Author: main-admin

ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ. ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್‌ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.

Read More

ಬಂಟ್ವಾಳ ಸಮೀಪ ಯುವಕರ ಎರಡು ತಂಡಗಳು ಹೊಡೆದಾಡಿಕೊಂಡು ಒಂದಷ್ಟು ಯುವಕರು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್‌ನಲ್ಲಿ ಸಂಭವಿಸಿದೆ. ಬಂಟ್ವಾಳ ಹಾಗೂ ಬಿ.ಸಿ. ರೋಡಿನ ಯುವಕರು ಹೊಡೆದಾಡಿಕೊಂಡಿದ್ದಾರೆ. ಮೂರರಿಂದ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೆಲವರು ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದು, ಒಂದಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳ ಸ್ಪಷ್ಟ ವಿವರ ತಿಳಿದುಬಂದಿಲ್ಲ. ಹೊಡೆದಾಡಿಕೊಂಡ ಯುವಕರು ಒಂದೇ ಕೋಮಿಗೆ ಸೇರಿದವರಾಗಿದ್ದು, ಆದರೆ ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಹೊಡೆದಾಡಿಕೊಂಡ ಯುವಕರ ಗುಂಪು ಚದುರಿದೆ. ಹೆತ್ತವರಿಗೆ ಬೈದ ವಿಚಾರಕ್ಕೆ ಸಂಬಂಧಿಸಿ ಮಾತುಕತೆಯ ವೇಳೆ ಸಂಘರ್ಷ ಉಂಟಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ. ಈ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ ಸಿಲಿಕಾನ್​ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ.

Read More

ಬಾಲ್ಯವಿವಾಹ ನಿಷೇಧ ಕಾಯಿದೆ -2006 ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಅವನ ಅಥವಾ ಅವಳ ಧರ್ಮದ ಹೊರತಾಗಿ ಅನ್ವಯಿಸುತ್ತದೆ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಏಕೆಂದರೆ ಪ್ರತಿಯೊಬ್ಬ ಭಾರತೀಯನು ಮೊದಲು ನಾಗರಿಕನಾಗಿರುತ್ತಾನೆ ಮತ್ತು ನಂತರ ಒಂದು ಧರ್ಮದ ಸದಸ್ಯನಾಗುತ್ತಾನೆ ಎಂದು ಹೇಳಿದೆ. ಪಾಲಕ್ಕಾಡ್‌ನಲ್ಲಿ ಬಾಲ್ಯವಿವಾಹದ ವಿರುದ್ಧ 2012ರಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಇತ್ತೀಚೆಗೆ ನೀಡಿದ ಆದೇಶದಲ್ಲಿ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರು, ಯಾವುದೇ ಧರ್ಮದ ಭೇದವಿಲ್ಲದೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ ಹೀಗೆ ಎಲ್ಲರಿಗೂ ಕಾಯ್ದೆ ಅನ್ವಯವಾಗುತ್ತದೆ ಎಂದಿದ್ದಾರೆ. ಆಗಿನ ಅಪ್ರಾಪ್ತ ಬಾಲಕಿಯ ತಂದೆ ಸೇರಿದಂತೆ ಅರ್ಜಿದಾರರು ನ್ಯಾಯಾಲಯದ ಮುಂದೆ ವಾದಿಸಿದರು. ಮುಸ್ಲಿಂ ಆಗಿರುವ ಆಕೆ ಪ್ರೌಢಾವಸ್ಥೆಯನ್ನು ಪಡೆದ ನಂತರ ಅಂದರೆ 15 ನೇ ವಯಸ್ಸಿನಲ್ಲಿ ಮದುವೆಯಾಗುವ ಧಾರ್ಮಿಕ ಹಕ್ಕನ್ನು ಹೊಂದಿದ್ದಾಳೆ ಎಂದು ಹೇಳಿದ್ದಾರೆ. ಒಬ್ಬ ವ್ಯಕ್ತಿ ಮೊದಲು ಭಾರತದ ಪ್ರಜೆ. ನಂತರ ಅವನ ಧರ್ಮ ಬರುತ್ತದೆ. ಧರ್ಮವು ಗೌಣ ಮತ್ತು ಪೌರತ್ವವು ಮೊದಲು…

Read More

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಅರಣ್ಯಾಧಿಕಾರಿ ರಾಘವ ಪಾಟಾಳಿ, ಅವರ ಪತ್ನಿ ಮತ್ತು ಪುತ್ರಿಯ ವಿರುದ್ದ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. 2016ರಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ರಾಘವ ಪಾಟಾಳಿ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಅವರ ಹಾಗೂ ಅವರ ಪತ್ನಿ, ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ವಿಶೇಷ ನ್ಯಾಯಾಧೀಶೆ ಸಂಧ್ಯಾ ಅವರು ಪ್ರಕರಣವನ್ನು ಸಾಬೀತುಪಡಿಸವಲ್ಲಿ ಜಾರಿ ನಿರ್ದೇಶನಾಲಯ ವಿಫಲವಾಗಿದೆಯೆಂದು ಪ್ರಕರಣವನ್ನು ವಜಾಗೊಳಿಸಿ ಆರೋಪಿಗಳನ್ನು ಬಿಡುಗಡೆಗೊಳಿಸಿ ಅದೇಶಿಸಿದ್ದಾರೆ ಹಾಗೂ ಜಪ್ತಿಪಡಿಸಿಕೊಂಡ ನಗದು ಮತ್ತು ಮುಟ್ಟುಗೊಲು ಮಾಡಿದ್ದ ಕಟ್ಟಡಗಳನ್ನು ರಾಘವ ಪಾಟಾಳಿ ಹಾಗೂ ಕುಟುಂಬದವರಿಗೆ ಹಸ್ತಾಂತರ ಮಾಡುವಂತೆ ಜಾರಿ ನಿರ್ದೆಶನಾಲಯಕ್ಕೆ ನಿರ್ದೇಶನ ನೀಡಿದ್ದಾರೆ. ರಾಘವ ಪಾಟಾಳಿ ಹಾಗೂ ಇತರರ ಪರವಾಗಿ ಬೆಂಗಳೂರಿನ ನ್ಯಾಯವಾದಿ ಶಂಕರ್ ಪಿ. ಹೆಗ್ಡೆ ಹಾಗೂ ಮಂಗಳೂರಿನ ನ್ಯಾಯಾವಾದಿ ಜಲಜಾಕ್ಷಿ ಎಂ. ಎಂ. ವಾದಿಸಿದ್ದರು.

