Author: main-admin

ಕರ್ನಾಟಕ ಮಾನ್ಯ ಉಚ್ಚನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ 19033/2023 ರಲ್ಲಿ ದಿನಾಂಕ 15/11/2023 ರಂದು ನೀಡಿರುವ ಆದೇಶದಲ್ಲಿ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯಿಂದ ನಗರ,ಸ್ಥಳೀಯ ಸಂಸ್ಥೆಯಿಂದ ವಿನ್ಯಾಸ ಮಂಜೂರಾಗಿದ್ದು,ಇದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17 ರಲ್ಲಿ ಕಲ್ಪಿಸಿರುವ ಅವಕಾಶಕ್ಕೆ ವ್ಯತ್ತಿರಿಕ್ತವಾಗಿದ್ದು ಈ ಅನುಮೋದನೆಗಳ ವಿರುದ್ದ ದೂರು ಸ್ವೀಕರಿಸಿದ ಹಿನ್ನಲೆಯಲ್ಲಿ ವಿನ್ಯಾಸ ನಕ್ಷೆ ಮತ್ತು ಖಾತೆಗಳನ್ನು ರದ್ದುಗೊಳಿಸಿ ಆದೇಶಿಸಿದ್ದು,ಇದು ಮೂರನೇ ವ್ಯಕ್ತಿಯ ಖರೀದಿದಾರರ ಹಿತಾಸಕ್ತಿಗಳನ್ನು ಒಳಗೊಂಡಿದ್ದು ಅನಾವಶ್ಯಕ ವಿವಾದಗಳಿಗೆ ಕಾರಣವಾಗಿರುವುದರಿಂದ ಇಂತಹ ಸಮಸ್ಯೆಗಳನ್ನು ನಿಯಂತ್ರಿಸಲು ರೂಪುರೇಷೆಗಳನ್ನು ರಚಿಸಲು ಸರ್ಕಾರಕ್ಕೆ ಸೂಚಿಸಿರುತ್ತದೆ.ಸದರಿ‌ ಆದೇಶಗಳ ಹಿನ್ನಲೆಯಲ್ಲಿ ಈ ಹಿಂದಿನ ಪ್ರಸ್ತಾವನೆಯನ್ನು ತಡೆಹಿಡಿದು 2014 ಪೂರ್ವದಲ್ಲಿದ್ದಂತೆ ಸ್ಥಳೀಯ ಯೋಜನಾ ಪ್ರದೇಶದ ಹೊರತಾದ ಗ್ರಾಮಾಂತರ ಪ್ರದೇಶದಲ್ಲಿ ಭೂಪರಿವರ್ತಿತ ಎಕ ನಿವೇಶನ ನೀಡುವಂತೆ ಮತ್ತು ಈಗೀನ ತೊಂದರೆಯ ಬಗ್ಗೆ ಮತ್ತು ಅದಕ್ಕಿರುವ ಪರಿಹಾರ ಮಾರ್ಗದ ಬಗ್ಗೆಯೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ ಕುಳಾಲ್ ಸುಭಾಶ್ಚಂದ್ರ ಶೆಟ್ಟಿ ನೇತೃತ್ವದ…

Read More

ಅಂಕೋಲಾ: ಇಲ್ಲಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು ಈವರೆಗೆ 11 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಈಗಾಗಲೇ ಕೆಲವರ ಮೃತದೇಹವನ್ನು ಗುಡ್ಡ ತೆರವು ಕಾರ್ಯಾಚರಣೆಯ ವೇಳೆಯಲ್ಲಿ ಪತ್ತೆಯಾಗಿದೆ. ಇದರ ನಡುವೆ ತಮಿಳುನಾಡು ಮೂಲಕ ಲಾರಿ ಚಾಲಕನೊಬ್ಬನು ನಾಪತ್ತೆಯಾಗಿದ್ದಾರೆ ಅಂತ ಕುಟುಂಬಸ್ಥರು ದೂರು ನೀಡಿದ್ದಾರೆ. ಹೀಗಾಗಿ ಶಿರೂರು ಬಳಿಯ ಗುಡ್ಡಕುಸಿತ ಘಟನೆಯಲ್ಲಿ ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಕೋಲ ಬಳಿಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿತ್ತು. ಈ ಸಂದರ್ಭದಲ್ಲಿ ಎರಡು ಕುಟುಂಬದ ಜನರು, ಅದೇ ಸಂದರ್ಭದಲ್ಲಿ ಟೀ ಅಂಗಡಿಯ ಮುಂದೆ ನಿಂತಿದ್ದಂತ ಲಾರಿ ಚಾಲಕ ಸೇರಿದಂತೆ 11 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಈಗಾಗಲೇ ಕೆಲವರ ಮೃತದೇಹಗಳು ಗುಡ್ಡ ಕುಸಿತದ ಮಣ್ಣು ತೆರವು ಕಾರ್ಯಾಚರಣೆಯ ವೇಳೆಯಲ್ಲಿ ಪತ್ತೆಯಾಗಿವೆ. ಇದರ ನಡುವೆ ತಮಿಳುನಾಡು ಮೂಲಕ ಲಾರಿ ಚಾಲಕ ಶರವಣ ಎಂಬುವರು ನಾಪತ್ತೆಯಾಗಿದ್ದಾರೆ ಅಂತ ಕುಟುಂಬಸ್ಥರು ಅಂಕೋಲಾ ಪೊಲೀಸ್ ಠಾಣೆಗೆ ದೂರು…

