ಮಂಗಳೂರು: ನಾಪತ್ತೆಯಾಗಿದ್ದ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಾಪತ್ತೆಯಾಗಿದ್ದ ಯುವತಿನ್ನು ಪತ್ತೆ ಹಚ್ಚುವಲ್ಲಿ ಪಾಂಡೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮ್ಮದ್ ಅಶ್ಪಕ್ ಎಂಬಾತನ ಜೊತೆ ಈ ಹಿಂದೂ ಯುವತಿ ಪತ್ತೆಯಾಗಿದ್ದು, ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿದ್ದಾರೆ. ನಟೋರಿಯಸ್ ಹಿನ್ನಲೆಯುಳ್ಳ ಈ ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ಮೇಲೆ 8 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನ ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ಇಲ್ಲಿ ಇರಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ…
Author: main-admin
ಮಂಗಳೂರು : ನಗರದ ಮನೆಯೊಂದರಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ನಡೆಸಿ ಪರಾರಿಯಾಗಿತ್ತು.ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ…
ಮಂಗಳೂರು: ನಗರದ ಉರ್ವ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿನ ಮನೆಯೊಂದಕ್ಕೆ ಸೋಮವಾರ ರಾತ್ರಿ ನುಗ್ಗಿದ ಕಳ್ಳರು ವಾಹನ, ಚಿನ್ನಾಭರಣವನ್ನು ಕದ್ದೊಯ್ದ ಘಟನೆ ನಡೆದಿದೆ. ಇದು ನಗರದಲ್ಲಿ ನಡೆದ ಚಡ್ಡಿಗ್ಯಾಂಗ್‌ನ ಮತ್ತೊಂದು ಕೃತ್ಯವೆಂಬ ಶಂಕೆ ವ್ಯಕ್ತವಾಗಿದೆ. ಮನೆಮಂದಿ ಮನೆಯೊಳಗಡೆ ಮಲಗಿದ್ದಾಗಲೇ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಮನೆಯೊಂದರ ಕಿಟಕಿ ಮುರಿದು ಕಳವು ಕೃತ್ಯ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ
ವೇಣೂರು: ವ್ಯಕ್ತಿಯೋರ್ವರು ವೈನ್ ಶಾಪ್ ಬಳಿ ಮದ್ಯಪಾನ ಮಾಡಲು ಬಂದಿದ್ದಾಗ, ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಬೆಳ್ತಂಗಡಿ ತಾಲೂಕು ಮೂಡುಕೋಡಿ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ,ನಿಟ್ಟಡೆ ಗ್ರಾಮ ನಿವಾಸಿ ಪ್ರಸಾದ್ @ ಬಾಡು ಪ್ರಸಾದ್ ರವರು, ದಿನಾಂಕ 07.07.2024 ರಂದು ರಾತ್ರಿ , ತನ್ನ ಸ್ನೇಹಿತ ಮೋಹನ್ ನೊಂದಿಗೆ, ಬೆಳ್ತಂಗಡಿ ತಾಲೂಕು ಮೂಡುಕೋಡಿ ಗ್ರಾಮದ ವೈನ್ ಶಾಪ್ ಬಳಿ ಮದ್ಯಪಾನ ಮಾಡಲು ಬಂದಿದ್ದಾಗ, ಆರೋಪಿಗಳಾದ 1)ವಸಂತ್ ಕೋಟ್ಯಾನ್, 2) ಸಂತೋಷ್ ನಾರ್ಲ ಎಂಬವರುಗಳು, ಪ್ರಸಾದ್ ರನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ. ಪಿರ್ಯಾದಿಯ ಸ್ನೇಹಿತರಾದ ಮೋಹನ್ ಮತ್ತು ಕಟ್ಟೆ ಸಂತೋಷ್ ಎಂಬವರು ಗಲಾಟೆ ಬಿಡಿಸಿದಾಗ, ಆರೋಪಿಗಳು ಪ್ರಸಾದ್‌ರಿಗೆ ಜೀವ ಬೆದರಿಕೆ ಒಡ್ಡಿ ತೆರಳಿರುತ್ತಾರೆ. ಪ್ರಸಾದ್‌ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ನೀಡಿದ ದೂರಿನ…
ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09/07/2೦24 ರಂದು ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜುಲೈ 9ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ ರಾಜ್ಯ ಕರಾವಳಿಯಲ್ಲಿ ಎಡಬಿಡದೆ ನಿರಂತರ ಮಳೆ ಸುರಿಯುತ್ತಿ್ದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಎಲ್ಲಡೆ ಮಳೆ ಅಬ್ಬರ ಜೋರಾಗಿದೆ. ಕೆಲವಡೆ ನಿರಂತರ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಕರಾವಳಿ, ಮಲೆನಾಡು ಅಕ್ಷರಶಃ ತತ್ತರಿಸಿ ಹೋಗಿದೆ. ಮಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ ಎಡಬಿಡದೆ ಸುರಿದ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ನಗರದ ಅನೇಕ ಕಡೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಕೃತಕ ನೆರೆ ಭಾದಿಸಿದೆ. ಮಂಗಳೂರು ಮತ್ತು ಉಳ್ಳಾಲದಲ್ಲಿ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದೆ.…
ಮುಂಬೈ ನಲ್ಲಿ ಸೋಮವಾರ ಭಾರಿ ಮಳೆಯಾದ ಹಿನ್ನೆಲೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಿತು. ಇತ್ತೀಚಿನ ಮಾಹಿತಿಯ ಪ್ರಕಾರ, ಮುಂಬೈ ನಿಂದ ಹಾರಾಟ ನಡೆಸಬೇಕಾಗಿದ್ದ ಕನಿಷ್ಠ 50 ವಿಮಾನಗಳನ್ನು ರದ್ದುಪಡಿಸಲಾಗಿದೆ ಹಾಗೂ ಅಹಮದಾಬಾದ್, ಹೈದರಾಬಾದ್ ಮತ್ತು ಇಂದೋರ್ ಸೇರಿದಂತೆ ಹಲವಾರು ಸ್ಥಳಗಳಿಗೆ ತಿರುಗಿಸಲಾಗಿದೆ. ಬೇರೆಡೆಗೆ ತಿರುಗಿಸಿದ ವಿಮಾನಗಳಿಗೆ ಸ್ಥಳಾವಕಾಶ ಕಲ್ಪಿಸಲು ತತ್ಪರಿಣಾಮದ ಬದಲಾವಣೆಗಳನ್ನು ಮಾಡಲಾಗಿದೆ, ಇದು ನಿರ್ಗಮನ ವಿಳಂಬಕ್ಕೆ ಕಾರಣವಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಿಎಸ್‌ಎಂಐಎ) ಪ್ರಯಾಣಿಕರಿಗೆ ಸಲಹೆ ನೀಡಿದ್ದು, ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸ್ವಲ್ಪ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಹೊರಡಲು ಸಲಹೆ ನೀಡಿದೆ.
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊಬೈಲ್ ಟವರ್‌ಗಳ ಬ್ಯಾಟರಿ ಮತ್ತು ಕಾಂಪೌಂಡ್ ಗೇಟ್‌ಗಳನ್ನು ಕದ್ದ ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಇಟ್ಟಿ ಪಣಿಕ್ಕರ್ (58) ಈಗ ಪೊಲೀಸ್ ವಶದಲ್ಲಿರುವ ಆರೋಪಿ. 2.56 ಲಕ್ಷ ಮೌಲ್ಯದ 39 ಬ್ಯಾಟರಿಗಳು, 52000 ರೂಪಾಯಿ ಮೌಲ್ಯದ ಮೂರು ಕಬ್ಬಿಣದ ಗೇಟ್‌ಗಳು ಮತ್ತು ಐದು ಲಕ್ಷ ರೂಪಾಯಿ ಮೌಲ್ಯದ ಪಿಕ್ ಅಪ್ ಗೂಡ್ಸ್ ಟೆಂಪೋ ಸೇರಿದಂತೆ 8.08 ಲಕ್ಷ ಮೌಲ್ಯದ ಸರಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕಾರ್ಯಾಚರಣೆಯಲ್ಲಿ ಎಸಿಪಿ ಮನೋಜ್ ಕುಮಾರ್, ಮೂಲ್ಕಿ ಠಾಣೆ ಇನ್ಸ್‌ಪೆಕ್ಟರ್ ವಿದ್ಯಾಧರ್ ಡಿ.ಬೈಕೇರಿಕರ್, ಪಿಎಸ್‌ಐ ವಿನಾಯಕ ಬಾವಿಕಟ್ಟಿ, ಎಎಸ್‌ಐ ಸಂಜೀವ ಎ.ಪಿ, ಎಚ್.ಸಿ.ಕಿಶೋರ್ ಕೋಟ್ಯಾನ್, ಮಹೇಶ್, ಶಶಿಧರ, ಚಂದ್ರಶೇಖರ್, ವಿಶ್ವನಾಥ, ವೀರೇಶ, ಕಾನ್‌ಸ್ಟೆಬಲ್‌ಗಳಾದ ಅರುಣ್ ಕುಮಾರ್, ಸುನೀಲ್, ಚಿತ್ರಾ ಪಾಲ್ಗೊಂಡಿದ್ದರು.
