Author: main-admin

ಮಂಗಳೂರು: ನಗರದ ಬಜಪೆ ಸಮೀಪ ಜನರಿಗೆ ಈಗ ಹೊಸ ಹೊಸ ಗ್ಯಾಂಗ್‌ ಪರಿಚಯವಾಗುತ್ತಿರುವುದು ಅಚ್ಚರಿಯಾಗುತ್ತಿದೆ. ಕಳ್ಳತನ, ಮೋಸ-ವಂಚನೆ ಪ್ರಕರಣಗಳು ಹೆಚ್ಚುತ್ತಲೇ ಇವೆ.ನಗರದಲ್ಲಿ ಈಗ ಹೊಸ ಗ್ಯಾಂಗ್‌ ಒಂದು ಹುಟ್ಟಿಕೊಂಡಿದೆ. ಅದುವೇ “ಆರ್ಡರ್‌ ಗ್ಯಾಂಗ್‌” ಎಂದು ತಿಳಿದು ಬಂದಿದೆ. ಈ “ಆರ್ಡರ್‌ ಗ್ಯಾಂಗ್‌’’ ಈ ಹಿಂದೆ ಮಂಗಳೂರಿನಲ್ಲಿ ಬೆಳಕಿಗೆ ಬಂದ ಕಳ್ಳತನದ “ಚಡ್ಡಿ ಗ್ಯಾಂಗ್‌’’ ನಂತಹ ಗ್ಯಾಂಗ್‌ ಅಲ್ಲ. ಅವರದ್ದು ಮನೆಗಳಲ್ಲಿ ಕಳ್ಳತನ ನಡೆಸುವುದು. ಆದರೆ ಈ “ಆರ್ಡರ್‌ ಗ್ಯಾಂಗ್‌’’ನ ಕಥೆವೇ ಭಿನ್ನವಾದುದು. ಇವರದ್ದು ಅಂಗಡಿಗಳಲ್ಲಿ ಭಾರೀ ಪ್ರಮಾಣದ “ಆರ್ಡರ್‌’ಗಳನ್ನು ನೀಡಿ ಅವರನ್ನೇ ಯಾಮಾರಿಸಿ ಹಣ ದೋಚುವುದು. ಅದರಲ್ಲೂ ಈ ಗ್ಯಾಂಗ್‌ ಬರುವುದು ಹಗಲಿನಲ್ಲೇ, ಅದೂ ಕಾರಿನಲ್ಲಿ! ಈ ಗ್ಯಾಂಗ್‌ಗೆ ಹೆಚ್ಚು ಮೋಸ ಹೋದವರು ಪ್ರಮುಖ ವ್ಯಾಪಾರಿಗಳು ಎಂದು ತಿಳಿಯಲಾಗಿದೆ. ಬೇರೆ ಜಿಲ್ಲೆಗಳಿಂದ ಬಂದು ಚಡಿ ಹಾಕಿ ಮನೆಗಳ ಕಿಟಿಕಿ, ಬಾಗಿಲುಗಳನ್ನು ತುಂಡರಿಸಿ ಮನೆಯೊಳಗೆ ನುಗ್ಗಿ ಬೆದರಿಸಿ ನಗ-ನಗದು ದೋಚುವ “ಚಡ್ಡಿ ಗ್ಯಾಂಗ್‌’’ ಹೆಸರು ಪ್ರಚಲಿತದಲ್ಲಿ ಇದ್ದಂತೆ ವ್ಯಾಪಾರಿಗಳನ್ನು ದೋಚುವ “ಆರ್ಡರ್‌ ಗ್ಯಾಂಗ್‌’’ಗೆ…

Read More

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಜು.26 ರ ತಡ ರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

