕ್‌ ಪಬ್‌ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಆ.3 ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಿವಾಸಿಗಳಾದ ಮಹೇಶ್‌, ವಿನಯ್‌,ನಿತೇಶ್‌,ಪ್ರೀತೆಶ್‌ ಅರೆಸ್ಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 22 ವರ್ಷದ ಯುವತಿ ತನ್ನ ಸ್ನೇಹಿತೆಯೊಂದಿಗೆ ಮಂಗಳೂರು ನಗರದ ಪಾಂಡೇಶ್ವರ ಫೊರಮ್‌ಮಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಶೆರ್‌ಲಾಕ್‌ ಪಬ್‌ಗೆ ವೀಕೆಂಡ್ ಪಾರ್ಟಿಗೆ ಬಂದಿದ್ದು, ರಾತ್ರಿ 10.30ರ ಸುಮಾರಿಗೆ ಆರೋಪಿಗಳು ದೂರುದಾರೆ ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿ ಮಾನಭಂಗ ಮಾಡಲು ಯತ್ನಿಸಿದ್ದು, ಆಕೆಯ ಸ್ನೇಹಿತೆಗೂ ಅವಾಚ್ಯ ಶಬ್ದಗಳಿಂದ ಬೈದು. ಬೀಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಸಂತ್ರಸ್ತ ಯುವತಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಉಡುಪಿ: ಖಾಲಿ ಮನೆಗೆ ನುಗ್ಗಿದ ಕಳ್ಳರು ಲ್ಯಾಪ್‌ಟಾಪ್, ಟ್ಯಾಬ್, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣಗಳನ್ನು ಕಳವು ಮಾಡಿ ಹೋದ ಘಟನೆ ನಗರದ ಬುಡ್ನಾರಿನಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಮನೆಯ ಸಂಬಂಧಿಕರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದು, ಕದ್ದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ. ಕೆ. ಮೊಹಮ್ಮದ್ ಅವರು 6 ತಿಂಗಳ ಹಿಂದೆಯಷ್ಟೇ ನಿಧನ ಹೊಂದಿದ್ದರು. ಕೆ. ಮೊಹಮ್ಮದ್ ಅವರಿಗೆ ಸೇರಿದ ಗ್ರೀಮ್ ಹೌಸ್‌ನಲ್ಲಿ ಈ ಘಟನೆ ನಡೆದಿದೆ. ಕಳವು ನಡೆದ ಮನೆಯಲ್ಲಿ ತಾಯಿ ಹಾಗೂ ಮಗಳು ಇಬ್ಬರೇ ವಾಸಮಾಡಿಕೊಂಡಿದ್ದರು. ಶನಿವಾರ ಸಂಜೆ ತಾಯಿ ಹಾಗೂ ಮಗಳು ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಯವರು ನಾವಿಲ್ಲದಿದ್ದರೂ ಹೊರ ಭಾಗದಲ್ಲಿ ಸ್ವಚ್ಛ ಮಾಡುವಂತೆ ತಿಳಿಸಿದ ಮೇರೆಗೆ ಕೆಲಸದಾಕೆ ರವಿವಾರ ಬೆಳಗ್ಗೆ ಬಂದಿದ್ದಾಗ ಬಾಗಿಲು ಒಡೆದಿತ್ತು. ಕೂಡಲೇ ಕೆಲಸದಾಕೆ ಈ ವಿಚಾರವನ್ನು ಪಕ್ಕದ ಮನೆಯವರ ಬಳಿ ತಿಳಿಸಿದ ಮೇರೆಗೆ…

Read More