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಯುವಕನಾಗಿದ್ದಾನೆ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಕೆ ಎಸ್ ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ . ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ಕಳ್ಳತನ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್ ಎಂಬವರ ಮನೆಯ ಮಹಡಿಯ ಕಿಟಕಿ ಸರಳು ತುಂಡರಿಸಿ ಬಾಗಿಲಿನ ಮೂಲಕ ಒಳನುಗ್ಗಿದ ಕಳ್ಳರಿಂದ ದುಷ್ಕೃತ್ಯ ನಡೆದಿದೆ. ಕೋಣೆಯೊಳಗೆ ನಿದ್ರಿಸಿದ್ದ ವೃದ್ಧೆ ಐಸಮ್ಮಾ(72) ಅವರ ಕತ್ತು ಹಿಸುಕಿ ಪ್ರಜ್ಞಾಹೀನರಾದ ಬಳಿಕ ಕಿವಿಯಲ್ಲಿದ್ದ ಹಿಂದಿನ ಕಾಲದ ಚಿನ್ನದ ಕಿವಿಯೋಲೆಗಳನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಮನೆಯ ಇನ್ನೊಂದು ಕೋಣೆಯಲ್ಲಿ ಮಕ್ಕಳೊಂದಿಗೆ ಮಲಗಿದ್ದ ಐಸಮ್ಮಾ ಅವರ ಸೊಸೆ ಬೆಳಗ್ಗೆ ಎದ್ದು ಅತ್ತೆಯನ್ನು ಎಚ್ಚರಿಸಲು ಬಂದಾಗ ಐಸಮ್ಮಾ ಪ್ರಜ್ಞಾಹೀನರಾಗಿ ಬಿದ್ದುಕೊಂಡಿದ್ದರು. ಪಾರ್ಶ್ವವಾಯು ಬಡಿದಿರಬೇಕೆಂದು ಶಂಕಿಸಿದ ಮನೆಯವರು ನೆರೆಯ ಸಂಬಂಧಿಕರಿಗೆ ಮಾಹಿತಿ ನೀಡಿದರು. ಅವರೆಲ್ಲ ಬಂದು ನೋಡಿದಾಗ ಕಿಟಕಿಯ ಸರಳು ತುಂಡರಿಸಿರುವುದು ಮತ್ತು ಮಹಡಿಯ ಬಾಗಿಲು ತೆರೆದಿರುವುದು ಕಂಡುಬಂದಿತ್ತು. ಆತಂಕಗೊಂಡ ಮನೆಯವರು ಮತ್ತಷ್ಟು ಪರಿಶೀಲಿಸಿದಾಗ ವೃದ್ಧೆಯ ಕಿವಿಯೋಲೆಗಳು ಕಳ್ಳತನ ಆಗಿರುವುದು ಸ್ಪಷ್ಟವಾಯಿತು. ಬಳಿಕ ಮಾಹಿತಿ ನೀಡಿ ವಿಟ್ಲ ಪೊಲೀಸರು ಮತ್ತು ಶ್ವಾನದಳ ಆಗಮಿಸಿದೆ. ವೃದ್ಧೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲೈಮಾನ್ ಸಹೋದರ ಇಬ್ರಾಹಿಂ ನೀಡಿದ ದೂರಿನಂತೆ…










