Author: main-admin

ಮಂಗಳೂರು: ಟೋಲ್ ಗೇಟ್ ಮುಚ್ಚುವಂತೆ ಏಳು ವರ್ಷಗಳಿಂದ ಹೋರಾಟ ನಡೆಸಿದ ಸುರತ್ಕಲ್ ಟೋಲ್ ಗೇಟ್ ಪ್ರತಿಭಟನಾ ಸಮಿತಿಯ 101 ಸದಸ್ಯರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಹಿಂದಿನ ಬಿಜೆಪಿ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದರಿಂದ ಪ್ರತಿಭಟನಾಕಾರರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದರು. ಮಾಜಿ ಕಾರ್ಪೊರೇಟರ್ ಪ್ರಜ್ವಲ್ ಕುಳಾಯಿ ಅವರು ತಮ್ಮ ಜಮೀನು ದಾಖಲೆಗಳ ರೂಪದಲ್ಲಿ ಜಾಮೀನು ಭದ್ರತೆಯನ್ನು ಒದಗಿಸಿದರು.ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ​​ನೇತೃತ್ವದಲ್ಲಿ ಪ್ರತಿಭಟನಾಕಾರರ ಪರ ಚರಣ್ ಶೆಟ್ಟಿ, ಅಶ್ವಿನಿ ಹೆಗ್ಡೆ, ನಿತಿನ್ ಕುತ್ತಾರ್, ಅಣ್ಣು ಮಲಿಕ್, ಮನೋಜ್ ವಾಮಂಜೂರು, ಹಸೈನಾರ್ ಗುರುಪುರ, ಶೆವಿನ್ ಸೊಲೊಮನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಜಾಮೀನು ಮಂಜೂರಾದ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ಮಿಥುನ್ ರೈ, ಎಲ್ಲ ಪಕ್ಷಗಳ ಸಮಾನ ಮನಸ್ಕ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇವರೆಲ್ಲರ ವಿರುದ್ಧ ಹಿಂದಿನ ಬಿಜೆಪಿ ಸರ್ಕಾರ ಪ್ರಕರಣ ದಾಖಲಿಸಿತ್ತು. ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿದ್ದೇವೆ.…

Read More

ವಿಟ್ಲ: ಪೇಟೆಯ ಕಡೆಗೆ ಆಗಮಿಸುತ್ತಿದ್ದ ಕಾರು ಪೆಟ್ರೋಲ್ ಪಂಪ್ ವೊಂದರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬುಳೇರಿಕಟ್ಟೆ ಕಡೆಯಿಂದ ಕಾಸರಗೋಡು ರಸ್ತೆಯ ಮೂಲಕ ವಿಟ್ಲ ಪೇಟೆಗೆ ಬರುತ್ತಿರುವ ಸಂದರ್ಭ ಪೇಟೆಯಿಂದ ಪುತ್ತೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯ ತಿರುವಿನಲ್ಲಿ ಚರಂಡಿಗೆ ಬಿದ್ದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.

Read More

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು. ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು. ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ,…

Read More

ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯ ಧರ್ಮನಗರದ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದ್ದಾರೆ. ಇಬ್ಬರು ಅಪ್ರಾಪ್ತರು ಮತ್ತು ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿ ಬಂಧಿತ ಆರೋಪಿಗಳಾಗಿದ್ದಾರೆ. ಕಳವು ಮಾಡಿದ ಚಿನ್ನಾಭರಣವನ್ನು ಅಂಗಡಿಗಳಿಗೆ ಮಾರಾಟ ಮಾಡಿರುವು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8 ಗಂಟೆಯಿಂದ ಜೂ.16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಉಳ್ಳಾಲ ಠಾಣೆಗೆ ಶ್ರೀಧರ್ ದೂರು ನೀಡಿದ್ದರು. ಮನೆಯ ಬೆಡ್ ರೂಮಿನ ಕಪಾಟಿನಲ್ಲಿರಿಸಿದ್ದ ಚಿನ್ನದ ಕರಿಮಣಿ ಸರ, ನೆಕ್ಲೇಸ್, ಚೈನ್, ಬ್ರಾಸ್ ಲೈಟ್, ಉಂಗುರಗಳು, ಕಿವಿ ಓಲೆಗಳು, ಕೈಬಳೆಗಳು ಸೇರಿದಂತೆ ಅಂದಾಜು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 32 ಪವನ್ ಗಿಂತಲೂ ಹೆಚ್ಚು ತೂಕದ ಚಿನ್ನದ…

Read More

ಬಂಟ್ವಾಳ: ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಕಾಸರಗೋಡು ಸಮೀಪದ ಬೇಕಲ ನಿವಾಸಿ ನಿಖಿಲ್(೨೪) ಮೃತಪಟ್ಟ‌ ದುರ್ದೈವಿಯಾಗಿದ್ದಾರೆ. ಸ್ಕೂಟರ್‌ಸವಾರ ಗುರುಪ್ರೀತ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.ಪುಂಜಾಲಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಎದುರು ಕಡೆಯಿಂದ ಬರುತ್ತಿದ್ದ ಮಿನಿಲಾರಿ ಢಿಕ್ಕಿಯಾಗಿದೆ. ಪಿಕಪ್ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮಿನಿಲಾರಿ ಸ್ಕೂಟರ್‌ಗೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ನಿಖಿಲ್ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಸಾವಿನ್ನಪ್ಪಿದ್ದಾರೆ.ಕೂಡಲೇ ಸ್ಥಳೀಯರು ಗಾಯಾಳು ಗುರುಪ್ರೀತ್ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಂಟ್ವಾಳ ಟ್ರಾಫಿಕ್ ಎಸ್‌ಐ ಸುತೇಶ್ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ

Read More

ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ. ಈ ಮಾರ್ಗದಲ್ಲಿ ನಿತ್ಯ ಹತ್ತಾರು ಅಂಬುಲೆನ್ಸ್‌ ಗಳು ರೋಗಿಗಳನ್ನ ಹೊತ್ತು ಉಡುಪಿ ಹಾಗೂ ಮಂಗಳೂರಿಗೆ ಹೋಗುತ್ತವೆ. 15 ದಿನಗಳ ನಿರಂತರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂಮಿ ಬಾಯ್ಬಿಟ್ಟಿದ್ದು ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ. ಇದರಿಂದ ಈ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಆತಂಕದಲ್ಲಿ ಪ್ರಯಾಣ ಮಾಡುವಂತಾಗಿದೆ.