Read More

ಮಂಗಳೂರು : ವಿದ್ಯಾರ್ಥಿಗಳನ್ನು ಮದ್ಯಪಾರ್ಟಿ ಮಾಡಲು ನಗರದ ದೇರೆಬೈಲ್‌ನಲ್ಲಿ ನೂತನವಾಗಿ ಆರಂಭಗೊಂಡಿದ್ದ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ವಿಶೇಷ ಆಫರ್ ನೀಡಿತ್ತು. ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಹೊಟೇಲ್ ಮೇಲೆ ಎಫ್ಐಆರ್‌ ದಾಖಲು ಮಾಡಿದೆ. ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರಿಗೆ ಸ್ಪೂಡೆಂಟ್ಸ್ ನೈಟ್ಸ್ ಹೆಸರಿನಲ್ಲಿ ಮದ್ಯಸೇವಿಸಲು ಆಫರ್ ನೀಡಿತ್ತು. ಸ್ಕೂಲ್ ಐಡಿ ತಂದರೆ ವಿದ್ಯಾರ್ಥಿಗಳಿಗೆ 15 ಪರ್ಸೆಂಟ್ ಆಫರ್ ನೀಡಲಾಗುತ್ತದೆ. ಅಲ್ಲದೆ, ವಿದ್ಯಾರ್ಥಿನಿಯರಿಗೆ ಐಡಿ ತೋರಿಸಿದರೆ ಫ್ರೀ ಶೂಟ‌ರ್ ವ್ಯವಸ್ಥೆ ಇದೆಯೆಂದು ಪಾರ್ಟಿ ಆಯೋಜಕರು ಆಫರ್ ನೀಡಿದ್ದರು. ಲಿಕ್ಕರ್ ಲಾಂಜ್ ಆಯೋಜಿಸಿದ್ದ ನೈಟ್ ಪಾರ್ಟಿಯ ಸ್ಟಿಕ್ಕರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಬಾರ್ ವಿರುದ್ಧ ಎಫ್‌ಐಆ‌ರ್ ದಾಖಲಿಸಿದ್ದಾರೆ. ಸದ್ಯ ಲಿಕ್ಕರ್ ಲಾಂಜ್‌ನಲ್ಲಿ ಆಯೋಜನೆ ಆಗಿದ್ದ ಪಾರ್ಟಿಗೆ ಕಾವೂರು ಪೊಲೀಸರು ತಡೆ ನೀಡಿ ಬಾರ್ ಮಾಲಕನಿಗೆ ನೋಟೀಸ್…

Read More

ಬೆಳ್ತಂಗಡಿ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಓ.ಟಿ.ಪಿ ಪಡೆದು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿದ ಪ್ರಕರಣ ಜು.26ರಂದು ವರದಿಯಾಗಿದೆ. ಕೊಕ್ಕಡ ಗಾಣಗಿರಿ ಸುಶೀಲ ಅವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ. ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲ ಅವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ. ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಪದೇ ಪದೇ ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.ಈ…

Read More

ಮಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 10 ಲಕ್ಷ ರೂ. ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ ದೂರುದಾರ 2023ರ ನವೆಂಬರ್‌ನಲ್ಲಿ ಓಶಿಯನ್ ಫೈನಾನ್ಸ್ ಅಕಾಡೆಮಿ ಎಂಬ ಕಂಪೆನಿಯ ವೆಬ್‌ಸೈಟ್‌ನಲ್ಲಿ ಕ್ರಿಫ್ಟೋ ಕರೆನ್ಸಿಯ ಬಗ್ಗೆ ಆನ್‌ಲೈನ್‌ನಲ್ಲಿ ತರಬೇತಿ ಪಡೆದಿದ್ದರು. ಬಳಿಕ ಕಂಪೆನಿಯವರು ದೂರುದಾರರ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಪಡೆದುಕೊಂಡು Viyako.com ಎಂಬ ಕ್ರಿಪ್ಟೋ ಕರೆನ್ಸಿಯ ವೆಬ್‌ಸೈಟ್ Exchange centre ಅನ್ನು ಪರಿಚಯಿಸಿದರು. ಬಳಿಕ ಅಡ್ಡಿರ್ ಕಾದಿರ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಆನ್‌ಲೈನ್ ಮೂಲಕ ಮೆಸೇಜ್ ಮಾಡಿ ಹಣ ಹೂಡುವಂತೆ ತಿಳಿಸಿದ್ದ. ಅದರಂತೆ ದೂರುದಾರರು 12,500 ರೂ.ಗಳನ್ನು ಹೂಡಿಕೆ ಮಾಡಿದ್ದರು. ಅದರ ಲಾಭಾಂಶವೆಂದು 46,000 ರೂ. ಗಳನ್ನು ದೂರುದಾರರ ಖಾತೆಗೆ ಕಳುಹಿಸಲಾಗಿತ್ತು. ಅನಂತರ ಆರೋಪಿಗಳು 2024ರ ಮೇ ತಿಂಗಳಲ್ಲಿ ಮೆಸೇಜ್ ಮಾಡಿ ಕ್ರಿಪ್ಟ್ ಕರೆನ್ಸಿಯಲ್ಲಿ ಒಳ್ಳೆಯ ಲಾಭವಿದೆ ಎಂದು ನಂಬಿಸಿ ಕಾಯಿನ್ ಖರೀದಿಸುವಂತೆ ತಿಳಿಸಿದರು. ಮೇ 13ರಂದು ಎರಡು ಕಾಯಿನ್‌ಗಳಿಗೆ ತಲಾ 5…

