ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ(ಜು.7) ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಬಿ.ಸಿ. ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಒನ್-ವೇ ನಿಯಮವನ್ನು ಉಲ್ಲಂಘಿಸಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಮತ್ತು ಕಾರು ಎರಡೂ ಜಖಂಗೊಂಡಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ ಅಶೋಕ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Author: main-admin
ಅಯೋಧ್ಯೆ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ತನಿಖೆಯಲ್ಲಿ ಹಲವು ಅಂಶಗಳು ಬೆಳಕಿಗೆ ಬಂದಿವೆ. ಬಂಧಿತರಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕ, ಕಾರು ಮೆಕ್ಯಾನಿಕ್, ನಿವೃತ್ತ ಬ್ಯಾಂಕ್ ನೌಕರ ಹಾಗೂ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹಿರಿಯ ಅಧಿಕಾರಿಯ ನಂಬಿಕಸ್ಥ ಸಹಾಯಕ ಸೇರಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಹೊರಗುತ್ತಿಗೆ ಸಂಸ್ಥೆಯ ಮೂಲಕ ದೇವಸ್ಥಾನದಲ್ಲಿ ನೇಮಕಗೊಂಡಿದ್ದು, ಭಕ್ತರು ನೀಡಿದ ದೇಣಿಗೆಯ ನಿರ್ವಹಣೆಯಲ್ಲಿದ್ದ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಹಣಕಾಸು ವ್ಯವಹಾರಗಳು, ಆಸ್ತಿ-ಪಾಸ್ತಿಗಳು ಹಾಗೂ ಕಳವು ಸಂಚಿನಲ್ಲಿ ವಹಿಸಿದ ಪಾತ್ರದ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳಲ್ಲೊಬ್ಬರಾದ ಅವಿನಾಶ್ ಶುಕ್ಲಾ ಅವರು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ದೇವಸ್ಥಾನದ ದೇಣಿಗೆ ಹಣ ಎಣಿಕೆ ಮತ್ತು ದಾಖಲೆ ನಿರ್ವಹಣೆಯ ಜವಾಬ್ದಾರಿ ವಹಿಸಿದ್ದರು. ಮತ್ತೊಬ್ಬ ಆರೋಪಿ ಅನುಕಲ್ಪ್ ಮಿಶ್ರಾ, ತಿಂಗಳಿಗೆ ₹15 ಸಾವಿರ ವೇತನದ ಗುತ್ತಿಗೆ ನೌಕರರಾಗಿದ್ದು, ರಾಮ ಮಂದಿರಕ್ಕೆ ಸೇರುವ ಮೊದಲು ಕಾರು ಮೆಕ್ಯಾನಿಕ್…
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶಾಲಾ ಬಸ್ ಅಪಘಾತ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ಬಸ್ ಚಾಲನೆ ಮಾಡುತ್ತಿದ್ದ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಕಂಡಕ್ಟರ್‌ನಾಗಿದ್ದ ಯುವಕನೇ ಬಸ್ ಚಾಲನೆ ಮಾಡಿ ಅಪಘಾತಕ್ಕೆ ಕಾರಣನಾಗಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದ್ದು, ಅದರಂತೆ ಕಟಪಾಡಿ ನಿವಾಸಿ ಬಸ್ ಕಂಡಕ್ಟರ್ ಮಹಮ್ಮದ್ ರಾಹಿಜ್ (20)ಎಂಬತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜೂನ್ 25 ರಂದು ಬೆಳಿಗ್ಗೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಸಮೀಪ ಪೆರಂಪಳ್ಳಿಯ ಅಲ್ ಇಬಾದ್ ಇಂಡಿಯನ್ ಶಾಲೆಗೆ ಸೇರಿದ ಶಾಲಾ ಬಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಬಸ್‌ನಲ್ಲಿದ್ದ ಶಾಲಾ ಮಕ್ಕಳು ಗಾಯಗೊಂಡಿದ್ದರು. ಅಪಘಾತದ ಬಳಿಕ ರಾಹಿಜ್ ತನ್ನ ತಂದೆ ರಿಜ್ವಾನ್ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ದೂರು ನೀಡಿದ್ದರು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮಹಮ್ಮದ್…
