ಬಂಟ್ವಾಳ: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಮೃತ ದುರ್ದೈವಿ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಗಂಭೀರವಾಗಿ ಗಾಯಗೊಂಡ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಯುವಕ ಬಲಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಬಸ್ ಚಾಲಕನ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: main-admin
ಕೇರಳ: ಕಳೆದ ಏಪ್ರಿಲ್‌ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವ ನಡೆಯುವ ಸ್ಥಳಕ್ಕೆ ತೆರಳಲು ಆ್ಯಂಬುಲೆನ್ಸ್ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಮತ್ತು ಇನ್ನಿಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಸುರೇಶ್ ಗೋಪಿ, ಅಭಿಜಿತ್ ನಾಯರ್ ಮತ್ತು ಆ್ಯಂ ಬುಲೆನ್ಸ್ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279, 34 ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 179, 184, 188 ಮತ್ತು 192ರಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತ್ರಿಶೂರ್ ಪೂರ್ವ ಪೊಲೀಸರು ತಿಳಿಸಿದ್ದಾರೆ. ‘ಪೂರಂ ಉತ್ಸವಕ್ಕೆ ತೆರಳಲು ಸುರೇ ಶ್ ಗೋಪಿ ಅವರು ಆಂಬ್ಯುಲೆನ್ಸ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಿಪಿಐ ಸ್ಥಳೀಯ ನಾಯಕ ಕೆ.ಪಿ. ಸುಮೇ ಶ್ ಅವರು ದೂರು ದಾಖಲಿಸಿದ್ದರು. ಗೋಪಿ ಅವರು ಸೇ ವಾ ಭಾರತಿ ಆಂಬುಲೆನ್ಸ್ ಮೂಲಕ ಪೂರಂ ಮೈದಾನಕ್ಕೆ ಬಂದಿದ್ದರು. ಈ ಮೂಲಕ ಅವರು ವೈ ದ್ಯಕೀ ಯ ತುರ್ತು ಪರಿಸ್ಥಿತಿಗಳಿಗೆ ಮೀ…
ಇರಾನ್ : ಇಸ್ಲಾಂ ರಾಷ್ಟ್ರ ಇರಾನ್ ನಲ್ಲಿ ಇನ್ನೂ ಹಿಜಬ್ ವಿರೋಧಿಸಿ ಹೋರಾಟ ನಡೆಯುತ್ತಲೇ ಇದ್ದು, ಇದೀಗ ಇರಾನ್‌ನ ಕಟ್ಟುನಿಟ್ಟಾದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ವಿರೋಧಿಸಿ ಯುವತಿಯೊಬ್ಬಳು ಶನಿವಾರ ಇರಾನ್ ವಿಶ್ವವಿದ್ಯಾನಿಲಯದಲ್ಲಿ ಒಳ ಉಡುಪಿನಲ್ಲಿ ರಸ್ತೆಯಲ್ಲಿ ತಿರುಗಾಡಿದ್ದಾಳೆ. ವಿಶ್ವವಿದ್ಯಾನಿಲಯದ ವಕ್ತಾರ ಅಮೀರ್ ಮಹ್‌ಜಾಬ್ ಅವರು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು ವಿಧ್ಯಾರ್ಥಿನಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮಾನಸಿಕ ಅಸ್ವಸ್ಥೆ ಹೊಂದಿದ್ದಾಳೆ ಎಂದಿದ್ದಾರೆ.ಈ ನಡುವೆ ವಿಧ್ಯಾರ್ಥಿನಿಯನ್ನು ಇರಾನ್ ನ ಮಾರೆಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಇರಾನ್ ನಲ್ಲಿ ಮಹಿಳೆಯರ ಮೇಲೆ ವಿಧಿಸುವ ಕಟ್ಟುನಿಟ್ಟಿನ ಡ್ರೆಸ್ ಕೋಡ್ ವಿರೋಧಿಸಿ ವಿಧ್ಯಾರ್ಥಿನಿ ಪ್ರತಿಭಟನೆ ನಡೆಸಿದ್ದಾರೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ವಿಧ್ಯಾರ್ಥಿನಿ ಬಂಧನ ವಿರೋಧಿಸಿ “ಇರಾನ್‌ನ ಅಧಿಕಾರಿಗಳು ತಕ್ಷಣವೇ ಮತ್ತು ಬೇಷರತ್ತಾಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದೆ.
ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ…
ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್ ಮಾಡಿ ಅಮೆಜಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ರಾಜ್‌ಕುಮಾರ್ ಮೀನಾ ಮತ್ತು ಸುಭಾಷ್ ಗುರ್ಜರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮೆರಭಾನ್ ನಲ್ಲಿ ವಿವಿಧ ಬೆಲೆಬಾಳುವ ವಸ್ತುಗಳನ್ನು ಆರ್ಡರ್ ಮಾಡುತ್ತಿದ್ದರು. ಈ ವಸ್ತುಗಳನ್ನು ಪಡೆಯಲು ಬೇರೆ ಬೇರೆ ಕಡೆಯ ಸ್ಥಳಗಳ ವಿಳಾಸ ನೀಡುತ್ತಿದ್ದರು.
ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಚಾಲಾಕಿ ಕಾರುಗಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಚಾಲಾಕಿತನದಿಂದ ಸಾಫ್ಟ್‌ವೇರ್ ಮೂಲಕ ಹ್ಯಾಕ್ ಮಾಡಿ ಕಾರುಗಳ ಡೋರ್ ಓಪನ್ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಪರಾರಿಯಾಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು ಪೊಲೀಸರ ಅತಿಥಿಯಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತಷ್ಟು ಮಾಹಿತಿ ಹೊರಬೀಳಲಿದೆ.
ಕಡಬ : ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ. ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ. ಸುಬ್ಬಣ ಗೌಡ ಎಂಬವರ ಮಗ ಸೀತಾರಾಮ (58) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ಈ ದುರ್ಘಟನೆ ಸಂಭಸಿದ್ದು ಸೀತಾರಾಮ ಚಲಿಸುತಿದ್ದ ಸ್ಕ್ಯೂಟಿ ಗೆ ಬೃಹತ್ ಧೂಪದ ಮರ ಏಕಾಏಕಿ ಉರುಳಿದ್ದು, ಕ್ಷಣ ಮಾತ್ರದಲ್ಲಿ ಸೀತಾರಾಮರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಅರಣ್ಯ ಇಲಾಖೆಯ ಅಸಡ್ಡೆ ವಿರುದ್ಧ ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದು ಈ ಮರದ ಬಗ್ಗೆ ಅನೇಕ ಸಲ ಗಮನಕ್ಕೆ ತಂದರೂ ಕಾರ್ಯ ಪ್ರವರ್ತರಾಗದ ಇಲಾಖೆ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಇದೀಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳಬೇಕಾತ್ತು ಎಂದಿದ್ದಾರೆ. ಸೀತಾರಾಮರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್…
ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿ (Tirupati) ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ಶುಕ್ರವಾರ ಮಗುವಿಗೆ ಚಾಕೊಲೇಟ್ ಕೊಡಿಸಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಹೊಲದಿದಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ನಗರಿ ಶಾಸಕ ಗಾಲಿ ಭಾನು ಪ್ರಕಾಶ್ ಆಗ್ರಹಿಸಿದ್ದಾರೆ.
ಶಾಲೆಗೆ ಹೋಗುವ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ ಎಂದು ಹತ್ತು ಹಲವು ಸಲ ಬೊಬ್ಬೆ ಹಾಕಿದರೂ ಏನೂ ಪ್ರಯೋಜನ ಆಗುತ್ತಿಲ್ಲ. ಅವರು ಮೊಬೈಲ್ ನಲ್ಲಿ ಏನು ಚಟುವಟಿಕೆ ಮಾಡುತ್ತಿದ್ದಾರೆ ಅನ್ನುವುದೇ ಗೊತ್ತಾಗುವುದಿಲ್ಲ. ಇದಕ್ಕೆ ಸಾಕ್ಷಿ ಎಂಬತೆ ಸುಳ್ಯದ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಎಲಿಮಲೆಯ ಹತ್ತನೇ ತರಗತಿ ಅಪ್ರಾಪ್ತ ಹಿಂದೂ ಹುಡುಗಿ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಈ ಚಾಟ್ ಕೆಲವರ ಗಮನಕ್ಕೆ ಬಂದಿದೆ. ಇದರಿಂದ ಪಿತ್ತ ನೆತ್ತಿಗೇರಿಸಿಕೊಂಡ ಕೆಲವು ಯುವಕರು ಆತನನ್ನು ನಿನ್ನೆ ರಾತ್ರಿ ಕರೆದು ವಿಚಾರಿಸಿದ್ದಾರೆ. ಆತ ನಾನವನಲ್ಲ ಎಂದು ಹೇಳಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೆಟ್ಟು ತಿಂದ ಯುವಕ ಇದೀಗ ಸುಳ್ಯದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ಕಳೆದ 10 ವರ್ಷದ ಹಿಂದೆ ಮದುವೆ ಆಗಿದ್ದ ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.