Read More

ಕರ್ನಾಟಕದಲ್ಲಿ ನಾಪತ್ತೆಯಾಗುತ್ತಿರುವ ಮಹಿಳೆಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಪೊಲೀಸ್ ಇಲಾಖೆಗೂ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. 2021ರಿಂದ ಈವರೆಗೆ 3 ವರ್ಷಗಳಲ್ಲಿ ಒಟ್ಟು 42,237 ಮಹಿಳೆಯರು ನಾಪತ್ತೆಯಾಗಿರುವ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದು, ಅವರಲ್ಲಿ 39389 ಮಹಿಳೆಯರಷ್ಟೇ ಪತ್ತೆಯಾಗಿದ್ದಾರೆ ಎಂದು ಗೃಹ ಇಲಾಖೆ ಸ್ಪೋಟಕ ಮಾಹಿತಿ ಬಹಿರಂಗಗೊಳಿಸಿದೆ. ವಿಧಾನಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಕೇಳಿರುವ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಇಲಾಖೆ ಈ ಆತಂಕಕಾರಿ ಮಾಹಿತಿಯನ್ನು ಒದಗಿಸಿದೆ. ಗೃಹ ಇಲಾಖೆ ನೀಡುವ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಇನ್ನೂ ಅಧಿಕೃತವಾಗಿ ಸುಮಾರು 2848 ಮಹಿಳೆಯರು ಎಲ್ಲಿದ್ದಾರೆ ಎಂಬುದೇ ಪತ್ತೆಯಾಗಿಲ್ಲ. ನಾಪತ್ತೆ ಆಗಿರುವವರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು ಮಾನವ ಕಳ್ಳ ಸಾಗಣೆ ದಂಧೆ ಮೇಲೂ ನಿಗಾ ಇಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.ಕಳೆದ ಮೂರುವರೆ ವರ್ಷದಲ್ಲಿ ಒಟ್ಟು 42,237 ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 39389 ಮಹಿಳೆಯರನ್ನು ಪತ್ತೆ ಹಚ್ಚಲಾಗಿದೆ. ಉಳಿದ ಮಹಿಳೆಯರು ಎಲ್ಲಿದ್ದಾರೆ ಎಂಬುವುದು ಇಂದಿಗೂ…

Read More

ವಿಟ್ಲ : ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ. ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಆರೇಳು ಅಡಿ ಆಳವಿದ್ದ ಈ ಮೋರಿಯಲ್ಲಿ ಮಳೆಯ ಕಾರಣ ನೀರು ರಭಸವಾಗಿ ಹರಿಯುತ್ತಿತ್ತು. ಕೊಂಚ ಹೆಚ್ಚು ಕಡಿಮೆಯಾದರೂ ಮೋರಿಗೆ ಬಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆಯಿತ್ತು. ಇದನ್ನು ಗಮನಿಸಿದ ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಸ್ವತಃ ಮೋರಿಗಿಳಿದು ಹರಸಾಹಪಟ್ಟು ಮೇಲಕ್ಕೆತ್ತಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ಸಾರ್ವಜನಿಕರು ಸಹಕರಿಸಿದ್ದಾರೆ.

Read More

ಮಂಗಳೂರು: ಹಂಪನಕಟ್ಟೆ ಸಮೀಪ ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌. ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕಂಡಿದೆ. ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24) ಬಂಧಿತ ಯುವಕ. ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವಕ ಟೆಟ್ರಾ ಹೆಡ್ರಾಕೆನಬಿನಾಯ್ಡ ಎಂಬ ನಿಷೇಧಿತ ಮಾದಕ ದ್ರವ್ಯ ಸೇವನೆ ಮಾಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಸಂಬಂಧಿ ಯುವತಿಯನ್ನೇ ವಿವಾಹಿತನೋರ್ವನು ಬಲವಂತವಾಗಿ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿರುವ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಅತ್ಯಾಚಾರಗೈದ ವಿವಾಹಿತ. ಗುರುಪ್ರಸಾದ್ ತನ್ನ ಸಂಬಂಧಿ ಯುವತಿಯನ್ನು ಕಳೆದ ಒಂದು ವರ್ಷಗಳಲ್ಲಿ ಎರಡು ಬಾರಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ. ಪರಿಣಾಮ ಆಕೆ ಈಗ ಗರ್ಭಿಣಿಯಾಗಿದ್ದಾಳೆ. ಇದೀಗ ಸಂತ್ರಸ್ತೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು‌ ನೀಡಿದ್ದಾಳೆ. ಆರೋಪಿಗೆ ಈಗಾಗಲೇ ‌ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯವೆಸಗಲಾಗಿದೆ ಎಂದು ದೂರಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗುರುಪ್ರಸಾದ್ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Read More