ಕಲಬುರಗಿ: ಪೋಕ್ಸೋ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋಗಿದ್ದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಫಜಲಪುರ ಠಾಣೆಯ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಂದು ಎಸ್ಪಿ ಅದ್ದೂರು ಶ್ರೀನಿವಾಸುಲು ಅವರು ಆದೇಶ ಹೊರಡಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪಿ ಮಂಜುನಾಥ ಇಂಗಳೆ (23)ಯನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಘಟನೆಯ ಬೆನ್ನಲ್ಲೇ ಅಫಜಲಪುರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರವಿದಾಸ್ ಕಟ್ಟಿಮನಿ, ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಹಾಗೂ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿತ್ತು.ಇದೀಗ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಪಿಐ ಲಖನ್ ಮಸಗುಪ್ಪಿ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.ಕಾರ್ಯಾಚರಣೆ ನಡೆಸಿದ ಪೊಲೀಸರು ಪರಾರಿಯಾಗಿ ಜಮೀನಿನಲ್ಲಿ ಅವಿತುಕೊಂಡಿದ್ದ ಮಂಜುನಾಥನನ್ನು ಶುಕ್ರವಾರ ಬಂಧಿಸಿದ್ದರು.
ಉಡುಪಿ : ಹಣ ಹೂಡಿಕೆ ಮಾಡಿದರೆ ದ್ವಿಗುಣ ಲಾಭ ದೊರೆಯುತ್ತದೆ ಎಂದು ನಂಬಿಸಿ 30.90 ಲಕ್ಷ ರೂ. ವಂಚನೆ ಎಸಗಿದ ಆರೋಪದಡಿ ನಾಲ್ವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರದೀಪ ಆಚಾರ್ಯ, ಜ್ಯೋತಿ ಜತ್ತನ್, ದಮಯಂತಿ ಎ. ಹಾಗೂ ರೋಹಿಣಿ ಎಂಬವರು 2026ರ ಜೂನ್ 19ರಂದು ಕೋಡಿ ಗ್ರಾಮದ ಇಂದಿರಾ ಬಂಗೇರ ಅವರ ಮನೆಗೆ ಭೇಟಿ ನೀಡಿ, ಮಲ್ಪೆಯ ಕಾರ್ತಿಕ್ ಸಹಜ್ ಕಟ್ಟಡದಲ್ಲಿರುವ ಬಿ.ಜಿ. ವೆಲ್ತ್ ಶೇರಿಂಗ್ ಸಂಸ್ಥೆಯ ಮೂಲಕ ಷೇರು ಮಾರುಕಟ್ಟೆ ವ್ಯವಹಾರ ನಡೆಸುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾರೆ. ತಮ್ಮ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತದೆ. ಇದು ವಿದೇಶಿ ಕಂಪನಿಯಾಗಿದ್ದು, ಒಮ್ಮೆ ಮಾತ್ರ ಹೂಡಿಕೆ ಮಾಡಿದರೆ ಡಾಲರ್ ರೂಪದಲ್ಲಿ ಐಡಿ ತೆರೆದು ಹೂಡಿಕೆ ಮಾಡಲಾಗುತ್ತದೆ ಎಂದು ನಂಬಿಸಿದ್ದಾರೆ ಎನ್ನಲಾಗಿದೆ. ಈ ಮಾತುಗಳನ್ನು ನಂಬಿದ ಇಂದಿರಾ ಬಂಗೇರ, ಅವರ ಕುಟುಂಬ ಸದಸ್ಯರು ಹಾಗೂ ಇತರರು ಒಟ್ಟು 30.90 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.…
ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಜೊತೆಗೆ ಬ್ಲ್ಯಾಕ್‌ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಉಡುಪಿ ಮೂಲದ ದೂರುದಾರರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೇಳೆ ಆರೋಪಿತೆ ಜೀನತ್ ಇಬ್ರಾಹಿಂ ಅವರ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಆರಂಭಿಸಿದ್ದರು. ಈ ವೇಳೆ ಆರೋಪಿತೆಯ ಮಾತು ನಂಬಿದ ದೂರುದಾರರು ಹೂಡಿಕೆ ಉದ್ದೇಶದಿಂದ ₹70 ಲಕ್ಷ ಹಣವನ್ನು ನೀಡಿದ್ದು, ಜಮೀನು ಖರೀದಿಗೆ ಬಳಸಬೇಕಿದ್ದ ಹಣವನ್ನು ಆರೋಪಿತೆ ತನ್ನ ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರುದಾರರು ತಮ್ಮ ಕಚೇರಿ ಮುಚ್ಚುವ ವೇಳೆ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಹಾಗೂ ಪೆನ್‌ಡ್ರೈವ್‌ಗಳು ದೊರೆತಿದ್ದು, ಅವುಗಳಲ್ಲಿ ಹಲವಾರು ಪ್ರಭಾವಿ ವ್ಯಕ್ತಿಗಳ ಖಾಸಗಿ ಹಾಗೂ ಅಶ್ಲೀಲ ಛಾಯಾಚಿತ್ರಗಳು ಮತ್ತು ವಿಡಿಯೊಗಳು…
ಬೆಂಗಳೂರು: ರಾಜಧಾನಿಯ ಬ್ಯಾಟರಾಯನಪುರ ಠಾಣೆಯ ಪೊಲೀಸರು ಶುಕ್ರವಾರ ತಡರಾತ್ರಿ ಭರ್ಜರಿ ಕಾರ್ಯಾಚರಣೆಯೊಂದನ್ನು ನಡೆಸಿ, ನಗರದ ಕುಖ್ಯಾತ ಡ್ರಗ್ ಪೆಡ್ಲರ್ ಅಕ್ಬರ್ ಶರೀಫ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದಾಗ ಲಭ್ಯವಾದ ಮಾಲುಗಳನ್ನು ಕಂಡು ಸ್ವತಃ ಪೊಲೀಸ್ ಅಧಿಕಾರಿಗಳೇ ಕೆಲಕಾಲ ಬೆಚ್ಚಿಬಿದ್ದಿದ್ದಾರೆ. ದಾಳಿಯ ವೇಳೆ ಬರೋಬ್ಬರಿ 230 ಮೊಬೈಲ್ ಫೋನ್‌ಗಳು, 17 ಮಾರಕಾಸ್ತ್ರಗಳು ಹಾಗೂ 700 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 1 ರಂದು ತಡರಾತ್ರಿ ಸುಮಾರು 10:50 ರ ಅವಧಿಯಲ್ಲಿ ಬ್ಯಾಟರಾಯನಪುರ ಪೊಲೀಸ್ ವ್ಯಾಪ್ತಿಯಲ್ಲಿ ಆರೋಪಿ ಅಕ್ಬರ್ ಶರೀಫ್ ತನ್ನ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು. ಈತನ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಕ್ಷಣವೇ ಆತನನ್ನು ತಡೆದು ನಿಲ್ಲಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆರೋಪಿಯು ತಡಬಡಾಯಿಸಿದ್ದರಿಂದ ಅನುಮಾನಗೊಂಡು ಆತನ ಬೈಕ್ ಅನ್ನು ತೀವ್ರ ತಪಾಸಣೆ ನಡೆಸಿದಾಗ, ಅದರಲ್ಲೇ ಐದಾರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಬೈಕ್‌ನಲ್ಲಿ ಮಾರಕಾಸ್ತ್ರಗಳು ದೊರೆಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು…
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ 66(C), 66(D)ಹಾಗೂ **ಭಾರತೀಯ ನ್ಯಾಯ ಸಂಹಿತೆ (BNS)**ಯ 126(2), 308(6), 318(4), 319(2) ಮತ್ತು 3(5) ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು 2026ರ ಜುಲೈ 3ರಂದು ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರ ವಿಚಾರಣೆಯಲ್ಲಿ, ಜುಬೈರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 180/2022 ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಇದಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ಬಂಧನದಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದ ಎಂಬ ಮಾಹಿತಿಯೂ ತನಿಖೆಯಲ್ಲಿ ತಿಳಿದುಬಂದಿದೆ.…
ಉಡುಪಿ: ಗೋವಾದ ಕ್ಯಾಲಂಗುಟ್ನ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕ್ಯಾಲಂಗುಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಅಕ್ಷತಾ ಎಂ.ಕೆ. ಎಂದು ಗುರುತಿಸಲಾಗಿದ್ದು, ಮೂಲತಃ ಮಂಗಳೂರಿನವರಾದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ನಿವಾಸಿಯಾಗಿದ್ದ ಸಂದೀಪ್ ಸಾಲಿಯಾನ್ ಕೆಲ ದಿನಗಳ ಹಿಂದೆ ಪ್ರವಾಸಕ್ಕಾಗಿ ಗೋವಾಗೆ ತೆರಳಿದ್ದರು. ಬಳಿಕ ಕ್ಯಾಲಂಗುಟ್ನ ಅತಿಥಿ ಗೃಹವೊಂದರಲ್ಲಿ ಅವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ನಿರಂತರ ತನಿಖೆಯ ಬಳಿಕ ಪ್ರಮುಖ ಆರೋಪಿಯ ಸುಳಿವು ಪತ್ತೆಹಚ್ಚಿದ ಪೊಲೀಸರು ಬೆಂಗಳೂರಿನಲ್ಲಿ ಅಕ್ಷತಾ ಎಂ.ಕೆ. ಅವರನ್ನು ಬಂಧಿಸಿದ್ದಾರೆ. ಆರೋಪಿಯನ್ನು ಟ್ರಾನ್ಸಿಟ್ ರಿಮಾಂಡ್ ಮೂಲಕ ಗೋವಾಗೆ ಕರೆತಂದು ಹೆಚ್ಚಿನ ವಿಚಾರಣೆ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸಂದೀಪ್ ಸಾಲಿಯಾನ್ ಈ ಹಿಂದೆ ಮಾಜಿ ಸಚಿವ…
ಉಡುಪಿ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ಐವರು ಅಪ್ರಾಪ್ತ ಬಾಲಕರನ್ನು ಟಿಟಿಇ ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರಕ್ಷಿಸಲಾಗಿದೆ. ಟಿಟಿಇ ಸಬಿತಾ ಶೆಟ್ಟಿ ಅವರು ಟಿಕೆಟ್ ತಪಾಸಣೆ ವೇಳೆ ಬಾಲಕರ ವರ್ತನೆ ಅನುಮಾನಾಸ್ಪದವಾಗಿರುವುದನ್ನು ಗಮನಿಸಿ ತಕ್ಷಣ ಆರ್‌ಪಿಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬಳಿಕ ನಡೆಸಿದ ಪರಿಶೀಲನೆಯಲ್ಲಿ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಮಕ್ಕಳು ಮನೆಯಿಂದ ಓಡಿ ಬಂದಿರುವುದು ಬೆಳಕಿಗೆ ಬಂದಿದೆ. ರಕ್ಷಿಸಲಾದ ಬಾಲಕರಿಗೆ ಅಗತ್ಯ ಉಪಾಹಾರ ಹಾಗೂ ಆರೈಕೆ ಒದಗಿಸಿದ ಬಳಿಕ ಅವರನ್ನು ಉಡುಪಿಯ ಮಕ್ಕಳ ಸಹಾಯ ಕೇಂದ್ರದ ವಶಕ್ಕೆ ಒಪ್ಪಿಸಲಾಯಿತು. ನಂತರ ಬೆಂಗಳೂರು ಆರ್.ಟಿ. ನಗರ ನಿವಾಸಿಗಳಾದ ಈ ಬಾಲಕರಿಗೆ ದೊಡ್ಡಣಗುಡ್ಡೆಯ ಬಾಲಕರ ಬಾಲ ಮಂದಿರದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿ, ಪೋಷಕರಿಗೆ ಮಾಹಿತಿ ನೀಡಲಾಯಿತು. ಗುರುವಾರ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಮುಂದೆ ಪೋಷಕರು ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಬಳಿಕ ಬಾಲಕರನ್ನು ಅವರ ವಶಕ್ಕೆ ಒಪ್ಪಿಸಲಾಗಿದೆ…










