ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.
Author: main-admin
ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ ರವಾನಿಸಲಾಯಿತು. ಸ್ಥಳದಲ್ಲಿ ಆಧಾರ್ ಚೀಟಿ ಪತ್ತೆಯಾಗಿದೆ. ಮಣಿಪಾಲ ಪೋಲಿಸರು ಮತ್ತು ರೈಲ್ವೆ ಪೋಲಿಸರು ಕಾನೂನು ಪ್ರಕ್ರಿಯೆ ನಡೆಸಿದರು.
ಪುತ್ತೂರು: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಂಜಿನ್ ಬಳಿ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ. ಅದೇ ಕಂಪನಿಯ ಇನ್ನೊಬ್ಬ ಕಾರು ಚಾಲಕ ತೇಜಸ್ ಶೆಟ್ಟಿ, ಆತನ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್ ಹಾಗೂ ಪುನೀತ್ ದೇವಾಡಿಗ ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಸಂದೀಪ್ ವಿರುದ್ಧ ಹಳೆ ವೈಷನ್ಯ ಹೊಂದಿದ್ದ. ಬುಧವಾರ ರಾತ್ರಿ ತನ್ನ ಪಾಳಿಯ ಕೆಲಸ ಮುಗಿದ ಬಳಿಕ ಆತ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್, ಪುನೀತ್ ದೇವಾಡಿಗ ಜೊತೆ ಸೇರಿ, ಕೆಲಸ ಮುಗಿಸಿ ತೆರಳುತ್ತಿದ್ದ ಸಂದೀಪ್ ಜೊತೆ ಜಗಳವಾಡಿದ್ದ. ನಾಲ್ವರು ಸೇರಿ ಮಾರಕ ಆಯುಧದಿಂದ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದು. ತಲೆ ಮತ್ತಿತರ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳಕ್ಕೆ ಕಾರಣಗಳೇನು ಎಂಬುದು ಇನ್ನೂ ತಿಳಿದಿಲ್ಲ.…
ಬೆಂಗಳೂರು : ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ 5 ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ. ಹೌದು ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ರಾಜ್ಯ ಸರ್ಕಾರ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಆಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು…
ಬೆಂಗಳೂರು: ಡಿಜಿ ಆ್ಯಂಡ್ ಐಜಿಪಿ (DG and IGP) ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಗೃಹಮಂತ್ರಿ ಡಾ. ಜಿ. ಪರಮೇಶ್ವರ್ (G Parmeshwara) ಅವರ ಜೊತೆ ಸಭೆ ನಡೆಸಿದ ಬಳಿಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಜಿ ಆ್ಯಂಡ್ ಐಜಿಪಿ ಆಲೋಕ್ ಮೋಹನ್ (Alok Mohan) 20 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಬೆಂಗಳೂರು ನಗರ ಸೇರಿದಂತೆ ಇತರೆ ನಗರಗಳ ಪೊಲೀಸ್ ಕಮಿಷನರೇಟ್ಗಳ ವ್ಯಾಪ್ತಿಗೆ ಬರುವ ಡೆಪ್ಯುಟಿ ಪೊಲೀಸ್ ಕಮೀಷನರ್‌ಗಳು ಪ್ರತಿದಿನ ಕನಿಷ್ಠ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಭೇಟಿಯ ಸಮಯದಲ್ಲಿ, ಅವರು ಪೊಲೀಸ್ ಠಾಣೆಗಳಲ್ಲಿರುವ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕು ಮತ್ತು ಅವರ ಕುಂದುಕೊರತೆಗಳನ್ನು ಸಹ ಪರಿಶೀಲಿಸಬೇಕು. ಎಲ್ಲ ವಲಯ ಐ.ಜಿ.ಪಿ.ಗಳು/ಡಿ.ಐ.ಜಿ.ಪಿ.ಗಳು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರದವರು ಪ್ರತಿನಿತ್ಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು. ಅವರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಠಾಣೆಯ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನು ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುಳಾರನ್ನು ವಶಕ್ಕೆ ಪಡೆದ ಬಳಿಕ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಮಂಜುಳಾ ಅವರಿಗೆ ಬಂಧನ ಭೀತಿ ಎದುರಾಗಿದೆ.ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು: ನಗರದ ನಿವಾಸಿಯೊಬ್ಬರು ಷೇರು ಖರೀದಿಸಿ ಲಾಭ ಗಳಿಸುವ ಯತ್ನದಲ್ಲಿ ಬರೋಬ್ಬರಿ 1.50 ಕೋಟಿ ರೂ. ಕಳೆದುಕೊಂಡ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನೋಡುವಾಗ ‘Jefferies wealth multiplication Plan’ ಎಂಬ ಪೋಸ್ಟ್ ನೋಡಿ ಅದರಲ್ಲಿದ್ದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಷೇರ್‌ಗಳನ್ನು ಖರೀದಿಸಿ ಲಾಭಗಳಿಸುವ ಇರಾದೆಯಿಂದ ಅಪರಿಚಿತ ವ್ಯಕ್ತಿಯು ನೀಡಿದ ಮಾಹಿತಿಯಂತೆ ಮೇ 28ರಿಂದ 2024 ಜೂ.28ರ ತನಕ ಹಂತ ಹಂತವಾಗಿ ತನ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲ್ಲಿಕಟ್ಟೆ ಶಾಖೆಯಿಂದ 73,00,000 ರೂ. ಮತ್ತು ಗುರುಪುರ ವ್ಯವಸಾಯ ಸಹಕಾರಿ ಸಂಘ ನಿಯಮಿತ ವಾಮಂಜೂರು ಶಾಖೆ ಖಾತೆಯಿಂದ 77,00,000 ರೂ. ಒಟ್ಟು 1.50 ಕೋಟಿ ರೂ. ಗಳನ್ನು ಅಪರಿಚಿತ ವ್ಯಕ್ತಿಯ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಟಪಾಡಿ: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.16 ರಂದು ನಡೆದಿದೆ.ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ ಬಳಿ ಇದ್ದ ಪೊಲೀಸರು ತಪಾಸಣೆಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಹರೀಶ್ ತಮ್ಮ ಕಾರನ್ನು ನಿಲ್ಲಿಸಿದ ವೇಳೆ, ಹಿಂದಿನಿಂದ ಬಂದ ಸ್ವಿಫ್ಟ್ ಕಾರಿನ ಚಾಲಕ ಸುಶಾಂತ್ ತಮ್ಮ ವಾಹನವನ್ನು ದುಡುಕುತನದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಅಪಘಾತದಲ್ಲಿ ಮತ್ತೊಂದು ಕಾರಿಗೂ ಹಾನಿಯಾಗಿದೆ. ಈ ಪರಿಣಾಮವಾಗಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರು ಮುಂದೆ ನಿಂತಿದ್ದ ಪೊಲೀಸ್ ಅಧಿಕಾರಿ ರಾಮ ಅವರ ಮೇಲೆ ಹತ್ತಿದೆ. ರಾಮ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಯಿತು.ಅಪಘಾತದಲ್ಲಿ ಸ್ವಿಪ್ಟ್…
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ , ಇದುವರೆಗೂ 6 ಜನರ ಮೃತದೇಹ ಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ ದರ್ಘಟನಾ ಸ್ಥಳಕ್ಕೆ ಹಿಟಾಚಿ ಬಂದಿದ್ದು, ಮಣ್ಣು ತೆರವು ಕಾರ್ಯ ಮಾಡುತ್ತಿದೆ.