Read More

ಪೂಂಜಾಲಕಟ್ಟೆ : ಅಡ್ಡೂರು-ಪೊಳಲಿ ಸೇತುವೆ ಬಳಿ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಆಟೋ ಚಾಲಕ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ನಿನ್ನೆ ಸಂಜೆ ಪತ್ತೆಯಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಗಿರೀಶ್ ಬುಧವಾರ ಮಧ್ಯರಾತ್ರಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಮನೆಯವರಲ್ಲಿ ಹೇಳಿ ಹೊರಟವರು ಬಳಿಕ ನಾಪತ್ತೆಯಾಗಿದ್ದಾರೆ. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜ್ಪೆ ಪೊಲೀಸರು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಆಟೋ ಚಾಲನೆಯಲ್ಲಿ ಇರುವುದನ್ನ ಗಮನಿಸಿದ್ದಾರೆ. ಬಳಿಕ ಅ ಭಾಗದಲ್ಲಿ ಸ್ವಲ್ಪ ಹೊತ್ತುಗಳ ಕಾಲ ಹುಡುಕಿದರೂ ಚಾಲಕ ಪತ್ತೆಯಾಗಿರಲಿಲ್ಲ. ನಂತರ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಯವರಿಗೆ ಮಾಹಿತಿ ರವಾನಿಸಿದ್ದಾರೆ. ಇದಾದ ಬಳಿಕ ಗುರುವಾರ ನುರಿತ ಈಜುಗಾರರು ಆಗಮಿಸಿ ಫಲ್ಗುಣಿ ನದಿಯಲ್ಲಿ ಶೋಧ ಆರಂಭಿಸಿದ್ದರು. ಎಷ್ಟೇ ಹುಡುಕಾಟ ಮಾಡಿದ್ರೂ ಪತ್ತೆಯಾಗಿರಿಲಿಲ್ಲ. ಆದ್ರೆ ನಿನ್ನೆ ದಿನ ಶುಕ್ರವಾರ ಮತ್ತೆ ಕಾರ್ಯಾಚರಣೆ ಆರಂಭಿಸಿ ಸಂಜೆ ಆಗೋ ವೇಳೆಗೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಖಾಕಿ ಧರಿಸಿದ್ದ ವಸ್ತ್ರದಲ್ಲೇ…

Read More

ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರ ಮಾಧ್ಯಮಗಳಿಗೆ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಜೂನ್ 8ರ ಬೆಳಗ್ಗೆ 8 ಗಂಟೆಯಿಂದ 16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿರುವ ಬಗ್ಗೆ ಉಳ್ಳಾಲ ಠಾಣೆಗೆ ಉಳ್ಳಾಲ ಬೈಲಿನ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಮನೆಯ ಬೆಡ್ ರೂಮಿನ ಕಪಾಟಿನಲ್ಲಿರಿಸಿದ್ದ ಸ್ವೀಲಿನ ಡಬ್ಬದಲ್ಲಿ ಇಟ್ಟಿದ್ದ ಚಿನ್ನದ ಕರಿಮಣಿ ಸರ, ನೆಕ್ಲಸ್, ಚೈನ್, ಬ್ರಾಸ್ ಲೈಟ್, ಉಂಗುರಗಳು, ಕಿವಿ ಓಲೆಗಳು, ಕೈಬಳೆಗಳು ಸೇರಿದಂತೆ ಅಂದಾಜು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 32 ಪವನ್ ಗಿಂತಲೂ ಹೆಚ್ಚು ತೂಕದ ಚಿನ್ನದ ಆಭರಣಗಳನ್ನ ಕಳವುಗೈದ ಬಗ್ಗೆ ದೂರಿನಲ್ಲಿ ತಿಳಿಸಿದ್ದರು. ಪ್ರಕರಣದ ಜಾಡು ಹಿಡಿದ ಉಳ್ಳಾಲ ಪೊಲೀಸರಿಗೆ…

Read More

ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಚಾರ್ಜಿಂಗ್ ವೇಳೆ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು. ಕರೆಂಟ್ ಶಾಕ್ ನಿಂದ ಶ್ರೀನಿವಾಸ ರೂಮ್ ನಲ್ಲಿ ಬಿದ್ದಿದ್ದ. ಆತನನ್ನು ಊಟಕ್ಕೆ ಕರೆಯಲು ಬಂದಿದ್ದ ಮತ್ತೊಬ್ಬ ವಿದ್ಯಾರ್ಥಿಗೂ ವಿದ್ಯುತ್ ಪ್ರವಹಿಸಿದೆ, ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಬಸವೇಶ್ವರನಗರ ಠಾಣೆ ಪೋಲೀಸರಿಗೆ ಪಿಜಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಿಡಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತನಿಖೆ ಕೈಗೊಂಡಿದ್ದಾರೆ.ಬಸವೇಶ್ವರ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜೂನ್‌ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

Read More