ನವದೆಹಲಿ : ಪಡಿತರ ಚೀಟಿ ಪಡೆಯಲು ಪಡಿತರ ಚೀಟಿ ಅತ್ಯಗತ್ಯ. ಮುಂಬರುವ ಹಬ್ಬಗಳಿಗೆ ಮುನ್ನ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಸಂಖ್ಯಾತ ಫಲಾನುಭವಿಗಳಿಗೆ ನೆಮ್ಮದಿ ತಂದಿದೆ. ಬಹಳ ಹಿಂದೆಯೇ ಕೇಂದ್ರ ಸರ್ಕಾರವು ಪಡಿತರ ಚೀಟಿಗೆ ಇ-ಕೆವೈಸಿ (ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಅನ್ನು ಕಡ್ಡಾಯಗೊಳಿಸಿತ್ತು. ಆಹಾರ ಸಾಮಗ್ರಿಗಳ ನಿರಂತರ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಎಲ್ಲಾ ಫಲಾನುಭವಿಗಳಿಗೆ ಸೂಚಿಸಲಾಯಿತು. ಆದಾಗ್ಯೂ, ಅನೇಕರು ತಮ್ಮ ಇ-ಕೆವೈಸಿಯನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಡಿತರ ವಸ್ತುಗಳ ಉಚಿತ ವಿತರಣೆಯನ್ನು ನಿರ್ವಹಿಸಲು ಮತ್ತು ಪೂರೈಕೆಯಲ್ಲಿ ಯಾವುದೇ ಅಡಚಣೆಯನ್ನು ತಡೆಗಟ್ಟಲು, ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಒತ್ತಾಯಿಸಲಾಗಿದೆ. ಈ ವಿಧಾನವನ್ನು ಇನ್ನೂ ಪೂರ್ಣಗೊಳಿಸದವರಿಗೆ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಮೋದಿ ಸರ್ಕಾರವು ರೇಷನ್ ಕಾರ್ಡ್ ಇ-ಕೆವೈಸಿ ಗಡುವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದೆ. ಪಡಿತರ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ತೊಂದರೆ…
Author: main-admin
ಆಂಧ್ರಪ್ರದೇಶ: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ. ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್ ಹೈ ಅಲರ್ಟ್: “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ. ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ…
ಉಡುಪಿ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಹೇಳಿದರು. ತಿರುಪತಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಲಡ್ಡು ಪ್ರಸಾದಕ್ಕೆ ದನದ ತುಪ್ಪದ ಬದಲು ಪ್ರಾಣಿ ಜನ್ಯ ಕೊಬ್ಬಿನ ಮಿಶ್ರಣ ಬಳಕೆ ಮಾಡಿರುವ ವಿಚಾರ ಕೇಳಿ ಖೇದವಾಗಿದೆ. ಮೀನಿನ ಎಣ್ಣೆ, ಹಂದಿ ಹಸುವಿನ ಕೊಬ್ಬ ಬಳಸಿ ಪ್ರಸಾದ ತಯಾರಿಸಿರುವುದು ಸಮಾಜಕ್ಕೆ ಭಗವಂತನಿಗೆ ಬಗೆದಿರುವ ಅಪಚಾರ. ಇಂತಹ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು ಖಂಡನೀಯ ಎಂದರು. ತಿರುಪತಿ ಶ್ರೀನಿವಾಸನನ್ನು ಗೋರಕ್ಷಕ ಎಂದು ಕಾಣುತ್ತೇವೆ. ಅಂತಹ ಶ್ರೀನಿವಾಸ ದೇವರಿಗೆ ಹಸು ಕೊಬ್ಬು ಬಳಸಿದ ಪ್ರಸಾದ ನೀಡಿರುವುದು ಅಪರಾಧ. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಮಾಡಿರುವ ಹಲ್ಲೆ ಇದು. ಹಿಂದೂಗಳು ಉಪಯೋಗ ಅನರ್ಹವಾಗಿರುವ ವಸ್ತುಗಳನ್ನು ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು ಶಿಕ್ಷಿಸಿ…
ಬೆಳ್ತಂಗಡಿ; 2022ರ ಅ.9ರಂದು ಬೆಳ್ತಂಗಡಿಯಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಸದಾಶಿವ ಎಂಬಾತ 2022ರ ಅ.9ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಸಮೀಪದಲ್ಲಿರುವ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ, ಮನೆಗೆ ತೆರಳಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು. 2022 ಅ.10ರಂದು ಮತ್ತೆ ಫೇಸ್‌ಬುಕ್ ಸಂದೇಶ ಹಾಕಿದ್ದ ಆರೋಪಿ ಬಾಲಕಿ ಬಳಿ ‘ನನ್ನನ್ನು ಕ್ಷಮಿಸು, ಇನ್ನು ನಿನಗೆ ತೊಂದರೆ ಕೊಡಲ್ಲ, ನನ್ನಷ್ಟಕ್ಕೆ ನಾನಿರುವೆ’ ಎಂದು ಹೇಳಿದ್ದ. ಇದರಿಂದ ನೊಂದ ಬಾಲಕಿ ಡೀಸೆಲ್ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 14 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. 33 ದಾಖಲೆಗಳನ್ನು ಗುರುತಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,…
ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿರುತ್ತಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟ್ರೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, 2 ಅಟೋರಿಕ್ಷಾಗಳು, 1 ಮೊಟಾರ್ ಸೈಕಲ್ ಪತ್ತೆಯಾಗಿರುತ್ತದೆ. ಸೊತ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ನೋಂದಣಿ ಹೇಗೆ? * 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ * 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ₹2 ಶುಲ್ಕ * 30 ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ₹5 ಶುಲ್ಕ * 1 ವರ್ಷ ನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು 10 ಶುಲ್ಕ
ಬಜಪೆ:ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕುಪ್ಪೆಪದವಿನ ನಿವಾಸಿಗಳಾದ ಮಹ್ರೂಪ್ (22),ಮಹಮ್ಮದ್ ಪೈಝನ್(22) ಹಾಗೂ ಎಡಪದವಿನ ಜೀವನ್(24) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಎಡಪದವು,ಸೂರಲ್ಪಾಡಿ ಮತ್ತು ಪೆರ್ಮುದೆ ಮುಂತಾದ ಕಡೆಗಳಿಂದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಬಜಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್,ಪಿ ಎಸ್.ಐ ರೇವಣ್ಣ ಸಿದ್ದಪ್ಪ,ಪಿ.ಎಸ್.ಐ ಶ್ರೀಮತಿ ಲತಾ,ಸಿಬ್ಬಂದಿಗಳಾದ ಸುಜನ್,ಮಂಜುನಾಥ್,ಬಸವರಾಜ್ ಪಾಟೀಲ್ ,ಚಿದಾನಂದ,ಚಂದ್ರಕಾಂತ ಹಾಗೂ ಕೆಂಚನಗೌಡ ಪಾಲ್ಗೊಂಡಿದ್ದರು.
ಕಾಸರಗೋಡು: ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಗಸ್ಟ್ 30 ರಂದು ಮೇಲ್ಪರಂಬದಲ್ಲಿ 49.33 ಗ್ರಾಂ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಉಪ್ಪಳದ ಮನೆಗೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕಾರ್ಡ್ ಬೋರ್ಡ್ ಪೆಟ್ಟಿಗೆಯಲ್ಲಿರಿಸಲಾಗಿದ್ದ 3ಕಿಲೋ ಎಂಡಿಎಂಎ ಹಾಗೂ ಒಂದು ಕಿಲೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಹಲವಾರು ಮಾದಕ ದ್ರವ್ಯ ಹಾಗೂ ಮಾತ್ರೆಯನ್ನು ವಶಪಸಿಕೊಳ್ಳಲಾಗಿದೆ. ಹಲವು ವರ್ಷಗಳ ಹಿಂದೆ ಈ ಮನೆಯನ್ನು ಖರೀದಿಸಿ ಮಾದಕ ವಸ್ತು ವಹಿವಾಟು ನಡೆಸಿದ್ದಾಗಿ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ.ಪೊಲೀಸರು ದಾಳಿ ನಡೆಸಿ, ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ, ಮಡಂತ್ಯಾರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್-ಬಹಾರ್ ) ಎಂಬ ಅದೃಷ್ಟದ ಆಟವನ್ನು ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್‌ಐ (ಕಾ&ಸು) ನಂದಕುಮಾರ್ ಎಂ.ಎಂ ರವರು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿ ಕೃತ್ಯದಲ್ಲಿ ತೊಡಗಿದ್ದ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು, ಜುಗಾರಿ ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ನಗದು ಸೇರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 36729/- ಆಗಬಹುದು. ಈ ಬಗ್ಗೆ ಮಾನ್ಯ ನ್ಯಾಯಾಲಯದಿಂದ…