Read More

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾ‌ರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ಆ.2ರಂದು ನ್ಯಾಯಾಧೀಶರಾದ…

Read More

ನವದೆಹಲಿ:ವಾಯು, ರಸ್ತೆ, ರೈಲ್ವೆ ಮತ್ತು ಜಲಮಾರ್ಗಗಳಂತಹ ವಿವಿಧ ಪ್ರಯಾಣ ವಿಧಾನಗಳ ಮೂಲಕ ಮಾನವ ಅಂಗಗಳನ್ನು ತಡೆರಹಿತವಾಗಿ ಸಾಗಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಮೊದಲ ಬಾರಿಗೆ ಎಸ್‌ಒಪಿಗಳನ್ನು ಹೊರತಂದಿದೆ. ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ದೇಶಾದ್ಯಂತ ಅಂಗಾಂಗ ಕಸಿಯಲ್ಲಿ ತೊಡಗಿರುವವರಿಗೆ ಮಾರ್ಗದರ್ಶಿ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆ. “ಅಂಗಾಂಗ ಸಾಗಣೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ, ಅಮೂಲ್ಯ ಅಂಗಗಳ ಬಳಕೆಯನ್ನು ಗರಿಷ್ಠಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ ಮತ್ತು ಜೀವ ಉಳಿಸುವ ಕಸಿಗಾಗಿ ಕಾಯುತ್ತಿರುವ ಅಸಂಖ್ಯಾತ ರೋಗಿಗಳಿಗೆ ಭರವಸೆಯನ್ನು ನೀಡುತ್ತೇವೆ. “ಈ ಎಸ್‌ಒಪಿಗಳು ದೇಶಾದ್ಯಂತ ಅಂಗಾಂಗ ಮರುಪಡೆಯುವಿಕೆ ಮತ್ತು ಕಸಿ ಸಂಸ್ಥೆಗಳಿಗೆ ಮಾರ್ಗಸೂಚಿಯಾಗಿದ್ದು, ಉತ್ತಮ ಅಭ್ಯಾಸಗಳು ಮತ್ತು ಗುಣಮಟ್ಟದ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುತ್ತವೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದರು. ಅಂಗಾಂಗ ದಾನಿ ಮತ್ತು ಅಂಗ ಸ್ವೀಕರಿಸುವವರು ಇಬ್ಬರೂ ಒಂದೇ ನಗರದೊಳಗಿನ ಅಥವಾ ವಿಭಿನ್ನ ನಗರಗಳಲ್ಲಿನ ವಿಭಿನ್ನ ಆಸ್ಪತ್ರೆಗಳಲ್ಲಿದ್ದಾಗ ಜೀವಂತ ಅಂಗವನ್ನು ಆಸ್ಪತ್ರೆಗಳ ನಡುವೆ ಸಾಗಿಸಬೇಕಾಗುತ್ತದೆ. ವಿಮಾನದ ಮೂಲಕ ಸಾಗಿಸುವ ಎಸ್‌ಒಪಿಗಳ ಪ್ರಕಾರ, ಮಾನವ…

Read More

ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಆರೋಪಿ ಎಳೆದೊಯ್ದಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಆರೋಪಿ ಮಹ್ಮದ್ ಶಾಫಿ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ . ತಲೆ ಮರೆಯಿಸಿಕೊಂಡಿದ್ದ ಮಹಮ್ಮದ್ ಶಾಫಿಯನ್ನು 12 ವರ್ಷಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುರತ್ಕಲ್ ಬೊಕ್ಕಬೆಟ್ಟು ಗ್ರಾಮದ ಕೃಷ್ಣಾಪುರ 8 ನೇ ಬ್ಲಾಕ್ ನಿವಾಸಿಯಾಗಿರುವ ಆರೋಪಿ ಮಹಮ್ಮದ್ ಶಾಫಿ 12 ವರ್ಷಗಳ ಹಿಂದೆ ಗೋಳಿತೊಟ್ಟು ಎಂಬಲ್ಲಿ ಬೈಕಿನಲ್ಲಿ ಬಂದು ಪಾದಾಚಾರಿ ಮಹಿಳೆಯ ಚಿನ್ನಾಭರಣವನ್ನು ಎಳೆದೊಯ್ದಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಈತ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ .ಆರೋಪಿಯ ಜಾಡು ಹಿಡಿದ ಪೊಲೀಸರು…

Read More