Author: main-admin

ಮಂಗಳೂರು ನಗರದ ಪಣಂಬೂರು ಸಮೀಪದ ತೋಟಬೆಂಗ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗ್ರೆ ನಿವಾಸಿ ಮೊಹಮ್ಮದ್‌ ರಂಶಿದ್‌ (21)ಆರೋಪಿ ಎಂದು ಗುರುತಿಸಲಾಗಿದೆ ‌ ಈತ ಮಾದಕ ದ್ರವ್ಯ ವ್ಯವಸನಿಯೂ ಆಗಿದ್ದ ಎನ್ನಲಾಗಿದೆ. ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದಾರೆ.

Read More

ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ. ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ದಂಡಕ್ಕೆ ಏರಿಕೆ ಆದೇಶಿಸಿದೆ. ಹಾಗೂ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಹೇಳಿದೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.

Read More

ಬಂಟ್ವಾಳ : ಭಾರೀ ಗಾಳಿ ಮಳೆಗೆ ಕೋಳಿ ಸಾಕಣೆ ಮಾಡುವ ಶೆಡ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು ಒಂದುವರೆ ಸಾವಿರ ಕೋಳಿಗಳು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಅವರ ಮಾಲಕತ್ವದ ಶೆಡ್ ಇದಾಗಿದೆ. ಸುಮಾರು 2,200 ಕೋಳಿಗಳನ್ನು ಅವರು ಸಾಕಣೆ ಮಾಡುತ್ತಿದ್ದರು. ಈ ಪೈಕಿ 700 ಕೋಳಿಗಳು ದೊಡ್ಡದಾಗಿದ್ದವು. ಈ ಹಿನ್ನೆಲೆ 700 ಕೋಳಿಗಳನ್ನು ಮಾರಾಟ ಮಾಡಲಾಗಿತ್ತು. ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆ ಸುಮಾರು 1,500 ಕೋಳಿಗಳು ಅದರಡಿಗೆ ಬಿದ್ದು ಮೃತಪಟ್ಟಿದೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

Read More

ಮಂಗಳೂರು: ಮಂಗಳೂರಿನ ಕೋಡಿಕಲ್ ವಿವೇಕಾನಂದ ನಗರದಲ್ಲಿ ನಡೆದ ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗಂಗೌಡನಹಳ್ಳಿ ಎಂಬಲ್ಲಿ ಬಂಧಿಸಿದ್ದಾರೆ. ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಬಂಧಿತ ಆರೋಪಿಗಳು. ಜುಲೈ 6ರಂದು ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Read More

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನದಲ್ಲಿ ನಡೆದಿದೆ. ಕಾರಿನಲ್ಲಿ ತಂದೆ, ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದು ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ವೇಗ ಹಾಗೂ ಅಜಾರುಕತೆಯ ಚಾಲನೆಯಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ.

Read More

ಬಜಪೆ: ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎನ್ .ಅರ್ ಪುರ ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಈ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು, ತಾರಿಕಂಬ್ಳ ಮತ್ತು ಶಾಂತಿಗುಡ್ಡೆ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದರು ಎಂಬುದು ಪೊಲೀಸ್ ಮೂಲಗಳು ತಿಳಿಸಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

Read More

ಮಂಗಳೂರು : ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ಎಂಬವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

Read More

ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.

Read More