Read More

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರ ನಿರ್ಧಾರವನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ. ಅದೇ ರೀತಿ ಶೃಂಗೇರಿ ಮಠದಲ್ಲಿ ಜಾರಿಗೆಗೊಳಿಸಿದ ವಸ್ತ್ರ ಸಂಹಿತೆಯ ಮಾದರಿಯನ್ನು ಮುಂಬರುವ ದಿನಗಳಲ್ಲಿ ಕರ್ನಾಟಕದ ಎಲ್ಲಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಒಳಪಟ್ಟ ಎಲ್ಲ ದೇವಸ್ಥಾನಗಳಲ್ಲಿ ಆಗಮಿಸುವ ಭಕ್ತರಿಗೆ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

Read More

ಮಂಗಳೂರು:  ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್‌ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ ಪೊಲೀಸರು ಮಂಗಳೂರು ನಗರದ ಜೈಲ್ ಬ್ಯಾರಕ್ ಮೇಲೆ ಇಂದು ಮುಂಜಾನೆ 4 ಗಂಟೆಗೆ ಹಠಾತ್ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ 2 ಡಿಸಿಪಿಗಳು, 3 ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು. ಜೈಲಿನ ಎಲ್ಲಾ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಕವರ್ ಮಾಡಲು ಹಲವಾರು ತಂಡಗಳನ್ನು ರಚಿಸಲಾಯಿತು, ಅದರ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಕೊನೆಯ ಕ್ಷಣದವರೆಗೂ ದಾಳಿಯ ಗೌಪ್ಯತೆಯನ್ನು ಕಾಪಾಡಲಾಗಿದೆ. ಶೋಧದ ಸಮಯದಲ್ಲಿ, ಈ ಕೆಳಗಿನ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ: 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3 ಕೇಬಲ್‌ಗಳು ಮತ್ತು ಗಾಂಜಾ ಮತ್ತು ಇತರ ಡ್ರಗ್‌ಗಳ ಬಹು ಪ್ಯಾಕೆಟ್‌ಗಳು. ಈ ಕಾರ್ಯಾಚರಣೆಯು ಭದ್ರತೆಯನ್ನು ಕಾಪಾಡಿಕೊಳ್ಳಲು…

Read More

 ಬಂಟ್ವಾಳ: ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆಯೊಂದು ಸಂಪೂರ್ಣ ಹಾನಿಗೊಳಗಾಗಿ ಮನೆಮಂದಿ ಅಪಾಯದಿಂದ ಪಾರಾದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ನಿವಾಸಿ ಇಸ್ಮಾಯಿಲ್ ಮದನಿ ಉಸ್ತಾದರ ಮನೆಗೆ ರಾತ್ರಿ ವೇಳೆ ಬಂದ ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ,ಮನೆಯಲ್ಲಿ ಮಲಗಿದ್ದವರೆಲ್ಲಾ ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Read More

ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು. ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಕಾಡುಬೀಸನಹಳ್ಳಿ ರೋಹಿತ್, ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್ ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು. ಕೆಲ ರೌಡಿಗಳ ಶಿಷ್ಯಂದಿರು ಬಾಸ್ ಎಂದು ರೀಲ್ಸ್ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು. ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ…

Read More

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ…

Read More

ಬಂಟ್ವಾಳ: ಠಾಣಾ ವ್ಯಾಪ್ತಿಯ ಕುಕ್ಕಾಜೆ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕುಕ್ಕಾಜೆ ಪೇಟೆಯಲ್ಲಿ ಬೆಳ್ಳಂಬೆಳಗ್ಗೆಯೇ ನಂದಾವರ, ಲೊರೆಟ್ಟೊಪದವು ಮತ್ತು ಕುಕ್ಕಾಜೆಯ ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ ನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ವಿಟ್ಲ ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಡ್ರಗ್ ವ್ಯಸನಿಗಳ ಸಂಖ್ಯೆ ಸಾಕಷ್ಟಿದ್ದು ಸಭ್ಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸಾರ್ವಜನಿಕರ ಆರೋಪ ಕೇಳಿಬಂದಿದೆ.

Read More

ಬಂಟ್ವಾಳ: ಇಲ್ಲಿನ ಪರಿಸರದಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಗಾಳಿಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ, ಹೊಟೇಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ  ಮಂಗಳವಾರ(ಜು.23) ರಾತ್ರಿ 10ರ ವೇಳೆಗೆ ನಡೆದಿದೆ.ಘಟನೆಯಿಂದಾಗಿ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದಿಂದ ಕೈಕಂಬದ ತನಕ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವೃತ್ತದ ಬಳಿ ವಿದ್ಯುತ್ ಕಂಬಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದ್ದು ರಸ್ತೆ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಅಗ್ನಿ ಶಾಮಕ ದಳದ ಸಿಬಂದಿ, ಬಂಟ್ವಾಳ ನಗರ ಹಾಗೂ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

Read More

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಸಾವನ್ನಪ್ಪಿದ್ದ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ಹೀಗೆ ಆಗಮಿಸಿದವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈವರೆಗೆ ದ.ಕ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

Read More