ಉಪ್ಪಿನಂಗಡಿ : ಯುವತಿ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯಿಂದ ನೋಡಲೆತ್ನಿಸಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿ ಹೊರ ವಲಯದ ಪೆರಿಯಡ್ಕ ಎಂಬಲ್ಲಿ ಆದಿತ್ಯವಾರ ರಾತ್ರಿ ನಡೆದಿದೆ. ಅಬ್ದುಲ್ ರಹಿಮಾನ್ (41 ವ.) ಪೊಲೀಸ್ ವಶದಲ್ಲಿರುವ ಆರೋಪಿ. ಯುವತಿ ಸ್ನಾನ ಮಾಡುತ್ತಿದ್ದಾಗ ಕಿಟಕಿ ಬಳಿ ಶಬ್ಧ ಉಂಟಾಗಿದ್ದು, ತಕ್ಷಣ ಅತ್ತ ನೋಡಿದಾಗ ಕಿಟಕಿ ಬಾಗಿಲು ತೆರೆಯಲು ಯಾರೋ ಯತ್ನಿಸಿದ್ದು ಗೋಚರವಾಗಿದೆ. ತಕ್ಷಣ ಯುವತಿ ತನ್ನ ತಾಯಿ ಬಳಿ ಇದನ್ನು ಹೇಳಿಕೊಂಡಿದ್ದಾರೆ. ಆಗ ತಾಯಿ ಕಿಟಕಿ ಸುತ್ತಾಮುತ್ತ ಪರಿಶೀಲನೆ ನಡೆಸಿದ್ದು, ಅಬ್ದುಲ್ ರಹಿಮಾನ್ ಪರಾರಿಯಾಗುತ್ತಿರುವುದು ಅವರ ಗಮನಕ್ಕೆ ಬಂದಿದೆ ಎನ್ನಲಾಗಿದೆ. ತಕ್ಷಣ ಯುವತಿಯ ತಾಯಿ ಬೊಬ್ಬೆ ಹೊಡೆದಿದ್ದು, ಸ್ಥಳೀಯರು ಮಾಹಿತಿ ಪಡೆದುಕೊಂಡು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೃತ್ಯ ಎಸಗಿದ ಆರೋಪಿ ಎರಡು ಮಕ್ಕಳ ತಂದೆಯಾಗಿದ್ದು ಆತನಿಗೆ 16 ಹಾಗೂ 9 ವರ್ಷದ ಮಕ್ಕಳಿದ್ದಾರೆ ಆರೋಪಿ ಕೃತ್ಯ ಎಸಗಿ ಬಚ್ಚಲು ಮನೆ ಬಳಿಯಿಂದ ಪರಾರಿ ಯಾಗುತ್ತಿರುವುದನ್ನು ಸಂತ್ರಸ್ತೆಯ ತಾಯಿ…
Author: main-admin
ಬೆಂಗಳೂರು: ಕಾರು ಚಾಲನಾ ತರಬೇತಿ ವೇಳೆ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಚಾಲನಾ ತರಬೇತಿ ಶಾಲೆಯ ತರಬೇತುದಾರನ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮೀ ಪುರ ನಿವಾಸಿ 18 ವರ್ಷ ಯುವತಿ ನೀಡಿದ ದೂರಿನ ಮೇರೆಗೆ ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಶಾಲೆಯ ತರಬೇತುದಾರ ಅಣ್ಣಪ್ಪ ಎಂಬಾತನ ವಿರುದ್ಧ ಬಸವೇಶ್ವರನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಏನಿದು ಪ್ರಕರಣ?: ಪರೀಕ್ಷೆ ಮುಗಿಸಿ ಮನೆಯಲ್ಲಿದ್ದ ಯುವತಿ ಕಾರು ಚಾಲನೆ ಕಲಿಯಲು ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಶಾಲೆಯಲ್ಲಿ ನೋಂದಣಿ ಮಾಡಿ ಕೊಂಡು ಕಾರು ಚಾಲನಾ ತರಬೇತಿ ಪಡೆಯು ತ್ತಿದ್ದರು. ಈ ವೇಳೆ ಡ್ರೈವಿಂಗ್ ಶಾಲೆಯ ತರಬೇತುದಾರ ಅಣ್ಣಪ್ಪನೇ ಕಾರು ಚಾಲನಾ ತರಬೇತಿ ನೀಡಿದ್ದ. ಕೋರ್ಸ್ ಮುಗಿದ ಬಳಿಕ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ 750 ರೂ. ಕೊಡಬೇಕು ಎಂದು ಯುವತಿಗೆ ಕೇಳಿದ್ದಾನೆ. ಉತ್ತಮವಾಗಿ ಕಾರು ಚಾಲನೆಯ ಕಲಿಯುವ ಆಸಕ್ತಿಯಿಂದ ಯುವತಿ 15 ದಿನಗಳ…
ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, ಸನ್ಮತ್ (21) ಮೃತ ಯುವಕ. ಸನ್ಮತ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಬರುವಾಗ ಸರ್ವೆ ಗೌರಿ ಹೊಳೆಯ ಪಕ್ಕ ವಾಹನ ನಿಲ್ಲಿಸಿ, ಮೊಬೈಲ್, ಪರ್ಸ್ ಗಳನ್ನು ಅಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದು, ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು.ನಿನ್ನೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿದ ವೇಳೆ ಇಂದು ಯುವಕನ ಮೃತದೇಹ ಪತ್ತೆಯಾಗಿದೆ.
ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ. 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಸದ್ಯ ಬಾಲಕನಿಗೆ ವೆಂಟಿಲೇಟರ್ ಬೆಂಬಲದೊಂದಿಗೆ…
ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್ ನ ಅಬ್ಬಾಸಿಯಾದ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಪತ್ನಿ ಲಿನಿ ಅಬ್ರಹಾಂ (35), ಮಕ್ಕಳಾದ ಐರಿನ್ (14) ಹಾಗೂ ಇಸಾಕ್ (9) ಮೃತ ದುರ್ದೈವಿಗಳು. ಕೇರಳದ ಕೊಚ್ಚಿಯಲ್ಲಿನ ನೆಡುಂಬಸ್ಸರಿ ಮೂಲದ ಮ್ಯಾಥ್ಯೂಸ್ ಹಾಗೂ ಕುಟುಂಬ ಕಳೆದ 15 ವರ್ಷಗಳಿಂದ ಕುವೈತ್ ನ ಅಬ್ಬಾಸಿಯಾದಲ್ಲಿ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಕ್ಕಳಾದ ಐರಿನ್ ಹಾಗೂ ಇಸಾಕ್ 9 ಹಾಗೂ 4ನೇ ತರಗತಿಯಲ್ಲಿ ಓದುತ್ತಿದ್ದರು. ತಡರಾತ್ರಿ ಮನೆಯ ರೂಮಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆಗೆ ವ್ಯಾಪಿಸಿದೆ. ನಾಲ್ವರು ಸಜೀವದಹನವಾಗಿದ್ದಾರೆ.
ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದರು. ನಿತ್ಯಾನಂದ ಒಳಕಾಡು ತಕ್ಷಣ ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿದಯಾ ಸಂಘದವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಹಾಗೂ ಪೃಥ್ವಿ ಪರಿಶೀಲನೆ ನಡೆಸಿದರು. ನಂತರ ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು ಎಂದು ತಿಳಿದುಬಂದಿದೆ.
ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ -ಕಾರು ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತಪಟ್ಟ ಬೈಕ್ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು, ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ. ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ ನಾಯಕಂಡ ಸಿ.ಬೋಪಣ್ಣ (43) ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾಗಿದ್ದಾರೆ. ಪತಿ-ಪತ್ನಿ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು (ಜು.20ರ ಶನಿವಾರ) ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ಅವರು ಶಿಲ್ಪಾ ಸೀತಮ್ಮ ಅವರ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ. ನಾಯಕಂಡ ಸಿ.ಬೋಪಣ್ಣ ಅವರು ವಿರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ. ಸಂಚರಿಸಲಿರುವ ರೈಲುಗಳು : ಜುಲೈ 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ. ಜುಲೈ 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ. ಜುಲೈ 21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ. ಜುಲೈ 21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು…
ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ. ಆಶ್ನಿ (21) ಮೃತ ವಿದ್ಯಾರ್ಥಿನಿ. ಆಶ್ನಿ ತಂದೆಯ ಜೊತೆ ಗದ್ದೆಗೆ ದನ ಕಟ್ಟಲು ಹೋದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ. ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.










